ಬೆಂಗಳೂರು: ರಾಜ್ಯದ ಬಹುತೇಕ ಕಡೆಗಳಲ್ಲಿ ಶುಕ್ರವಾರ ರಾತ್ರಿಯಿಂದ ಧಾರಾಕಾರ ಮಳೆಯಾಗುತ್ತಿದ್ದು, ಬೆಂಗಳೂರು ಸೇರಿದಂತೆ 12 ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗಲಿದೆ. ದಕ್ಷಿಣ ಒಳನಾಡಿನಲ್ಲಿ ಯಲ್ಲೋ ಅಲರ್ಟ್ (rain alert) ಘೋಷಿಸಲಾಗಿದೆ.
ರಾಜ್ಯ ಹೆಚ್ಚಿನ ಜಿಲ್ಲೆಗಳಲ್ಲಿ ಶನಿವಾರ ಭಾರಿ ಮಳೆಯಾಗಿದೆ. ಕಲ್ಯಾಣ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ.
ಚಿತ್ರದುರ್ಗ, ವಿಜಯನಗರ, ದಾವಣಗೆರೆ, ಕೊಡಗು, ಮೈಸೂರು, ಚಾಮರಾಜನಗರ, ಬೆಂಗಳೂರು ನಗರ, ಗ್ರಾಮಾಂತರ, ಹಾಸನ, ಚಿಕ್ಕಮಗಳೂರು, ಮಂಡ್ಯ, ರಾಮನಗರ, ಶಿವಮೊಗ್ಗ ಜಿಲ್ಲೆಗಳ ಬಹುತೇಕ ಕಡೆ ಗುಡುಗು-ಮಿಂಚು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಒಳನಾಡು ಜಿಲ್ಲೆ ಗಳಲ್ಲಿ ಸಾಧಾರಣ ಅಥವಾ ಗುಡುಗು ಸಹಿತ ಮಳೆಯಾ ಗುವ ಸಾಧ್ಯತೆಯಿದ್ದು, ಕರಾ ವಳಿ ಕರ್ನಾಟಕದ ಜಿಲ್ಲೆ ಗಳಲ್ಲಿ ಹಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಕರ್ನಾಟಕ ದಲ್ಲಿ ಮಳೆಯ ಪ್ರಮಾಣ ತಗ್ಗಿದ್ದು, ಅಲ್ಲಲ್ಲಿ ಸಾಧಾರಣ ಮಳೆಯಾಗಬಹುದು.
ಸುಳಿಗಾಳಿ ಎಫೆಕ್ಸ್‌ನಿಂದ ಮಳೆ: ಬಂಗಾಳ ಉಪಸಾಗರದಲ್ಲಿ ಸುಳಿಗಾಳಿ ಎಫೆಕ್ಟ್ ನಿಂದ ಬೆಂಗಳೂರು ಸೇರಿ ಕರ್ನಾಟಕದಾದ್ಯಂತ ಇನ್ನೊಂದು ವಾರ ಮಳೆಯಾಗಲಿದೆ.
ನಗರದಲ್ಲಿ ಅಕ್ಟೋಬರ್ 7 ರವರೆಗೆ ಸಾಧಾರಣ ಮಳೆಯಾಗಲಿದೆ ಎಂದು ಇತ್ತೀಚೆಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿತ್ತು. ಅದರ ಬೆನ್ನಲ್ಲೇ ಇದೀಗ ಕಳೆದ ಮೂರು ದಿನಗಳಿಂದ ನಗರದಲ್ಲಿ ಮಳೆ ಆಗುತ್ತಿದ್ದು, ಜನರು ಹೈರಾಣಾಗಿದ್ದಾರೆ.
Ballari district Received – 159mm rainfall ending 6AM
— Ballari Tweetz (@TweetzBallari) October 5, 2024
Sandur – yashwanthnagara – 159mm
Sandur – Hirekegiyanahalli – 96mm
Ballari – Halkundi -86mm
Sandur – Chornur – 77mm
Kampli – Sanapura – 74mm
Info by @KarnatakaSNDMC#Karnatakarains #Ballari #Bellary #Sandur pic.twitter.com/K6mRH77Dyp
ಬಳ್ಳಾರಿಯಲ್ಲಿ ಜನಜೀವನ ಅಸ್ತವ್ಯಸ್ತ: ಬಳ್ಳಾರಿ ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಶುಕ್ರವಾರ ರಾತ್ರಿ ಯಿಡೀ ಭಾರೀ ಮಳೆ ಸುರಿದಿದ್ದು, ಜನಜೀವನ ಅಸ್ತವ್ಯಸ್ತ ವಾಗಿದೆ. ನಿರಂತರವಾಗಿ ಸುರಿದ ಮಳೆಯಿಂದ ತಗ್ಗು ಪ್ರದೇಶ ದಲ್ಲಿ ನೀರು ನಿಂತಿದೆ. ಮಳೆ ಆರ್ಭಟಕ್ಕೆ ಹಳ್ಳಕೊಳ್ಳಗಳು ಉಕ್ಕಿ ಹರಿಯುತ್ತಿವೆ. ತಗ್ಗು ಪ್ರದೇಶದಲ್ಲಿ ವಾಸಿಸುವ ಜನರು ಇಡೀ ರಾತ್ರಿ ಪರದಾಡುವಂತಾಯಿತು.
ಭಾರೀ ಮಳೆಯ ಪರಿಣಾಮ ಸಂಡೂರಿನ ನಂದಿಹಳ್ಳಿ ವಾಶಿಂಗ್ ಪ್ಲಾಂಟ್ ಬಳಿ ಅವಾಂತರ ಸೃಷ್ಟಿಯಾಗಿದೆ. ಮಳೆ ನೀರಿನಲ್ಲಿ ನೂರಾರು ಗಣಿ ಲಾರಿಗಳು ಭಾಗಶಃ ಮುಳುಗಡೆ ಯಾಗಿವೆ.
ಲಾರಿಗಳು ಜಲಾವೃತಗೊಂಡ ಹಿನ್ನೆಲೆ ಚಾಲಕರು ಸಹ ಇಡೀ ರಾತ್ರಿ ಪರದಾಡಿದ್ದಾರೆ. ಸಂಡೂರು ತಾಲೂಕಿ ನಾದ್ಯಂತ ರಾತ್ರಿ ಯಿಂದ ಸುರಿದ ಬಾರೀ ಮಳೆಯಿಂದಾಗಿ ನಾರಿಹಳ್ಳ ಜಲಾಶಯದ ಬೆಳಿಗ್ಗೆ 4 ಗೇಟ್ ಮೂಲಕ 12000 ಸಾವಿರ ಕ್ಯುಸೆಕ್ ನೀರನ್ನು ಹೊರಬಿಡಲಾಗಿದೆ.