ಕಿತ್ತೂರು ರಾಣಿ ಚೆನ್ನಮ್ಮ ವಿಜಯ ಜ್ಯೋತಿ ರಥಕ್ಕೆ ದೊಡ್ಡಬಳ್ಳಾಪುರದಲ್ಲಿ ಅದ್ಧೂರಿ ಸ್ವಾಗತ..!

ದೊಡ್ಡಬಳ್ಳಾಪುರ: ಕಿತ್ತೂರು ರಾಣಿ ಚೆನ್ನಮ್ಮ ವಿಜಯ ಜ್ಯೋತಿ ರಥ ದೊಡ್ಡಬಳ್ಳಾಪುರ ನಗರಕ್ಕೆ ಆಗಮಿಸಿತು.

ನಗರದ ದೊಡ್ಡಬಳ್ಳಾಪುರ ತಾಲ್ಲೂಕು ಪಂಚಾಯಿತಿ ಮುಂಭಾಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಜಯ ಜ್ಯೋತಿ ರಥವನ್ನು ಕಲಾತಂಡಗಳೊಂದಿಗೆ ಸ್ವಾಗತಿಸಲಾಯಿತು.

ದೊಡ್ಡಬಳ್ಳಾಪುರಕ್ಕೆ ಆಗಮಿಸಿದ ಕಿತ್ತೂರು ರಾಣಿ ಚೆನ್ನಮ್ಮ ವಿಜಯ ಜ್ಯೋತಿ ರಥಕ್ಕೆ ಮಾಲಾರ್ಪಣೆ ಮತ್ತು ಪುಷ್ಪಾರ್ಚನೆ  ಸಲ್ಲಿಸಲಾಯಿತು.

ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು ಮಾತನಾಡಿ,  ಕಿತ್ತೂರು ರಾಣಿ ಚೆನ್ನಮ್ಮ ಬ್ರಿಟಿಷರ ವಿರುದ್ದ ನಡೆಸಿದ ಹೋರಾಟದಲ್ಲಿ ವಿಜಯಗಳಿಸಿ 200 ವರ್ಷ ಪೂರೈಸಿರುವ ಹಿನಲ್ಲೆಯಲ್ಲಿ  ರಾಜ್ಯಾದ್ಯಂತ ನಡೆಯುವ ಕಿತ್ತೂರು ರಾಣಿ ಚೆನ್ನಮ್ಮ ವಿಜಯಯಾತ್ರೆ ನಡೆಯುತ್ತಿದೆ.

1824 ಅಕ್ಟೋಬರ್ 23 ರಂದು  ಕಿತ್ತೂರು  ರಾಣಿ ಚೆನ್ನಮ್ಮ  ಸೈನ್ಯದೊಂದಿಗೆ ಕಿತ್ತೂರು ಕೋಟೆಯ ಹೊರಗೆ ಈಸ್ಟ್ ಇಂಡಿಯಾ ಕಂಪನಿಯ ಸೈನಿಕರನ್ನು ಸೋಲಿಸಿದ ದಿನವಾಗಿದೆ. 

ಬ್ರಿಟಿಷರ ವಿರುದ್ದ ಮೊದಲ ಮಹಿಳಾ  ಹೋರಾಟಗಾರ್ತಿಗೆ 1824ರಲ್ಲಿ ದೊರೆತ ವಿಜಯವಾಗಿದೆ. 

1857 ರಲ್ಲಿ ನಡೆದ ಸಿಪಾಯಿ ದಂಗೆಗೂ  ಮೊದಲೇ 1824ರಲ್ಲಿ ಬ್ರಿಟಿಷರ ವಿರುದ್ದ  ಹೋರಾಟ ನಡೆಸಿ ಗೆಲುವು ಸಾಧಿಸಿದ  ಕಿತ್ತೂರು ರಾಣಿ ಚೆನ್ನಮ್ಮನ ಧೀರತ್ವ ಮತ್ತು ದೇಶಪ್ರೇಮ, ದಕ್ಷ ಆಡಳಿತ ವಿಧಾನ ಎಲ್ಲರಿಗೂ ಆದರ್ಶಪ್ರಾಯ ಎಂದರು.

ಕಿತ್ತೂರು ರಾಣಿ ಚೆನ್ನಮ್ಮ ಬ್ರಿಟಿಷರಿಗೆ ತೆರಿಗೆ ಕೊಡುವುದಿಲ್ಲ ಎಂದು ಹೇಳುವ ಮೂಲಕ ನಮಗೆ ಸ್ವಾಭಿಮಾನ ಪ್ರದರ್ಶನ ಮಾಡಿದರು. ಸಂಗೊಳ್ಳಿ ರಾಯಣ್ಣ ಅಂತಹ ಸ್ವಾತಂತ್ರ್ಯ ಸೇನಾನಿ ಕಿತ್ತೂರು ರಾಣಿ ಚೆನ್ನಮ್ಮನ ರಾಜ್ಯದಲ್ಲಿ ಇದ್ದರು.

