ಮಹತ್ವಾಕಾಂಕ್ಷಿ “ಕಾವೇರಿ 5ನೇ ಹಂತದ ಯೋಜನೆ” ಲೋಕಾರ್ಪಣೆಗೊಳಿಸಿದ ಸಿಎಂ, ಡಿಸಿಎಂ

ಬೆಂಗಳೂರು: BBMP ವ್ಯಾಪ್ತಿಯ 110 ಹಳ್ಳಿಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಮಹತ್ವಾಕಾಂಕ್ಷಿ ಕಾವೇರಿ ಐದನೇ ಹಂತದ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ‌ಶಿವಕುಮಾರ್ ಅವರು ಮಳವಳ್ಳಿ ತಾಲ್ಲೂಕಿನ ತೊರೆಕಾಡನಹಳ್ಳಿಯಲ್ಲಿನ ಬೆಂಗಳೂರು ಜಲಮಂಡಳಿ ಜಲಶುದ್ದೀಕರಣ ಘಟಕದ ಬಟನ್ ಪ್ರೆಸ್(ಗುಂಡಿ ಒತ್ತುವುದರ) ಮಾಡುವುದರ ಮೂಲಕ ಬುಧವಾರ ಲೋಕಾರ್ಪಣೆಗೊಳಿಸಿದರು.

ಶಾಸಕರಾದ ನರೇಂದ್ರಸ್ವಾಮಿ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಚಲುವರಾಯಸ್ವಾಮಿ, ಇಂಧನ ಸಚಿವರಾದ ಕೆ.ಜೆ.ಜಾರ್ಜ್, ಮಾಜಿ ಸಚಿವರಾದ ಎಸ್.ಟಿ.ಸೋಮಶೇಖರ್, ಬೈರತಿ ಬಸವರಾಜು, ಶಾಸಕರಾದ ಎಸ್.ಆರ್. ವಿಶ್ವನಾಥ್ , ವಿಧಾನಸಭೆ, ವಿಧಾನಪರಿಷತ್ ಶಾಸಕರುಗಳಾದ ಟಿ.ಎಂ.ನಾಗರಾಜು, ರವಿ, ದಿನೇಶ್ ಗೂಳಿಗೌಡ, ಸುದಾಮ್ ದಾಸ್, ಮಾದೇಗೌಡರು, ನಾಗರಾಜ್ ಯಾದವ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ತುಂಬಿದ ಕೊಡಗಳ ನೀರನ್ನು ಮುಖ್ಯಮಂತ್ರಿಗಳು ಕಾವೇರಿ ಮಾತೆಗೆ ಸಮರ್ಪಿಸಿದರು.

ಈ ಸಂದರ್ಭದಲ್ಲಿ ಜೈಕಾ ಪ್ರತಿನಿಧಿಗಳು, ಸಚಿವರುಗಳು,ಶಾಸಕರುಗಳು, ಚುನಾಯಿತ ಪ್ರತಿನಿಧಿಗಳು,ಅಧಿಕಾರಿಗಳು ಸೇರಿದಂತೆ ಅನೇಕರು ಇದ್ದರು.

ಜೈಕಾ(ಜಪಾನ್ ಇಂಟರ್ ನ್ಯಾಷನಲ್ ಕೋ ಅಪರೇಶನ್ ಏಜೆನ್ಸಿ) ಸಹಭಾಗಿತ್ವದಲ್ಲಿ 4336 ಕೋಟಿ ರೂ.ವೆಚ್ಚದಲ್ಲಿ ಕೈಗೆತ್ತಿಕೊಂಡಿರುವ ಯೋಜನೆ ಇದಾಗಿದೆ.

ಲೋಕಾರ್ಪಣೆಗೊಳಿಸಿದ ನೆನಪಿಗಾಗಿ ಮುಖ್ಯಮಂತ್ರಿಗಳು,ಉಪಮುಖ್ಯಮಂತ್ರಿಗಳ ಜೊತಗೂಡಿ ಘಟಕದ ಆವರಣದಲ್ಲಿ ಸಸಿ ನೆಟ್ಟರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅವಧಿಯಲ್ಲೇ ಘೋಷಣೆಯಾಗಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದಲೇ ಲೋಕಾರ್ಪಣೆಗೊಂಡ ಯೋಜನೆಯ ಪಕ್ಷಿ ನೋಟ

