ಒಳ ಮೀಸಲಾತಿ ಜಾರಿಗೆ ಮೀನಮೇಷ ಎಣಿಸುತ್ತಿರುವ ಕಾಂಗ್ರೆಸ್: ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ

ಬೆಂಗಳೂರು; ಒಳ ಮೀಸಲಾತಿಗೆ ಪ್ರಧಾನಿ ನರೇಂದ್ರ ಮೋದಿಯವರ ಸಹಮತವಿದೆ. ಹಿಂದೆ ಬಿಜೆಪಿ ಸರ್ಕಾರ ಕೂಡ ಈ ಕುರಿತು ಪ್ರಯತ್ನ ಮಾಡಿತ್ತು. ಆದರೆ ಕಾಂಗ್ರೆಸ್ ಸರ್ಕಾರ ಮಾತ್ರ ಒಳ ಮೀಸಲಾತಿ ಜಾರಿಗೆ ಮೀನಮೇಷ ಎಣಿಸುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರು, ಒಳ ಮೀಸಲಾತಿ ಬಗ್ಗೆ ದೊಡ್ಡದಾಗಿ ಮಾತಾಡುತ್ತಾರೆ. ಜಾತಿ ಗಣತಿಯ ಬಗ್ಗೆ ಶಂಖ ಊದುತ್ತಿರುತ್ತಾರೆ‌. ಒಳ ಮೀಸಲಾತಿಯ ಅಧಿಕಾರವನ್ನು ರಾಜ್ಯ ಸರ್ಕಾರಗಳಿಗೆ ನೀಡಿರುವುದನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ.

ಹಿಂದಿನ ನಮ್ಮ ಬಿಜೆಪಿ ಸರ್ಕಾರ ಒಳ ಮೀಸಲಾತಿಯನ್ನು ಜಾರಿಗೆ ತಂದಿತ್ತು. ಪ್ರಧಾನಿ ನರೇಂದ್ರ ಮೋದಿ ತೆಲಂಗಾಣಕ್ಕೆ ಬಂದಾಗ ಒಳ ಮೀಸಲಾತಿಗೆ ಅನುಮೋದನೆ ನೀಡಿದ್ದರು. ಆದರೂ ಕಾಂಗ್ರೆಸ್ ಮಾತ್ರ ಇನ್ನೂ ಮೀನಮೇಷ ಎಣಿಸುತ್ತಿದೆ ಎಂದು ದೂರಿದರು.

ರಾಜ್ಯದಲ್ಲಿ ಈಗ ಎಸ್ಐಟಿಯೇ ಕಂಡುಬರುತ್ತಿದೆ. ಒಳ ಮೀಸಲಾತಿ ಮತ್ತು ಜಾತಿ ಗಣತಿ ವಿಚಾರದಲ್ಲೂ ಕಾಂಗ್ರೆಸ್ ಸರ್ಕಾರ ಎಸ್ಐಟಿ ರಚಿಸಿದರೆ ಅಚ್ಚರಿ ಇಲ್ಲ. ಇಲ್ಲಿ ಒಬ್ಬೊಬ್ಬರಿಗೆ ಒಂದೊಂದು ಕಾನೂನು ಅನ್ವಯವಾಗುತ್ತಿದ್ದು, ಎಸ್ಐಟಿಯ ಮೇಲೆ ಅನುಮಾನ ಹೆಚ್ಚಾಗಿ ಅದನ್ನೇ ತನಿಖೆ ಮಾಡುವ ಸ್ಥಿತಿ ಬಂದಿದೆ.

ಎಸ್ಐಟಿ ಪ್ರಕಾರ, ಶಾಸಕ ಮುನಿರತ್ನ ಅವರಿಗೆ ಒಂದು ಕಾನೂನು, ವಿನಯ್ ಕುಲಕರ್ಣಿ ಅವರಿಗೆ ಒಂದು ಕಾನೂನು ಎಂಬಂತಾಗಿದೆ. ಎಸ್ಐಟಿಗಳ ನಿಜಬಣ್ಣ ಬಯಲು ಮಾಡಲು ಡಬಲ್ ಎಸ್ಐಟಿ ಎಂಬ ಘಟಕ ಸ್ಥಾಪಿಸಬೇಕಿದೆ ಎಂದು ವ್ಯಂಗ್ಯವಾಡಿದರು.

ಕಾಂಗ್ರೆಸ್ ನ್ಯಾಯಾಲಯದ ಸರ್ಟಿಫಿಕೇಟ್ ಬೇಡ

ಮುಡಾ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕಾಂಗ್ರೆಸ್ ನಾಯಕರು ಚೆನ್ನಾಗಿ ಹಣ ನುಂಗಿದ್ದಾರೆ. ಇದರ ವಿರುದ್ಧ ಬಿಜೆಪಿ ಸಮರ್ಥವಾಗಿ ಪ್ರತಿಭಟನೆ ಮಾಡಿದೆ. ಬಿ.ಎಸ್.ಯಡಿಯೂರಪ್ಪನವರ ಪ್ರಕರಣಕ್ಕೆ ನ್ಯಾಯಾಲಯ ತಡೆಯಾಜ್ಞೆ ನೀಡಿದೆ.‌ ಆದರೆ ಮುಡಾ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ತನಿಖೆಗೆ ಯಾವುದೇ ತಡೆ ಇಲ್ಲ. ಈ ದೇಶದಲ್ಲಿ ನ್ಯಾಯಾಂಗವೇ ಉನ್ನತವಾದುದು. ಕಾಂಗ್ರೆಸ್ ನ್ಯಾಯಾಲಯದ ಸರ್ಟಿಫಿಕೇಟ್ ಬಿಜೆಪಿಗೆ ಬೇಕಿಲ್ಲ ಎಂದರು.

