Siddaramaiah: ಸುಳ್ಳು ಆರೋಪಗಳ ವಸ್ತುಸ್ಥಿತಿಯನ್ನು ಜನರ ಮುಂದಿಡುವ ಕೆಲಸ ಮಾಡುತ್ತೇವೆ – ಸಿಎಂ

ರಾಯಚೂರು: ಜಾತಿಗಣತಿಗೆ ಸಂಬಂಧಿಸಿದಂತೆ, ಒಳಮೀಸಲಾತಿ ಬಗ್ಗೆ ಸುಪ್ರೀಂ ಕೋರ್ಟ್ ನಲ್ಲಿ ಆದೇಶವಾಗಿದ್ದು, ಒಳ ಮೀಸಲಾತಿ ಬಗ್ಗೆ ಸರ್ಕಾರಕ್ಕೆ ವಿರೋಧವಿಲ್ಲ. ಆದರೆ ಇದರ ಬಗ್ಗೆಯೂ ವರಿಷ್ಠರೊಂದಿಗೆ ಹಾಗೂ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತಿಳಿಸಿದರು.

ಅವರು ಇಂದು ರಾಯಚೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಕಾಂತರಾಜು ಆಯೋಗದ ಜಾತಿಗಣತಿ ವರದಿಯನ್ನು ಪ್ರಕಟಿಸುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿ, ಜಾತಿ ಗಣತಿ ವರದಿಯನ್ನು ಈಗಾಗಲೇ ಸ್ವೀಕರಿಸಲಾಗಿದ್ದು, ಈ ಬಗ್ಗೆ ಸಚಿವ ಸಂಪುಟ ಸಭೇಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು. ವರದಿಯಲ್ಲಿ ಸಣ್ಣ ಪುಟ್ಟ ದೋಷಗಳಿದ್ದರೆ ಅದನ್ನು ಸರಿಪಡಿಸುವ ಬಗ್ಗೆಯೂ ಪರಿಶೀಲಿಸಲಾಗುವುದು ಎಂದರು.

ವಸ್ತುಸ್ಥಿತಿಯನ್ನು ಜನರ ಮುಂದಿಡುವ ಕೆಲಸ ಮಾಡುತ್ತೇವೆ

ರಾಜ್ಯದ ಕಾಂಗ್ರೆಸ್ ನ ವಿವಿಧ ನಾಯಕರು ವರಿಷ್ಠರೊಂದಿಗೆ ಚರ್ಚೆ ಮಾಡುವುದು ಸಹಜ. ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಊಹಾಪೋಹಗಳು ಅಗತ್ಯವಿಲ್ಲ. ವಿರೋಧಪಕ್ಷಗಳು , ನನ್ನ ಮೇಲಿನ ಸುಳ್ಳು ಆರೋಪಗಳನ್ನು ಮಾಡಿ ರಾಜಿನಾಮೆ ಬೇಡಿದರೆ, ರಾಜಿನಾಮೆ ಕೊಡಲು ಸಾಧ್ಯವಿಲ್ಲ. ಸುಳ್ಳು ಆರೋಪಗಳನ್ನು ಮಾಡಿದರೆ, ವಸ್ತುಸ್ಥಿತಿಯನ್ನು ಜನರ ಮುಂದಿಡುವ ಕೆಲಸ ಮಾಡುತ್ತೇವೆ ಎಂದರು.

