ಚನ್ನಪಟ್ಟಣ ಉಪ ಚುನಾವಣೆ: ನಿಖಿಲ್ ಸ್ಪರ್ಧೆಗೆ ಒತ್ತಡ ಇದೆ – ಹೆಚ್.ಡಿ.ಕುಮಾರಸ್ವಾಮಿ

ರಾಮನಗರ: ಮುಂಬರುವ ಚನ್ನಪಟ್ಟಣ ವಿಧಾನಸಭೆ ಉಪ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಸಚಿವರ ಹೆಚ್.ಡಿ.ಕುಮಾರಸ್ವಾಮಿ ಅವರು ಬಿಡದಿ ಸಮೀಪದ ಕೇತಿಗಾನಹಳ್ಳಿಯ ತಮ್ಮ ತೋಟದಲ್ಲಿ ಕ್ಷೇತ್ರದ ಕಾರ್ಯಕರ್ತರು, ಮುಖಂಡರ ಸಭೆ ಕರೆದು ಸಮಾಲೋಚನೆ ನಡೆಸಿದರು.

ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು, ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ, ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಜಯಮುತ್ತು ಸೇರಿದಂತೆ ಚನ್ನಪಟ್ಟಣ ಕ್ಷೇತ್ರದ ಎಲ್ಲಾ ಪ್ರಮುಖ ಮುಖಂಡರು ಈ ಸಭೆಯಲ್ಲಿ ಪಾಲ್ಗೊಂಡಿದ್ದರು.

ಈ ಸಂದರ್ಭದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು; ಈಗಾಗಲೇ 5 ಜಿಲ್ಲಾ ಪಂಚಾಯತಿ, ಕ್ಷೇತ್ರ ಹಾಗೂ ಪಟ್ಟಣ ಭಾಗದಲ್ಲಿ ಕಾರ್ಯಕರ್ತರ ಸಭೆ ನಡೆಸಿದ್ದೇವೆ. ಈ ಸಭೆಯಲ್ಲಿ ಹಳ್ಳಿ, ಹೋಬಳಿ, ಪಂಚಾಯಿತಿ ಮಟ್ಟದ ಮುಖಂಡರು ಬಂದಿದ್ದರು.

ಚುನಾವಣೆಗೆ ಯಾವ ರೀತಿ ತಯಾರಿಅಡಿಕೊಳ್ಳಬೇಕು. ಅಭ್ಯರ್ಥಿ ಯಾರಾಗಬೇಕು ಎನ್ನುವುವ ಬಗ್ಗೆ ಸಮಾಲೋಚನೆ ನಡೆಸಿದ್ದೇನೆ. ಜೆಡಿಎಸ್- ಬಿಜೆಪಿ ಎರಡು ಪಕ್ಷಗಳು ಹೊಂದಾಣಿಕೆಯಿಂದ ಕೆಲಸ ಮಾಡಬೇಕು. ಮಿತ್ರಪಕ್ಷ ಬಿಜೆಪಿ ನಾಯಕರು, ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಚುನಾವಣೆ ಕೆಲಸ ಮಾಡಬೇಕು ಎಂದು ಮುಖಂಡರಿಗೆ ನಿರ್ದೇಶನ ನೀಡಿದ್ದೇನೆ ಎಂದು ತಿಳಿಸಿದರು.

ನವೆಂಬರ್ ಒಳಗೆ ಮಹಾರಾಷ್ಟ್ರ ಹಾಗೂ ಜಾರ್ಖಂಡ್ ರಾಜ್ಯಗಳ ವಿಧಾನಸಭೆ ಚುನಾವಣೆ ನಡೆಯಬೇಕಿದೆ. ಅದೇ ಸಮಯದಲ್ಲಿ ಚನ್ನಪಟ್ಟಣ ಉಪ ಚುನಾವಣೆ ನಡೆಯಬಹುದು. ಇನ್ನು ಒಂದು ವಾರದಲ್ಲಿ ಚುನಾವಣೆ ಘೋಷಣೆಯಾಗಬಹುದು. ಅಂತಿಮವಾಗಿ ದೆಹಲಿ ಮಟ್ಟದಲ್ಲಿ ಬಿಜೆಪಿಯ ಹೈಕಮಾಂಡ್ ಹಾಗೂ ನಾವು ಕೂತು ಚರ್ಚೆ ಮಾಡುತ್ತೇವೆ ಎಂದು ಕೇಂದ್ರ ಸಚಿವರು ಪ್ರಶ್ನೆಯೊಂದಕ್ಕೆ ಉತ್ತರ ಕೊಟ್ಟರು.

ಚನ್ನಪಟ್ಟಣ ಜೆಡಿಎಸ್ ಕ್ಷೇತ್ರ. ಕಳೆದ ಎರಡು ಬಾರಿ ಜೆಡಿಎಸ್ ನಿಂದ ಗೆದ್ದಿದ್ದೇವೆ. ಈ ಹಿಂದಿನಿಂದಲೂ ಇದು ಜೆಡಿಎಸ್ ಭದ್ರಕೋಟೆ. ನಮ್ಮಲ್ಲಿನ ಸಂಘಟನೆಯಲ್ಲಿ ಕೆಲವೊಂದು ಲೋಪದೋಷಗಳಿಂದ ಹಿಂದೆ ಬಿದ್ದಿದ್ದೆವು.


