ತಿರುವನಂತಪುರ: ಪ್ರಸಿದ್ದ ಧಾರ್ಮಿಕ ಕ್ಷೇತ್ರ ಶಬರಿಮಲೆ (Shabarimale) ದೇಗುಲದ ವಾರ್ಷಿಕ ಮಂಡಲಂ- ಮಕರವಿಳಕ್ಕು ಯಾತ್ರೆಗೆ ಕ್ಷಣಗಣನೆ ಆರಂಭವಾಗಿರುವ ಬೆನ್ನಲ್ಲೇ, ಈ ವರ್ಷ ಆನ್‌ಲೈನ್‌ನಲ್ಲಿ ಬುಕ್ ಮಾಡಿದವರಿಗೆ ಮಾತ್ರ ಶಬರಿಮಲೆಗೆ ನೀಡಲು ಕೇರಳ ಸರ್ಕಾರ ನಿರ್ಧರಿಸಿದೆ.
ಕಳೆದ ವರ್ಷ ಏಕಾಏಕಿ ಲಕ್ಷಾಂತರ ಭಕ್ತರು ಅಯ್ಯಪ್ಪ ದರ್ಶನಕ್ಕೆ ಆಗಮಿಸಿದ್ದರಿಂದ ಮತ್ತು ಅದನ್ನು ನಿರ್ವಹಿಸಲು ಸರ್ಕಾರ ಸೂಕ್ತ ವ್ಯವಸ್ಥೆ ಮಾಡಿಕೊಂಡಿರದ ಕಾರಣ ಭಾರೀ ಅವ್ಯವಸ್ಥೆ ಉಂಟಾಗಿತ್ತು.
ಭಕ್ತರು ದಿನಗಟ್ಟಲೆ ಮೆಟ್ಟಿಲು ಮೇಲೆ ಕಾಯುವ ಪರಿಸ್ಥಿತಿ ನಿರ್ಮಾಣವಾಗಿ ಸರ್ಕಾರದ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳ ಭಕ್ತರು ದೇವರ ದರ್ಶನ ಮಾಡದೇ ಮರಳುವಂತಾಗಿತ್ತು.
ಇದನ್ನೂ ಓದಿ; ನಿಜವಾಗುತ್ತಿದೆ ಅಭಿಮಾನಿಗಳ ನಂಬಿಕೆ.. Darshan ಪರ ವಕೀಲರ ವಾದಕ್ಕೆ ಕೆಲ ಖಾಸಗಿ ಸುದ್ದಿ ವಾಹಿನಿಗಳು ಕಕ್ಕಾಬಿಕ್ಕಿ
ಈ ಹಿನ್ನೆಲೆಯಲ್ಲಿ ಈ ವರ್ಷ ಭಕ್ತರ ನಿರ್ವಹಣೆ ಯನ್ನು ಸಮರ್ಪಕವಾಗಿ ಮಾಡುವ ನಿಟ್ಟಿನಲ್ಲಿ ಆನ್ ಲೈನ್‌ನಲ್ಲಿ ಬುಕ್ ಮಾಡಿದವರಿಗೆ ಮಾತ್ರವೇ ಪ್ರವೇಶಕ್ಕೆ ಅವಕಾಶ ಮಾಡಿಕೊಡಲು ಸರ್ಕಾರ ನಿರ್ಧರಿಸಿದೆ. ಅಲ್ಲದೆ ನಿತ್ಯ ಗರಿಷ್ಠ 80,000 ಭಕ್ತರಿಗೆ ಮಾತ್ರ ಅವಕಾಶ ನೀಡಲಾಗುವುದು.
ವರ್ಚ್‌ಯುವಲ್ ಕ್ಯು ಬುಕ್ಕಿಂಗ್ ಸಮಯದಲ್ಲೇ ತಾವು ಆಗಮಿಸುವ ಮಾರ್ಗವನ್ನೂ ಆಯ್ಕೆ ಮಾಡಿಕೊಳ್ಳುವ ಅವಕಾಶ ಭಕ್ತರಿಗೆ ಸಿಗಲಿದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನೇತೃತ್ವದಲ್ಲಿ ಕೈಗೊಂಡ ಉನ್ನತ ಮಟ್ಟದ ಸಭೆಯಲ್ಲಿ ನಿರ್ಧರಿಸಲಾಗಿದೆ. ಅಲ್ಲದೆ ಸಾಂಪ್ರ ದಾಯಿಕ ಅರಣ್ಯ ಮಾರ್ಗದಲ್ಲಿ Shabarimale ಬರುವ ಭಕ್ತರಿಗೆ ಎಲ್ಲಾ ರೀತಿಯ ಸವಲತ್ತು ಕಲ್ಪಿಸಲಾಗುವುದು.
ಅಗತ್ಯ ಬಿದ್ದರೆ ನೀಲಕ್ಕಲ್ ಮತ್ತು ಪಂಬಾದಲ್ಲಿ ಈ ವರ್ಷ ವಾಹನ ನಿಲುಗಡೆಗೆ ಹೆಚ್ಚಿನ ಸ್ಥಳಾವಕಾಶ ಕಲ್ಪಿಸಲಾಗುವುದು. ಶಬರಿಮಲೆಗೆ ಆಗಮಿಸುವ ಎಲ್ಲಾ ರಸ್ತೆಗಳನ್ನು ದುರಸ್ತಿ ಮಾಡಲಾಗುವುದು ಎಂದು ಸರ್ಕಾರ ಹೇಳಿದೆ.
 
				 
															 
						 
						 
						 
						 
						 
						 
						 
						 
						 
						 
						 
						 
						 
						 
						 
						 
					 
						 
						 
						 
						 
					 
						 
						 
						 
						 
						 
						 
					 
						 
						 
						 
						 
						 
						 
						 
						 
						 
						 
					 
						 
						 
						 
						 
						 
						 
						 
						 
						 
						 
						 
						 
					 
					 
					 
					 
					 
					 
					 
					 
					 
						 
						 
						 
						