ನಾನು ತಪ್ಪಿತಸ್ಥನೆಂದು ನ್ಯಾಯಾಲಯ ಮತ್ತು ರಾಜ್ಯಪಾಲರು ಎಲ್ಲೂ ಹೇಳಿಲ್ಲ: ಆರ್‌.ಅಶೋಕ ಪ್ರಶ್ನೆ

ಬೆಂಗಳೂರು: ನನ್ನನ್ನು ಭೂ ಕಬಳಿಕೆದಾರ ಎಂದು ಕರೆದಿರುವ ಕಾಂಗ್ರೆಸ್‌ನ ನಾಲ್ಕು ಸಚಿವರು ನೈತಿಕತೆಯ ಪ್ರಶ್ನೆ ಎತ್ತಿದ್ದಾರೆ. ಆದರೆ ಇದೇ ಕಾಂಗ್ರೆಸ್‌ನ ಕೇಂದ್ರ ಸರ್ಕಾರ ಅಂದು ನೇಮಿಸಿದ್ದ ರಾಜ್ಯಪಾಲರು ಮತ್ತು ಘನ ನ್ಯಾಯಾಲಯ ನಾನು ತಪ್ಪಿತಸ್ಥ ಅಲ್ಲ ಎಂದು ಅಭಿಪ್ರಾಯಪಟ್ಟಿದೆ. ಆದರೂ ಕಾಂಗ್ರೆಸ್‌ ಪಕ್ಷ ನ್ಯಾಯಾಲಯಕ್ಕಿಂತ ದೊಡ್ಡದಾಗಲು ಯತ್ನಿಸಿ ತೀರ್ಪು ನೀಡಲು ಮುಂದಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು.

ತಮ್ಮ ಮೇಲಿನ ಆರೋಪ ಕುರಿತು ಆರ್‌.ಅಶೋಕ ಸುದ್ದಿಗೋಷ್ಠಿಯಲ್ಲಿ ಸ್ಪಷ್ಟನೆ ನೀಡಿದರು.

ಕಾಂಗ್ರೆಸ್‌ ಸರ್ಕಾರದ ನಾಲ್ವರು ಸಚಿವರು ನನ್ನ ಬಗ್ಗೆ ಕಳಂಕ ಸೃಷ್ಟಿಸಲು ಹಳೆಯ ಪ್ರಕರಣದ ಬಗ್ಗೆ ಮಾತನಾಡಿದ್ದಾರೆ. ಇದರಲ್ಲಿ ನೈತಿಕತೆಯ ಪ್ರಶ್ನೆ ಎತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮುಡಾ ಹಗರಣದಲ್ಲಿ ಅರಿಶಿನ-ಕುಂಕುಮದ ಮೂಲಕ ಭೂಮಿ ಬಂದಿದೆ. ಆದರೆ ನಾನು ಹಣ ಕೊಟ್ಟು ಭೂಮಿ ಖರೀದಿ ಮಾಡಿದ್ದೇನೆ. ಈ ಪ್ರಕರಣದ ಬಗ್ಗೆ ಆರೋಪ ಬಂದಾಗ ರಾಜ್ಯದಲ್ಲಿ ಕಾಂಗ್ರೆಸ್‌ನ ಕೇಂದ್ರ ಸರ್ಕಾರವೇ ನೇಮಿಸಿದ ರಾಜ್ಯಪಾಲ ಹಂಸರಾಜ್‌ ಭಾರಧ್ವಾಜ್‌ ಇದ್ದರು. ಅವರು ಕೂಡ ಈ ಪ್ರಕರಣವನ್ನು ತನಿಖೆಗೆ ವಹಿಸಿಲ್ಲ. ಅಷ್ಟೇ ಅಲ್ಲದೆ ನ್ಯಾಯಾಲಯ ಕೂಡ ಇದರ ವಿರುದ್ಧ ತನಿಖೆ ಮಾಡಿಸಲು ಮುಂದಾಗಲಿಲ್ಲ. ರಾಜ್ಯಪಾಲರು ಹಾಗೂ ನ್ಯಾಯಾಲಯವೇ ನಾನು ತಪ್ಪಿತಸ್ಥ ಅಲ್ಲ ಎಂದು ಅಭಿಪ್ರಾಯಪಟ್ಟರೆ, ಕಾಂಗ್ರೆಸ್‌ ಪಕ್ಷ ಮಾತ್ರ ಇದರಲ್ಲಿ ತೀರ್ಪು ನೀಡಲು ಮುಂದಾಗಿದೆ. ಅಂದರೆ ಕಾಂಗ್ರೆಸ್‌ ಪಕ್ಷ ತನ್ನನ್ನು ನ್ಯಾಯಾಲಯಕ್ಕಿಂತ ದೊಡ್ಡದು ಎಂದುಕೊಂಡಿದೆ ಎಂದು ವ್ಯಂಗ್ಯವಾಡಿದರು.

