Dasara; ಮಹಿಳೆಯರ ಪ್ರತಿಭೆ ಅನಾವರಣಕ್ಕೆ ವೇದಿಕೆಯಾದ ಮಹಿಳಾ ದಸರಾ..!

ಮಡಿಕೇರಿ Dasara; ಸರ್ಕಾರ ಮಹಿಳೆಯರ ಸಬಲೀಕರಣಕ್ಕೆ ಗೃಹಲಕ್ಷ್ಮಿ, ಶಕ್ತಿ ಸೇರಿದಂತೆ ಹಲವು ಯೋಜನೆಗಳನ್ನು ಜಾರಿಗೊಳಿಸಿದ್ದು, ಇವುಗಳನ್ನು ಬಳಸಿಕೊಂಡು ಅಭಿವೃದ್ಧಿಯತ್ತ ಮುನ್ನಡೆಯಬೇಕು ಎಂದು ವಿಧಾನ ಪರಿಷತ್ ಮಾಜಿ ಸದಸ್ಯರಾದ ಶಾಂತೆಯಂಡ ವೀಣಾ ಅಚ್ಚಯ್ಯ ಅವರು ತಿಳಿಸಿದ್ದಾರೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಕಾರದಲ್ಲಿ ನಗರ ದಸರಾ ಸಮಿತಿ ವತಿಯಿಂದ ಗಾಂಧಿ ಮೈದಾನದಲ್ಲಿ ಮಂಗಳವಾರ ನಡೆದ ‘ಮಹಿಳಾ ದಸರಾ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಮಹಿಳೆಯರು ರಾಜಕೀಯ, ಆರ್ಥಿಕ, ವಾಣಿಜ್ಯ, ಆಡಳಿತ, ಬಾಹ್ಯಾಕಾಶ, ಕ್ರೀಡೆ, ಸಿನಿಮಾ, ಹೀಗೆ ವಿವಿಧ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ ಎಂದು ವೀಣಾ ಅಚ್ಚಯ್ಯ ಅವರು ಬಣ್ಣಿಸಿದರು.

ಪಟ್ಟಣ, ನಗರ ಮತ್ತು ಬೃಹತ್ ನಗರಗಳಲ್ಲಿ ಮಹಿಳೆಯರು ಮುಂಚೂಣಿಯಲ್ಲಿದ್ದು, ಗ್ರಾಮೀಣ ಪ್ರದೇಶದ ಮಹಿಳೆಯರಿಗೂ ಅವಕಾಶಗಳು ಒದಗಬೇಕು ಎಂದು ವೀಣಾ ಅಚ್ಚಯ್ಯ ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

ಮಹಿಳಾ ದಸರಾವು ಮಹಿಳೆಯರ ಪ್ರತಿಭೆ ಅನಾವರಣಕ್ಕೆ ಉತ್ತಮ ವೇದಿಕೆಯಾಗಿದೆ. ಆ ನಿಟ್ಟಿನಲ್ಲಿ ಅವಕಾಶಗಳನ್ನು ಸರಿಯಾಗಿ ಸದ್ಬಳಕೆ ಮಾಡಿಕೊಂಡು ಸಮಾಜದಲ್ಲಿ ಉತ್ತಮ ಸ್ಥಾನ ಪಡೆಯುವಂತಾಗಬೇಕು ಎಂದು ವಿಧಾನ ಪರಿಷತ್ ಮಾಜಿ ಸದಸ್ಯರು ಹೇಳಿದರು.

ಮಹಿಳೆಯರು ಸಾಮಾಜಿಕ ಹಾಗು ಸಾರ್ವಜನಿಕ ಕ್ಷೇತ್ರಗಳಲ್ಲಿ ಮತ್ತಷ್ಟು ತೊಡಗಿಸಿಕೊಂಡಲ್ಲಿ ಶ್ರೇಯೋಭಿವೃದ್ಧಿ ಮತ್ತಷ್ಟು ಹೆಚ್ಚಲಿದೆ. ರಾಷ್ಟ್ರದ ಅಭಿವೃದ್ಧಿಗೆ ಮಹಿಳೆಯರ ಪಾತ್ರ ಹೆಚ್ಚಿನದ್ದಾಗಿದೆ ಎಂದು ವೀಣಾ ಅಚ್ಚಯ್ಯ ಅವರು ನುಡಿದರು.
ಕರ್ನಾಟಕ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಮಾಜಿ ಅಧ್ಯಕ್ಷರಾದ ಕೆ.ಪಿ.ಚಂದ್ರಕಲಾ ಅವರು ಮಾತನಾಡಿ ಮಹಿಳೆಯರಿಗೆ ರಾಜಕೀಯ ಕ್ಷೇತ್ರದಲ್ಲಿ ಶೇ.50ರಷ್ಟು ಮೀಸಲು ಶೀಘ್ರ ಜಾರಿಯಾಗಬೇಕು ಎಂದು ಅವರು ಒತ್ತಾಯಿಸಿದರು.