ಸತ್ಯ ಹೇಳಿರುವುದರಲ್ಲಿ ತಪ್ಪಿಲ್ಲ: Siddaramaiah

ಜೆಡಿಎಸ್ ನ ಜಿಟಿ ದೇವೇಗೌಡ, ಮುಖ್ಯಮಂತ್ರಿಯವರನ್ನು ಬೆಂಬಲಿಸಿ ಮಾತನಾಡಿದ ಬಗ್ಗೆ ಪ್ರತಿಕ್ರಿಯೆ ನೀಡಿ, ಅವರು ಜೆಡಿಎಸ್ ಪಕ್ಷದ ಕೋರ್ ಕಮಿಟಿಯ ಅಧ್ಯಕ್ಷ ಸ್ಥಾನದಲ್ಲಿದ್ದು, ಮುಡಾದ ಸದಸ್ಯರೂ ಆಗಿದ್ದಾರೆ. ಅವರು ಸತ್ಯ ಹೇಳಿರುವುದರಲ್ಲಿ ತಪ್ಪಿಲ್ಲ. ಈ ಪ್ರಕರಣದ ವಿರುದ್ದ , ವಿರೋಧಪಕ್ಷದವರ ಪಾದಯಾತ್ರೆಯನ್ನು ನಡೆಸುವುದು ಬೇಡ ಎಂದವರಲ್ಲಿ ಜಿ ಟಿ ದೇವೇಗೌಡರು ಒಬ್ಬರು ಎಂದರು.

ವಿರೋಧಪಕ್ಷದ ನಾಯಕರಾದ ಆರ್ ಅಶೋಕ್ ಅವರ ಮೇಲೆ ಎಫ್ ಐ ಆರ್ ಆಗಿರುವುದರಿಂದ, ತಾನು ರಾಜಿನಾಮೆ ನೀಡಲು ಸಿದ್ದ, ಸಿಎಂ ಅವರೂ ರಾಜಿನಾಮೆ ನೀಡಲಿ ಎಂದು ಹೇಳಿರುವ ಬಗ್ಗೆ ಉತ್ತರಿಸಿ, ಅವರು ಮೊದಲು ರಾಜಿನಾಮೆ ನೀಡಲಿ, ಜಮೀನು ಖರೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ಮೊದಲು ರಾಜಿನಾಮೆ ನೀಡಲಿ ಎಂದರು.

ಕರ್ನಾಟಕ ಸಂಭ್ರಮ: ಜೆಡಿಎಸ್ ಪಕ್ಷದ ಕೋರ್ ಕಮಿಟಿಯ ಅಧ್ಯಕ್ಷ ಸ್ಥಾನದಲ್ಲಿದ್ದು, ಮುಡಾದ ಸದಸ್ಯರೂ ಆಗಿದ್ದಾರೆ. ಅವರು ಸತ್ಯ ಹೇಳಿರುವುದರಲ್ಲಿ ತಪ್ಪಿಲ್ಲ.

ಕರ್ನಾಟಕ ಸಂಭ್ರಮ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದೇನೆ. 1973 ರಲ್ಲಿ ಮೈಸೂರು ರಾಜ್ಯಕ್ಕೆ ದೇವರಾಜ ಅರಸು ಅವರು ಮುಖ್ಯಮಂತ್ರಿಯಾಗಿದ್ದಾಗ , ಕರ್ನಾಟಕ ಎಂದು ನಾಮಕರಣ ಮಾಡಿದ್ದಕ್ಕೆ 50 ವರ್ಷಗಳ ಸಂದಿರುವ ಸುಸಂದರ್ಭದಲ್ಲಿ ಕರ್ನಾಟಕ ಸಂಭ್ರಮವನ್ನು ಇಂದು ಆಚರಿಸಲಾಗುತ್ತಿದೆ. ಈ ಪ್ರಯುಕ್ತ ವಿಧಾನಸೌಧದಲ್ಲಿ ಭುವನೇಶ್ವರಿ ಪ್ರತಿಮೆಯನ್ನೂ ಸಹ ಪ್ರತಿಷ್ಠಾಪಿಸಲಾಗುತ್ತಿದೆ.

ಗೋಕಾಕ್ ಚಳುವಳಿ ಮತ್ತು ಕನ್ನಡ ಸಂಭ್ರಮಕ್ಕೆ ಸಂಬಂಧಪಟ್ಟಂತೆ ಕನ್ನಡ ಸಂಸ್ಕೃತಿ ಇಲಾಖೆ, ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸಹಯೋಗದಲ್ಲಿ ಮಾಡುತ್ತಿರುವ ಕಾರ್ಯಕ್ರಮವಾಗಿದೆ ಎಂದರು.