ನಾನು ಆರೋಪ ಮುಕ್ತ, ಸಿದ್ದರಾಮಯ್ಯ ಅಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮುಡಾ ಹಗರಣ ತನಿಖೆಯಾಗಬೇಕಾದ ಪ್ರಕರಣ ಎಂದು ಹೈಕೋರ್ಟ್‌ ಅಭಿಪ್ರಾಯಪಟ್ಟಿದೆ. ತೀರ್ಪು ಬಂದ ಬಳಿಕ ಮುಖ್ಯಮಂತ್ರಿಯವರು ಭಯಗೊಂಡು ನಿವೇಶನಗಳನ್ನು ಹಿಂದಿರುಗಿಸಿದ್ದಾರೆ. ಆದರ ನಾನು ಕೋರ್ಟ್‌ ಆದೇಶ ಬರುವ ಮುನ್ನವೇ ನಿವೇಶನ ಹಿಂದಿರುಗಿಸಿದ್ದೆ. ಕೋರ್ಟ್‌ನಲ್ಲಿ ನಾನು ಆಪಾದಿತ ಎಂದು ಹೇಳಿರಲಿಲ್ಲ. ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಕೂಡ ನನ್ನನ್ನು ಆರೋಪ ಮುಕ್ತ ಮಾಡಲಾಗಿದೆ. ಆದರೆ ಸಿಎಂ ಸಿದ್ದರಾಮಯ್ಯ ಇನ್ನೂ ಆರೋಪ ಮುಕ್ತವಾಗಿಲ್ಲ. ಈ ದೇಶದಲ್ಲಿ ಕೋರ್ಟ್‌ ದೊಡ್ಡದೋ, ಕಾಂಗ್ರೆಸ್‌ ದೊಡ್ಡದೋ ಎಂದು ಪ್ರಶ್ನೆ ಮಾಡಿದರು.

ಕಾಂಗ್ರೆಸ್‌ ಪಕ್ಷ ಕೋರ್ಟ್‌ಗಿಂತ ದೊಡ್ಡದಲ್ಲ. ಗೌರವಾನ್ವಿತ ಸಚಿವರಾದ ಕೃಷ್ಣ ಭೈರೇಗೌಡರ ಕೋಲಾರದ ಆಸ್ತಿಗಳೆಲ್ಲವೂ ಕುಟುಂಬದಿಂದ ಅವರಿಗೆ ಬಂದಿದೆ. ಅದೇ ರೀತಿ ಮುನಿವೆಂಕಟಪ್ಪ ಅವರು ವಿಲ್‌ ತಯಾರಿಸಿ ಅವರ ಮಕ್ಕಳಿಗೆ ಆಸ್ತಿ ಕೊಟ್ಟಿದ್ದಾರೆ. ಆ ಕುಟುಂಬದಲ್ಲಿ ಸುಮಾರು 20 ಜನರಿದ್ದು, ನನ್ನ ಹೆಸರಿಗೆ ನೋಂದಣಿಯಾದಾಗ ಆ 20 ಜನರು ಕೂಡ ಸಹಿ ಹಾಕಿದ್ದಾರೆ. ಇದು ಹೇಗೆ ಬೇನಾಮಿಯಾಗುತ್ತದೆ? ಎಂದು ಪ್ರಶ್ನಿಸಿದರು.

1995 ರಲ್ಲಿ ಆಗಿರುವ ಪಹಣಿಯಲ್ಲಿ ಇಡೀ ಕುಟುಂಬದವರ ಹೆಸರಿದೆ. ಆದರೆ ಇದು ಬಿಡಿಎ ಭೂಮಿ ಎಂದು ಸಚಿವರು ಸುಳ್ಳು ಹೇಳಿದ್ದಾರೆ. ಇದನ್ನು ಬಿ.ಎಸ್‌.ಯಡಿಯೂರಪ್ಪ ಅಕ್ರಮವಾಗಿ ಡಿ ನೋಟಿಫೈ ಮಾಡಿದ್ದಾರೆ ಎಂದು ಕೂಡ ಸುಳ್ಳು ಆರೋಪ ಮಾಡಿದ್ದಾರೆ. ಸುಮಾರು 1 ಎಕರೆ ವ್ಯಾಪ್ತಿಯ ಈ ಜಾಗ, ಹೊರವರ್ತುಲ ರಸ್ತೆಯ ಪಕ್ಕವಿದೆ. ರಸ್ತೆಗೆ ಅಗತ್ಯವಿರುವ ಭೂಮಿ ಪಡೆದು, ಉಳಿದಿದ್ದನ್ನು ಡಿನೋಟಿಫೈ ಮಾಡಲು ತೀರ್ಮಾನಿಸಲಾಗಿತ್ತು ಎಂದೇ ಅಂದು ಸಿಎಂ ಆಗಿದ್ದ ಎಸ್‌.ಎಂ.ಕೃಷ್ಣ ಹೇಳಿದ್ದರು.

ಈ ಭೂಮಿ 70:30 ಅನುಪಾತದಲ್ಲಿ ಹಂಚಿಕೆಯಾಗಿದೆ. ಅಂದರೆ 70% ಸರ್ಕಾರಕ್ಕೆ ಹಾಗೂ 30% ಮಾಲೀಕರಿಗೆ ನೀಡಲಾಗಿದೆ. ಅಂದರೆ ಬಿಡಿಎಗೆ ಹೆಚ್ಚು ಲಾಭವಾಗಿದೆ. ಉಳಿದ ಜಮೀನು ಅಗತ್ಯವಿಲ್ಲವೆಂದು ಸರ್ಕಾರವೇ ವಾಪಸ್‌ ನೀಡಿದೆ. ಬಿಡಿಎದಿಂದಲೇ ಭೂ ಮಾಲೀಕರಿಗೆ ಪತ್ರ ಬರೆದಿದ್ದು, ಅದರಂತೆ ಭೂಮಿಯನ್ನು ಬಿಟ್ಟುಕೊಡಲಾಗಿದೆ. ಇಲ್ಲಿ ಎಲ್ಲವೂ ಕಾನೂನು ಪ್ರಕಾರವೇ ನಡೆದಿದೆ. ನನ್ನ ವಿರುದ್ಧ ತನಿಖೆ ನಡೆಸಲು ಅನುಮತಿ ಕೊಡುವಂತೆ ರಾಜ್ಯಪಾಲರಾಗಿದ್ದ ಹಂಸರಾಜ್‌ ಭಾರಧ್ವಾಜ್‌ ಅವರನ್ನು ಕೋರಲಾಗಿತ್ತು. ಆದರೆ ರಾಜ್ಯಪಾಲರು ಕೂಡ ನನ್ನ ವಿರುದ್ಧ ತನಿಖೆಗೆ ಅವಕಾಶ ನೀಡಲಿಲ್ಲ. ಆದರೂ ನನ್ನನ್ನು ಕಾಂಗ್ರೆಸ್‌ ಸಚಿವರು ಭೂ ಕಬಳಿಕೆದಾರ ಎನ್ನುತ್ತಿದ್ದಾರೆ. ಕಾಂಗ್ರೆಸ್‌ನ ರಾಜ್ಯಪಾಲರಾಗಲೀ, ನ್ಯಾಯಾಲಯವಾಗಲೀ ನನ್ನನ್ನು ತಪ್ಪಿತಸ್ಥ ಎಂದು ಭಾವಿಸಿಲ್ಲ. ಆದರೆ ಈಗ ಸಿದ್ದರಾಮಯ್ಯನವರಿಗೆ ನನ್ನನ್ನು ಹೋಲಿಸಲಾಗುತ್ತಿದೆ ಎಂದರು.

