Doddaballapura; ಕೃಷಿಯಲ್ಲಿ ಡ್ರೋನ್ ಬಳಕೆ ಕುರಿತು ಪ್ರಾತ್ಯಕ್ಷಿಕೆ..

ದೊಡ್ಡಬಳ್ಳಾಪುರ: ಆಧುನಿಕ ಕೃಷಿಯಲ್ಲಿ ಡ್ರೋನ್ ತಂತ್ರಜ್ಞಾನವನ್ನು ಬಳಸಿ ಕೀಟನಾಶಕಗಳು ಮತ್ತು ಬೆಳೆ ಪೋಷಕಾಂಶಗಳನ್ನು ಪರಿಣಾಮಕಾರಿಯಾಗಿ ಹಾಗು ನಿಖರವಾಗಿ ಸಿಂಪಡಿಸುವಿಕೆಯ ಮೂಲಕ ಉತ್ಪಾದನೆಯನ್ನು ಹೆಚ್ಚಿಸಬಹುದು ಎಂದು Doddaballapura ಸಹಾಯಕ ಕೃಷಿ ನಿರ್ದೇಶಕ ರಾಘವೇಂದ್ರ ತಿಳಿಸಿದರು.

Doddaballapura ತಾಲ್ಲೂಕಿನ ಕಸಬಾ ಹೋಬಳಿಯ ಸೊಣ್ಣಪ್ಪನಹಳ್ಳಿ ಗ್ರಾಮದಲ್ಲಿರುವ ಆಯೋಜಿಸಿದ್ದ ಕೃಷಿ ಇಲಾಖೆ ವತಿಯಿಂದ ರಾಷ್ಟ್ರೀಯ ಆಹಾರ ಮತ್ತು ಪೌಷ್ಟಿಕ ಭದ್ರತಾ ಯೋಜನೆ ಹಾಗೂ ಕೃಷಿಯಲ್ಲಿ ಡ್ರೋನ್ ಬಳಕೆ ಕುರಿತು ತರಬೇತಿ ಮತ್ತು ಪ್ರಾತ್ಯಕ್ಷಿತೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಪ್ರಸ್ತುತ ನಮ್ಮ ದೇಶದ ಜನಸಂಖ್ಯೆ 141 ಕೋಟಿಗಳಿದ್ದು, ಏರುತ್ತಿರುವ ಜನಸಂಖ್ಯೆಗೆ ಆಹಾರ ಒದಗಿಸುವ ಉದ್ದೇಶದಿಂದ ರಾಷ್ಟ್ರೀಯ ಆಹಾರ ಮತ್ತು ಪೌಷ್ಟಿಕ ಭದ್ರತಾ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಆಹಾರ ಬೆಳೆಗಳ “ವಿಸ್ತೀರ್ಣ, ಉತ್ಪಾದನೆ ಮತ್ತು ಉತ್ಪಾದಕತೆಯನ್ನು ಹೆಚ್ಚಿಸುವುದು ಈ ಯೋಜನೆಯ ಮುಖ್ಯ ಗುರಿಯಾಗಿದೆ.

ಪ್ರಸ್ತುತ ದಿನಗಳಲ್ಲಿ ಕೃಷಿ ಕಾರ್ಮಿಕರ ಕೊರತೆ ಅತಿ ದೊಡ್ಡ ಸಮಸ್ಯೆಯಾಗಿದೆ. ಸಸ್ಯ ಪೋಷಕಾಂಶಗಳನ್ನು ಸಿಂಪರಣೆ ಮಾಡಲು ಅಧಿಕ ಸಮಯ ಮತ್ತು ಹಣ ವ್ಯಯವಾಗುತ್ತಿದೆ. ಇದಕ್ಕೆ ಪರಿಹಾರವಾಗಿ ಕೃಷಿ ಡ್ರೋನ್ ಬಳಸಿ ಸಿಂಪರಣೆ ಮಾಡುವುದು ಒಳ್ಳೆಯ ಮಾರ್ಗವಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: Darshan ಪರ ಸಿವಿ ನಾಗೇಶ್ ಅವರ ಪ್ರಬಲ ವಾದಕ್ಕೆ ಕೆಲ ಖಾಸಗಿ ಸುದ್ದಿ ವಾಹಿನಿಗಳು ಶಾಕ್..!

