ನವದೆಹಲಿ; ಪ್ರಕಟವಾಗಿದ್ದ 2022ನೇ ಸಾಲಿನ 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು (NATIONAL AWARDS) ಇಂದು ಪ್ರಶಸ್ತಿ ಪ್ರದಾನ ಮಾಡಲಾಗಿದೆ.
ಈ ಪೈಕಿ ಕನ್ನಡದ ಚಲನಚಿತ್ರಗಳು 6 ಪ್ರಶಸ್ತಿಗಳನ್ನು ಬಾಚಿಕೊಂಡಿವೆ. ಕನ್ನಡದ ಕೆಜಿಎಫ್ ಚಾಪ್ಟರ್ 2 ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿಗೆ ಭಾಜನವಾಗಿದೆ ಹಾಗೂ ಕಾಂತಾರ ಅತ್ಯುತ್ತಮ ಮನರಂಜನೆ ಪ್ರಶಸ್ತಿಗೆ ಪಾತ್ರವಾಗಿದೆ.
ಇಂದು ನವದೆಹಲಿಯ ವಿಜ್ಞಾನ ಭವನದಲ್ಲಿಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದೌಪದಿ ಮುರ್ಮು ಪ್ರಶಸ್ತಿ ಪ್ರದಾನ ಮಾಡಿದ್ದಾರೆ.
ಈ ಕಾರ್ಯಕ್ರಮಕ್ಕೆ ಆಗಮಿಸಿದ್ದ ನಟ, ನಿರ್ದೇಶಕ ರಿಷಭ್ ಶೆಟ್ಟಿ ಪ್ರಶಸ್ತಿ ಸ್ವೀಕರಿಸಿದರು.
#WATCH | 70th National Film Awards | Rishab Shetty awarded the Best Actor in Leading Role for his performance in the movie 'Kantara'
— ANI (@ANI) October 8, 2024
(Video source: DD News/YouTube) pic.twitter.com/YMStTzDyDz
ಇನ್ನು ಹೊಂಬಾಳೆ ಫಿಲ್ಡ್‌ನ ನಿರ್ಮಾಪಕ ವಿಜಯ್ ಕಿರಗಂದೂರ್ ಬದಲಿಗೆ ಅವರ ಪತ್ನಿ ಶೈಲಜಾ ವಿಜಯ್ ಹಾಜರಿದ್ದು ಪ್ರಶಸ್ತಿ ಸ್ವೀಕರಿಸಿದ್ದಾರೆ.
ಒಟ್ಟು ಕನ್ನಡ ಚಿತ್ರರಂಗದ 3 ಸಿನಿಮಾಗಳು ಬೇರೆ ಬೇರೆ ವಿಭಾಗದಲ್ಲಿ 6 ಪ್ರಶಸ್ತಿಗಳನ್ನ ತನ್ನದಾಗಿಸಿಕೊಂಡಿದೆ.