ರಾಜೀನಾಮೆ ನೀಡುತ್ತಾರೆಯೇ?: ಕಂದಾಯ ಸಚಿವ ಕೃಷ್ಣ ಬೈರೇಗೌಡರ ಬಳಿ ಅಧಿಕಾರವಿದೆ. ಎಚ್‌.ಕೆ.ಪಾಟೀಲ್‌ ಹಾಗೂ ಡಾ.ಜಿ.ಪರಮೇಶ್ವರ್‌ ಹಿರಿಯರು. ಸತೀಶ್‌ ಜಾರಕಿಹೊಳಿ ಮಾತ್ರ ಈ ಬಗ್ಗೆ ಮಾತಾಡಿಲ್ಲ. ಏಕೆಂದರೆ ಇದು ಬುರುಡೆ ಕೇಸ್‌ ಎಂದು ಅವರಿಗೂ ಗೊತ್ತಿತ್ತು. ಈ ನಾಲ್ಕು ಸಚಿವರು ನನಗೆ ಆದರ್ಶವಾಗಿದ್ದಾರೆ. ಕೃಷ್ಣ ಬೈರೇಗೌಡರು ಈ ಹಿಂದೆ ವಿಧಾನಸಭೆಯಲ್ಲಿ ಅಶೋಕ್‌ ನಮ್ಮ ಬಂಧುಗಳು ಎಂದು ಹೇಳಿದ್ದರು. ನಾನು ಕನ್ನಡ ಶಾಲೆಯಲ್ಲಿ ಓದಿದವನು. ಆದರೆ ರಾಜ್ಯಪಾಲರಿಗೆ ಇಂಗ್ಲಿಷ್‌ನಲ್ಲಿ ಪತ್ರ ಬರೆಯಬೇಕಾಗುತ್ತದೆ. ಸ್ಪೀಕರ್‌ಗೂ ಇಂಗ್ಲಿಷ್‌ನಲ್ಲೇ ಪತ್ರ ಬರೆಯಬೇಕಾಗುತ್ತದೆ. ನಾನೀಗ ಏನು ಮಾಡಬೇಕು ಹಾಗೂ ಯಾರಿಗೆ ಪತ್ರ ಬರೆಯಬೇಕೆಂದು ಕೃಷ್ಣ ಬೈರೇಗೌಡರು ತಿಳಿಸಿದರೆ ನಾನು ಹಾಗೆಯೇ ನಡೆದುಕೊಳ್ಳುತ್ತೇನೆ. ನಾನು ಯಾವುದೇ ಸಚಿವರಿಗೆ ಸವಾಲು ಹಾಕುತ್ತಿಲ್ಲ. ನನಗೆ ಯಾವುದೇ ಆಯ್ಕೆ ಇಲ್ಲ. ಈ ನಾಲ್ಕು ಸಚಿವರು ನೈತಿಕತೆಯ ಆಧಾರದಲ್ಲಿ ಏನು ಹೇಳುತ್ತಾರೋ, ಅದನ್ನೇ ಪಾಲನೆ ಮಾಡುತ್ತೇನೆ ಎಂದರು.

