ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಇಂದಿನಿಂದ ರಾಜ್ಯಾದ್ಯಂತ ಗ್ರಾಮ ಪಂಚಾಯತ್ (grama panchayat) ಸಿಬ್ಬಂದಿಯು ಮುಷ್ಕರಕ್ಕೆ ಕರೆ ನೀಡಿದ್ದು, ಗ್ರಾಮ ಪಂಚಾಯತ್ ಕಚೇರಿಗಳು ಬಹುಪಾಲು ಬಂದ್ ಆಗಿರಲಿವೆ
ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಧರಣಿ ಹಮ್ಮಿಕೊಳ್ಳಲಾಗಿದ್ದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು ಮತ್ತು ನೌಕರರರು ಎಲ್ಲಾ ವೃಂದ ಸಂಘಗಳು ಹಾಗೂ ಗ್ರಾಮ ಪಂಚಾಯತ್ ಸದಸ್ಯರ ಒಕ್ಕೂಟದಿಂದ ಸುಮಾರು 30 ಸಾವಿರ ಗ್ರಾಪಂ ಸದಸ್ಯರು ಹೋರಾಟದಲ್ಲಿ ಪಾಲ್ಗೊಳ್ಳಲಿದ್ದಾರೆ.
ಈ ಹಿನ್ನೆಲೆಯಲ್ಲಿ ನಾಳೆ ಎಲ್ಲಾ ಗ್ರಾಮ ಪಂಚಾಯತ್ ಸೇವೆಗಳಲ್ಲಿ ವ್ಯತ್ಯಯವಾಗುವ ಸಾಧ್ಯತೆ ಹೆಚ್ಚಾಗಿದೆ.
ಕನಿಷ್ಠ ರೂಪಾಯಿ 31,000 ವೇತನ ನಿಗದಿ, ಪಿಂಚಣಿ ರೂ.6,000 ಸೇವಾ ಹಿರಿತನ ಭತ್ಯೆ ಹೆಚ್ಚಳ ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಹೋರಾಟ ನಡೆಯಲಿದೆ.