ನ.1 ರಂದು ಅದ್ದೂರಿ‌ ರಾಜ್ಯೋತ್ಸವ; ಕರಾಳ ದಿನಾಚರಣೆಗೆ ಅವಕಾಶವಿಲ್ಲ: ಡಿಸಿ

ಬೆಳಗಾವಿ; ಪ್ರತಿ ವರ್ಷದಂತೆ ಈ ಬಾರಿಯೂ ನ.1 ರಂದು ಕರ್ನಾಟಕ‌ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಗುವುದು; ಕರಾಳ ದಿನಾಚರಣೆಗೆ ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ತಿಳಿಸಿದರು.

ಬೆಳಗಾವಿ ಜಿಲ್ಲಾ‌ ಪಂಚಾಯತ ಸಭಾಂಗಣದಲ್ಲಿ ಜರುಗಿದ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ನ.1 ರಂದು ದೀಪಾವಳಿ ಹಬ್ಬದ ದಿನವೇ ಕರ್ನಾಟಕ ರಾಜ್ಯೋತ್ಸವವನ್ನು ಬೆಳಗಾವಿಯಲ್ಲಿ ಅತೀ ವಿಜೃಂಭಣೆಯಿಂದ ಆಚರಿಸಲಾಗುವದು. ರಾಜ್ಯೋತ್ಸವದ ಹಿನ್ನೆಲೆಯಲ್ಲಿ‌ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ನ.1 ರಂದು ದೀಪಾವಳಿ ಇರುವ ಹಿನ್ನಲೆಯಲ್ಲಿ‌ ಅದೇ ದಿನ ರಾಜ್ಯೋತ್ಸವ ಆಚರಣೆ ಕುರಿತು ವಿಸ್ತೃತವಾಗಿ ಚರ್ಚೆ ನಡೆಸಿದ ಬಳಿಕ ನ.1 ರಂದೇ ರಾಜ್ಯೋತ್ಸವ ಆಚರಿಸಲು ತೀರ್ಮಾನಿಸಲಾಯಿತು.

ರಾಜ್ಯೋತ್ಸವದ ಹಿನ್ನೆಲೆಯಲ್ಲಿ‌ ಕನ್ನಡ‌ ನಾಡು ನುಡಿಗಾಗಿ ಶ್ರಮಿಸಿದ ಕನ್ನಡ ಹೋರಾಟಗಾರರಿಗೆ ಸನ್ಮಾನ ಮಾಡಲಾಗುವುದು. ಅಲ್ಲದೇ ಈ ಬಾರಿ‌ ಕನ್ನಡ ಪರ ಹೋರಾಟಗಾರರು ಹಾಗೂ ಮಾಧ್ಯಮ ಪ್ರತಿನಿಧಿಗಳನ್ನು ಸನ್ಮಾನಿಸಲು ಪ್ರತ್ಯೇಕ ಸಮಿತಿಗಳನ್ನು ರಚಿಸಲಾಗುವುದು. ಈ ಬಾರಿ ರಾಜ್ಯೋತ್ಸವ ಮೆರವಣಿಗೆಗೆ ಆಗಮಿಸುವ ಮಹಿಳೆಯರಿಗಾಗಿ ಪ್ರತ್ಯೇಕ ಗ್ಯಾಲರಿ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.

ಬೆಳಗಾವಿ ಜಿಲ್ಲೆ ಕರ್ನಾಟಕದಲ್ಲಿಯೇ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹೋರಾಡಿದ ಮಹನೀಯರ ಭಾವಚಿತ್ರಗಳನ್ನು ಮೆರವಣಿಗೆ ಮಾರ್ಗದುದ್ದಕ್ಕೂ ಅಳವಡಿಸಬೇಕು ಎಂದು ಮೆಹಬೂಬ್ ಮಕಾನದಾರ ಅವರು ನೀಡಿದ ಸಲಹೆಗೆ ಸ್ಪಂದಿಸಿದ ಜಿಲ್ಲಾಧಿಕಾರಿಗಳು ಈ ಬಾರಿಯ ಮೆರವಣಿಗೆಯಲ್ಲಿ ಇದನ್ನು ಅನುಷ್ಠಾನಗೊಳಿಸಲಾಗುವುದು ಎಂದರು.

ರೂಪಕಗಳಿಗೆ ಪ್ರಶಸ್ತಿ ನೀಡುವುದರ ಜತೆಗೆ ರಾಣಿ ಚನ್ನಮ್ಮನ ಮೂರ್ತಿಗೆ ಆಕಾಶದಿಂದ ಪುಷ್ಪವೃಷ್ಟಿ‌ ಮಾಡಲು ಪ್ರಯತ್ನಿಸಲಾಗುವದು ಎಂದರು.