2013ರಲ್ಲೂ ನಮಗೆ ಹೆಚ್ಚಿನ ಮತಗಳು ಬಂದಿದ್ದವು. ಚನ್ನಪಟ್ಟಣದಲ್ಲಿ ಕಾರ್ಯಕರ್ತರೇ ನನ್ನ ಚುನಾವಣೆ ನಡೆಸಿದ್ದಾರೆ. ನಮ್ಮ ಸಂಘಟನೆ ದೃಷ್ಟಿಯಿಂದ ಕೂತು ಚರ್ಚೆ ಮಾಡಿದ್ದೇವೆ. ಯಾವುದೇ ಸಮಸ್ಯೆ ಆಗದ ರೀತಿ ಚುನಾವಣೆ ನಡೆಸುತ್ತೇವೆ ಎಂದು ಸಚಿವರು ಹೇಳಿದರು.

ನಿಖಿಲ್ ಅಭ್ಯರ್ಥಿ ಆಗಬೇಕು ಎಂಬ ಒತ್ತಡ ಇದೆ

ನಿಖಿಲ್ ಕುಮಾರಸ್ವಾಮಿ ಅವರು ಉಪ ಚುನಾವಣೆಯ ಅಭ್ಯರ್ಥಿ ಆಗಬೇಕು ಎಂಬ ಬಗ್ಗೆ ಕಾರ್ಯಕರ್ತರಿಂದ ಒತ್ತಡ ಇದೆಯಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಒತ್ತಡ, ಒತ್ತಾಯ ಇರುವುದು ನಿಜ. ನಿಖಿಲ್ ಕುಮಾರಸ್ವಾಮಿ ನಿಲ್ಲಬೇಕು ಅಂತ 95% ನಾಯಕರು, ಮುಖಂಡರ ಅಭಿಪ್ರಾಯವಿದೆ. ಆದರೆ‌, ನಾವು ಈಗ ಇರುವ ಸನ್ನಿವೇಶ ನೋದಿಕೊಂಡು ನಿರ್ಧಾರ ಕೈಗೊಳ್ಳಬೇಕು. ಏನೇನು ಬೆಳವಣಿಗೆಗಳು ಇವೆ ಅಂತ ನೋಡಬೇಕು.

ನಿಖಿಲ್ ಮಂಡ್ಯದಲ್ಲಿ ‌ನಿಲ್ಲಿಸಿದಾಗ ಎಲ್ಲಾ ‌ಪಕ್ಷಗಳು ಒಂದಾಗಿ ಸೋಲಿಸಿದರು. ಸಂಘಟಿತ ಷಡ್ಯಂತ್ರ ಮಾಡಿ ಸೋಲಿಸಲಾಯಿತು. ನಾನು ಈಗ ಎನ್ ಡಿಎ ಭಾಗ. ಎನ್ ಡಿಎ ಅಭ್ಯರ್ಥಿ ಗೆಲ್ಲಬೇಕು. ಯಾರೇ ನಿಂತು ಗೆದ್ದರೂ ಅದು ಎನ್ ಡಿಎ ಗೆಲುವು, ಆ ಮೂಲಕ ಕಾಂಗ್ರೆಸ್ ವಿರೋಧಿ ಹೋರಾಟಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಹೋರಾಟಕ್ಕೆ ನಾವೂ ಕೈಜೋಡಿಸಿದ ಹಾಗಾಗುತ್ತದೆ ಎಂದು ಅವರು ಹೇಳಿದರು.

ಈ ಹಿನ್ನಲೆಯಲ್ಲಿ ಬಿಜೆಪಿ ಹೈಕಮಾಂಡ್, ರಾಜ್ಯ ನಾಯಕರು, ಕಾರ್ಯಕರ್ತರು ಎಲ್ಲರು ಸೇರಿ ಎರಡು ಪಕ್ಷದ ಮುಖಂಡರು, ಕಾರ್ಯಕರ್ತರ ಅಭಿಪ್ರಾಯ ಪಡೆದು ಅಭ್ಯರ್ಥಿ ಅಂತಿಮ ಮಾಡುತ್ತೇವೆ ಎಂದು ಅವರು ಹೇಳಿದರು.