ಹಾಡೋನಹಳ್ಳಿಯ ಕೃಷಿ ವಿಜ್ಞಾನ ಕೇಂದ್ರ, ವಿಜ್ಞಾನಿಗಳಾದ ಡಾ.ವೆಂಕಟೇಗೌಡ ಜೆ ಮಾತನಾಡಿ, ಯೂರಿಯಾವನ್ನು ಮೇಲುಗೊಬ್ಬರವಾಗಿ ಬೆಳೆಗಳಿಗೆ ಎರಚುವುದು ಪ್ರಸ್ತುತ ಚಾಲ್ತಿಯಲ್ಲಿರುವ ವಿಧಾನವಾಗಿದೆ. ಈ ವಿಧಾನದಿಂದ ಯೂರಿಯಾ ಹರಳುಗಳು ಸಸ್ಯಗಳ ಬೇರುಗಳಿಗೆ ಸೂಕ್ತವಾಗಿ ದೊರೆಯುವುದಿಲ್ಲ. ವಾತವಾರಣದಲ್ಲಿ ತಾಪಮಾನ ಹೆಚ್ಚಾದಂತೆ ಯೂರಿಯಾದಲ್ಲಿನ ಪೋಷಕಾಂಶವು ಆವಿಯಾಗಬಹುದು. ಹೆಚ್ಚಿನ ಮಳೆಂದ ಕೊಚ್ಚಿ ಹೋಗುವ ಸಾಧ್ಯತೆ ಇರುತ್ತದೆ.

ಈ ಸಮಸ್ಯೆಗಳಿಗೆ ಪರಿಹಾರವಾಗಿ ನ್ಯಾನೋ ಯೂರಿಯ ಸಿಂಪರಣೆಯು ಯೋಗ್ಯ ಮಾರ್ಗವಾಗಿದೆ. ನ್ಯಾನೋ ಯೂರಿಯಾದ ಸೂಕ್ಷ್ಮ ಕಣಗಳು ಹೆಚ್ಚಿನ ಸುತ್ತಳತೆ ಹೊಂದಿದ್ದು, ಎಲೆಗಳ ಮೇಲೆ ಸಿಂಪರಣೆ ಮಾಡಿದಾಗ ಶೀರ್ಘವಾಗಿ ಎಲೆಗಳಲ್ಲಿನ ಸೂಕ್ಷ್ಮ ರಂಧ್ರಗಳಾದ ಸ್ಟೋಮ್ಯಾಟ ಮೂಲಕ ಸಸ್ಯದ ಶರೀರದೊಳಗೆ ಸೇರಿ ಪೋಷಕಾಂಶಗಳು ನ್ಯಾಯೋಚಿತವಾಗಿ ಸಸ್ಯದ ಬೆಳವಣಿಗೆಗೆ ದೊರೆಯುವಂತೆ ಮಾಡುತ್ತವೆ. ರೈತರು ಈ ತಂತ್ರಜ್ಞಾನವನ್ನು ಬಳಸಿಕೊಂಡು ಆಹಾರ ಧಾನ್ಯಗಳ ಉತ್ಪಾದನೆಯನ್ನು ಹೆಚ್ಚಿಸಿಕೊಳ್ಳುವಂತೆ ತಿಳಿಸಿದರು.

ಇಫ್ಕೋ ಸಂಸ್ಥೆಯ ಚೇತನ್ ಮಾತನಾಡಿ, ನ್ಯಾನೋ ಯೂರಿಯಾ ಬಳಕೆಗೆ ರೈತರ ಖರ್ಚು ಕಡಿಮೆಯಾಗುವುದಲ್ಲದೇ ರೈತರು ಹೆಚ್ಚಿನ ಆದಾಯ ಪಡೆಯಬಹುದು. ನ್ಯಾನೋ ಯೂರಿಯಾ ಮತ್ತು ನ್ಯಾನೋ ಡಿಎಪಿಯನ್ನು ಡ್ರೋನ್ ಮೂಲಕ ಸಿಂಪರಣೆ ಮಾಡುವುದರ ಮೂಲಕ ರೈತರು ಕೃಷಿ ಕಾರ್ಮಿಕರ ಕೊರತೆ ನೀಗಿಸಬಹುದೆಂದು ತಿಳಿಸಿದರು.

