5ನೇ ದಿನಕ್ಕೆ ಕಾಲಿಟ್ಟ ಗ್ರಾಮಪಂಚಾಯಿತಿ ನೌಕರರ ಪ್ರತಿಭಟನೆ: ಸಾರ್ವಜನಿಕರ ಪರದಾಟ

ಬೆಂಗಳೂರು ಗ್ರಾ‌ಮಾಂತರ ಜಿಲ್ಲೆ: ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ವನ್ನು ಒತ್ತಾಯಿಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಎಲ್ಲಾ ವೃಂದ ಸಂಘದ ದ ನೇತೃತ್ವದಲ್ಲಿ ಸದಸ್ಯರು ಹಾಗೂ ಅಧಿಕಾರಿ, ಸಿಬ್ಬಂದಿ ನಡೆಸುತ್ತಿರುವ ಪ್ರತಿಭಟನೆ ರಜಾ ದಿನವನ್ನು ಸೇರಿ ಐದನೇ ದಿನಕ್ಕೆ ಕಾಲಿಟ್ಟಿದೆ.

ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಆರಂಭವಾದ ಹೋರಾಟ ರಾಜ್ಯದ ಆಯಾ ಜಿಲ್ಲಾ ಕೇಂದ್ರಗಳ ಬಳಿಗಡ ವಿಸ್ತರಿಸಲಾಗಿದ್ದು, ಅಂತೆಯೇ ಸೋಮವಾರದಿಂದ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಅನಿರ್ದಿಷ್ಟಾವಧಿ ಹೋರಾಟವನ್ನು ಗ್ರಾಮಪಂಚಾಯಿತಿ ಸಿಬ್ಬಂದಿಗಳು ಆರಂಭಿಸಿದ್ದಾರೆ.

ಗ್ರಾಮ ಪಂಚಾಯಿತಿ (Grama panchayath) ವ್ಯಾಪ್ತಿಯಲ್ಲಿ ಕುಡಿಯುವ ನೀರು, ರಾಷ್ಟ್ರ ಧ್ವಜಾರೋಹಣ ಕಾರ್ಯ ಹೊರತು ಪಡಿಸಿ ಉಳಿದೆಲ್ಲಾ ಸೇವೆಗಳನ್ನು ಸ್ಥಗಿತಗೊಳಿಸಿ ಪಂಚಾಯಿತಿ ಪ್ರತಿನಿಧಿಗಳು ಹಾಗೂ ಸಿಬ್ಬಂದಿ ಈ ಹೋರಾಟದಲ್ಲಿ ಪಾಲ್ಗೊಂಡಿದ್ದಾರೆ.

ಬೇಡಿಕೆ ಈಡೇರಿಸುವವರೆಗೂ ಹೋರಾಟ ಮುಂದುವರೆಸುವುದಾಗಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಸಂಘದ ಪದಾಧಿಕಾರಿಗಳು ಹೇಳಿದರು.

ರಾಜ್ಯದ ಶೇ‌.68 ರಿಂದ 70 ಜನರಿಗೆ ಸ್ಥಳೀಯ ಸಂಸ್ಥೆಯಾದ ಗ್ರಾಮಪಂಚಾಯಿತಿಗಳಿಂದ ಶೇಕಡ 70 ರಷ್ಟು ಸೇವೆಗಳನ್ನು ನೀಡಲಾಗುತ್ತಿದೆ. ಈ ವ್ಯವಸ್ಥೆಯಲ್ಲಿ ಕೆಲಸ ಮಾಡುತ್ತಿರುವ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ದ್ವಿತೀಯ ದರ್ಜೆ ಲೆಕ್ಕ ಸಹಾಯಕರು, ಎಲ್ಲಾ ಸಿಬ್ಬಂದಿಗಳು ಕಾರ್ಯ ನಿರ್ವಹಣೆಯಲ್ಲಿ ಎದುರಿಸುತ್ತಿರುವ ಹಲವು ಸಮಸ್ಯೆಗಳನ್ನು ಪರಿಹರಿಸುವಂತೆ ಹಾಗೂ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಸರ್ಕಾರ ಮತ್ತು ಇಲಾಖೆಗೆ ಹಲವು ವರ್ಷಗಳಿಂದ ಮನವಿ ಸಲ್ಲಿಸುತ್ತಾ ಬಂದರೂ ಯಾವುದೇ ಸ್ಪಂದನೆ ಸಿಕ್ಕಿಲ್ಲ. ಹೀಗಾಗಿ ಹೋರಾಟ ಅನಿವಾರ್ಯವಾಗಿದೆ ಎಂದು ಹೇಳಿದರು.

