ಸಿಎಂ ಪತ್ನಿಯ 14 ನಿವೇಶನ ವಾಪಸ್: ನ್ಯಾಯಾಲಯದ ಆದೇಶದ ಉಲ್ಲಂಘನೆ ಎಂದ HD ಕುಮಾರಸ್ವಾಮಿ

ಬೆಂಗಳೂರು: ಸಾಕ್ಷ್ಯ ನಾಶ ಮಾಡಿ ಮುಡಾ ಹಗರಣವನ್ನು ಮುಚ್ಚಿ ಹಾಕಲು ಮಾಡಲು ವ್ಯವಸ್ಥಿತ ಹುನ್ನಾರ ನಡೆಯುತ್ತಿದೆ ಎಂದು ನೇರ ಆರೋಪ ಮಾಡಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು; ನ್ಯಾಯಾಲಯಗಳ ಆದೇಶ ಉಲ್ಲಘಿಸಿ ಸಿಎಂ ಪತ್ನಿ ಅವರಿಂದ ನಿವೇಶನಗಳನ್ನು ವಾಪಸ್ ಪಡೆದಿರುವ ಮೂಡಾ ಆಯುಕ್ತರನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿದ್ದಾರೆ.

ಜೆಡಿಎಸ್ ಪಕ್ಷದ ಕಚೇರಿ ಬಳಿ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮುನ್ನ ಅವರು ಮಾಧ್ಯಮಗಳ ಜತೆ ಮಾತನಾಡಿದರು.

ಮೂಡಾ ಹಗರಣವನ್ನು ಮುಚ್ಚಿ ಹಾಕಲು ಮುಖ್ಯಮಂತ್ರಿ ಸಿದ್ದರಾಮಯ್ಯ, ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್, ಲೋಕಾಯುಕ್ತ ಅಧಿಕಾರಿಗಳು ಹಾಗೂ ಮೂಡಾ ಅಧಿಕಾರಿಗಳು ವ್ಯವಸ್ಥಿತವಾಗಿ ಶಾಮೀಲಾಗಿದ್ದಾರೆ ಎಂದು ಅವರು ಗಂಭೀರ ಆರೋಪ ಮಾಡಿದರು.

ಇದನ್ನೂ ಓದಿ: ಚುನಾವಣೆ ಖರ್ಚಿಗೆ 50 ಕೋಟಿ ಕೇಳಿದ್ದ ಎಚ್‌ಡಿಕೆ: ಉದ್ಯಮಿ ವಿಜಯ್ ಟಾಟಾ ಗಂಭೀರ ಆರೋಪ.. ‘ಹಂದಿ’ ಗಲಾಟೆಗೆ ಹೊಸ ತಿರುವು

ಹಗರಣದಲ್ಲಿ ಸಿಲುಕಿರುವ ಸಿಎಂ ಸಿದ್ದರಾಮಯ್ಯ ಅವರ ಪತ್ನಿ 14 ನಿವೇಶನಗಳನ್ನು ವಾಪಸ್ ನೀಡಿರುವ ಕ್ರಮದ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಅವರು; ನಿವೇಶನಗಳನ್ನು ಹಿಂದಕ್ಕೆ ಪಡೆದಿರುವುದು ನ್ಯಾಯಾಲಯದ ಆದೇಶದ ಸ್ಪಷ್ಟ ಉಲ್ಲಂಘನೆ ಮತ್ತು ನ್ಯಾಯಾಂಗ ನಿಂದನೆ. ಹೀಗಾಗಿ ಮುಡಾ ಆಯುಕ್ತರನ್ನು ಬಂಧಿಸಬೇಕು ಎಂದು ಅವರು ಒತ್ತಾಯಿಸಿದರು.

ಇದು ಅತ್ಯಾಧುನಿಕ ATV (All terrain vehicle). ಯಾವುದೇ ಪ್ರದೇಶ,ಎಂತಹುದೇ ದುರ್ಗಮ ಪ್ರದೇಶದಲ್ಲಿಯೂ ಇದನ್ನು ಬಳಕೆ ಮಾಡಬಹುದಾಗಿದೆ.

ನಿವೇಶನಗಳನ್ನು ಹಿಂದಕ್ಕೆ ಕೊಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಕ್ಷ್ಯನಾಶಕ್ಕೆ ಪ್ರಯತ್ನಿಸಿದ್ದಾರೆ. ರಾಜ್ಯದ ಮುಖ್ಯಮಂತ್ರಿ ಸ್ಥಾನದಲ್ಲಿರುವ ಅವರು ತಮ್ಮ ಅಧಿಕಾರದ ಪ್ರಭಾವದಿಂದ ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಂಡು ಇದೆಲ್ಲವನ್ನೂ ಮಾಡುತ್ತಿದ್ದಾರೆ ಎಂದು ಅವರು ಹೇಳಿದರು.