ಅಂತಿಮವಾಗಿ Doddaballapura ತಾಲೂಕಿನ ಸೊಣ್ಣೇನಹಳ್ಳಿ ಗ್ರಾಮದ ರೈತ ಸದಾಶಿವಮೂರ್ತಿ ಅವರ ಜಮೀನಿನಲ್ಲಿ ಬೆಳೆಯಲಾಗುತ್ತಿರುವ ರಾಗಿ ಬೆಳೆಗೆ ಡ್ರೋನ್ ಬಳಸಿ ನ್ಯಾನೋ ಯೂರಿಯಾ ವನ್ನು ಸಿಂಪರಣೆ ಮಾಡುವ ವಿಧಾನವನ್ನು ಪ್ರಾತ್ಯಕ್ಷಿತೆ ಕೈಗೊಳ್ಳಲಾಯಿತು.

ಕಾರ್ಯಕ್ರಮದಲ್ಲಿ ಕೊನ್ನಘಟ್ಟ ಗ್ರಾಮ ಪಂಚಾತಿಯ ಅಧ್ಯಕ್ಷೆ ಮಂಗಳ, ಸದಸ್ಯ ಪ್ರಭಾಕರ್, ಇಪ್ಕೋ ಸಂಸ್ಥೆಯ ಪ್ರತಿನಿಧಿಗಳು, ಪ್ರಗತಿ ಪರ ರೈತರು, ಗ್ರಾಮದ ರೈತರು,ರೈತ ಮಹಿಳೆಯರು, ಕೃಷಿ ಅಧಿಕಾರಿಗಳು ಹಾಗೂ ಆತ್ಮ ಸಿಬ್ಬಂದಿಗಳು ಭಾಗವಸಿದ್ದರು.

ರಾಜಕೀಯ

ಆ.31 ರಂದು “ಧರ್ಮಸ್ಥಳ ಸತ್ಯ ಯಾತ್ರೆ: ಜೆಡಿಎಸ್ ಕಾರ್ಯಕರ್ತರಿಗೆ ಬಿ.ಮುನೇಗೌಡ ಕರೆ

ಆ.31 ರಂದು “ಧರ್ಮಸ್ಥಳ ಸತ್ಯ ಯಾತ್ರೆ: ಜೆಡಿಎಸ್ ಕಾರ್ಯಕರ್ತರಿಗೆ ಬಿ.ಮುನೇಗೌಡ ಕರೆ

"ಧರ್ಮಸ್ಥಳ ಸತ್ಯ ಯಾತ್ರೆಗೆ" (Dharmasthala Satya Yatre) ಬೆಂಗಳೂರು ಗ್ರಾಮಾಂತರ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸುವಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ (JDS) ಅಧ್ಯಕ್ಷ ಬಿ.ಮುನೇಗೌಡ ಕರೆ ನೀಡಿದ್ದಾರೆ.

[ccc_my_favorite_select_button post_id="113258"]
RSS ಗೀತೆಯ ಸಾಲು ಉಲ್ಲೇಖ: ಕಾರ್ಯಕರ್ತರ ಕ್ಷಮೆ ಕೋರಿದ ಡಿಸಿಎಂ ಡಿ.ಕೆ.ಶಿವಕುಮಾರ್

RSS ಗೀತೆಯ ಸಾಲು ಉಲ್ಲೇಖ: ಕಾರ್ಯಕರ್ತರ ಕ್ಷಮೆ ಕೋರಿದ ಡಿಸಿಎಂ ಡಿ.ಕೆ.ಶಿವಕುಮಾರ್

ವಿಧಾನಸಭೆಯಲ್ಲಿ ಆರ್ ಎಸ್ಎಸ್ ಗೀತೆಯ ಸಾಲುಗಳನ್ನು ಉಲ್ಲೇಖಿಸಿದ್ದರ ಬಗ್ಗೆ ಸ್ಪಷ್ಟನೆ ನೀಡಿದರು. ಜೊತೆಗೆ ತಮ್ಮ ಹೇಳಿಕೆಯನ್ನು ರಾಜಕೀಯವಾಗಿ ಬಳಸುತ್ತಿರುವವರಿಗೂ ಡಿ.ಕೆ.ಶಿವಕುಮಾರ್ (D.K. Shivakumar) ತಿರುಗೇಟು ನೀಡಿದರು.