ಕರಾಳ ದಿನಾಚರಣೆಗೆ ವಿರೋಧ:

ಕರಾಳ ದಿನಾಚರಣೆಗೆ ಯಾವುದೇ ಕಾರಣಕ್ಕೂ ಅನುಮತಿ ನೀಡಬಾರದು ಎಂಬ ಕನ್ನಡ ಪರ ಸಂಘಟನೆಗಳ ಒಕ್ಕೊರಲಿನ ಮನವಿಗೆ‌ ಸ್ಪಂಧಿಸಿದ ಜಿಲ್ಲಾಧಿಕಾರಿಗಳು, ಈ ಬಾರಿ ಯಾವುದೇ ಕಾರಣಕ್ಕೂ ಕರಾಳ ದಿನಾಚರಣೆಗೆ ಅನುಮತಿ ನೀಡಲಾಗುವುದಿಲ್ಲ ಎಂದು ಸಭೆಗೆ ತಿಳಿಸಿದರು.

ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ರಾಜ್ಯಮಟ್ಟದ ಪ್ರಶಸ್ತಿಗಾಗಿ ಕನ್ನಡ ಪರ ಹೋರಾಟಗಾರರಾದ ಅಶೋಕ ಚಂದರಗಿ ಅವರ ಹೆಸರನ್ನು ಶಿಫಾರಸ್ಸು ಮಾಡಬೇಕು ಎಂಬ ಕನ್ನಡ ಪರ ಸಂಘಟನೆಗಳ ಒಕ್ಕೊರಲಿನ ಒತ್ತಾಯದಂತೆ ಅವರ ಹೆಸರನ್ನು ರಾಜ್ಯೋತ್ಸವ ಪ್ರಶಸ್ತಿಗಾಗಿ ಶಿಫಾರಸ್ಸು ಮಾಡಲಾಗುವುದು ಎಂದು ಸಭೆಗೆ ತಿಳಿಸಿದರು.

ಜಿಲ್ಲಾ ಕ್ರೀಡಾಂಗಣದಲ್ಲಿ ಜರುಗಲಿರುವ ವೇದಿಕೆ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ‌ ವೇದಿಕೆ‌ ಸಿದ್ಧತೆ, ಧ್ವಜಾರೋಹಣ, ಆಂತ್ರಣ ಪತ್ರಿಕೆ, ಪಥಸಂಚಲನ, ಸಾಧಕರಿಗೆ ಸನ್ಮಾನ, ಮೆರವಣಿಗೆ, ರೂಪಕ‌ ವಾಹನಗಳಿಗೆ ಅನುಮತಿ, ಸಾಂಸಕೃತಿಕ ಕಾರ್ಯಕ್ರಮಗಳ ಆಯೋಜನೆಗೆ ಸಂಬಂಧಿಸಿದಂತೆ ಸಭೆಯಲ್ಲಿ ಚರ್ಚಿಸಲಾಯಿತು.

ಕನ್ನಡ ಪರ ಹೋರಾಟಗಾರರಾದ ಶ್ರಿನಿವಾಸ ತಾಳೂಕರ ಅವರು ಮಾತನಾಡಿ, ಕರ್ನಾಟಕ ರಾಜ್ಯೋತ್ಸವದ ಸುವರ್ಣ ಸಂಭ್ರಮ ಆಚರಿಸಲಾಗುತ್ತಿದೆ ಈ ಹಿನ್ನಲೆಯಲ್ಲಿ ಹೆಚ್ಚಿನ ಕನ್ನಡ ಪರ ಹೋರಾಟಗಾರರಿಗೆ ಸನ್ಮಾನಿಸಲು ಸಲಹೆ ನೀಡಿದ ಅವರು ರಾಜ್ಯೊತ್ಸವದ ಮೆರವಣಿಗೆಯಲ್ಲಿ ವಿವಾದಾತ್ಮಕ ಧ್ವಜಗಳಿಗೆ ಅನುಮತಿ ನೀಡಬಾರದು ಎಂದರು.

