akka cafe: ದೇವನಹಳ್ಳಿಯಲ್ಲಿ ಅಕ್ಕ ಬೇಕರಿ/ಕೆಫೆಗೆ ಚಾಲನೆ: ರಾಜ್ಯಾದ್ಯಂತ 50 ಅಕ್ಕ ಬೇಕರಿ/ಕೆಫೆ ಸ್ಥಾಪನೆ

ಬೆಂಗಳೂರು ಗ್ರಾಮಾಂತರ ಜಿಲ್ಲೆ; ಮಹಿಳಾ ಸಬಲೀಕರಣವನ್ನು ಉತ್ತೇಜಿಸಲು ಹಾಗೂ ಮಹಿಳೆಯರ ಸ್ವಾವಲಂಬಿ ಬದುಕಿಗೆ ಉತ್ತೇಜನ ನೀಡಲು ʼಅಕ್ಕ ಕೆಫೆʼ (akka cafe) ಸಹಕಾರಿಯಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆಯ ಸಚಿವರಾದ ಶರಣ ಪ್ರಕಾಶ್ ರುದ್ರಪ್ಪ ಪಾಟೀಲ್ ಅವರು ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಇವರ ವತಿಯಿಂದ ಸಂಜೀವಿನಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನದಡಿ ದೇವನಹಳ್ಳಿ ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ನಿರ್ಮಿತಗೊಂಡಿರುವ ಅಕ್ಕ – ಬೇಕರಿ/ ಕೆಫೆ ಉದ್ಘಾಟಿಸಿ ಅವರು ಮಾತನಾಡಿದರು.

ಮಹಿಳಾ ಸಬಲೀಕರಣವನ್ನು ಉತ್ತೇಜಿಸಲು ಹಾಗೂ ಮಹಿಳೆಯರ ಸ್ವಾವಲಂಬಿ ಬದುಕಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ಉಪಕ್ರಮದ ಅಡಿಯಲ್ಲಿ ʼಅಕ್ಕ ಕೆಫೆʼಯನ್ನು (akka cafe) ಪ್ರಾರಂಭಿಸಲಾಯಿತು.

ಮಹಿಳಾ ಸಬಲೀಕರಣದತ್ತ ಮಹತ್ವದ ಹೆಜ್ಜೆಯನ್ನಿಟ್ಟು ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್(NRLM), ಕರ್ನಾಟಕ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿಯಲ್ಲಿ ಮೊದಲ ಅಕ್ಕ ಕೆಫೆಯನ್ನು ಬೆಂಗಳೂರಿನಲ್ಲಿ ಪ್ರಾರಂಭಿಸಲಾಗಿದ್ದು, ದೇವನಹಳ್ಳಿಯಲ್ಲಿ 2ನೇ ಅಕ್ಕ ಕೆಫೆ/ ಬೇಕರಿ ಪ್ರಾರಂಭಿಸಲಾಗಿದೆ.

ರಾಜ್ಯಾದ್ಯಂತ 50 ಅಕ್ಕ ಕೆಫೆ (akka cafe) ತೆರೆಯಲಾಗುವುದು ಎಂದರು. ಹಾಗೇಯೇ ಮಹಿಳೆಯರ ಸಬಲೀಕರಣಕ್ಕೆ ರಾಜ್ಯಾದ್ಯಂತ 2500 ಕಾಫಿ ಕೆಫೆ ಸ್ಥಾಪನೆ ಮಾಡುವ ಉದ್ದೇಶವಿದೆ. 3500 ಮಹಿಳೆಯರು ತರಬೇತಿ ಪಡೆದುಕೊಂಡು ತ್ಯಾಜ್ಯ ನಿರ್ವಹಣಾ ಘಟಕದಲ್ಲಿ ಕೆಲಸ ಮಾಡುತ್ತಿದ್ದಾರೆ. ಮಹಿಳೆಯರ ಸಬಲೀಕರಣ ದೃಷ್ಟಿಯಿಂದ ಗ್ಯಾರಂಟಿ ಯೋಜನೆಗಳ ಜೊತೆಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳು ಜಾರಿಗೆ ತಂದಿದ್ದೇವೆ ಎಂದರು.