ಸ್ವಾಭಿಮಾನಿ ಸಮಾವೇಶ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಹಿಂದುಳಿದ ವರ್ಗದವರು, ದೀನದಲಿತರ, ಅಲ್ಪಸಂಖ್ಯಾತರ ವರ್ಗದವರ ಸ್ವಾಭಿಮಾನಿ ಸಮಾವೇಶ ಇದಾಗಿದೆ ಎಂದರು.

ಜಲಾಶಯದ ಕೆಳಭಾಗದ ರೈತರಿಗೆ ನೀರು ಬಿಡಲು ಶೀಘ್ರ ಕ್ರಮ: Siddaramaiah

ತುಂಗಭದ್ರಾ ಜಲಾಶಯ ಹಾಗೂ ನವಲೆ ಜಲಾಶಯದ ಬಗ್ಗೆ ಶಾಶ್ವತ ಪರಿಹಾರ ಒದಗಿಸುವ ಕುರಿತು ಪತ್ರಕರ್ತರ ಪ್ರಶ್ನೆಗೆ ಬಗ್ಗೆ ಉತ್ತರಿಸಿ, ಜಲಾಶಯದಲ್ಲಿ 133 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯವಿದ್ದು, ಪ್ರಸ್ತುತ 102 ಟಿಎಂಸಿ ನೀರು ಸಂಗ್ರಹವಿದೆ. ಸುಮಾರು 30 ಟಿಎಂಸಿ ನೀರಿಗೆ ಆಗುವಷ್ಟು ಹೂಳು ತುಂಬಿರುವುದರಿಂದ ಕೆಳಭಾಗದ ರೈತರಿಗೆ ನೀರು ಬಿಡಲು ಸಾಧ್ಯವಾಗುತ್ತಿಲ್ಲ. 19 ನೇ ಗೇಟ್ ದುರಸ್ತಿಯನ್ನು ಐದು ದಿನಗಳೊಳಗೆ ದುರಸ್ತಿ ಮಾಡಿ ಬಾಗಿನ ಅರ್ಪಿಸಲಾಗಿದೆ. ಸರ್ಕಾರ ಕೆಳಭಾಗದ ರೈತರಿಗೆ ನೀರು ಒದಗಿಸಲು ಅನುಕೂಲವಾಗುವಂತಹ ಕ್ರಮವನ್ನು ತೆಗೆದುಕೊಳ್ಳಲಾಗುವುದು ಎಂದರು.

ರಾಜಕೀಯ

ಮೇ ಮೊದಲ ವಾರದಲ್ಲಿ ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ಹರೀಶ್ ಗೌಡ

ಮೇ ಮೊದಲ ವಾರದಲ್ಲಿ ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ಹರೀಶ್ ಗೌಡ

ಮುಂದಿನ ತಿಂಗಳ (ಮೇ) ಮೊದಲ ವಾರದಲ್ಲಿ ಜೆಡಿಎಸ್ (JDS) ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರು ದೊಡ್ಡಬಳ್ಳಾಪುರಕ್ಕೆ ಭೇಟಿ ನೀಡಲಿದ್ದಾರೆಂದು ಜೆಡಿಎಸ್ ಹಿರಿಯ ಮುಖಂಡ ಎಸ್.ಎಂ. ಹರೀಶ್ ಗೌಡ (S.M.

[ccc_my_favorite_select_button post_id="120975"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ದೊಡ್ಡಬಳ್ಳಾಪುರ: ಎರಡು ಪ್ರತ್ಯೇಕ ಅಪಘಾತ.. ಇಬ್ಬರ ದುರ್ಮರಣ..!

ದೊಡ್ಡಬಳ್ಳಾಪುರ: ಎರಡು ಪ್ರತ್ಯೇಕ ಅಪಘಾತ.. ಇಬ್ಬರ ದುರ್ಮರಣ..!

ಮಂಗಳವಾರ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತದಲ್ಲಿ (Accident) ಇಬ್ಬರು ಸಾವನಪ್ಪಿರುವ ಘಟನೆ ತಾಲೂಕಿನ..*** ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ.

[ccc_my_favorite_select_button post_id="120965"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]