ಪ್ರತಿಭಟನೆಯಲ್ಲಿ ಗ್ರಾಪಂ (Grama panchayath) ಅಭಿವೃದ್ಧಿ ಅಧಿಕಾರಿಗಳ ಸಂಘದ ಜಿಲ್ಲಾಧ್ಯಕ್ಷ ದಿಲೀಪ್, ಖಜಾಂಚಿ ತಿರುಪತಿ, ದೊಡ್ಡಬಳ್ಳಾಪುರ ತಾಲ್ಲೂಕು ಅಧ್ಯಕ್ಷ ಗಂಗಬೈರಪ್ಪ, ಉಪಾಧ್ಯಕ್ಷೆ ಸೌಮ್ಯ,
ಕರ ವಸೂಲಿಗಾರರ ಸಂಘದ ಅಧ್ಯಕ್ಷ ರಂಗಸ್ವಾಮಿ, ಕ್ಲರ್ಕ್ ಕಂ ಡೇಟಾ ಎಂಟ್ರಿ ಆಪರೇಟರ್ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್ ಹಾಗೂ ಪಧಾಧಿಕಾರಿಗಳು, ಸಿಬ್ಬಂದಿ ಹೋರಾಟದಲ್ಲಿ ಭಾಗಹಿಸಿದ್ದಾರೆ.

ರಾಜಕೀಯ

ಮೇ.8ರಂದು ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ನಾಳೆ ಪೂರ್ವಭಾವಿ ಸಭೆ

ಮೇ.8ರಂದು ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ನಾಳೆ ಪೂರ್ವಭಾವಿ ಸಭೆ

ಮೇ.8 ರಂದು ಜೆಡಿಎಸ್ (JDS) ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರು ದೊಡ್ಡಬಳ್ಳಾಪುರಕ್ಕೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ, ನಾಳೆ (ಏ.28) ರಂದು ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ ಎಂದು ಜೆಡಿಎಸ್ ದೊಡ್ಡಬಳ್ಳಾಪುರ

[ccc_my_favorite_select_button post_id="121433"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ಗ್ರಾಮದ ಲಾಡ್ಜ್ ಒಂದರ ಮೇಲೆ ಪೊಲೀಸರು ದಾಳಿ (Police Raid) ನಡೆಸಿದ್ದು, ವೇಶ್ಯಾವಾಟಿಕೆ (Prostitution) ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಬಂಧಿಸಿದ್ದಾರೆ. ದಾಳಿಯ ವೇಳೆ ಓರ್ವ ಮಹಿಳೆಯನ್ನು ರಕ್ಷಿಸಲಾಗಿದೆ.

[ccc_my_favorite_select_button post_id="121407"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಹೆಲ್ಮೆಟ್ ಕಡ್ಡಾಯ ಜಾರಿ ಮಾಡಿ, ಹಲವು ರೀತಿಯಲ್ಲಿ ಅರಿವು ಮೂಡಿಸಿದರು, ಬೈಕ್ ಸವಾರರು ಹೆಲ್ಮೆಟ್ ಧರಿಸದೆ ಬೇಜವಬ್ದಾರಿ ತೋರಿಸುತ್ತಿದ್ದಾರೆ. ಶನಿವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ (Accident) ಇಬ್ಬರು ಬ್ಯಾಂಕ್ ಉದ್ಯೋಗಿ ಯುವಕರು ಕೂಡ ಹೆಲ್ಮೆಟ್

[ccc_my_favorite_select_button post_id="121414"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]