ಸ್ವಸಹಾಯ ಗುಂಪಿಗೆ ಸೇರಿದ 12 ಮಹಿಳೆಯರ ತಂಡವು ಈ ಕೆಫೆಯನ್ನು ನಡೆಸುತ್ತದೆ. ಅಕ್ಕ ಕೆಫೆ ಬೆಳಗ್ಗೆ 09 ರಿಂದ ರಾತ್ರಿ 09 ರ ವರೆಗೆ ವಾರವಿಡಿ ಕಾರ್ಯನಿರ್ಹಿಸಲಿದೆ. ಮತ್ತು ಇಲ್ಲಿ ಆರೋಗ್ಯಕರ, ಸ್ವಾದಿಷ್ಟಕರವಾದ ಆಹಾರ ಲಭ್ಯವಿದ್ದು, ಶುಚಿ-ರುಚಿಯ ಜೊತೆಗೆ ಕೈಗೆಟಕುವ ದರದಲ್ಲಿ ಗ್ರಾಹಕರಿಗೆ ಆಹಾರವನ್ನು ಪೂರೈಸಲಾಗುತ್ತದೆ.
ಸರ್ಕಾರ ಬಜೆಟ್​​ನಲ್ಲಿ ಘೋಷಣೆ ಮಾಡಿದಂತೆ ಅಕ್ಕ ಕೆಫೆಯು ಕಾರ್ಯರೂಪಕ್ಕೆ ಬಂದಿದೆ.

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಸ್ವಸಹಾಯ ಗುಂಪುಗಳ ಮೂಲಕ ಮಹಿಳೆಯರನ್ನು ಬಲಗೊಳಿಸಲು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಸರ್ಕಾರದ ಜನಪರ ಕಾರ್ಯಕ್ರಮಗಳನ್ನು ಮಹಿಳೆಯರು ಸದುಪಯೋಗ ಪಡಿಸಿಕೊಂಡು ಜೀವನ ರೂಪಿಸಿಕೊಳ್ಳಬೇಕು. ಅಕ್ಕ ಕೆಫೆಯು ಒಂದು ಉತ್ತಮ ವೇದಿಕೆಯಾಗಿದ್ದು ಮಹಿಳೆಯರ ಸ್ವಾವಲಂಬಿ ಬದುಕಿಗೆ ಸಹಕಾರಿಯಾಗಲಿದೆ ಎಂದರು.