ದೀಪಕ ಗುಡಗನಟ್ಟಿ ಮಾತನಾಡಿ, ಕಳೆದ ಬಾರಿಯಂತೆಯೇ ಈ ಬಾರಿಯು ಚನ್ನಮ್ಮ‌ ವೃತ್ತದ ಪುಷ್ಪಾಲಂಕಾರವನ್ನು ಮಾಡಬೇಕು. ರಾಜ್ಯೋತ್ಸವ ವೀಕ್ಷಣೆಗೆ ಬರುವ ಸಾರ್ವಜನಿಕರ ವಾಹನಗಳಿಗೆ ಸೂಕ್ತ ನಿಲುಗಡೆಗೆ ವ್ಯವಸ್ಥೆ, ರೂಪಕ‌ ವಾಹನಗಳಿಗೆ ಗೌರವ ಧನ ನೀಡಲು ಹಾಗೂ ರೂಪಕ‌ ವಾಹನಗಳ ಮೆರವಣಿಗೆಗೆ ಹೆಚ್ಚಿನ‌ ಸಮಯವಕಾಶ ನೀಡಲು ಮನವಿ ಮಾಡಿದರು.

ಮಹದೇವ ತಳವಾರ ಅವರು, ಸಾಧಕರ‌ ಸನ್ಮಾನದಲ್ಲಿ ಕೇವಲ‌ ಕನ್ನಡ ಪರ ಹೋರಾಟಗಾರರನ್ನು‌ ಮಾತ್ರ ಸನ್ಮಾನಿಸಬೇಕು. ಸನ್ಮಾನ ಸಂದರ್ಭದಲ್ಲಿ ಶಾಶ್ವತವಾಗಿ ಇರುವಂತಹ ಪ್ರಶಸ್ತಿ ಪತ್ರ ಹಾಗೂ ನೆನಪಿನ‌ ಕಾಣಿಕೆಗಳನ್ನು ನೀಡಲು‌ ಸಲಹೆ ನೀಡಿದರು.

ಮೆಹಬೂಬ ಮಕಾನದಾರ ಅವರು, “ಸನ್ಮಾನಕ್ಕೆ ಸಂಬಂಧಿಸಿದಂತೆ ಕನ್ನಡ ಪರ ಹೋರಾಟಗಾರರನ್ನು, ಸಾಧಕರನ್ನು ಗುರುತಿಸಲು ಪ್ರತ್ಯೇಕ ಸಮಿತಿಯನ್ನು ರಚಿಸಬೇಕು. ಈ ಸಮಿತಿ‌ ಪ್ರತಿವರ್ಷ ಪುನರ್ ರಚನೆಯಾಗಬೇಕು. ಕಳೆದ ಬಾರಿ ರಾಜ್ಯೋತ್ಸವಕ್ಕಿಂತ ಈ ಬಾರಿ ವಿಜೃಂಭಣೆಯಿಂದ ಆಚರಣೆಯಾಗಬೇಕು. ಮೆರವಣಿಗೆ ಸಂದರ್ಭದಲ್ಲಿ ಮಹಿಳೆಯರಿಗೆ ಪ್ರತ್ಯೇಕ ಗ್ಯಾಲರಿ ವ್ಯವಸ್ಥೆ ಮಾಡಬೇಕು. ಮೆರವಣಿಗೆ ಸಾಗುವ ದಾರಿಯಲ್ಲಿ ಕನ್ನಡ ನಾಡಿನ ಮಹನೀಯರ ಭಾವಚಿತ್ರಗಳನ್ನು ಪ್ರದರ್ಶಿಸಬೇಕು. ಅಲ್ಲದೇ ರಾಣಿ ಚನ್ನಮ್ಮನ ಮೂರ್ತಿಗೆ ಹೆಲಿಕ್ಯಾಪ್ಟರ್ ಮೂಲಕ‌ ಪುಷ್ಪ ವೃಷ್ಟಿ ಮಾಡಬೇಕು” ಎಂದು ಸಲಹೆ ನೀಡಿದರು.

ರಾಜೀವ ಟೋಪಣ್ಣವರ ಅವರು ಮಾತನಾಡಿ, ಈ ಬಾರಿ ರಾಜ್ಯೊತ್ಸವ ಮೆರವಣಿಗೆಯಲ್ಲಿ ಬೇರೆ ಬೇರೆ ಕಲಾವಿದರಿಗೆ ಅವಕಾಶ ಮಾಡಿಕೊಡಬೇಕು. ಮೈಸೂರು ದಸರಾ ಮಾದರಿ ರೀತಿ ಮೆರವಣಿಗೆ ಜರುಗಿಸಲು ಸಲಹೆ ನೀಡಿದರು.
ಸಂಘಟನೆಗಳ ಮುಖಂಡ ಮಲ್ಲೇಶ್ ಚೌಗಲೆ, ಮಹೇಶ್ ಶೀಗಿಹಳ್ಳಿ, ರಾಜೇಂದ್ರ ಸೊಂಟಕ್ಕಿ ಸೇರಿದಂತೆ ವಿವಿಧ ಪದಾಧಿಕಾರಿಗಳು ರಾಜ್ಯೋತ್ಸವ ಆಚರಣೆ ಕುರಿತು ಸಲಹೆಗಳನ್ನು ನೀಡಿದರು.