ಸಂವಿಧಾನದ ಪ್ರಕಾರ ಸ್ಥಾಪನೆಯಾದ ನ್ಯಾಯಾಲಯದಲ್ಲಿ ಬಿಜೆಪಿಗೆ ಕ್ಲೀನ್ ಚಿಟ್ ದೊರೆಯುತ್ತದೆ. ಆದರೆ ಕಾಂಗ್ರೆಸ್ ತನ್ನನ್ನು ತಾನೇ ನ್ಯಾಯಾಲಯ ಎಂದುಕೊಂಡಿದ್ದು, ಅಂತಹ ವ್ಯವಸ್ಥೆಯ ಅಗತ್ಯ ಯಾರಿಗೂ ಇಲ್ಲ. ದೇಶವನ್ನು ಸುಮಾರು ಅರವತ್ತು ವರ್ಷಗಳ ಕಾಲ ಕಾಂಗ್ರೆಸ್ ಲೂಟಿ ಮಾಡಿದ್ದು, ಅವರಿಗೆ ಯಾವುದೇ ನೈತಿಕತೆ ಇಲ್ಲ. ಅವರ ಕ್ಲೀನ್ ಚಿಟ್ ಯಾರಿಗೂ ಬೇಕಿಲ್ಲ ಎಂದರು.

ರಾಜಕೀಯ

ಸರಣಿ ಹೃದಯಾಘಾತ: ಕೋವಿಡ್ ಲಸಿಕೆ ಬಿಜೆಪಿ ಲಸಿಕೆ ಅಲ್ಲ – ಆರ್.ಅಶೋಕ ಕಿಡಿ

ಸರಣಿ ಹೃದಯಾಘಾತ: ಕೋವಿಡ್ ಲಸಿಕೆ ಬಿಜೆಪಿ ಲಸಿಕೆ ಅಲ್ಲ – ಆರ್.ಅಶೋಕ ಕಿಡಿ

ಕೋವಿಡ್ ಲಸಿಕೆ ಬಿಜೆಪಿ ಲಸಿಕೆ ಅಲ್ಲ, ಇದು ಕೋಟ್ಯಂತರ ಭಾರತೀಯರನ್ನು ರಕ್ಷಿಸಿದ ಲಸಿಕೆ. ಆರ್.ಅಶೋಕ (R.AShoka)

[ccc_my_favorite_select_button post_id="110380"]
88ನೇ ಕನ್ನಡ ಸಾಹಿತ್ಯ ಸಮ್ಮೇಳನ ಚರಿತ್ರೆ ಸೃಷ್ಟಿಸಲಿದೆ: ಸಚಿವ ಜಮೀರ್ ಅಹ್ಮದ್ ಖಾನ್

88ನೇ ಕನ್ನಡ ಸಾಹಿತ್ಯ ಸಮ್ಮೇಳನ ಚರಿತ್ರೆ ಸೃಷ್ಟಿಸಲಿದೆ: ಸಚಿವ ಜಮೀರ್ ಅಹ್ಮದ್ ಖಾನ್

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಹೊಣೆಗಾರಿಕೆ ನಮಗೆ ದೊರೆತಿರುವುದು ಅದೃಷ್ಟ: ಸಚಿವ ಬಿ.ಝಡ್.ಜಮೀರ್ ಅಹ್ಮದ್ ಖಾನ್ (Zameer Ahmed Khan) ಹೇಳಿದರು.

[ccc_my_favorite_select_button post_id="110377"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ನಗರದ ಹೊರವಲಯದಲ್ಲಿರುವ ಬಾಶೆಟ್ಟಿಹಳ್ಳಿ ಬಳಿ ಗೋಣಿ ಚೀಲದಲ್ಲಿ ಅಪರಿಚಿತ ಪುರುಷನ ಶವ (Unknown corpse) ಪತ್ತೆಯಾಗಿದೆ. ಬಾಶೆಟ್ಟಿಹಳ್ಳಿಯ ಪೆಟ್ರೋಲ್ ಬಂಕ್ ಹಿಂಭಾಗದ ಕಾಂಪ್ಲೆಕ್ಸ್‌ ಬಳಿ ಮೂಟೆ ಕಟ್ಟಿ ಎಸೆದಿರುವ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ. ಸ್ಥಳಕ್ಕೆ ಎಸ್ಪಿ ಸಿಕೆ ಬಾಬಾ, ಡಿವೈಎಸ್

[ccc_my_favorite_select_button post_id="110342"]
ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ವಿದ್ಯುತ್ ತಂತಿಬಿದ್ದು ಇಬ್ಬರು ಕಾರ್ಮಿಕರು (laborer) ಗಂಭೀರವಾಗಿ ಗಾಯಗೊಂಡರುವ ಘಟನೆ ಕರೇನಹಳ್ಳಿಯಲ್ಲಿ ಮಂಗಳವಾರ ಮದ್ಯಾಹ್ನ ನಡೆದಿದೆ.

[ccc_my_favorite_select_button post_id="110354"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!