ಎದೆಯಲ್ಲಿ ಯಾರಿದ್ದಾರೆಂದು ತೋರಿಸಲಿ: ನಾನು 24 ಗಂಟೆ ಗಡುವು ನೀಡುತ್ತೇನೆ. ನೈತಿಕತೆಯ ಆಧಾರದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ. ಸಚಿವ ಸಂಪುಟದ ಎಲ್ಲ ಸಚಿವರು ಮುಖ್ಯಮಂತ್ರಿಗಾಗಿ ಪ್ರಾಣಕ್ಕೆ ಪ್ರಾಣ ಕೊಡುತ್ತೇವೆ, ಬಂಡೆಯಂತೆ ನಿಂತಿದ್ದೇವೆ ಎಂದು ಹೇಳಿದ್ದಾರೆ. ಆಂಜನೇಯ ಎದೆ ಬಗೆದು ಶ್ರೀರಾಮನನ್ನು ತೋರಿಸಿದಂತೆ ನಮ್ಮ ಎದೆಯಲ್ಲೂ ಸಿದ್ದರಾಮಯ್ಯ ಇದ್ದಾರೆ ಎಂಬಂತೆ ಈ ಸಚಿವರು ಹೇಳಿದ್ದಾರೆ. ಈಗ ಎಲ್ಲ ಸಚಿವರಿಗೆ ರಾಜೀನಾಮೆ ಕೊಡುವ ಅವಕಾಶವಿದೆ. ಮೊದಲು ಈ ನಾಲ್ಕು ಸಚಿವರು ಸಿದ್ದರಾಮಯ್ಯನವರಿಗಾಗಿ ರಾಜೀನಾಮೆ ನೀಡಲಿ. ಈ ಮೂಲಕ ಅವರ ಎದೆಯಲ್ಲಿ ಸಿದ್ದರಾಮಯ್ಯ ಇದ್ದಾರೆಯೇ? ಡಿ.ಕೆ.ಶಿವಕುಮಾರ್‌ ಅಥವಾ ಮಲ್ಲಿಕಾರ್ಜುನ ಖರ್ಗೆ ಇದ್ದಾರೆಯೇ ಎಂದು ಗೊತ್ತಾಗಲಿ. ಅವರೆಲ್ಲರೂ ರಾಜೀನಾಮೆ ನೀಡುವುದಾದರೆ ನಾನು ಕೂಡ ರಾಜೀನಾಮೆ ನೀಡುತ್ತೇನೆ ಎಂದರು.

ನನಗೆ ಕಳಂಕ ತರಲು ಮಾಡುತ್ತಿರುವ ಷಡ್ಯಂತ್ರ ಸರಿಯಲ್ಲ. ನಾನು ಎಲ್ಲೂ ವೈಯಕ್ತಿಕ ಟೀಕೆ ಮಾಡುವುದಿಲ್ಲ. ನೀವೇನೋ ರಾಜಕಾರಣ ಮಾಡುತ್ತೀರ, ಮನೆಯವರನ್ನು ಯಾಕೆ ತರುತ್ತೀರ ಎಂದು ಸಿದ್ದರಾಮಯ್ಯನವರ ಪತ್ನಿ ಹೇಳಿದ್ದರು. ನನಗೆ ಅದರ ಬಗ್ಗೆ ಸಹಮತವಿದೆ. ಆದ್ದರಿಂದ ನಾನು ಯಾವುದೇ ಸಚಿವರ ಕುಟುಂಬದ ವೈಯಕ್ತಿಕ ವಿಚಾರಕ್ಕೆ ಹೋಗುವುದಿಲ್ಲ. ವಿರೋಧ ಪಕ್ಷದಲ್ಲಿರುವುದರಿಂದ ನನ್ನ ಕರ್ತವ್ಯ ಮಾತ್ರ ಮಾಡುತ್ತಿದ್ದೇನೆ ಎಂದು ತಿಳಿಸಿದರು.

