34863 ಖಾಲಿ ಹುದ್ದೆಗಳನ್ನು ತುಂಬಲು CM ಕಟ್ಟುನಿಟ್ಟಿನ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ನೇಮಕಾತಿ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆ ತಂದು ಯುಪಿಎಸ್ಸಿ ಮಾದರಿಯಲ್ಲಿ ಏಕರೀತಿಯ ನೇಮಕಾತಿ ವ್ಯವಸ್ಥೆಯನ್ನು ಜಾರಿಗೊಳಿಸುವ ಕುರಿತು ಕ್ರಮ ಕೈಗೊಳ್ಳಲು ಮುಖ್ಯಮಂತ್ರಿ (CM) ಸಿದ್ದರಾಮಯ್ಯ ಸೂಚಿಸಿದರು.

ಅವರು ಇಂದು ಕೃಷ್ಣಾದಲ್ಲಿ ಸರ್ಕಾರದ ಹಂತದಲ್ಲಿ ವಿವಿಧ ಇಲಾಖೆಗಳ ನೇಮಕಾತಿಗಳ ಬಗ್ಗೆ ಪ್ರಗತಿ ಪರಿಶೀಲನೆ ನಡೆಸಿದರು.

ನೇಮಕಾತಿ ಪ್ರಕ್ರಿಯೆಯಲ್ಲಿ ಸುಧಾರಣೆ ಕುರಿತು ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರ ಅಧ್ಯಕ್ಷತೆಯಲ್ಲಿ ಕಳೆದ ವಾರ ಎಲ್ಲಾ ನೇಮಕಾತಿ ಪ್ರಾಧಿಕಾರಗಳ ಸಭೆಯನ್ನು ನಡೆಸಲಾಗಿದೆ. ಸಭೆಯಲ್ಲಿ ಕೈಗೊಂಡಿರುವ ಶಿಫಾರಸುಗಳನ್ನು ಪರಿಶೀಲಿಸಿ ಸುಧಾರಣಾ ಕ್ರಮಗಳನ್ನು ಜಾರಿಗೊಳಿಸಲು CM ಅವರು ಸೂಚನೆ ನೀಡಿದರು.

ಯುಪಿಎಸ್ಸಿಯಲ್ಲಿ ಕೇವಲ ಗ್ರೂಪ್‌ ಎ ಮತ್ತು ಗ್ರೂಪ್‌ ಬಿ ಹುದ್ದೆಗಳನ್ನು ಮಾಡಲು ನೇಮಕಾತಿ ಮಾಡಲಾಗುತ್ತಿದೆ. ಇದೇ ರೀತಿ ಕೆಪಿಎಸ್‌ಸಿ ಕೇವಲ ಗ್ರೂಪ್‌ ಎ ಮತ್ತು ಬಿ ಮಾತ್ರ ನೇಮಕಾತಿ ಪ್ರಕ್ರಿಯೆ ನಡೆಸಿ, ಗ್ರೂಪ್‌ ಸಿಯಂತಹ ಬೇರೆ ನೇಮಕಾತಿಗಳನ್ನು ಕೆಇಎ ಮಾಡುವ ಕುರಿತು ಚರ್ಚೆ ನಡೆಸಲಾಗಿದೆ.

371ಜೆ ಗೆ ಸಂಬಂಧಿಸಿದಂತೆ ಕಲ್ಯಾಣ ಕರ್ನಾಟಕದ ಸ್ಥಳೀಯ ವ್ಯಕ್ತಿಗಳಿಗೆ ಮೀಸಲಿರಿಸಿರುವ ನೇರ ನೇಮಕಾತಿ ಹುದ್ದೆಗಳನ್ನು ಭರ್ತಿ ಮಾಡುವ ಕುರಿತು 2023ರಲ್ಲಿ ಹೊರಡಿಸಿರುವ ಸುತ್ತೋಲೆಯನ್ನು ಅನುಸರಿಸುವ ಕುರಿತು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ (CM) ಅವರು ಸೂಚನೆ ನೀಡಿದರು.

