ಚನ್ನಪಟ್ಟಣ ಚುನಾವಣೆ ಘೋಷಣೆಗೆ ಮುನ್ನವೇ ದಳಪತಿಗಳ ಮತಬೇಟೆ ಜೋರು

ರಾಮನಗರ: ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಜಯ ಸಾಧಿಸಿ ಕೇಂದ್ರ ಸಚಿವರಾಗಿರುವ ಹೆಚ್.ಡಿ.ಕುಮಾರಸ್ವಾಮಿ ಅವರ ರಾಜೀನಾಮೆಯಿಂದ ತೆರವಾಗಿರುವ ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಚುನಾವಣೆ ದಿನಾಂಕ ಘೋಷಣೆಯಾಗದೆ ಉಳಿದಿದ್ದರು, ಕಮಲ-ದಳ ಮೈತ್ರಿ ಅಭ್ಯರ್ಥಿ ಅಂತಿಮವಾಗದೇ ಇದ್ದರೂ, ದಳಪತಿಗಳ ಮತ ಬೇಟೆ ಮಾತ್ರ ಜೋರಾಗಿದೆ.

ಬಿಜೆಪಿಯ ಸೈನಿಕ ಯೋಗೇಶ್ವರ್ ನಾನೇ ಅಭ್ಯರ್ಥಿ ಎನ್ನುತ್ತ ಒಂದೆಡೆ ಇದ್ದರೆ, ಕಮಲ-ದಳ ಮೈತ್ರಿ ಅಭ್ಯರ್ಥಿ ಇಂತವರೇ ಎನ್ನದಿದ್ದರು.. ನಿಖಿಲ್ ಕುಮಾರಸ್ವಾಮಿ ಅವರ ಸರಣಿ ಕ್ಷೇತ್ರ ಭೇಟಿ ಅವರೇ ಕಣಕ್ಕಿಳಿಯಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿದೆ.

ಇದಕ್ಕೆ ಪೂರಕವೆಂಬಂತೆ ಇಂದು ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಕೋಡಂಬಳ್ಳಿ, ಅಕ್ಕೂರು, ಮಳೂರು, ಬೇವೂರು ಜಿಲ್ಲಾ ಪಂಚಾಯ್ತಿ ವ್ಯಾಪ್ತಿಯ ಮುಖಂಡರುಗಳು ಹಾಗೂ ಕಾರ್ಯಕರ್ತರುಗಳ ಸಭೆಯಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಯುವ ಜನತಾದಳ ರಾಜ್ಯಾಧ್ಯಕ್ಷರಾದನಿಖಿಲ್ ಕುಮಾರಸ್ವಾಮಿ ಅವರು ಜ್ಯೋತಿ ಬೆಳಗುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ನಂತರ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ನಿಖಿಲ್ ಕುಮಾರಸ್ವಾಮಿ ಅವರು, ಕುಮಾರಣ್ಣ ರಾಜ್ಯದಲ್ಲಿ ಎರಡನೇ ಬಾರಿಗೆ ಸಿಎಂ ಆಗಲು ಚನ್ನಪಟ್ಟಣದ ಜನತೆ ಕಾರಣ. ಚನ್ನಪಟ್ಟಣ ತಾಲೂಕಿಗೆ ಒಂದುವರೆ ಸಾವಿರ ಕೋಟಿಯಷ್ಟು
ಅನುದಾನ ತಂದಿದ್ರು. ಇದನ್ನ ಯಾರಿಂದಲೂ ತಿರುಚಲು ಸಾಧ್ಯವಿಲ್ಲ ಎಂದರು.