ಮೂಡಾ ತನಿಖೆಯನ್ನು ಜಾರಿ ನಿರ್ದೇಶನಾಲಯ (ED) ಕೈಗೆತ್ತಿಕೊಂಡು ಈಸಿಆರ್ ದಾಖಲು ಮಾಡಿದ ಕೂಡಲೇ ಬಿರುಸಿನ ಬೆಳವಣಿಗೆಗಳು ನಡೆದಿವೆ. ಮಂಗಳವಾರದ ದಿನ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರೇ ಖುದ್ದು ಮುಡಾ ಕಚೇರಿಗೆ ಬಂದು ನಿವೇಶನ ವಾಪಸ್ ನೀಡುವುದಾಗಿ ಹೇಳಿದ್ದರು. ಈ ಹೇಳಿಕೆ ಹೊರಬಿದ್ದ ನಂತರ ಎಲ್ಲಾ ನಿವೇಶನಗಳು ಮೂಡಾ ವಶಕ್ಕೆ ಹೋಗಿವೆ. ಹದಿನಾಲ್ಕು ನಿವೇಶನಗಳ ಕ್ರಯಪತ್ರಗಳು ರದ್ದಾಗಿವೆ ಎಂದು ಮುಡಾ ಆಯುಕ್ತರೇ ಹೇಳಿಕೆ ಕೊಟ್ಟಿದ್ದಾರೆ. ಇದೆಲ್ಲಾ ರಾಕೆಟ್ ವೇಗದಲ್ಲಿ ಆಗಿದೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಇದೆಲ್ಲವೂ ಸಂಶಯಾಸ್ಪದವಾಗಿ ನಡೆದಿದೆ. ಹೈಕೋರ್ಟ್ ಮತ್ತು ಜನಪ್ರತಿನಿಧಿಗಳ ನ್ಯಾಯಾಯಾಲಗಳ ಆದೇಶಗಳಿವೆ. ಹೀಗಿದ್ದೂ ಮೂಡಾ ಆಯುಕ್ತರು ನಿವೇಶನಗಳನ್ನು ವಾಪಸ್ ಪಡೆಯುವ ನಿರ್ಧಾರ ಮಾಡುತ್ತಾರೆ. ಅವರಿಗೆ ಈ ಅಧಿಕಾರ ಇಲ್ಲ. ಇಲ್ಲಿ ಸಿಎಂ ಅಧಿಕಾರದ ದುರುಪಯೋಗ ಮಾಡಿದ್ದಾರೆ. ಯಾವ ಆಧಾರದ ಮೇಲೆ ವಾಪಸ್ ಪಡೆಯಲಾಗಿದೆ? ಮೂಡಾ ಆಯುಕ್ತರು ತಮ್ಮ ಅಧಿಕಾರ ಮೀರಿ ವರ್ತಿಸಿದಾರೆ. ಹೀಗಾಗಿ ಕೂಡಲೇ ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿದರು.

ಮುಖ್ಯಮಂತ್ರಿಗಳು ಲೋಕಾಯುಕ್ತ ಅಧಿಕಾರಿಗಳನ್ನು ದುರುಪಯೋಗ ಮಾಡಿಕೊಂಡಿದ್ದಾರೆ. ತನಿಖೆಯಲ್ಲಿ ಸಿಎಂ ಹಸ್ತಕ್ಷೇಪ ಎದ್ದು ಕಾಣುತ್ತಿದೆ. ಯಾರ ಆಸ್ತಿ ಇದು. ಎಲ್ಲವನ್ನೂ ನಕಲಿ ದಾಖಲೆ ಸೃಷ್ಟಿ ಮಾಡಿ ಜನರನ್ನು ಯಾಮಾರಿಸಿದರು. ಕೋರ್ಟ್ ನಲ್ಲಿ ನಮ್ಮದೇ ಆಸ್ತಿ ಎಂದಿದ್ದಾರೆ. ಇನ್ನೊಮ್ಮೆ ಜುಜುಬಿ ನಿವೇಶನಗಳು ಎಂದರು. ಅವುಗಳ ಮೌಲ್ಯ ₹62 ಕೋಟಿ ಎಂದರು. ಇಷ್ಟಕ್ಕೂ ಮೂಡಾ ಆಯುಕ್ತ ಎಲ್ಲಿಗೆ, ಯಾರ ಬಳಿಗೆ ಯಾವಾಗ ಬಂದು ನಿವೇಶನಗಳನ್ನು ವಾಪಸ್ ಪಡೆಯುವ ಮನವಿ ಸ್ವೀಕಾರ ಮಾಡಿದರು? ಸಿಎಂ ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ಕುಮಾರಸ್ವಾಮಿ ದೂರಿದರು.

ರಾಜಕೀಯ

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ

"ನಾವು ಅವರ (ಧರ್ಮಸ್ಥಳ) ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ ಪರ. ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡಬೇಡಿ ಎಂದಷ್ಟೇ ನಾವು ಹೇಳುತ್ತಿದ್ದೇವೆ": ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="113000"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!