ಖಾಲಿ ಹುದ್ದೆ ನೇಮಕಾತಿಗೆ ಕಾಲಮಿತಿ:

ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ 34863 ಹುದ್ದೆಗಳನ್ನು ತುಂಬಲು ಕಾಲ ಮಿತಿಯನ್ನು ನಿಗದಿಪಡಿಸಿಕೊಂಡು ನೇಮಕಾತಿ ಪ್ರಕ್ರಿಯೆ ನಡೆಸಬೇಕು. ಅಗತ್ಯ ಸೇವೆಗಳ ಇಲಾಖೆಗಳಲ್ಲಿ ನೇಮಕಾತಿಗೆ ಆದ್ಯತೆ ನೀಡುವಂತೆ ಮುಖ್ಯಮಂತ್ರಿ (CM) ಅವರು ಸೂಚಿಸಿದರು.

ನೇಮಕಾತಿ ಕ್ಯಾಲೆಂಡರ್:

ನೇಮಕಾತಿ ಕುರಿತಾಗಿ ವಾರ್ಷಿಕ ಕ್ಯಾಲೆಂಡರ್‌ ಸಿದ್ಧಪಡಿಸಲು ಇರುವ ತೊಡಕುಗಳನ್ನು ನಿವಾರಿಸಬೇಕು. ಆರ್ಥಿಕ ವರ್ಷದ ಆರಂಭದಲ್ಲಿ ಆಯಾ ಇಲಾಖೆಗಳು ನೇಮಕಾತಿಗೆ ಖಾಲಿಯಿರುವ ಹುದ್ದೆಗಳ ಕುರಿತು ಹಣಕಾಸು ಇಲಾಖೆಗೆ ಪ್ರಸ್ತಾವನೆ ಕಳುಹಿಸಬೇಕು. ಕಾಲಮಿತಿಯೊಳಗಾಗಿ ಹಣಕಾಸು ಇಲಾಖೆಯಿಂದ ಅನುಮೋದನೆ ಪಡೆದುಕೊಂಡು ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸುವ ಕುರಿತಾಗಿ ಏಕರೀತಿಯ ಕ್ಯಾಲೆಂಡರ್‌ ಸಿದ್ಧಪಡಿಸಬೇಕು ಎಂದು ಹೇಳಿದರು.

ಕೇರಳ ಮಾದರಿಯಲ್ಲಿ ನೇಮಕಾತಿ ಪ್ರಕ್ರಿಯೆ ನಡೆಸುವ ಕುರಿತು ಅಲ್ಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲು ಮುಖ್ಯಮಂತ್ರಿ (CM) ಅವರು ಸೂಚನೆ ನೀಡಿದರು.

ಪಿಎಸ್‌ಐ ನೇಮಕಾತಿಯಲ್ಲಿ ದೈಹಿಕ ಪರೀಕ್ಷೆಯನ್ನು ಮೊದಲು ನಡೆಸಲಾಗುತ್ತಿದ್ದು, ಅಬಕಾರಿ ಇಲಾಖೆ ನೇಮಕಾತಿಯಲ್ಲಿ ಲಿಖಿತ ಪರೀಕ್ಷೆಯನ್ನು ಮೊದಲು ಮಾಡಲಾಗುತ್ತದೆ. ಅಬಕಾರಿ ಇಲಾಖೆ ಮಾದರಿಯನ್ನು ಪಿಎಸ್‌ಐ ನೇಮಕಾತಿಯಲ್ಲೂ ಅನುಸರಿಸುವ ಕುರಿತು ಪರಿಶೀಲನೆ ನಡೆಸಲು ಸೂಚನೆ ನೀಡಿದರು.