ಕೌಶಲ್ಯಾಭಿವೃದ್ಧಿ ತರಬೇತಿ ಕೇಂದ್ರ ಸ್ಥಾಪನೆಗೆ ಮನವಿ

ಜಿಲ್ಲೆಯಲ್ಲಿ ನಿರುದ್ಯೋಗಿಗಳಿಗೆ ಕೌಶಲ್ಯ ಆಧಾರಿತ ತರಬೇತಿ ಅವಶ್ಯಕತೆ ಇದ್ದು ಕೌಶಲ್ಯಾಭಿವೃದ್ಧಿ ತರಬೇತಿ ಕೇಂದ್ರ ಸ್ಥಾಪಿಸಬೇಕು ಎಂದು ಸಚಿವರಾದ ಮುನಿಯಪ್ಪ ಅವರು ಮನವಿ ಮಾಡಿದರು. ಇದಕ್ಕೆ ಸಚಿವರಾದ ಶರಣ ಪ್ರಕಾಶ್ ಪಾಟೀಲ್ ಅವರು ಸಕಾರಾತ್ಮಕವಾಗಿ ಸ್ಪಂದಿಸಿ ಐಟಿಐ, ಜಿಟಿಟಿಸಿ ಕೇಂದ್ರಗಳನ್ನು ಮೇಲ್ದರ್ಜೆ ಏರಿಸಿ, ಮುಂದಿನ ದಿನಗಳಲ್ಲಿ ಕೌಶಲ್ಯಾಭಿವೃದ್ಧಿ ಕೇಂದ್ರ ಸ್ಥಾಪನೆಗೆ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಯೋಜನಾ ಪ್ರಾಧಿಕಾರ ಅದು ಶಾಂತಕುಮಾರ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾ ಉಪಾಧ್ಯಕ್ಷ ನಾರಾಯಣಸ್ವಾಮಿ, ತಾಲ್ಲೂಕು ಅಧ್ಯಕ್ಷ ಜಗನ್ನಾಥ, ಕೌಶಲ್ಯಾಭಿವೃದ್ಧಿ ಇಲಾಖೆಯ ಅಭಿವೃದ್ಧಿ ಆಯುಕ್ತರಾದ ಉಮಾ ಮಹದೇವನ್, ರಾಷ್ಟ್ರೀಯ ಜೀವನೋಪಾಯ ಅಭಿಯಾನ ನಿರ್ದೇಶಕರಾದ ಪಿ.ಶ್ರೀವಿದ್ಯಾ, ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್, ಜಿ.ಪಂ ಸಿ.ಇ.ಒ ಅನುರಾಧ, ತಾಪಂ ಇಒ ಶ್ರೀನಾಥ್ ಗೌಡ, ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲ್ಲೂಕು ಅಧಿಕಾರಿಗಳು ಸ್ವಸಹಾಯ ಗುಂಪುಗಳ ಸದಸ್ಯರು, ಸಾರ್ವಜನಿಕರು ಉಪಸ್ಥಿತರಿದ್ದರು.

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲು BJP ಪಿತೂರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿ

ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲು BJP ಪಿತೂರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿ

ಬೆಂಗಳೂರು: ವಕ್ಫ್ ಆಸ್ತಿಯ ವಿವಾದಕ್ಕೆ ಸಂಬಂಧಿಸಿದಂತೆ ರೈತರಿಗೆ ನೀಡಲಾಗಿರುವ ನೋಟಿಸ್ ಗಳನ್ನು ತಕ್ಷಣ ವಾಪಸ್ ಪಡೆಯಲು ನಮ್ಮ ಸರ್ಕಾರ ಸೂಚನೆ ನೀಡಿದ ನಂತರವೂ ಬಿಜೆಪಿ ನಾಯಕರು ಪ್ರತಿಭಟನೆಗೆ ಮುಂದಾಗಿರುವುದಕ್ಕೆ ರಾಜಕೀಯ ಲಾಭದ ದುರುದ್ದೇಶ ಇದೆಯೇ

[ccc_my_favorite_select_button post_id="95395"]
ವಿಜಯೇಂದ್ರ.. ಸಿದ್ದರಾಮಯ್ಯ ಟ್ವಿಟ್ ವಾರ್..!

ವಿಜಯೇಂದ್ರ.. ಸಿದ್ದರಾಮಯ್ಯ ಟ್ವಿಟ್ ವಾರ್..!

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಟ್ವಿಟರ್ ವಾರ್ ತೀವ್ರಗೊಂಡಿದ್ದು, ಹಲವು ವಿಚಾರಗಳ ಕುರಿತು ಪರ-ವಿರೋಧ ಕೆಸರೆರೆಚಾಟ ನಡೆಯುತ್ತಿದೆ. ರಾಜಕೀಯ ಪುಡಾರಿಯ ರೀತಿ ಪ್ರಧಾನಿ ನರೇಂದ್ರ ಮೋದಿ ಅವರಿಂದ ಸುಳ್ಳು

[ccc_my_favorite_select_button post_id="95368"]
Army dog: ಉಗ್ರರ ದಾಳಿಗೆ ಭಾರತೀಯ ಸೇನೆಯ ಶ್ವಾನ ಫ್ಯಾಂಟಮ್ ದುರ್ಮರಣ..!

Army dog: ಉಗ್ರರ ದಾಳಿಗೆ ಭಾರತೀಯ ಸೇನೆಯ ಶ್ವಾನ ಫ್ಯಾಂಟಮ್ ದುರ್ಮರಣ..!

