ಸಿದ್ದರಾಮಯ್ಯ ಅವರೇ ಪೂರ್ಣಾವಧಿ Cm: ಡಿಕೆ ಸುರೇಶ್

ಬೆಂಗಳೂರು: “ನಮ್ಮ ಪಕ್ಷದ ನಾಯಕರನ್ನು ನಾವು ಭೇಟಿ ಮಾಡುವುದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ” ಎಂದು ಮಾಜಿ ಸಂಸದ ಡಿಕೆ ಸುರೇಶ್ ತಿಳಿಸಿದರು.

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸಕ್ಕೆ ಭೇಟಿ ನೀಡಿ ಸಮಾಲೋಚನೆ ನಡೆಸಿದ ಬಳಿಕ ಸುರೇಶ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು.

ಪಕ್ಷದ ನಾಯಕರು ಗೌಪ್ಯವಾಗಿ ಸಭೆ ಮಾಡುತ್ತಿರುವ ಬಗ್ಗೆ ಕೇಳಿದಾಗ, “ನಮ್ಮ ಪಕ್ಷದ ನಾಯಕರು, ನಮ್ಮದೇ ಪಕ್ಷದ ನಾಯಕರನ್ನು ಭೇಟಿ ಮಾಡುತ್ತಿದ್ದೇವೆ. ಒಂದು ವೇಳೆ ನಾವು ಯಡಿಯೂರಪ್ಪ ಅಥವಾ ಕುಮಾರಸ್ವಾಮಿ ಅವರನ್ನು ಗೌಪ್ಯವಾಗಿ ಭೇಟಿ ಮಾಡಿ ಸಭೆ ನಡೆಸಿದರೆ ಆಗ ವಿಶೇಷ ಅರ್ಥ ಕಲ್ಪಿಸಬಹುದು. ನಾವು ಪಕ್ಷ, ಸಂಘಟನೆ, ಅಭಿವೃದ್ಧಿ ಬಗ್ಗೆ ಚರ್ಚೆ ಮಾಡುತ್ತಿದ್ದೇವೆ. ಈ ಭೇಟಿಯನ್ನು ಅನುಮಾನದಿಂದ ನೋಡುವುದು ಸರಿಯಲ್ಲ” ಎಂದು ತಿಳಿಸಿದರು.

ಕನಕಪುರ-ರಾಮನಗರ ಅಭಿವೃದ್ಧಿ ಯೋಜನೆಗಳ ಬಗ್ಗೆ ಚರ್ಚೆ

ಈ ಭೇಟಿಯಲ್ಲಿ ರಾಜಕೀಯ ಚರ್ಚೆ ಆಗಿಲ್ಲವೇ ಎಂದು ಕೇಳಿದಾಗ, “ಈ ಭೇಟಿಯಲ್ಲಿ ರಾಜಕೀಯ ಇಲ್ಲ. ಸತೀಶ್ ಜಾರಕಿಹೊಳಿ ಅವರು ಕಾಂಗ್ರೆಸ್ ಪಕ್ಷದ ಹಿರಿಯ ಹಾಗೂ ಪ್ರಭಾವಿ ಸಚಿವರು. ಕನಕಪುರ ವಿಧಾನ ಸಭಾ ಕ್ಷೇತ್ರದ ಕೆಲವು ಅಭಿವೃದ್ಧಿ ಯೋಜನೆಗಳ ಮಂಜೂರಾತಿ ಬಗ್ಗೆ ಅವರ ಜತೆ ಚರ್ಚೆ ಮಾಡಲಾಯಿತು.