ಮಾಜಿ ಲೋಕಾಯಕ್ತ ಸಂತೋಷ್‌ ಹೆಗ್ಡೆ, ಮಾಜಿ ಸ್ಪೀಕರ್‌ ಕೆ.ಬಿ.ಕೋಳಿವಾಡ ಕೂಡ ಮುಖ್ಯಮಂತ್ರಿಯ ರಾಜೀನಾಮೆ ಕೇಳಿದ್ದಾರೆ. ನಿಮ್ಮ ವಿರುದ್ಧ ಆರೋಪ ಬಂದಿರುವಾಗ ಕೋರ್ಟ್‌ನಲ್ಲಿ ಪರಿಹರಿಸಿಕೊಳ್ಳಬೇಕು, ಅದನ್ನು ಬಿಟ್ಟು ವಿರೋಧ ಪಕ್ಷದವರ ಮೇಲೆ ಸೇಡು ತೀರಿಸಿಕೊಳ್ಳಲು ಮುಂದಾಗಬಾರದು. ನನಗೆ ಯಾರ ಮೇಲೂ ದ್ವೇಷದ ಭಾವನೆ ಇಲ್ಲ. ಯಾರಿಗೂ ಸವಾಲು ಹಾಕಿಲ್ಲ ಎಂದರು.

ಹಿಂದೂ ನಿಂದನೆ ನಿಲ್ಲಿಸಿ: ವೀರ ಸಾವರ್ಕರ್‌ ಕುರಿತು ಕಾಂಗ್ರೆಸ್‌ ನಾಯಕರು ಆಪಾದನೆ ಮಾಡಬಾರದು. ಹಿಂದೂಗಳನ್ನು ಕಂಡರೆ ಕಾಂಗ್ರೆಸ್‌ಗೆ ಆಗಲ್ಲ. ಹಿಂದೂಗಳನ್ನು ನಿಂದಿಸುವ ಮನಸ್ಥಿತಿಯನ್ನು ಬದಲಿಸಿಕೊಳ್ಳಲಿ. ನೀವೆಲ್ಲ ಹಿಂದೂಗಳಾ? ನಿಮಗೆ ನಿಂದಿಸಲು ಹಿಂದೂಗಳೇ ಸಿಗುವುದೇ? ಎಂದು ಪ್ರಶ್ನೆ ಮಾಡಿದರು.

ರಾಜಕೀಯ

ಬೆಂಗಳೂರಿನಲ್ಲಿ ಶಾಶ್ವತ ಹೆಜ್ಜೆಗುರುತು ಬಿಟ್ಟು ಹೋಗುವ ಆಸೆ ನನ್ನದು : ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರಿನಲ್ಲಿ ಶಾಶ್ವತ ಹೆಜ್ಜೆಗುರುತು ಬಿಟ್ಟು ಹೋಗುವ ಆಸೆ ನನ್ನದು : ಡಿಸಿಎಂ ಡಿ.ಕೆ.

ಬೆಂಗಳೂರಿನಲ್ಲಿ ಬದಲಾವಣೆ ತರಬೇಕು, ನನ್ನ ಕೆಲಸಗಳ ಮೂಲಕ ನನ್ನ ಹೆಸರು ಶಾಶ್ವತವಾಗಿ ಉಳಿಯಬೇಕು, ಶಾಶ್ವತ ಹೆಜ್ಜೆ ಗುರುತು ಬಿಟ್ಟು ಹೋಗುವ ಆಸೆ ನನಗೆ ಇದೆ: D.K. Shivakumar

[ccc_my_favorite_select_button post_id="117318"]
ರಾಜ್ಯದಲ್ಲಿ 2,84,881 ಹುದ್ದೆಗಳು ಖಾಲಿ: ನಿರುದ್ಯೋಗಿಗಳ ಅಳಲು ಕೇಳುವವರು ಯಾರು..?