ಮಹಿಳೆಯರು ಘನತೆ ಮತ್ತು ನ್ಯಾಯವನ್ನು ಕಾಪಾಡುವುದರಲ್ಲಿ  ಮುಂಚೂಣಿಯಲ್ಲಿರಬಹುದು  ಎಂಬುದನ್ನು ತೋರಿಸಿಕೊಟ್ಟರು. ಕಿತ್ತೂರು ರಾಣಿ ಚೆನ್ನಮ್ಮನ ಶೌರ್ಯ ದೇಶದ ಮಹಿಳೆಯರಿಗೆ ಸ್ಪೂರ್ತಿಯಾಗಿದೆ. ಇಂತಹ  ವೀರ ಮಹಿಳೆಯ ನೆನಪಿನಲ್ಲಿ ಬೆಳಗಾವಿ ಜಿಲ್ಲೆಯ ಕಿತ್ತೂರಿನಲ್ಲಿ ಪ್ರತಿವರ್ಷ ಕಿತ್ತೂರು ಉತ್ಸವ ನಡೆಯುತ್ತದೆ.

ಈ ವರ್ಷ ಕಿತ್ತೂರು ವಿಜಯಕ್ಕೆ 200 ವರ್ಷ ಆಗಿರುವ ಪ್ರಯುಕ್ತ ಅಕ್ಟೋಬರ್ 23, 24, 25ರಂದು ಕಿತ್ತೂರಿನಲ್ಲಿ ವಿಜಯೋತ್ಸವ ನಡೆಯಲಿದೆ ಎಂದರು.

ಕಾರ್ಯಕ್ರಮದಲ್ಲಿ ಶಾಸಕ ಧೀರಜ್ ಮುನಿರಾಜು, ತಹಶೀಲ್ದಾರ್ ವಿಭಾ ವಿದ್ಯಾ ರಾಥೋಡ್, ತಾಲ್ಲೂಕು ಪಂಚಾಯಿತಿ  ಕಾರ್ಯನಿರ್ವಾಹಕ ಅಧಿಕಾರಿ ಎನ್.ಮುನಿರಾಜು, ನಗರಸಭೆ  ಪೌರಾಯುಕ್ತ ಕಾರ್ತಿಕ್ ಈಶ್ವರ್, ಕನ್ನಡ ಸಾಹಿತ್ಯ ಪರಿಷತ್ತು ಕಸಬಾ ಹೋಬಳಿ ಕೋಶಾಧ್ಯಕ್ಷ ಜಿ.ಸುರೇಶ್, ಪ್ರತಿನಿಧಿ ಸಫೀರ್,  ಕಾಡನೂರು ಗ್ರಾಮಪಂಚಾಯಿತಿ ಅಧ್ಯಕ್ಷ ಮಧುಸೂದನ್, ತಾಲ್ಲೂಕಿನ ವಿವಿಧ ಇಲಾಖೆಯ ಅಧಿಕಾರಿಗಳು  ಭಾಗವಹಿಸಿದ್ದರು.

ದೊಡ್ಡಬಳ್ಳಾಪುರದಿಂದ ಕಿತ್ತೂರು ರಾಣಿ ಚೆನ್ನಮ್ಮ ವಿಜಯ ಜ್ಯೋತಿ ರಥವನ್ನು  ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿಗೆ ಕಳುಹಿಸಿ ಕೊಡಲಾಯಿತು.

ರಾಜಕೀಯ

ಯಡಿಯೂರಪ್ಪರ 5 ದಶಕಗಳ ರಾಜಕೀಯ ಪಯಣ: 26ಕ್ಕೆ ಅಭಿಮಾನೋತ್ಸವದ ಭೂಮಿಪೂಜೆ

ಯಡಿಯೂರಪ್ಪರ 5 ದಶಕಗಳ ರಾಜಕೀಯ ಪಯಣ: 26ಕ್ಕೆ ಅಭಿಮಾನೋತ್ಸವದ ಭೂಮಿಪೂಜೆ

ರಾಜ್ಯ ಬಿಜೆಪಿಯ ಹಿರಿಯ ಮುತ್ಸದ್ದಿ ಬಿ.ಎಸ್. ಯಡಿಯೂರಪ್ಪ (B.S. Yediyurappa) ಅವರ ಅಭಿಮಾನೋತ್ಸವ ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಏಪ್ರಿಲ್ 26ರಂದು ಬೆಳಿಗ್ಗೆ 10 ಗಂಟೆಗೆ ಭೂಮಿಪೂಜೆ ನೆರವೇರಿಸಲಾಗುತ್ತಿದೆ. ಕಾರ್ಯಕ್ರಮದ ಸ್ಥಳಗಳಲ್ಲಿ ಪೆಂಡಾಲ್, ಸ್ಟೇಜ್ ಮುಂತಾದ

[ccc_my_favorite_select_button post_id="121304"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಝಾಂಬಿ ಡ್ರಗ್ಸ್ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯ ವಿಡಿಯೊ ಶೇರ್ ಮಾಡಿದ್ದ ನಟ ದುನಿಯಾ ವಿಜಯ್‌ಗೆ (Duniya Vijay) ಸಂಕಷ್ಟ ಎದುರಾಗಿದೆ.

[ccc_my_favorite_select_button post_id="121217"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!