ಬೆಂಗಳೂರು: ರಾಜ್ಯದ ಗ್ರಾಮಪಂಚಾಯತಿ ಅಧಿಕಾರಿ ಮತ್ತು ನೌಕರರ ಬೇಡಿಕೆಗಳಿಗೆ ಸರಕಾರ ಕೂಡಲೇ ಸ್ಪಂದಿಸಬೇಕೆಂದು ವೆಲ್ಪೇರ್ ಪಾರ್ಟಿ ಆಫ್ ಇಂಡಿಯಾ (WELFARE PARTY) ಸಂಪೂರ್ಣ ಬೆಂಬಲವಿದೆ ಎಂದು ಪಾರ್ಟಿಯ ಕರ್ನಾಟಕ ರಾಜ್ಯ ಅಧಕ್ಷರಾದ ಅಡ್ವಕೇಟ್ ತಾಹೇರ್ ಹುಸೇನ್ ರವರು ಸರಕಾರಕ್ಕೆ ಒತ್ತಾಯಿಸಿದ್ದಾರೆ.
ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಸಕಾಲಕ್ಕೆ ಬಡ್ತಿ ನೀಡುವುದು ಕಾರ್ಮಿಕರ ರಾಜ್ಯ ವಿಮೆ ಮತ್ತು ಭವಿಷ್ಯ ನಿಧಿ ನೀಡುವುದು ಮತ್ತು ನೇರ ನೇಮಕಾತಿಯಲ್ಲಿ ಆದ್ಯತೆ ಮುಂತಾದ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ರಾಜ್ಯದ ಗ್ರಾಮ ಪಂಚಾಯತಿ ಅಧಿಕಾರಿಗಳು, ನೌಕರರು ಮತ್ತು ಸದಸ್ಯರು ಫ್ರೀಡಮ್ ಪಾರ್ಕ್ ಬಳಿ ನಡೆಸುತ್ತಿರುವ ಪ್ರತಿಭಟನೆಗೆ ವೇಲ್ಫೇರ್ ಪಾರ್ಟಿ ( WELFARE PARTY )ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದೆ ಎಂದು ಹೇಳಿದರು.
ಶುಕ್ರವಾರದಿಂದ ಪ್ರಾರಂಭವಾಗಿರುವ ಈ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ರಾಜ್ಯದ 5090 ಗ್ರಾಮ ಪಂಚಾಯತ್ ಸಿಬ್ಬಂದಿ ಗಳು ಬೆಂಬಲ ವ್ಯಕ್ತ ಪಡಿಸಿ ಕೆಲಸದಿಂದ ಹೊರಗುಳಿದಿದ್ದಾರೆ. ಸರ್ಕಾರ ಈ ಎಲ್ಲ ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿಸಿ ತಕ್ಷಣ ಪೂರೈಸಲು ಅನುವು ಮಾಡಿಕೊಡಬೇಕು.
ನಾಗರಿಕರಿಗೆ ಹೆಚ್ಚು ತೊಂದರೆಯಾಗದಂತೆ ಹೆಚ್ಚು ಕಾಲ ಹರಣ ಮಾಡದೆ ದೈನಂದಿನ ಕೆಲಸ ಕಾರ್ಯಗಳು ಸುಸೂತ್ರವಾಗಿ ನಡೆಯಲು ಸರ್ಕಾರ ಪ್ರಯತ್ನಿಸಬೇಕು.
ರಾಜ್ಯದ ಗ್ರಾಮ ಪಂಚಾಯತ್ ಅಧಿಕಾರಿಗಳ ಸಹಿತ ಎಲ್ಲಾ ಪ್ರತಿಭಟನಾಕಾರರ ಬೇಡಿಕೆಗಳನ್ನು ಕೂಡಲೇ ಇತ್ಯರ್ಥ ಮಾಡಬೇಕು ಎಂದೂ ಅವರು ಒತ್ತಾಯಿಸಿದ್ದಾರೆ.