ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಮಲ್ಲಿಗೆ ಆರ್ಟ್ಸ್ (mallige arts) ಮಾಲೀಕರಾದ ಎಸಿ ಲೋಕೇಶ್ ಅವರು ನಿಧನರಾಗಿದ್ದಾರೆ. ಅವರಿಗೆ 59 ವರ್ಷ ವಯಸ್ಸಾಗಿತ್ತು.
ಇಂದು (ಬುಧವಾರ) ಮಧ್ಯಾಹ್ನ ಮನೆಯಲ್ಲಿ ಮಲಗಿದ್ದ ವೇಳೆ ಹೃದಯಾಘಾತದಿಂದ ಲೋಕೇಶ್ ಅವರು ನಿಧನರಾಗಿದ್ದಾರೆ.
ಮೃತರು ಓರ್ವ ಪುತ್ರ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದು, ಅಂತ್ಯಕ್ರಿಯೆ ನಾಳೆ (ಗುರುವಾರ) ಬೆಳಗ್ಗೆ 11ಗಂಟೆಗೆ ಅರಳು ಮಲ್ಲಿಗೆ ಗ್ರಾಮದ ರುದ್ರ ಭೂಮಿಯಲ್ಲಿ ನಡೆಯಲಿದೆ ಎಂದು ಆಪ್ತ ಮೂಲಗಳು ತಿಳಿಸಿವೆ.