ಅನ್ನೂರ್: ಜಮ್ಮು ಕಾಶ್ಮೀರದ ಅನ್ನೂರ್ ನಲ್ಲಿ ನಡೆದ ಭಯೋತ್ಪಾದಕರ ಗುಂಡಿನ ದಾಳಿಗೆ ನಾಲ್ಕು ವರ್ಷದ ಫ್ಯಾಂಟಮ್ ಎಂಬ ಆರ್ಮಿ ಶ್ವಾನ (Army dog) ಸಾವನ್ನಪ್ಪಿದೆ ಎಂದು ಸೇನೆಯ ಮೂಲಗಳು ತಿಳಿಸಿವೆ. ಭಯೋತ್ಪಾದಕರ ದಾಳಿಗಿರುವ ಹಿನ್ನಲೆ

[ccc_my_favorite_select_button post_id="95119"]
ರೊವಾಂಡಾ ದೇಶದಲ್ಲಿ ಬಂಡವಾಳ ಹೂಡಿಕೆಗೆ ಮುಕ್ತ ಅವಕಾಶ: ಸ್ಥಳೀಯ ಉದ್ಯಮಿಗಳಿಗೆ ಆಹ್ವಾನ| ಇಂಡಿಯನ್ ಕ್ರೀಡಾ ಶಾಲೆ ಸ್ಥಾಪನೆ: ಸಚಿವ ಸತೀಶ್ ಜಾರಕಿಹೊಳಿ

ರೊವಾಂಡಾ ದೇಶದಲ್ಲಿ ಬಂಡವಾಳ ಹೂಡಿಕೆಗೆ ಮುಕ್ತ ಅವಕಾಶ: ಸ್ಥಳೀಯ ಉದ್ಯಮಿಗಳಿಗೆ ಆಹ್ವಾನ| ಇಂಡಿಯನ್

ಬೆಳಗಾವಿ, (ಸೆ.9): ರೊವಾಂಡಾ ದೇಶದಲ್ಲಿ ಕೃಷಿ, ಆರೋಗ್ಯ, ಶಿಕ್ಷಣ, ಗಣಿಗಾರಿಕೆ, ಇಂಧನ ಹಾಗೂ ಮೂಲಸೌಕರ್ಯಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಬಂಡವಾಳ ಹೂಡಿಕೆಗೆ ವಿಫುಲ ಅವಕಾಶಗಳಿವೆ. ಕೈಗಾರಿಕೋದ್ಯಮಿಗಳು ಮತ್ತು ಬಂಡವಾಳ ಹೂಡಿಕೆದಾರರಿಗೆ ಅನುಕೂಲವಾಗುವಂತಹ ಉದ್ಯಮಸ್ನೇಹಿ ವಾತಾವರಣ ಹೊಂದಿದ್ದು, ಇಲ್ಲಿನ ಹೂಡಿಕೆದಾರರಿಗೆ ಮುಕ್ತ ಸ್ವಾಗತವಿದೆ ಎಂದು ಪೂರ್ವ

[ccc_my_favorite_select_button post_id="89581"]

ಕ್ರೀಡೆ

Doddaballapura: ರಾಜ್ಯಮಟ್ಟದ ಯೋಗ ಪಂದ್ಯಾವಳಿಯಲ್ಲಿ 14 ಮಂದಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ..

Doddaballapura: ರಾಜ್ಯಮಟ್ಟದ ಯೋಗ ಪಂದ್ಯಾವಳಿಯಲ್ಲಿ 14 ಮಂದಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ..

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ವತಿಯಿಂದ ನಗರದ ದೇವರಾಜ ಅರಸು ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ಯೋಗ ಪಂದ್ಯಾವಳಿಯ ಸಮಾರೋಪ ಸಮಾರಂಭ

[ccc_my_favorite_select_button post_id="94463"]
crime news; ಕುಡಿದು ಬಂದಿದ್ದ ಪತಿಯ ಮರ್ಮಾಂಗವನ್ನೇ ಕತ್ತರಿಸಿದ ಪತ್ನಿ..!

crime news; ಕುಡಿದು ಬಂದಿದ್ದ ಪತಿಯ ಮರ್ಮಾಂಗವನ್ನೇ ಕತ್ತರಿಸಿದ ಪತ್ನಿ..!