• ದೇಶದ ಮೂರನೇ ಅತಿದೊಡ್ಡ ನಗರವಾಗಿರುವ ಬೃಹತ್‌ ಬೆಂಗಳೂರಿಗೆ ಜೀವಜಲವನ್ನು ಒದಗಿಸುವ ಮಹತ್ವದ ಕಾರ್ಯದಲ್ಲಿ ಬೆಂಗಳೂರು ನೀರು ಸರಬರಾಜು ಹಾಗೂ ಜಲಮಂಡಳಿ ತೊಡಗಿಕೊಂಡಿದೆ.

• ದಿನೇ ದಿನೇ ಬೆಳೆಯುತ್ತಿರುವ ನಗರಕ್ಕೆ ಸಮರ್ಪಕ ನೀರು ಸರಬರಾಜು ಹಾಗೂ ಉತ್ತಮ ಕೊಳಚೆ ನೀರು ನಿರ್ವಹಣೆಯ ನಿಟ್ಟಿನಲ್ಲಿ ಹಂತಗಳಲ್ಲಿ ಅನೇಕ ಯೋಜನೆಗಳನ್ನು ಕೈಗೊಂಡಿದ್ದೇವೆ.

ಸರಬರಾಜು ಹಿಂದೇನಿತ್ತು? ಈಗ ಹೇಗಿದೆ?

• 1896 ನೇ ಇಸವಿಯವರೆಗೆ ಬೆಂಗಳೂರಿನ ನೀರಿನ ಅಗತ್ಯವನ್ನು ಧರ್ಮಾಂಬುಧಿ, ಸಂಪಂಗಿ, ಹಲಸೂರು, ಸ್ಯಾಂಕಿ ಕೆರೆಗಳಂತಹ ಕೆರೆಗಳು ಪೂರೈಸುತ್ತಿದ್ದವು.

• ಇವಕ್ಕೆ ಪೂರಕವಾಗಿ ಸ್ಥಳೀಯ ಬಾವಿ ಮತ್ತು ಕಲ್ಯಾಣಿಗಳಂತಹ ಜಲಮೂಲಗಳೂ ಇದ್ದವು. ಈ ಮೂಲಗಳಿಂದ ದೊರೆಯುತ್ತಿದ್ದ ನೀರು ಬೆಂಗಳೂರಿನ ಆಗತ್ಯ ಪೂರೈಸಲು ಸಾಲದ್ದರಿಂದ ಹೊಸ ಜಲಸಂಪನ್ಮೂಲದ ಹುಡುಕಾಟ ಆರಂಭವಾಯಿತು.

• ನಗರದ ಬಳಿಯಿದ್ದ ಆರ್ಕಾವತಿ ನದಿ ಜಲ ಮೂಲವಾಗಬಹುದೆಂದು ತಿಳಿದು ಇಲ್ಲಿಂದ ನಗರಕ್ಕೆ ಸೋಸಿದ ನೀರು ಪೂರೈಸುವ ಕೆಲಸ 1896ನೇ ವರ್ಷದಲ್ಲಿ ಪ್ರಾರಂಭವಾಯಿತು.
• ಬೆಂಗಳೂರಿನ ನಿರಂತರ ಬೆಳವಣಿಗೆ ಮತ್ತು ಜನಸಂಖ್ಯೆಯ ಹೆಚ್ಚಳದಿಂದಾಗಿ ಹೊಸ ಸಂಪನ್ಮೂಲಗಳ ಹುಡುಕಾಟದ ಅವಶ್ಯಕತೆ ಕಂಡು ಬಂದಿತ್ತು. ಆಗ ಹೊಳೆದದ್ದೆ ಕಾವೇರಿ ನದಿಯ ಜಲ ಮೂಲ.

