ಜಾತಿ ಸಮೀಕ್ಷೆ ಅಲ್ಲ, ರಾಜ್ಯದ ಏಳು ಕೋಟಿ ಕನ್ನಡಿಗರ ಸಮೀಕ್ಷೆ: CM ಸಿದ್ದರಾಮಯ್ಯ

ಬೆಂಗಳೂರು: ಸಾಮಾಜಿಕ ಆರ್ಥಿಕ , ಶೈಕ್ಷಣಿಕ ಸಮೀಕ್ಷೆ ಕೇವಲ ಹಿಂದುಳಿದ ವರ್ಗಗಳ ಜಾತಿ ಸಮೀಕ್ಷೆ ಅಲ್ಲ, ರಾಜ್ಯದ ಏಳು ಕೋಟಿ ಕನ್ನಡಿಗರ ಸಮೀಕ್ಷೆ.ಇಡೀ ದೇಶದಲ್ಲಿ ಇಂತಹ ಸಮೀಕ್ಷೆ ನಡೆಸಿದ ಪ್ರಥಮ ರಾಜ್ಯ ಕರ್ನಾಟಕ. ಅಕ್ಟೋಬರ್ 18 ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿದ ನಂತರ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ (CM) ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ವಿಧಾನಸೌಧದಲ್ಲಿ ಹಿಂದುಳಿದ ವರ್ಗಗಳ ಮಾನ್ಯ ಶಾಸಕರುಗಳೊಂದಿಗೆ ಸಭೆ ನಡೆಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದರು.

ವಿಪಕ್ಷಗಳ ನಾಯಕರೂ ಸೇರಿದಂತೆ ಸುಮಾರು ಹಿಂದುಳಿದ ವರ್ಗಗಳ 30 ಜನ ಶಾಸಕರು ಭೇಟಿ ಮಾಡಿ, ಸಾಮಾಜಿಕ ಆರ್ಥಿಕ , ಶೈಕ್ಷಣಿಕ ಸಮೀಕ್ಷೆಯನ್ನು ಅಂಗೀಕಾರ ಮಾಡಿ, ಜಾರಿಗೆ ತರಬೇಕೆಂದು ಒತ್ತಾಯಿಸಿ ಮನವಿಯನ್ನು ಸಲ್ಲಿಸಿದ್ದಾರೆ. ಹಿಂದಿನ ಕಾಂಗ್ರೆಸ್ ಸರ್ಕಾರದ ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಎಚ್. ಕಾಂತರಾಜು ಅವರ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ ಆಯೋಗದವರು ಬಹಳ ಸಮಯ ತೆಗೆದುಕೊಂಡು ಸಮೀಕ್ಷೆ ನಡೆಸಿದ್ದಾರೆ.

ರಾಜ್ಯದ ಮನೆಮನೆಗೆ ಭೇಟಿ ನೀಡಿ ಸಮೀಕ್ಷೆ ಮಾಡಿರುವುದಾಗಿ ಶ್ರೀ ಕಾಂತರಾಜು ಅವರು ತಿಳಿಸಿದ್ದಾರೆ. ನಾನು ಇಲ್ಲಿಯವರೆಗೂ ವರದಿಯನ್ನು ಪರಿಶೀಲಿಸಿಲ್ಲ. ಹಿಂದೆ ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಕಾಂತರಾಜು ವರದಿ ಪೂರ್ಣಗೊಂಡಿರಲಿಲ್ಲ. ಆದ್ದರಿಂದ ನನ್ನ ಅವಧಿಯಲ್ಲಿ ಜಾತಿ ಗಣತಿ ವರದಿಯನ್ನು ಸ್ವೀಕರಿಸಲು ಮತ್ತು ಜಾರಿಗೊಳಿಸಲು ಸಾಧ್ಯವಾಗಿರಲಿಲ್ಲ.

ನಂತರ ಹೆಚ್.ಡಿ.ಕುಮಾರಸ್ವಾಮಿಯವರು ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ಕಾಂತುರಾಜು ಅವರು ವರದಿಯನ್ನು ಸಲ್ಲಿಸಲು ಸಿದ್ಧತೆ ನಡೆಸಿದ್ದರು. ಆದರೆ ಕುಮಾರಸ್ವಾಮಿಯವರು ವರದಿ ಸ್ವೀಕರಿಸಲು ಒಪ್ಪಿರಲಿಲ್ಲ. ನಂತರ ಬಿಜೆಪಿ ಸರ್ಕಾರ ಬಂದರೂ , ವರದಿಯನ್ನು ಸ್ವೀಕರಿಸಲಿಲ್ಲ ಎಂದು CM ತಿಳಿಸಿದರು.