ಮಹಿಳಾ ಮತ್ತು ಪುರುಷ ಸಮಾನವಾಗಿ ಬದುಕಿದಾಗ ಸಮಾಜ ಅಭಿವೃದ್ಧಿ ಸಾಧ್ಯ ಎಂಬುದನ್ನು ಮರೆಯುವಂತಿಲ್ಲ. ಆದ್ದರಿಂದ ಪ್ರತಿಯೊಬ್ಬರೂ ಗಂಡು-ಹೆಣ್ಣು ಸಮಾನರು ಎಂಬುದನ್ನು ಅರಿತುಕೊಳ್ಳಬೇಕು ಎಂದರು.
ಈ ಹಿಂದೆ ಸ್ತ್ರೀಶಕ್ತಿ ಸಂಘಗಳನ್ನು ಸ್ಥಾಪಿಸುವ ಮೂಲಕ ಸರ್ಕಾರ ಮಹಿಳೆಯರ ಸಬಲೀಕರಣಕ್ಕೆ ಶ್ರಮಿಸಿತು ಎಂಬುದನ್ನು ಮರೆಯಬಾರದು ಎಂದು ಅವರು ಇದೇ ಸಂದರ್ಭದಲ್ಲಿ ಸ್ಮರಿಸಿದರು.

ಮಹಿಳೆಯರು ಸಹಕಾರ ಸಂಘ ಸಂಸ್ಥೆಗಳ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಆರ್ಥಿಕ, ಕುಟುಂಬ, ಸಾಮಾಜಿಕ, ಜೀವನ ನಿರ್ವಹಣೆ ಅರಿತು ಕೊಳ್ಳಬೇಕು. ಹೀಗಾದಾಗ ರಾಷ್ಟ್ರದ ಅಭಿವೃದ್ಧಿ ಸಾಧ್ಯ. ಆ ನಿಟ್ಟಿನಲ್ಲಿ ಪ್ರಯತ್ನಗಳು ನಡೆಯಬೇಕು ಎಂದು ಕೆ.ಪಿ.ಚಂದ್ರಕಲಾ ಅವರು ಪ್ರತಿಪಾದಿಸಿದರು.

ಇಂದಿಗೂ ಸಹ ಗ್ರಾಮೀಣ ಪ್ರದೇಶದಲ್ಲಿ ಮಹಿಳೆಯರು ಸಂಕುಚಿತ ಮನೋಭಾವ ಹೊಂದಿದ್ದು, ಇದನ್ನು ಬಿಡಬೇಕು. ಎಲ್ಲರಂತೆ ಉತ್ತಮ ಬದುಕು ಕಟ್ಟಿಕೊಳ್ಳಲು ಪ್ರಯತ್ನಿಸಬೇಕು ಎಂದು ಕೆ.ಪಿ.ಚಂದ್ರಕಲಾ ಅವರು ಸಲಹೆ ಮಾಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರು ಮಾತನಾಡಿ ದಸರಾ (Dasara) ಸಂದರ್ಭದಲ್ಲಿಯೂ ದುರ್ಗೆ, ಚಾಮುಂಡಿ, ಹೆಸರಿನಲ್ಲಿ ದಸರಾವನ್ನು ಆಚರಿಸುವುದು ವಿಶೇಷವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

ಮಹಿಳೆಯರು ಎಲ್ಲಾ ರಂಗಗಳಲ್ಲೂ ಪ್ರಮುಖ ಪಾತ್ರ ವಹಿಸುತ್ತಾರೆ. ಸ್ತ್ರೀ ಎಂದರೆ ಆತ್ಮಶಕ್ತಿ, ಆದಿಶಕ್ತಿ ಎಂಬುದನ್ನು ಮರೆಯುವಂತಿಲ್ಲ ಎಂದು ಆರ್.ಐಶ್ವರ್ಯ ಅವರು ತಿಳಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ನಟರಾಜು ಅವರು ಮಾತನಾಡಿ ಸರ್ಕಾರ ಮಹಿಳೆಯರು ಮತ್ತು ಮಕ್ಕಳಿಗಾಗಿ ಹಲವು ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ. ಗ್ಯಾರಂಟಿ ಯೋಜನೆಯಲ್ಲಿ ಕೊಡಗು ಜಿಲ್ಲೆಯಲ್ಲಿ ಪ್ರಮುಖವಾಗಿ ಗೃಹಲಕ್ಷ್ಮಿ ಯೋಜನೆಯಡಿ ಪ್ರತೀ ತಿಂಗಳು 23 ಕೋಟಿ ರೂ. ಪಾವತಿಯಾಗುತ್ತಿದೆ. ಆರಂಭದಿಂದ ಇದುವರೆಗೆ 241 ಕೋಟಿ ರೂ. ವೆಚ್ಚ ಮಾಡಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ಮಾತೃ ವಂದನಾ, ಮಾತೃ ಪೂರ್ಣ, ಕ್ಷೀರಭಾಗ್ಯ ಹೀಗೆ ಹಲವು ಯೋಜನೆಗಳನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ರೂಪಿಸಲಾಗಿದೆ ಎಂದು ನಟರಾಜು ಅವರು ವಿವರಿಸಿದರು.