ರಾಜ್ಯದಲ್ಲಿ 41 ಇಲಾಖೆಗಳ ವೃಂದ ಮತ್ತು ನೇಮಕಾತಿ ನಿಯಮ ತಿದ್ದುಪಡಿಯಾಗದ ಕಾರಣ ನೇಮಕಾತಿ ವಿಳಂಬವಾಗುತ್ತಿದೆ. ಕೆಲವು ಇಲಾಖೆಗಳಲ್ಲಿ ಹಲವು ದಶಕಗಳಿಂದ ಸಿ ಅಂಡ್‌ ಆರ್‌ ತಿದ್ದುಪಡಿಯಾಗಲಿಲ್ಲ. ಈ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳಿಗೆ ಅನುಕೂಲವಾಗುವಂತೆ ಮಾದರಿ ಸಿ ಅಂಡ್‌ ಆರ್‌ ಸಿದ್ಧಪಡಿಸಲು ಸೂಚನೆ ನೀಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕೃಷ್ಣಾದಲ್ಲಿ ಸರ್ಕಾರದ ಹಂತದಲ್ಲಿ ವಿವಿಧ ಇಲಾಖೆಗಳ ನೇಮಕಾತಿಗಳ ಬಗ್ಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಸಚಿವರಾದ‌ ಜಿ.ಪರಮೇಶ್ವರ, ಹೆಚ್.ಕೆ.ಪಾಟೀಲ್‌, ಪ್ರಿಯಾಂಕ ಖರ್ಗೆ, ದಿನೇಶ ಗುಂಡೂರಾವ್‌, ಡಾ.ಶರಣ ಪ್ರಕಾಶ ಪಾಟೀಲ್‌, ಮಧು ಬಂಗಾರಪ್ಪ, ಭೈರತಿ ಸುರೇಶ್, ಡಾ.ಎಂ.ಸಿ. ಸುಧಾಕರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್‌, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ನಸೀರ್‌ ಅಹ್ಮದ್‌, ಕಾನೂನು ಸಲಹೆಗಾರ ಎ.ಎಸ್.‌ ಪೊನ್ನಣ್ಣ, ಅಡ್ವೊಕೇಟ್‌ ಜನರಲ್‌ ಶಶಿಕಿರಣ್‌ ಶೆಟ್ಟಿ ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಜಕೀಯ

ಇಂದು ಆದಿಚುಂಚನಗಿರಿಗೆ ಪ್ರಧಾನಿ ಮೋದಿ ಭೇಟಿ

ಇಂದು ಆದಿಚುಂಚನಗಿರಿಗೆ ಪ್ರಧಾನಿ ಮೋದಿ ಭೇಟಿ

ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಅವರು ಇಂದು (ಏ.15) ರಾಜ್ಯಕ್ಕೆ ಆಗಮಿಸಲಿದ್ದು, ಮಂಡ್ಯ ಜಿಲ್ಲೆಯ ಆದಿಚುಂಚನಗಿರಿಯಲ್ಲಿ ನಿರ್ಮಾಣ ವಾಗಿರುವ ಮಂದಿರದ ಭೈರವೈಕ್ಯ ಉದ್ಘಾಟನೆ ಮಾಡಲಿದ್ದಾರೆ.

[ccc_my_favorite_select_button post_id="120962"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ದೊಡ್ಡಬಳ್ಳಾಪುರ: ಎರಡು ಪ್ರತ್ಯೇಕ ಅಪಘಾತ.. ಇಬ್ಬರ ದುರ್ಮರಣ..!

ದೊಡ್ಡಬಳ್ಳಾಪುರ: ಎರಡು ಪ್ರತ್ಯೇಕ ಅಪಘಾತ.. ಇಬ್ಬರ ದುರ್ಮರಣ..!

ಮಂಗಳವಾರ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತದಲ್ಲಿ (Accident) ಇಬ್ಬರು ಸಾವನಪ್ಪಿರುವ ಘಟನೆ ತಾಲೂಕಿನ..*** ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ.

[ccc_my_favorite_select_button post_id="120965"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]