ಸಭೆಯಲ್ಲಿ ನಗರ ಪೋಲಿಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್, ಜಿಲ್ಲಾ‌ ಪೊಲಿಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ‌ ಗುಳೇದ, ಜಿಲ್ಲಾ‌ ಪಂಚಾಯತ ಸಿ.ಇ.ಓ ರಾಹುಲ ಶಿಂಧೆ
ಪ್ರಶಿಕ್ಷಣಾರ್ಥಿ ಆಯ್.ಎ.ಎಸ್. ಅಧಿಕಾರಿ ದಿನೇಶಕುಮಾರ್ ಮೀನಾ, ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪನಿರ್ದೆಶಕಿ ವಿದ್ಯಾವತಿ ಭಜಂತ್ರಿ, ಇಲಾಖೆಗಳ ಅಧಿಕಾರಿಗಳು, ವಿವಿಧ ಕನ್ನಡ ಪರ ಸಂಘಟನೆಗಳ ಪದಾಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ರಾಜಕೀಯ

ದೊಡ್ಡಬಳ್ಳಾಪುರ: ಹಾಡೋನಹಳ್ಳಿ MPCSಗೆ ಮುಂದುವರಿದ ಅವಿರೋಧ ಆಯ್ಕೆ..!

ದೊಡ್ಡಬಳ್ಳಾಪುರ: ಹಾಡೋನಹಳ್ಳಿ MPCSಗೆ ಮುಂದುವರಿದ ಅವಿರೋಧ ಆಯ್ಕೆ..!

ಹಾಡೋನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ (MPCS) ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನದ ಆಯ್ಕೆ ಪ್ರಕ್ರಿಯೆ ಅವಿರೋಧವಾಗಿ ನಡೆದಿದೆ.

[ccc_my_favorite_select_button post_id="119562"]
20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

ಫ್ರಾನ್ಸ್ ಮೂಲದ ಏರ್ ಬಸ್ ಮತ್ತು ಭಾರತದ ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ (ಟಿಎಎಸ್ಎಲ್) ಜತೆಗೂಡಿ ಅಭಿವೃದ್ಧಿಪಡಿಸಿರುವ ದೇಶದ ಪ್ರಪ್ರಥಮ, ಖಾಸಗಿ ವಲಯದ ಹೆಲಿಕಾಪ್ಟರ್ ಜೋಡಣೆ ಘಟಕದಲ್ಲಿ ಮುಂದಿನ 20 ವರ್ಷಗಳಲ್ಲಿ ಎಚ್125 ದರ್ಜೆಯ

[ccc_my_favorite_select_button post_id="119504"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಅಕ್ರಮ ಶ್ರೀಗಂಧ ಸಾಗಾಣಿಕೆ: ಇಬ್ಬರ ಬಂಧನ

ಅಕ್ರಮ ಶ್ರೀಗಂಧ ಸಾಗಾಣಿಕೆ: ಇಬ್ಬರ ಬಂಧನ

ಸಂಡೂರು ಉತ್ತರ ಮತ್ತು ದಕ್ಷಿಣ ವಲಯದ ಅರಣ್ಯ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಶ್ರೀಗಂಧ (Sandalwood) ಸಾಗಿಸುತ್ತಿದ್ದ ಇಬ್ಬರನ್ನು ಸೋಮವಾರ ಬಂಧಿಸಿದ್ದಾರೆ.

[ccc_my_favorite_select_button post_id="119542"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಖಾಸಗಿ ಕಾರ್ಖಾನೆಯ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ (Accident), ದ್ವಿಚಕ್ರ ವಾಹನ ಸವಾರ ಸಾವನಪ್ಪಿರುವ ಘಟನೆ ತಾಲೂಕಿನ ಗೊಲ್ಲಹಳ್ಳಿ ಕ್ರಾಸ್ ಬಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಸಮೀಪ ಇಂದು ಸಂಜೆ

[ccc_my_favorite_select_button post_id="119492"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!