ಅವರು ನಮ್ಮ ಮನವಿಗೆ ಒಪ್ಪಿದ್ದು, ಮುಖ್ಯಮಂತ್ರಿಗಳು ಅನುದಾನ ಬಿಡುಗಡೆ ಮಾಡಿದ ತಕ್ಷಣ ಮಂಜೂರಾತಿ ನೀಡುವುದಾಗಿ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಇದೇ ವೇಳೆ ರಾಮನಗರ ಜಿಲ್ಲೆಯ ಅಭಿವೃದ್ಧಿ ಬಗ್ಗೆಯೂ ಚರ್ಚೆ ಮಾಡಲಾಗಿದೆ. ಇದಕ್ಕೂ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ” ಎಂದು ತಿಳಿಸಿದರು.

ಡಿಕೆ ಶಿವಕುಮಾರ್ ಅವರು ಖರ್ಗೆ ಅವರನ್ನು ಭೇಟಿ ಮಾಡಿರುವ ಬಗ್ಗೆ ಕೇಳಿದಾಗ, “ಖರ್ಗೆ ಅವರು ನಮ್ಮ ರಾಷ್ಟ್ರೀಯ ಅಧ್ಯಕ್ಷರು. ಅವರು ಬೆಂಗಳೂರಿಗೆ ಬಂದಾಗ ಅವರನ್ನು ಭೇಟಿ ಮಾಡಿ, ಪಕ್ಷದ ಸಂಘಟನೆ ಹಾಗೂ ವಿದ್ಯಮಾನಗಳ ಬಗ್ಗೆ ಚರ್ಚೆ ಮಾಡುವುದು ನಮ್ಮ ಕರ್ತವ್ಯ” ಎಂದು ತಿಳಿಸಿದರು.

ಸಿದ್ದರಾಮಯ್ಯ ಅವರೇ ಪೂರ್ಣಾವಧಿ ಸಿಎಂ

ನಾಯಕತ್ವದ ಬದಲಾವಣೆ ಚರ್ಚೆ ನಡೆಯಿತೆ ಎಂದು ಕೇಳಿದಾಗ, “ನಾಯಕತ್ವ ಬದಲಾವಣೆಯ ಪ್ರಶ್ನೆ ಹಾಗೂ ಚರ್ಚೆ ಎರಡೂ ಇಲ್ಲ. ಈ ಅವಧಿ ಅಂತಿಮವಾಗುವವರೆಗೂ ಸಿದ್ದರಾಮಯ್ಯ ಅವರೇ Cm ಆಗಿರುತ್ತಾರೆ. ಇದನ್ನು ಈ ಹಿಂದೆಯೂ ಬಹಳಷ್ಟು ಬಾರಿ ಸ್ಪಷ್ಟಪಡಿಸಿದ್ದೇನೆ.

ಮುಡಾ ಪ್ರಕರಣ ನ್ಯಾಯಾಲಯದಲ್ಲಿದ್ದು, ನ್ಯಾಯಾಲಯ ತನಿಖೆ ಆಗಬೇಕು ಎಂದು ಹೇಳಿದ್ದು, ತನಿಖೆ ನಡೆಯಲಿದೆ. ತನಿಖೆ ನಡೆಯುತ್ತಿದೆ. ತನಿಖಾ ವರದಿ ಬರುವ ತನಕ ಏಕೆ ಕಾಯುತ್ತಿಲ್ಲ? ತನಿಖೆಗೆ ಮುಕ್ತವಾದ ಸಹಕಾರ ನೀಡಲಾಗುವುದು ಎಂದು ಸಿದ್ದರಾಮಯ್ಯ ಅವರೂ ಸ್ಪಷ್ಟಪಡಿಸಿದ್ದಾರೆ. ಈ ಪ್ರಕರಣದಲ್ಲಿ ಸಿಎಂ ಹಾಗೂ ಸರ್ಕಾರ ದೋಷಮುಕ್ತವಾಗಲಿದ್ದಾರೆ” ಎಂದು ತಿಳಿಸಿದರು.

ನಿಷ್ಪಕ್ಷಪಾತ ತನಿಖೆಗೆ ಸಿಎಂ ರಾಜಿನಾಮೆ ನೀಡಬೇಕು ಎಂಬ ವಿಜಯೇಂದ್ರ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಅದು ಅವರ ವೈಯಕ್ತಿಕ ಅಭಿಪ್ರಾಯ” ಎಂದರು.