ನವದೆಹಲಿ: ಕುಡಿದು ಬಂದಿದ್ದ ಪತಿಯ ಮರ್ಮಾಂಗವನ್ನೇ ಪತ್ನಿಯೊಬ್ಬಳು ಕತ್ತರಿಸಿದ ಘಟನೆ (crime news) ಉತ್ತರ ದೆಹಲಿಯಲ್ಲಿ ನಡೆದಿದೆ. ವ್ಯಕ್ತಿಯೊಬ್ಬ ಮಧ್ಯರಾತ್ರಿಯಲೊಲಿ ಕುಡಿದು ಬಂದಿದ್ದ ಈ ಹಿನ್ನೆಲೆಯಲ್ಲಿ ಪತಿ, ಪತ್ನಿ ನಡುವೆ ಜಗಳ ನಡೆದಿದೆ. ಅದಾದ ಬಳಿಕ ಕೋಪದಲ್ಲಿ ಮಹಿಳೆ ಪತಿಯ ಖಾಸಗಿ ಭಾಗಕ್ಕೆ

[ccc_my_favorite_select_button post_id="95386"]
Accident; ಅಡ್ಡಬಂದ ಬೀದಿ ನಾಯಿ: ಬೈಕ್‌ ಸವಾರ ಸಾವು

Accident; ಅಡ್ಡಬಂದ ಬೀದಿ ನಾಯಿ: ಬೈಕ್‌ ಸವಾರ ಸಾವು

ಚಿಕ್ಕಮಗಳೂರು: ದ್ವಿಚಕ್ರ ವಾಹನಕ್ಕೆ ಬೀದಿನಾಯಿ ಅಡ್ಡಬಂದ ಪರಿಣಾಮ ಅಪಘಾತ (Accident) ಸಂಭವಿಸಿ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮೂಡಿಗೆರೆ ತಾಲ್ಲೂಕಿನ ಗೋಣಿಬೀಡು ಪಟ್ಟಣದಲ್ಲಿ ನಡೆದಿದೆ. ಗೋಣಿಬೀಡು ಸಮೀಪದ ಆನೆದಿಬ್ಬ ನಿವಾಸಿ 24 ವರ್ಷದ ಜಾಫರ್

[ccc_my_favorite_select_button post_id="95382"]

ಆರೋಗ್ಯ

ಸಿನಿಮಾ

ದರ್ಶನ್ ಆಸ್ಪತ್ರೆಗೆ ದಾಖಲು; ವೈದ್ಯರಿಂದ ತೀವ್ರ ತಪಾಸಣೆ

ದರ್ಶನ್ ಆಸ್ಪತ್ರೆಗೆ ದಾಖಲು; ವೈದ್ಯರಿಂದ ತೀವ್ರ ತಪಾಸಣೆ

ಬೆಂಗಳೂರು: ಬೆನ್ನು ನೋವಿನ ಕಾರಣದಿಂದಾಗಿ ನಟ ದರ್ಶನ್ ಕೆಂಗೇರಿ ಬಳಿ ಇರುವ ಬಿಜಿಎಸ್ ಆಸ್ಪತ್ರೆಗೆ ಶುಕ್ರವಾರ ದಾಖಲಾಗಿದ್ದು, ವೈದ್ಯರು ಚಿಕಿತ್ಸೆ ಆರಂಭಿಸಿದ್ದಾರೆ. ದರ್ಶನ್ ಆರೋಗ್ಯದ ಕುರಿತು ಕೆಂಗೇರಿ ಆಸ್ಪತ್ರೆಯ ವೈದ್ಯ ನವೀನ್ ಅಪ್ಪಾಜಿಗೌಡ ಮಾಧ್ಯಮಗಳಿಗೆ

[ccc_my_favorite_select_button post_id="95347"]
error: Content is protected !!