ಜನರ ಪರ‌ ಕೆಲಸ ಮಾಡಿ, ಇಲ್ಲದಿದ್ದರೆ ಜಾಗ ಖಾಲಿ ಮಾಡಿ: ಬಸವರಾಜ ಬೊಮ್ಮಾಯಿ ಆಗ್ರಹ

ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿ ದಿನ ಮೂರು ವರ್ಷ ನಾನೇ ಸಿಎಂ ಅಂತ ಹೇಳುತ್ತಿರುವುದು ನೋಡಿದರೆ ಅವರಿಗೆ ಎಷ್ಟು ಅಭದ್ರತೆ ಕಾಡುತ್ತಿದೆ ಎನ್ನುವುದು ಗೊತ್ತಾಗುತ್ತದೆ. ಸಿಎಂ ಜೊತೆಗೆ ಸರ್ಕಾರವೂ ಅಭದ್ರವಾಗಿದ್ದು, ಯಾವುದೇ ಅಭಿವೃದ್ದಿ ಕೆಲಸ ಆಗುತ್ತಿಲ್ಲ, ಜನರ ಪರ‌ ಕೆಲಸ ಮಾಡಿ, ಇಲ್ಲದಿದ್ದರೆ ಜಾಗ ಖಾಲಿ ಮಾಡಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದರು.

ಅವರು ನವದೆಹಲಿಯಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆಗೆ ಸರ್ಕಾರವೂ ಅಭದ್ರವಾಗಿದೆ. ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಎಲ್ಲವೂ ನಿಂತು ಹೋಗಿದೆ. ನನಗಿರುವ ಮಾಹಿತಿಯ ಪ್ರಕಾರ ಮಹತ್ವದ ಯಾವುದೇ ಕಡತಗಳಿಗೆ ಸಹಿ ಹಾಕುತ್ತಿಲ್ಲ. ಜನರ ಪರ‌ ಕೆಲಸ ಮಾಡಿ, ಇಲ್ಲದಿದ್ದರೆ ಜಾಗ ಖಾಲಿ ಮಾಡಿ ಎಂದು ಆಗ್ರಹಿಸಿದರು.

ಸಿದ್ದರಾಮಯ್ಯ ರಾಜಿನಾಮೆ ‌ಕೊಡಬೇಕೆಂದರೆ ಕೇಂದ್ರ ಸಚಿವ ಎಚ್.‌ಡಿ.ಕುಮಾರಸ್ವಾಮಿಯವರೂ ರಾಜೀನಾಮೆ ನೀಡಬೇಕಾಗುತ್ತದೆ ಎಂದ ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ನೀಡಿರುವ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಜಿ.ಟಿ. ದೇವೇಗೌಡರು ಏನು ಹೇಳಿದ್ದಾರೋ ಗೊತ್ತಿಲ್ಲ ಎಂದರು.

ಸಿದ್ದರಾಮಯ್ಯ ಅವರ ವಿಚಾರದಲ್ಲಿ ಅವರ ವಿರುದ್ದ ದೂರು ಕೊಟ್ಟಾಗಲೂ ಗಂಭೀರವಾಗಿ ತೆಗೆದುಕೊಳ್ಳಲಿಲ್ಲ, ರಾಜ್ಯಪಾಲರು ಪ್ರಾಷಿಕ್ಯೂಷನ್ ಗೆ ಅನುಮತಿ ಕೊಟ್ಟಾಗಲೂ ಕೂಡ ಗಂಭೀರವಾಗಿ ತೆಗೆದುಕೊಳ್ಳಲಿಲ್ಲ. ಹೈಕೋರ್ಟ್ ಬಹಳ ಸ್ಪಷ್ಟವಾಗಿ ಎಲ್ಲೆಲ್ಲಿ ತಪ್ಪುಗಳಾಗಿದೆ, ಎಲ್ಲಿ ಸ್ವಜನ ಪಕ್ಷಪಾತವಾಗಿದೆ ಎನ್ನುವುದು ಹೇಳಿ ತೀರ್ಪು ನೀಡಿದೆ. ಅದಾದ ಬಳಿಕ ಸಿಎಂ ತಮ್ಮ ಅಡಿಯಲ್ಲಿಯೇ ಕೆಲಸ ಮಾಡುವ ಲೋಕಾಯುಕ್ತ ಸಂಸ್ಥೆಯಿಂದ ತನಿಖೆ ನಡೆಸಲು ಸೂಚಿಸುತ್ತಾರೆ ಎಂದರೆ ಅದನ್ನು ಯಾರು ಒಪ್ಪುತ್ತಾರೆ, ಮುಖ್ಯಮಂತ್ರಿ ಗಳಾದವರು ಕರ್ನಾಟಕದ ಜನತೆಯ ಭಾವನೆಗಳಿಗೆ ಸ್ಪಂದಿಸಬೇಕು ಎಂದು ಹೇಳಿದರು.