ಇಡಿ ಏಕಾಏಕಿ ಬಂಧಿಸಲು ಆಗುವುದಿಲ್ಲ

ಪ್ರಕರಣದಲ್ಲಿ ಇಡಿ ಪ್ರವೇಶ ಮಾಡಿದ್ದು ಒಂದು ವೇಳೆ ಬಂಧನವಾದರೆ ಪರ್ಯಾಯ ನಾಯಕರು ಯಾರು ಎಂಬ ಪ್ರಶ್ನೆಗೆ, “ನಾಳೆ ಬೆಳಗ್ಗೆ ಇಡಿ ಬಂದು ಬಂಧನ ಮಾಡಲು ಸಾಧ್ಯವಿಲ್ಲ. ಇಡಿಗೆ ತನ್ನದೇ ಆದ ಸಾಕ್ಷ್ಯಾಧಾರಗಳು ಸಿಗಬೇಕು, ಆರೋಪ ಸಾಬೀತಾಗಬೇಕು. ಇಡಿ ಪ್ರಕರಣ ದಾಖಲಿಸಿದ ಮಾತ್ರಕ್ಕೆ ಬಂಧಿಸಲು ಸಾಧ್ಯವಿಲ್ಲ. ಈ ಪ್ರಕರಣದಲ್ಲಿ ಯಾವುದೇ ರೀತಿಯ ಹಣಕಾಸಿನ ವ್ಯವಹಾರ ನಡೆದಿಲ್ಲ. ಇನ್ನು ಈ ನಿವೇಶನಗಳನ್ನು ವಾಪಸ್ ನೀಡಲಾಗಿದೆ. ಇದರಲ್ಲಿ ಲಾಭದ ವಿಚಾರ ಇಲ್ಲ. ಶೂನ್ಯ ಹಣಕಾಸಿನ ವರ್ಗಾವಣೆ. ಇಲ್ಲಿ ಏನಾದರೂ ಲೋಪಗಳು ನಡೆದಿದ್ದರೆ ಅದನ್ನು ಲೋಕಾಯುಕ್ತ ತನಿಖಾ ಸಂಸ್ಥೆ ತನಿಖೆ ಮಾಡಲಿದೆ. ಇಡಿಯವರು ಹಣಕಾಸಿನ ವ್ಯವಹಾರಗಳ ಪ್ರಕರಣ ಮಾತ್ರ ತನಿಖೆ ಮಾಡಬೇಕು” ಎಂದು ತಿಳಿಸಿದರು.

ನಾವು ಈ ಸರ್ಕಾರ ಬೀಳಿಸಲ್ಲ, ಸರ್ಕಾರ ತಾನಾಗಿಯೇ ಬೀಳುತ್ತದೆ ಎಂಬ ಕುಮಾರಸ್ವಾಮಿ ಹೇಳಿಕೆ ಬಗ್ಗೆ ಕೇಳಿದಾಗ, “ಕುಮಾರಸ್ವಾಮಿ ಅವರು ಮೇಧಾವಿ, ತತ್ವಜ್ಞಾನಿಗಳು. ಅವರು ಬೆಳಗ್ಗೆ ಒಂದು, ರಾತ್ರಿ ಇನ್ನೊಂದು ಹೇಳುತ್ತಾರೆ. ಅವರನ್ನು ಯಾರೂ ಪ್ರಶ್ನೆ ಮಾಡುವಂತಿಲ್ಲ” ಎಂದು ತಿಳಿಸಿದರು.

