ಮೈಸೂರು: ನಾಡ ದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ಅಗ್ರಪೂಜೆಯೊಂದಿಗೆ 2024 ದಸರಾ ಮಹೋತ್ಸವಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು.
ಚಾಮುಂಡಿಬೆಟ್ಟದಲ್ಲಿ ನಡೆದ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ ನಾಡೋಜ ಖ್ಯಾತ ಸಾಹಿತಿ ಹಂಪ ನಾಗರಾಜಯ್ಯ, ಡಿಸಿಎಂ ಡಿಕೆ ಶಿವಕುಮಾರ್ ನಾಡದೇವಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.
ಶುಭ ವೃಶ್ಚಿಕ ಲಗ್ನದಲ್ಲಿ ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಾಗಿದೆ.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಜಿ.ಟಿ.ದೇವೇಗೌಡ ವಹಿಸಿದ್ದುಇಂದಿನಿಂದ 10 ದಿನಗಳ ಕಾಲ ಮೈಸೂರಲ್ಲಿ ಸಂಭ್ರಮ ಮೇಳ್ಳೆಸಲಿದೆ.
ಅ.12ರಂದು ಜಗತ್‌ಪ್ರಸಿದ್ಧ ದಸರಾ ಜಂಬೂ ಸವಾರಿ ಮೆರವಣಿಗೆ ನಡೆಯಲಿದೆ. ಈಗಾಗಲೇ ಮೈಸೂರಿಗೆ ಸಾವಿರಾರು ಪ್ರವಾಸಿಗರು ಆಗಮಿಸಿದ್ದು, ದಸರಾ ಸಂಭ್ರಮದಲ್ಲಿ ಭಾಗಿಯಾಗಿದ್ದಾರೆ.