ಮುಖ್ಯಮಂತ್ರಿ ‌ಸಿದ್ದರಾಮಯ್ಯ ಅವರು ಆತ್ಮಸಾಕ್ಷಿಯೇ ಅಂತಿಮ ನ್ಯಾಯಾಲಯ ಎಂದು ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯ ಅವರ ಆತ್ಮಸಾಕ್ಷಿಯನ್ನು ನೋಡುವವರು ಯಾರು ? ಅವರ ಆತ್ಮಸಾಕ್ಷಿ ನಡೆಯಿಂದ ಗೊತ್ತಾಗಬೇಕು. ನುಡಿಯಿಂದ ಅಲ್ಲ ಎಂದು ಹೇಳಿದರು.
ಪ್ರತಿಪಕ್ಷದ ನಾಯಕ ಆರ್.ಅಶೋಕ್ ಅವರ ವಿರುದ್ದ ಕಾಂಗ್ರೆಸ್ ‌ನಾಯಕರು ಮಾಡಿರುವ ಆರೋಪದ ಕುರಿತು ಅಶೋಕ್ ಅವರೇ ಎಳೆ ಎಳೆಯಾಗಿ ಬಿಡಿಸಿ ಹೇಳಿದ್ದಾರೆ. ಅವರ ಪ್ರಕರಣಕ್ಕೂ ಸಿದ್ದರಾಮಯ್ಯ ಅವರ ಪ್ರಕರಣಕ್ಕೂ ವ್ಯತ್ಯಾಸ ಇದೆ.

ಅಶೋಕ್ ಅವರು ಪ್ರಕರಣ ದಾಖಲಾಗುವ ಮುನ್ನವೇ ಜಮೀನು ವಾಪಸ್ ಕೊಟ್ಡಿದ್ದರು. ಶೇ 70 ರಷ್ಟು ಬಿಡಿಎ‌ ಇಟ್ಟುಕೊಂಡು ಹಾಗೂ ಶೇಕಡಾ 30% ರಷ್ಟು ಜಮೀನು ಬಿಟ್ಟುಕೊಡುವ ವ್ಯವಸ್ಥೆ ಇತ್ತು. ಅಶೋಕ್ ಅವರ ವಿರುದ್ದ ಜನಪ್ರತಿನಿಧಿಗಳ ಕೋರ್ಟ್, ಹೈಕೋರ್ಟ್, ವಿಭಾಗೀಯ ಪೀಠ ಗಳಲ್ಲಿ ಅಶೋಕ್ ಅವರ ವಿರುದ್ದ ಆಪಾದನೆಗಳು ಬಂದಿಲ್ಲ. ಇಷ್ಟಾದರೂ ಕೂಡ ಅವರು ನಾನು ನೈತಿಕತೆ ಹೊತ್ತು ರಾಜಿನಾಮೆ ಕೊಡುತ್ತೇನೆ, ನೀವೂ ರಾಜಿನಾಮೆ ಕೊಡಿ ಎಂದು ಆಗ್ರಹಿಸಿದ್ದಾರೆ ಎಂದು ಹೇಳಿದರು.