[ccc_my_favorite_select_button post_id="113124"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಿಗೆ ನಗದು ಪುರಸ್ಕಾರದ ಮೊತ್ತ ಹೆಚ್ಚಳ: ಸಿಎಂ ಸಿದ್ದರಾಮಯ್ಯ ಘೋಷಣೆ

ರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಿಗೆ ನಗದು ಪುರಸ್ಕಾರದ ಮೊತ್ತ ಹೆಚ್ಚಳ: ಸಿಎಂ ಸಿದ್ದರಾಮಯ್ಯ

ಒಲಂಪಿಕ್ಸ್ , ಏಷ್ಯನ್ ಗೇಮ್ಸ್, ಹಾಗೂ ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಚಿನ್ನದ ಪದಕ ಗೆದ್ದವರಿಗೆ 5 ಕೋಟಿ, ಬೆಳ್ಳಿ ಗೆದ್ದವರಿಗೆ 3 ಹಾಗೂ ಕಂಚು ಗೆದ್ದವರಿಗೆ 2 ಕೋಟಿ ರೂ.ಗಳ ಬಹುಮಾನ: Cmsiddaramaiah

[ccc_my_favorite_select_button post_id="113214"]
ದೊಡ್ಡಬಳ್ಳಾಪುರ: ಗಣೇಶ ಚತುರ್ಥಿ ದಿನ ತಪ್ಪಿದ ಅನಾಹುತ.. ಟೋಲ್ ಸಂಸ್ಥೆ ವಿರುದ್ಧ ಸಾರ್ವಜನಿಕರ ಆಕ್ರೋಶ!| Video ನೋಡಿ

ದೊಡ್ಡಬಳ್ಳಾಪುರ: ಗಣೇಶ ಚತುರ್ಥಿ ದಿನ ತಪ್ಪಿದ ಅನಾಹುತ.. ಟೋಲ್ ಸಂಸ್ಥೆ ವಿರುದ್ಧ ಸಾರ್ವಜನಿಕರ

ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಕ್ಕದ ರಸ್ತೆ ಬದಿಯಲ್ಲಿನ ಚರಂಡಿ ನುಗ್ಗಿರುವ ಘಟನೆ ನಗರದ ಹೊರವಲಯದಲ್ಲಿನ Doddaballapura ಮುಖ್ಯ ರಸ್ತೆಯಲ್ಲಿ ಸಂಭವಿಸಿದೆ.

[ccc_my_favorite_select_button post_id="113161"]
ದೊಡ್ಡಬಳ್ಳಾಪುರ: ಹಿಟ್ & ರನ್.. ವ್ಯಕ್ತಿ ಸಾವು..!

ದೊಡ್ಡಬಳ್ಳಾಪುರ: ಹಿಟ್ & ರನ್.. ವ್ಯಕ್ತಿ ಸಾವು..!

ರಸ್ತೆ ದಾಟುವ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ (Hit & Run) ವ್ಯಕ್ತಿಯೋರ್ವ ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ದೊಡ್ಡಬಳ್ಳಾಪುರ- ದಾಬಸ್‌ಪೇಟೆ ನಡುವಿನ

[ccc_my_favorite_select_button post_id="113236"]

ಆರೋಗ್ಯ

ಸಿನಿಮಾ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅಭಿನಯದ ದಿ ಡೆವಿಲ್ ಸಿನಿಮಾದ 'ಇದ್ರೇ ನೆಮ್ಮದಿಯಾಗ್ ಇರ್ಬೇಕ್' ಹಾಡು ಯುಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ.

[ccc_my_favorite_select_button post_id="113046"]
error: Content is protected !!