ಈಗ ಡಿಸಿಎಂಗೆ ಮಮಕಾರ ಬಂದಿದೆ

ರಾಜ್ಯದ ಉಪ ಮುಖ್ಯಮಂತ್ರಿಗಳಿಗೆ ಚನ್ನಪಟ್ಟಣ ತಾಲೂಕು ಎಲ್ಲಿದೆ ಅಂತ ಗೊತ್ತಿರಲಿಲ್ಲ. ಈಗ ಉಪಚುನಾವಣೆ ಬಂದಿರೋದರಿಂದ ಚನ್ನಪಟ್ಟಣಕ್ಕೆ ನಿರಂತರ ಪ್ರವಾಸ ಮಾಡ್ತಿದ್ದಾರೆ. ಏನೋ ಅನುದಾನ ತಂದಿದ್ದೀವಿ ಅಂತ ದೊಡ್ಡದೊಡ್ಡ ಫ್ಲೆಕ್ಸ್ ಹಾಕಿಸ್ತಿದ್ದಾರೆ. ಕುಮಾರಸ್ವಾಮಿ ಅವರು ತಾವು ತಂದ 1500ಕೋಟಿ ಅನುದಾನದ ಬಗ್ಗೆ ಜಾಹಿರಾತು ಕೊಟ್ಟಿರಲಿಲ್ಲ. ಪಾಪ ಈಗ ಉಪ ಮುಖ್ಯಮಂತ್ರಿಗಳಿಗೆ ಚನ್ನಪಟ್ಟಣದ ಮೇಲೆ ಮಮಕಾರ ಬಂದಿದೆ ಎಂದು ಡಿಕೆ ಶಿವಕುಮಾರ್ ವಿರುದ್ಧ ಕಿಡಿಕಾರಿದರು.

ಕುಮಾರಣ್ಣ ಮೋದಿಯವರ ಸಂಪುಟದಲ್ಲಿ ಕೆಲಸ ಮಾಡ್ತಿದ್ದಾರೆ. ಮಂಡ್ಯದ ಜಿಲ್ಲೆಯ ಜನರ ಆಶಿರ್ವಾದದಿಂದ ಕೇಂದ್ರ ಕೈಗಾರಿಕಾ ಸಚಿವರಾಗಿದ್ದಾರೆ. ರಾಜ್ಯದಲ್ಲಿ ಮತ್ತು ದೇಶದಲ್ಲಿ ಸಾಕಷ್ಟು ಯುವ ಜನತೆ ವಿದ್ಯಾವಂತರಿದ್ದಾರೆ. ಅವರಿಗೆ ಸಮರ್ಪಕಉದ್ಯೋಗಾವಕಾಶಗಳಿಲ್ಲ. ಇದೆಲ್ಲವನ್ನೂ ಕುಮಾರಸ್ವಾಮಿ ಅವರು‌ ಮನಸ್ಸಿಗೆ ತೆಗೆದುಕೊಂಡು ಕಾರ್ಯನಿರ್ವಹಿಸುತ್ತಿದ್ದಾರೆ ಎಂದರು.

ಮಂಡ್ಯದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜನೆ ಮಾಡಿದ್ದಾರೆ. ಮಂಡ್ಯದಲ್ಲಿ ಹಲವಾರು ಕೈಗಾರಿಕೆಗಳನ್ನು ಸ್ಥಾಪಿಸಲು ಕೆಲಸ ಮಾಡುತ್ತಿದ್ದಾರೆ ಎಂದು ತಿಳಿಸಿದರು.

ಚನ್ನಪಟ್ಟಣದಲ್ಲಿ ದೇವೇಗೌಡರು ಇಗ್ಗಲೂರು ಡ್ಯಾಂ ನಿರ್ಮಾಣ ಮಾಡಿದ್ದಾರೆ. ಇದು ತಾಲೂಕಿನ ರೈತರಿಗೆ ದೇವೇಗೌಡರು ನೀಡಿರೋ ಕೊಡುಗೆಯಾಗಿದೆ. ಜನರು ಇದನ್ನ ಪ್ರತಿದಿನ ನೆನಪು ಮಾಡಿಕೊಳ್ತಾರೆ.