ಚನ್ನಪಟ್ಟಣದ ಅನುದಾನದ ಬಗ್ಗೆ ಚರ್ಚೆಗೆ ಬರಲಿ:

ನಾನು ತಂದ ಅನುದಾನಕ್ಕೆ ಕಾಂಗ್ರೆಸ್ ನವರು ಬೋರ್ಡ್ ಹಾಕಿಕೊಳ್ಳುತ್ತಿದ್ದಾರೆ ಎನ್ನುವ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಯಾರು ಎಷ್ಟು ಅನುದಾನ ತಂದಿದ್ದಾರೆ ಎಂದು ಚರ್ಚೆಗೆ ಬರಲಿ. ನಾನು ಚರ್ಚೆಗೆ ಸಿದ್ಧ. ಅವರಿಗೆ ಅನುಮಾನ ಇದ್ದರೆ, ಅವರು ಎಷ್ಟು ಅನುದಾನ ತಂದಿದ್ದಾರೆ, ಶಿವಕುಮಾರ ಅವರ ನೇತೃತ್ವದಲ್ಲಿ ನಾವು ಎಷ್ಟು ಅನುದಾನ ತಂದಿದ್ದೇವೆ ಎಂದು ಚರ್ಚೆ ಮಾಡೋಣ” ಎಂದು ತಿಳಿಸಿದರು.

ಚುನಾವಣೆ ಸಮಯದಲ್ಲಿ ಬಂದು ಟಾಟಾ ಬೈ ಬೈ ಮಾಡುತ್ತಾರೆ ಎಂಬ ಹೇಳಿಕೆಗೆ, “ಅದು ಕುಮಾರಸ್ವಾಮಿ ಅವರ ಚಟ” ಎಂದರು.

ರಾಜಕೀಯ

ದೊಡ್ಡಬಳ್ಳಾಪುರ TAPMCS ಚುನಾವಣೆ: NDA ಅಭ್ಯರ್ಥಿಗಳ ಪರ ಬಿ.ಮುನೇಗೌಡ ಬಿರುಸಿನ ಪ್ರಚಾರ

ದೊಡ್ಡಬಳ್ಳಾಪುರ TAPMCS ಚುನಾವಣೆ: NDA ಅಭ್ಯರ್ಥಿಗಳ ಪರ ಬಿ.ಮುನೇಗೌಡ ಬಿರುಸಿನ ಪ್ರಚಾರ

ನವೆಂಬರ್ 2 ರಂದು ನಡೆಯಲಿರುವ ದೊಡ್ಡಬಳ್ಳಾಪುರ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ (TAPMCS) ಚುನಾವಣೆಗೆ ಎನ್‌ಡಿ‌ಎ (NDA) ಬೆಂಬಲಿತ ಅಭ್ಯರ್ಥಿಗಳ ಪರ ಜೆಡಿಎಸ್ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಬಿ.ಮುನೇಗೌಡ (B. Mune

[ccc_my_favorite_select_button post_id="115484"]
ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಆಯೋಜಿಸಿದ್ದ ಪೊಲೀಸ್ ಸಿಬ್ಬಂದಿಯ ನೂತನ ಪೀಕ್ ಕ್ಯಾಚ್ ವಿತರಣೆ: Cmsiddaramaiah, D.K.Shivakumar

[ccc_my_favorite_select_button post_id="115427"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ದೊಡ್ಡಬಳ್ಳಾಪುರ: ಅಪಘಾತ.. ಅಕ್ಕ-ತಮ್ಮನ ಸ್ಥಿತಿ ಚಿಂತಾಜನಕ..!

ದೊಡ್ಡಬಳ್ಳಾಪುರ: ಅಪಘಾತ.. ಅಕ್ಕ-ತಮ್ಮನ ಸ್ಥಿತಿ ಚಿಂತಾಜನಕ..!

ಕೆಎಸ್‌ಆರ್‌ಟಿಸಿ (KSRTC) ಬಸ್ ಮತ್ತು ಸ್ಕೂಟರ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ (Accident) ಅಕ್ಕ ಮತ್ತು ತಮ್ಮ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಗರದ ಎಪಿಎಂಸಿ

[ccc_my_favorite_select_button post_id="115491"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!