ರಾಜಕೀಯ

ಆಯ್ತ್ ಆಯ್ತೂ.. ಏನು ಮಾಡಬೇಕೋ ಮಾಡುತ್ತೇವೆ; ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು ಪ್ರತಿಕ್ರಿಯೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಉತ್ತರ

ಆಯ್ತ್ ಆಯ್ತೂ.. ಏನು ಮಾಡಬೇಕೋ ಮಾಡುತ್ತೇವೆ; ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು ಪ್ರತಿಕ್ರಿಯೆಗೆ

"ಯಾರೇ ಆದರೂ ಕಾನೂನು ಕೈಗೆತ್ತಿಕೊಳ್ಳಲು ಆಗುವುದಿಲ್ಲ" ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ಕಸದ ವಿಚಾರವಾಗಿ ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.

[ccc_my_favorite_select_button post_id="119538"]
20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

ಫ್ರಾನ್ಸ್ ಮೂಲದ ಏರ್ ಬಸ್ ಮತ್ತು ಭಾರತದ ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ (ಟಿಎಎಸ್ಎಲ್) ಜತೆಗೂಡಿ ಅಭಿವೃದ್ಧಿಪಡಿಸಿರುವ ದೇಶದ ಪ್ರಪ್ರಥಮ, ಖಾಸಗಿ ವಲಯದ ಹೆಲಿಕಾಪ್ಟರ್ ಜೋಡಣೆ ಘಟಕದಲ್ಲಿ ಮುಂದಿನ 20 ವರ್ಷಗಳಲ್ಲಿ ಎಚ್125 ದರ್ಜೆಯ

[ccc_my_favorite_select_button post_id="119504"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಮರಕ್ಕೆ ಕಾರು ಡಿಕ್ಕಿ: ಸಬ್‌ಇನ್ಸ್‌ಪೆಕ್ಟರ್ ಸಾವು

ಮರಕ್ಕೆ ಕಾರು ಡಿಕ್ಕಿ: ಸಬ್‌ಇನ್ಸ್‌ಪೆಕ್ಟರ್ ಸಾವು

ಆರೋಪಿಯನ್ನು ಹಿಡಿಯಲು ಹೋದ ಪೊಲೀಸರು ಪ್ರಯಾಣಿಸುತ್ತಿದ್ದ ಕಾರೊಂದು ರಸ್ತೆಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ (Accident) ಸಬ್‌ಇನ್ಸ್‌ಪೆಕ್ಟರ್ ಸಾವನ್ನಪ್ಪಿ, ಇನ್ಸ್‌ಪೆಕ್ಟರ್ ಸೇರಿ ಐವರು ಪೊಲೀಸರು ಗಾಯಗೊಂಡಿರುವ ಘಟನೆ ಉತ್ತರಪ್ರದೇಶದ ಮಹಾರಾಜಗಂಜ್ ಗೋರಖ್‌ಪುರ ಮುಖ್ಯ ರಸ್ತೆಯಲ್ಲಿ ಇಂದು ಬೆಳಿಗ್ಗೆ ನಡೆದಿದೆ.

[ccc_my_favorite_select_button post_id="119478"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಖಾಸಗಿ ಕಾರ್ಖಾನೆಯ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ (Accident), ದ್ವಿಚಕ್ರ ವಾಹನ ಸವಾರ ಸಾವನಪ್ಪಿರುವ ಘಟನೆ ತಾಲೂಕಿನ ಗೊಲ್ಲಹಳ್ಳಿ ಕ್ರಾಸ್ ಬಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಸಮೀಪ ಇಂದು ಸಂಜೆ

[ccc_my_favorite_select_button post_id="119492"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!