ಬೆಂಗಳೂರು: ಕೊಡಗು, ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಮಂಗಳವಾರ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ (rain alert) ನೀಡಿದೆ.
ಬೆಂಗಳೂರು ನಗರ, ಗ್ರಾಮಾಂತರ ಪ್ರದೇಶಗಳಲ್ಲಿ ಮಂಗಳವಾರ ಮೋಡ ಕವಿದ ವಾತಾವರಣವಿರಲಿದ್ದು, ಗುಡುಗು ಸಹಿತ ಮಳೆಯಾಗುವ (rain alert) ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.
ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಹಾಗೂ ಮೈಸೂರು, ಚಾಮರಾಜನಗರ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಎಂದು ಘೋಷಿಸಲಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಬಹುತೇಕ ಕಡೆ ಹಾಗೂ ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಂಭವವಿದೆ.