Break the secret discussion.. Gram Panchayat meeting live broadcast

ರಾಜ್ಯದ ಎಲ್ಲಾ ಶಾಲೆಗಳಿಗೆ ದಸರಾ ರಜೆ ಘೋಷಣೆ..!

ಬೆಂಗಳೂರು: ನಾಳೆಯಿಂದ ರಾಜ್ಯದ ಎಲ್ಲಾ ಶಾಲೆಗಳಿಗೆ ದಸರಾ ರಜೆ ಘೋಷಿಸಲಾಗಿದೆ.

ಸರ್ಕಾರಿ ಆದೇಶದಲ್ಲಿ ತಿಳಿಸಿರುವಂತೆ ಅಕ್ಟೋಬರ್ 3ರಿಂದ ಅಕ್ಟೋಬರ್ 20ರವರೆಗೆ ದಸರಾ ರಜೆ ಘೋಷಣೆ ಮಾಡಲಾಗಿದ್ದು, ಒಟ್ಟು 17 ದಿನ ವಿದ್ಯಾರ್ಥಿಗಳಿಗೆ ದಸರಾ ರಜೆ ಘೋಷಣೆ ಮಾಡಲಾಗಿದೆ.

2024-25ನೇ ಶೈಕ್ಷಣಿಕ ಸಾಲಿನ ದಸರಾ ರಜೆ ಅಕ್ಟೋಬರ್ 3 ರಿಂದ 20 ರವರೆಗೆ ಇರಲಿದೆ. ಅಕ್ಟೋಬರ್ 2 ರಂದು ಗಾಂಧಿ ಜಯಂತಿ ಇದ್ದು, ಕಾರ್ಯಕ್ರಮದ ನಂತರ ರಜೆಗಳು ಆರಂಭವಾಗಲಿದೆ.

ಇನ್ನು ದಸರಾ ರಜೆ ಬಳಿಕ ಅಕ್ಟೋಬರ್ 21ರಿಂದ 2ನೇ ಅವಧಿಯು ಪ್ರಾರಂಭವಾಗಲಿದ್ದು, 2025 ಏಪ್ರಿಲ್ 10ರ ತನಕ ನಡೆಯಲಿದೆ.

2024-2025ರ ಶೈಕ್ಷಣಿಕ ವರ್ಷದ ಶಾಲಾ ಅವಧಿಯ ಮಾರ್ಗದರ್ಶಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ, ಶಾಲೆಗಳು ಆರಂಭಕ್ಕೂ ಮುನ್ನ ಪ್ರಕಟಣೆ ಹೊರಡಿಸಿತ್ತು. ಅದರ ನಿಯಮಾನುಸಾರದಂತೆ ರಜೆಗಳು ಘೋಷಣೆಯಾಗಿವೆ.

ಇನ್ನು, ಕ್ರಿಸ್ ಮಸ್ ರಜೆ ಬೇಡಿಕೆಯನ್ನು ಸಂಬಂಧಿಸಿದ ಶಿಕ್ಷಣ ಸಂಸ್ಥೆಗಳು ತಮ್ಮ ವ್ಯಾಪ್ತಿಯ ಜಿಲ್ಲಾ ಉಪ ನಿರ್ದೇಶಕರು ಅವರಿಗೆ ಸಲ್ಲಿಸಿದಲ್ಲಿ ಈ ಬಗ್ಗೆ ಆಯಾ ಉಪನಿರ್ದೇಶಕರು ಪರಿಶೀಲಿಸಿ ನಿರ್ಧರಿಸಲು ಸೂಚನೆ ನೀಡಲಾಗಿದೆ.

ಡಿಸೆಂಬರ್ ತಿಂಗಳಿನಲ್ಲಿ ನೀಡುವ ಕ್ರಿಸ್‌ಮಸ್ ರಜಾ ಅವಧಿಯನ್ನು ಅಕ್ಟೋಬರ್ ತಿಂಗಳ ಮಧ್ಯಂತರ ರಜೆಯಲ್ಲಿ ಕಡಿತಗೊಳಿಸಿ ಸರಿದೂಗಿಸಿಕೊಳ್ಳಲು ಕ್ರಮವಹಿಸಲು ಸೂಚನೆ ನೀಡಲಾಗಿದೆ.

ಉಳಿದಂತೆ ನಿಗದಿತ ಶೈಕ್ಷಣಿಕ ಕರ್ತವ್ಯದ ಅವಧಿಗಳು ಕಡಿಮೆಯಾಗದಂತೆ ಅನಿರೀಕ್ಷಿತ ಕಾರಣಗಳಿಂದಾಗಿ ಶಾಲೆಗೆ ರಜೆ ಘೋಷಣೆಯಾದಲ್ಲಿ ಆ ಅವಧಿಯ ಶಾಲಾ ಕರ್ತವ್ಯದ ದಿನಗಳನ್ನು ಮುಂದಿನ ರಜಾ ದಿನಗಳಲ್ಲಿ ಪೂರ್ಣ ದಿನ ಶಾಲೆಗಳನ್ನ ನಡೆಸಿ ಶಾಲಾ ಕರ್ತವ್ಯದ ದಿನಗಳನ್ನ ಸರಿದೂಗಿಸಿಕೊಳ್ಳಲು ಸೂಚನೆ ನೀಡಲಾಗಿದೆ.

ದಸರಾ ರಜೆ ಹಿನ್ನೆಲೆಯಲ್ಲಿ ಪಟ್ಟಣ ಪ್ರದೇಶದಲ್ಲಿ ಇರುವವರು ರಜೆ ಅವಧಿಯನ್ನು ಕಳೆಯಲು ಗ್ರಾಮಗಳಿಗೆ ತೆರಳಿ ಕಳೆಯುವ ಸಾಮಾನ್ಯ ಸಂಗತಿಯಾಗಿದೆ. ಆದರೆ ರಾಜ್ಯದಲ್ಲಿ ದಸರಾ ರಜೆಗಳ ಬಳಿಕ ಮತ್ತೆ ಶಿಕ್ಷಣ ಸಂಸ್ಥೆಗಳಿಗೆ ಡಿಸೆಂಬರ್‌ನಲ್ಲಿ ಕ್ರಿಸ್‌ಮಸ್ ರಜೆ ಇರಲಿದ್ದು, ಆ ಬಳಿಕ ಜನವರಿಯಲ್ಲಿ ಸಂಕ್ರಾಂತಿ ರಜೆಗಳಿ ಸಿಗಲಿದೆ.

ಇಂದು ಎಲ್ಲಾ ಶಾಲೆಗಳಲ್ಲೂ ಗಾಂಧಿ ಜಯಂತಿ ಆಚರಿಸಲಾಗಿದ್ದು, ನಾಳೆಯಿಂದ ಶಾಲಾ ಮಕ್ಕಳಿಗೆ ದಸರಾ ರಜೆ ನೀಡಲಾಗಿದೆ. ಅಕ್ಟೋಬರ್ ತಿಂಗಳಲ್ಲಿ ಕೇವಲ 11 ದಿನಗಳು ತರಗತಿಗಳು ನಡೆಯಲಿವೆ.

ರಾಜಕೀಯ

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ

"ನಾವು ಅವರ (ಧರ್ಮಸ್ಥಳ) ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ ಪರ. ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡಬೇಡಿ ಎಂದಷ್ಟೇ ನಾವು ಹೇಳುತ್ತಿದ್ದೇವೆ": ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="113000"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!