ಮಹಿಳಾ ದಸರಾಗೆ (Dasara) ದಿವ್ಯ ಮಂತರ್ ಗೌಡ ಅವರು ಚಾಲನೆ ನೀಡಿದರು.

ನಗರಸಭಾ ಸದಸ್ಯರಾದ ಅನಿತಾ ಪೂವಯ್ಯ, ಸವಿತಾ ರಾಕೇಶ್, ಚಿತ್ರಾವತಿ, ಕಲಾವತಿ, ಪ್ರಮುಖರಾದ ಜುಲೈಕಾಭಿ, ಲೀಲಾ ಶೇಷಮ್ಮ, ಸೂರಯ್ಯಾ ಅಬ್ರಾರ್, ಉಷಾ, ಎಚ್.ಎನ್.ಶಾರದ, ಸವಿತಾ, ಸೀತಾಲಕ್ಷ್ಮಿ, ರಜನಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಿಬ್ಬಂದಿಗಳು, ಅಂಗನವಾಡಿ, ಆಶಾ ಕಾರ್ಯಕರ್ತರು ಇತರರು ಇದ್ದರು.


ಅನಿಲ್ ಎಚ್.ಟಿ. ಸ್ವಾಗತಿಸಿದರು. ಅನಿತಾ ನಿರೂಪಿಸಿದರು. ಮಹಿಳಾ ದಸರಾ ಸಂಚಾಲಕರಾದ ಕುಡೆಕಲ್ ಸವಿತಾ ಸಂತೋಷ್ ಅವರು ವಂದಿಸಿದರು.

ರಾಜಕೀಯ

ದೊಡ್ಡಬಳ್ಳಾಪುರ TAPMCS ಚುನಾವಣೆ; ಕಣದಲ್ಲಿ ಉಳಿದವರು ಎಷ್ಟು ಗೊತ್ತೆ..!?

ದೊಡ್ಡಬಳ್ಳಾಪುರ TAPMCS ಚುನಾವಣೆ; ಕಣದಲ್ಲಿ ಉಳಿದವರು ಎಷ್ಟು ಗೊತ್ತೆ..!?

ದೊಡ್ಡಬಳ್ಳಾಪುರ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ (TAPMCS) ಚುನಾವಣೆಗೆ ಸಲ್ಲಿಕೆಯಾಗಿದ್ದ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ಕೊನೆಯ ದಿನವಾದ ಸೋಮವಾರ ಅಂತಿಮ ಕಣದಲ್ಲಿ ‘ಎ’ ತರಗತಿಯಿಂದ 9, ‘ಬಿ’ ತರಗತಿಯಿಂದ 19 ಜನ ಉಳಿದಿದ್ದಾರೆ.

[ccc_my_favorite_select_button post_id="115412"]
ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಆಯೋಜಿಸಿದ್ದ ಪೊಲೀಸ್ ಸಿಬ್ಬಂದಿಯ ನೂತನ ಪೀಕ್ ಕ್ಯಾಚ್ ವಿತರಣೆ: Cmsiddaramaiah, D.K.Shivakumar

[ccc_my_favorite_select_button post_id="115427"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರರಿಬ್ಬರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರರಿಬ್ಬರ ದುರ್ಮರಣ

ಇಂದು ಬೆಳ್ಳಂಬೆಳಗ್ಗೆ ಸಂಭವಿಸಿದ ದ್ವಿಚಕ್ರ ವಾಹನ ಅಪಘಾತದಲ್ಲಿ (Accident) ಗಂಭೀರವಾಗಿ ಗಾಯಗೊಂಡ ಇಬ್ಬರು ಸವಾರರು ಸಾವನ್ನಪ್ಪಿರುವ ತಾಲೂಕಿನ ರಾಮಯ್ಯನಪಾಳ್ಯ ಬಳಿ ನಡೆದಿದೆ.

[ccc_my_favorite_select_button post_id="115419"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!