ರಾಜ್ಯದಲ್ಲಿ 2,84,881 ಹುದ್ದೆಗಳು ಖಾಲಿ: ನಿರುದ್ಯೋಗಿಗಳ ಅಳಲು ಕೇಳುವವರು ಯಾರು..?

ರಾಜ್ಯದಲ್ಲಿ ಸರ್ಕಾರದಲ್ಲಿ ವಿವಿಧ ಇಲಾಖೆಗಳೂ ಸೇರಿದಂತೆ ರಾಜ್ಯದಲ್ಲಿ ಬರೋಬ್ಬರಿ 2,84,881 ಹುದ್ದೆಗಳು ಖಾಲಿಯಿರುವ (Bacant Posts) ಮಾಹಿತಿ ಬಯಲಾಗಿದೆ.

[ccc_my_favorite_select_button post_id="117270"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಅನುಮತಿ; ಸಚಿವ ಸಂಪುಟ ಸಭೆಯಲ್ಲಿ  ತೀರ್ಮಾನ: ಡಿಸಿಎಂ ಡಿ.ಕೆ.ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಅನುಮತಿ; ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ: ಡಿಸಿಎಂ

"ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡುವ ಬಗ್ಗೆ ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ತೀರ್ಮಾನ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar) ತಿಳಿಸಿದರು.

[ccc_my_favorite_select_button post_id="117214"]
ದೊಡ್ಡಬಳ್ಳಾಪುರ: ತಂದೆ-ಮಗನ ಮೇಲೆ ಮಾರಣಾಂತಿಕ ಹಲ್ಲೆ..!

ದೊಡ್ಡಬಳ್ಳಾಪುರ: ತಂದೆ-ಮಗನ ಮೇಲೆ ಮಾರಣಾಂತಿಕ ಹಲ್ಲೆ..!

ಮಹಿಳೆಯೊಂದಿಗೆ ಬಂದ ಯುವಕರ ಗುಂಪೊಂದು, ಅಂಗಡಿಯಲ್ಲಿ ವ್ಯಾಪಾರ ಮಾಡುತ್ತಿದ್ದ ತಂದೆ ಮತ್ತು ಮಗನ ಮೇಲೆ ಮಾರಣಾಂತಿಕ ಹಲ್ಲೆ (Assault) ನಡೆಸಿ ಪರಾರಿಯಾಗಿರುವ ಘಟನೆ ತಾಲೂಕಿನ ಪುಟ್ಟಯ್ಯನ ಅಗ್ರಹಾರ ಗ್ರಾಮದಲ್ಲಿ ನಡೆದಿದೆ.

[ccc_my_favorite_select_button post_id="117333"]
ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ಕಾರು ಮತ್ತು ಕೆಎಸ್ಆರ್ಟಿಸಿ ಬಸ್ ನಡುವೆ ಭವಿಸಿದ ಭೀಕರ ರಸ್ತೆ ಅಫಘಾತದಲ್ಲಿ (Accident) ಮೂವರು ಸಾವನಪ್ಪಿರುವ ಘಟನೆ *** ಹೊರವಲಯದ *** ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="117239"]

ಆರೋಗ್ಯ

ಸಿನಿಮಾ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video ನೋಡಿ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video

ಅಭಿಮಾನಿಗಳ ದಾಸ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ (Darshan) ಅಭಿನಯದ ಬಹುನಿರೀಕ್ಷಿತ ಚಿತ್ರ 'ದಿ ಡೆವಿಲ್' ಇಂದು (ಡಿ.11) ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್ ಆಗಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ.

[ccc_my_favorite_select_button post_id="117242"]