ಇನ್ನೊಂದು ವಾರದಲ್ಲಿ ಟಿಕೆಟ್ ಫೈನಲ್ ಆಗುತ್ತದೆ. ಚುನಾವಣೆ ದಿನಾಂಕ 4-5 ದಿನಗಳಲ್ಲಿ ಯಾವಾಗ ಬೇಕಾದರೂ ಘೋಷಣೆ ಆಗಬಹುದು. ಕೂಡಲೇ ಬಿಜೆಪಿ ಹೈಕಮಾಂಡ್, ರಾಜ್ಯ ನಾಯಕರ ಜತೆ ಚರ್ಚೆ ಮಾಡಿ ಅಭ್ಯರ್ಥಿ ಫೈನಲ್ ಮಾಡುತ್ತೇವೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಪದೇ ಪದೆ ಭೇಟಿಯಿಂದ ಫಲ ಸಿಗಲ್ಲ

ಚನ್ನಪಟ್ಟಣಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಪದೇ ಪದೆ ಭೇಟಿ ನೀಡುವ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಸಚಿವರು; ಅವರು ಎಷ್ಟು ಸಲ ಭೇಟಿ ಕೊಟ್ಟರೂ ಉಪಯೋಗ ಇಲ್ಲ. ಅವರು ಈ ಕ್ಷೇತ್ರಕ್ಕೆ ಕೊಟ್ಟ ಕಾಣಿಕೆ ಏನೆಂದು ಜನರಿಗೆ ಗೊತ್ತಿದೆ. ಚುನಾವಣೆ ಬಂದಿದೆ, ಅದಕ್ಕೆ ಪದೇ ಪದೆ ಬರುತ್ತಿದ್ದಾರೆ ಅಷ್ಟೇ. ಚುನಾವಣೆ ಮುಗಿದ ಮೇಲೆ ಈ ಕಡೆ ತಲೆ ಹಾಕುವುದಿಲ್ಲ ಅವರು ಎಂದರು.

ರಾಜಕೀಯ

ರಾಜ್ಯ ಬಿಜೆಪಿಯಲ್ಲಿ ಯಾವುದೇ ಭಿನ್ನಮತಿಯ ಚಟುವಟಿಕೆ ಇಲ್ಲ: ಬಸವರಾಜ ಬೊಮ್ಮಾಯಿ

ರಾಜ್ಯ ಬಿಜೆಪಿಯಲ್ಲಿ ಯಾವುದೇ ಭಿನ್ನಮತಿಯ ಚಟುವಟಿಕೆ ಇಲ್ಲ: ಬಸವರಾಜ ಬೊಮ್ಮಾಯಿ

ರಾಜ್ಯ ಬಿಜೆಪಿಯಲ್ಲಿ ಭಿನ್ನಮತವಿದೆಯಾ ಎಂದು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ರಾಜ್ಯ ಬಿಜೆಪಿಯಲ್ಲಿ ಯಾವುದೇ ಭಿನ್ನಮತಿಯ ಚಟುವಟಿಕೆ ಇಲ್ಲ: Basavaraj Bommai

[ccc_my_favorite_select_button post_id="111273"]
ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿ: ಬಿ.ವೈ.ವಿಜಯೇಂದ್ರ

ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿ: ಬಿ.ವೈ.ವಿಜಯೇಂದ್ರ

ಸಿದ್ದರಾಮಯ್ಯನವರು ಮತ್ತು ಕಾಂಗ್ರೆಸ್ ಪಕ್ಷದ ವರಿಷ್ಠರನ್ನು ಪ್ರಶ್ನಿಸಲು ಬಯಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ (B.Y. Vijayendra) ಅವರು ತಿಳಿಸಿದ್ದಾರೆ.

[ccc_my_favorite_select_button post_id="111198"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಮಲಗಿದ್ದ ವೇಳೆ ಮನೆಯಲ್ಲಿ ಬೆಂಕಿ.. ವ್ಯಕ್ತಿ ಸಾವು.!

ದೊಡ್ಡಬಳ್ಳಾಪುರ: ಮಲಗಿದ್ದ ವೇಳೆ ಮನೆಯಲ್ಲಿ ಬೆಂಕಿ.. ವ್ಯಕ್ತಿ ಸಾವು.!

ಆಕಸ್ಮಿಕವಾಗಿ ತಗುಲಿದ ಬೆಂಕಿಯ (Fire) ಕೆನ್ನಾಲಿಗೆಗೆ ಮನೆಯಲ್ಲಿ ಮಲಗಿದ್ದ ವೇಳೆ ವ್ಯಕ್ತಿಯೋರ್ವ ಸುಟ್ಟು ಸಾವನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ

[ccc_my_favorite_select_button post_id="111353"]
Accident; ರಾಷ್ಟ್ರೀಯ ಹೆದ್ದಾರಿಯಲ್ಲಿ ಮಗುಚಿ ಬಿದ್ದ ಲಾರಿ.. ಮಾವಿನ ಕಾಯಿಗಾಗಿ ಮುಗಿಬಿದ್ದ ಜನ

Accident; ರಾಷ್ಟ್ರೀಯ ಹೆದ್ದಾರಿಯಲ್ಲಿ ಮಗುಚಿ ಬಿದ್ದ ಲಾರಿ.. ಮಾವಿನ ಕಾಯಿಗಾಗಿ ಮುಗಿಬಿದ್ದ ಜನ

ಮಾವಿನ ಕಾಯಿ ತುಂಬಿಕೊಂಡು ಸಾಗುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪೊ ಮಗುಚಿ ಬಿದ್ದಿರುವ ಘಟನೆ (Accident)

[ccc_my_favorite_select_button post_id="111232"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!