ಕಾಂತರಾಜು ಅವರ ಅಧ್ಯಕ್ಷರ ಅವಧಿ ಪೂರ್ಣಗೊಂಡ ನಂತರ ಜಯಪ್ರಕಾಶ್ ಹೆಗ್ಗಡೆ ಯವರು ಆಯೋಗದ ಅಧ್ಯಕ್ಷರಾದರು. ಅವರು ಕೋರಿದಂತೆ ವರದಿ ಸಲ್ಲಿಕೆಗೆ ಮೂರು ತಿಂಗಳ ಅವಕಾಶ ಕೊಡಲಾಗಿತ್ತು. ನಂತರ ಆ ವರದಿಯನ್ನು ಸ್ವೀಕರಿಸಲಾಗಿದೆ. ಸ್ವೀಕರಿಸಿದ ವರದಿಯನ್ನು ಜಾರಿಗೊಳಿಸಲು ಎಲ್ಲರಿಂದಲೂ ಒತ್ತಾಯ ಬಂದಿದೆ. ಈ ಹಿನ್ನಲೆಯಲ್ಲಿ ಇಂದು ಹಿಂದುಳಿದ ವರ್ಗಗಳ ಶಾಸಕರು ಸಭೆ ನಡೆಸಿ ವರದಿಯನ್ನು ಜಾರಿಗೊಳಿಸುವಂತೆ ಮನವಿ ಸಲ್ಲಿಸಿದ್ದಾರೆ ಎಂದು ವಿವರಿಸಿದರು.

ಇತ್ತೀಚೆಗಷ್ಟೇ ಮೈಸೂರಿನ ಒಂದು ಕಾರ್ಯಕ್ರಮದಲ್ಲಿ ನಾನು ತಿಳಿಸಿದಂತೆ, ಸಾಮಾಜಿಕ ಆರ್ಥಿಕ , ಶೈಕ್ಷಣಿಕ ಸಮೀಕ್ಷೆಯನ್ನು ಸ್ವೀಕರಿಸಲಾಗಿದ್ದು, ಈ ವರದಿಯ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿದ ನಂತರ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದೆ. ಅಕ್ಟೋಬರ್ 18 ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ವರದಿಯನ್ನು ಬಹುತೇಕ ಮಂಡಿಸುವ ಸಾಧ್ಯತೆಯಿದೆ. ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿದ ನಂತರ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ರಾಜಕೀಯ

ಇಂದು ಆದಿಚುಂಚನಗಿರಿಗೆ ಪ್ರಧಾನಿ ಮೋದಿ ಭೇಟಿ

ಇಂದು ಆದಿಚುಂಚನಗಿರಿಗೆ ಪ್ರಧಾನಿ ಮೋದಿ ಭೇಟಿ

ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಅವರು ಇಂದು (ಏ.15) ರಾಜ್ಯಕ್ಕೆ ಆಗಮಿಸಲಿದ್ದು, ಮಂಡ್ಯ ಜಿಲ್ಲೆಯ ಆದಿಚುಂಚನಗಿರಿಯಲ್ಲಿ ನಿರ್ಮಾಣ ವಾಗಿರುವ ಮಂದಿರದ ಭೈರವೈಕ್ಯ ಉದ್ಘಾಟನೆ ಮಾಡಲಿದ್ದಾರೆ.

[ccc_my_favorite_select_button post_id="120962"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ದೊಡ್ಡಬಳ್ಳಾಪುರ: ಎರಡು ಪ್ರತ್ಯೇಕ ಅಪಘಾತ.. ಇಬ್ಬರ ದುರ್ಮರಣ..!

ದೊಡ್ಡಬಳ್ಳಾಪುರ: ಎರಡು ಪ್ರತ್ಯೇಕ ಅಪಘಾತ.. ಇಬ್ಬರ ದುರ್ಮರಣ..!

ಮಂಗಳವಾರ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತದಲ್ಲಿ (Accident) ಇಬ್ಬರು ಸಾವನಪ್ಪಿರುವ ಘಟನೆ ತಾಲೂಕಿನ..*** ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ.

[ccc_my_favorite_select_button post_id="120965"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]