ನವದೆಹಲಿ: ಹಿಂದೂಗಳ ಪೂಜನೀಯ ಕ್ಷೇತ್ರ ತಿರುಪತಿ ಲಾಡು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬಿನ ಅಂಶವನ್ನು ಬಳಸಲಾಗಿದೆ ಎಂಬ ಗಂಭೀರ ಆರೋಪದ ಕುರಿತು ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಇಂದು ನಡೆಸಿದೆ.
ಈ ಬಗ್ಗೆ ತನಿಖೆ ನಡೆಸಲು ಸಿಬಿಐನ ಇಬ್ಬರು ಅಧಿಕಾರಿಗಳನ್ನು ಒಳಗೊಂಡ ಎಸ್‌ಐಟಿಯನ್ನು ರಚಿಸಿ ಶುಕ್ರವಾರ ಸುಪ್ರೀಂಕೋರ್ಟ್ ಆದೇಶಿಸಿದೆ.
Tirupati Laddu Prasadam issue | Advocate Satyam Singh says "Supreme Court has ordered for the independent SIT constituted by 2 people from CBI, 2 from state police and 1 from Food Safety Authority and Supreme Court has disposed of the petition by commenting that if there will be… pic.twitter.com/IdDaBcaCXg
— ANI (@ANI) October 4, 2024
ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಮತ್ತು ಕೆ.ವಿ. ವಿಶ್ವನಾಥನ್ ಅವರಿದ್ದ ಪೀಠವು, ಈ ವಿಚಾರಕ್ಕೆ ನ್ಯಾಯಾಲಯವನ್ನು ರಣರಂಗವಾಗಿ ಬಳಸಿಕೊಳ್ಳಲು ಅವಕಾಶ ಕೊಡುವುದಿಲ್ಲ. ದೇವರಲ್ಲಿ ನಂಬಿಕೆ ಹೊಂದಿರುವ ಕೋಟ್ಯಂತರ ಜನರ ಭಾವನೆಗಳಿಗೆ ಧಕ್ಕೆಯಾಗುವುದನ್ನು ತಪ್ಪಿಸಲು ಎಸ್‌ಐಟಿ ರಚನೆ ಮಾಡಲಾಗಿದೆ.
ಎಸ್‌ಐಟಿಯಲ್ಲಿ ಇಬ್ಬರು ಸಿಬಿಐ, ಆಂಧ್ರಪ್ರದೇಶ ಪೊಲೀಸ್‌ನ ಇಬ್ಬರು ಅಧಿಕಾರಿಗಳು, ಒಬ್ಬ ಎಫ್‌ಎಸ್‌ಎಸ್‌ಎಐನ ಹಿರಿಯ ಅಧಿಕಾರಿ ಇರಲಿದ್ದಾರೆ. ಎಸ್‌ಐಟಿ ತನಿಖೆಯನ್ನು ಸಿಬಿಐ ನಿರ್ದೇಶಕರು ಮೇಲ್ವಿಚಾರಣೆ ಮಾಡುತ್ತಾರೆ ಎಂದು ಪೀಠ ಹೇಳಿದೆ.