ಹಗಲು ದರೋಡೆ ಮಾಡ್ತಿದೆ

ಐದು ಗ್ಯಾರಂಟಿ ಯೋಜನೆಗಳ ಬಗ್ಗೆ ಮಾತನಾಡಿದ ಅವರು, ಕಾಂಗ್ರೆಸ್ ಐದು ಗ್ಯಾರಂಟಿ ಅಂತ ಚರ್ಚೆ ಮಾಡ್ತಿದ್ದಾರೆ. ಅದನ್ನ ಸಮರ್ಪಕವಾಗಿ ಕೊಡ್ತಿದ್ದಾರಾ.? ಗ್ಯಾರಂಟಿ ಹೆಸರಲ್ಲಿ ಸರ್ಕಾರ ಹಗಲು ದರೋಡೆ ಮಾಡ್ತಿದೆ. ಪರಿಶಿಷ್ಟ ಜಾತಿ, ಪಂಗಡದ 187 ಕೋಟಿ ಹಣವನ್ನ ಬೇರೆ ರಾಜ್ಯದ ಚುನಾವಣೆಗೆ ಬಳಸಿಕೊಂಡಿದೆ. ಇದನ್ನು ಸ್ವತಃ ಸಿಎಂ ಅವರೇ ಇದನ್ನು ಸದನದಲ್ಲಿ ಒಪ್ಪಿಕೊಂಡಿದ್ದಾರೆ. ರಾಜ್ಯದ ಜನತೆ ಇಂತಹ ಭ್ರಷ್ಟ ಸರ್ಕಾರ ನೋಡಿಲ್ಲ. ಕೇವಲ ಒಂದುವರೆ ವರ್ಷದಲ್ಲಿ ಸರ್ಕಾರ ನಡವಳಿಕೆ ಗೊತ್ತಾಗ್ತಿದೆ ಎಂದು ಕಿಡಿಕಾರಿದರು.

ಡಿಸಿಎಂಗೆ ಈಗ ಚನ್ನಪಟ್ಟಣ ನೆನಪಿಗೆ ಬಂದಿದೆ. ಚನ್ನಪಟ್ಟಣ ತಾಲೂಕಿಗೆ ಕಾಂಗ್ರೆಸ್ ಕೊಡುಗೆ ಏನು.? ಇದನ್ನ ನೀವು ಪ್ರಶ್ನೆ ಮಾಡಬೇಕು.ಕೇವಲ ಚುನಾವಣೆ ಗೋಸ್ಕರ ಮಾಡ್ತಿರೋ ದೊಂಬರಾಟ ಇದು ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110970"]
ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆ ಲೂಟಿ ಮಾಡುವ ಉದ್ದೇಶವನ್ನು ಹೊಂದಿದೆ. ಇದು ಹಣ ಕೊಳ್ಳೆ ಹೊಡೆಯುವ ಸ್ಕೀಮ್‌: ಆರ್‌.ಅಶೋಕ (R. Ashoka)

[ccc_my_favorite_select_button post_id="111019"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ಲಾರಿಗೆ ಡಿಕ್ಕಿ.. ಬೊಲೆರೋ.. ವಾಹನ ಚಾಲಕ ಸಾವು..!

ದೊಡ್ಡಬಳ್ಳಾಪುರ: ಲಾರಿಗೆ ಡಿಕ್ಕಿ.. ಬೊಲೆರೋ.. ವಾಹನ ಚಾಲಕ ಸಾವು..!

ನಿಂತಿದ್ದ ಲಾರಿಗೆ ಹಿಂದಿನ ಡಿಕ್ಕಿ ಹೊಡೆದ ಪರಿಣಾಮ ಬೊಲೆರೋ ಪಿಕಪ್ ವಾಹನ ಚಾಲಕ ಸಾವನಪ್ಪಿರುವ ಘಟನೆ (Accident)

[ccc_my_favorite_select_button post_id="111021"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!