• ಕಾವೇರಿ ನದಿಯ ನೀರನ್ನು ಬೆಂಗಳೂರಿನ ಬೇಡಿಕೆಗೆ ಬಳಸಿ ಕೊಳ್ಳಲು ಕರ್ನಾಟಕ ಸರ್ಕಾರ ಅನುಮತಿ ಹೀಗಾಗಿ 1974 ರಿಂದೀಚೆಗೆ ನೀರು ಪೂರೈಕೆಗಾಗಿ ಕಾವೇರಿ ಜಲಮೂಲವನ್ನು ಹಂತಹಂತವಾಗಿ, ಘಟ್ಟಗಳಲ್ಲಿ ಬಳಸಿ ಕೊಳ್ಳವುದು ಪ್ರಾರಂಭವಾಯಿತು.
ಕಾವೇರಿ 5 ನೇ ಘಟ್ಟ

• ಕಾವೇರಿ ನೀರು ಸರಬರಾಜು ಯೋಜನೆಯ 4 ನೇ ಘಟ್ಟ 2 ನೇ ಹಂತವನ್ನು ಪೂರ್ಣಗೊಳಿಸಿದ ನಂತರವೂ ಹೊಸದಾಗಿ ಬಿಬಿಎಂಪಿ ವ್ಯಾಪ್ತಿಗೆ ಸೇರಿಸಲ್ಪಟ್ಟ 110 ಹಳ್ಳಿಗಳಿಗೆ ನೀರು ಪೂರೈಸಲು ಮಂಡಳಿಗೆ ಕಷ್ಟವಾಗುತ್ತಿತ್ತು.

• ಬಿಬಿಎಂಪಿ ವ್ಯಾಪ್ತಿಗೆ ಹೊಸದಾಗಿ ಸೇರ್ಪಡೆಯಾಗಿರುವ 110 ಹಳ್ಳಿಗಳಿಗೆ ಸಮರ್ಪಕ ನೀರು ಪೂರೈಕೆ ಮಾಡಲು 2,200 ಎಂ.ಎಲ್‌.ಡಿ ನೀರಿನ ಅವಶ್ಯಕತೆಯಿದೆ. ಆದರೆ, ಪ್ರಸ್ತುತ ಇರುವ ನಾಲ್ಕೂ ಹಂತಗಳ ಮೂಲಕ ನಮಗೆ ಲಭ್ಯವಾಗುತ್ತಿರುವುದು ಕೇವಲ 1450 ಎಂ.ಎಲ್‌.ಡಿಗಳಷ್ಟು ಮಾತ್ರ.

• ಇದನ್ನ ಮನಗೊಂಡ ಕರ್ನಾಟಕ ಸರಕಾರ ನಗರಾಭಿವೃದ್ದಿ ಇಲಾಖೆಯ ಆದೇಶದ ಅನ್ವಯ ಬೆಂಗಳೂರು ನಗರಕ್ಕೆ ಹೆಚ್ಚುವರಿಯಾಗಿ 10 ಟಿಎಂಸಿ (ಪ್ರತಿದಿನ 775 ಮಿಲಿಯನ್‌ ಲೀಟರ್‌) ನೀರನ್ನು ಮಂಜೂರು ಮಾಡಿತ್ತು.

• ನಗರದ ನೀರಿನ ಬೇಡಿಕೆಯನ್ನು ಈಡೇರಿಸುವ ನಿಟ್ಟಿನಲ್ಲಿ ಕಾವೇರಿ 5 ನೇ ಘಟ್ಟವನ್ನು 2 ಹಂತಗಳಲ್ಲಿ ಜಪಾನ್‌ ಇಂಟರ್‌ನ್ಯಾಷನಲ್ ಕೋ-ಆಪರೇಷನ್‌ ಏಜೆನ್ಸಿ – ಜೈಕಾ ಆರ್ಥಿಕ ನೆರವಿನಿಂದ 2014 ರಲ್ಲಿ ಯೋಜನೆಯನ್ನು ಪ್ರಾರಂಭಿಸಲಾಗಿತ್ತು.
• ಈ ಮಹತ್ವಾಕಾಂಕ್ಷಿ, ಬೃಹತ್‌ ಹಾಗೂ ದೇಶದಲ್ಲೆ ಅತಿದೊಡ್ಡ ಯೋಜನೆಯನ್ನು ಅನುಷ್ಠಾನಗೊಳಿಸಲು 4,333 ಕೋಟಿ ರೂಪಾಯಿಗಳ ಯೋಜನಾ ವೆಚ್ಚವನ್ನು ನಿಗದಿಪಡಿಸಲಾಯಿತು. ಇದಕ್ಕೆ ಜಪಾನ್ ಇಂಟರ್ನ್ಯಾಷನಲ್ ಕೋಆಪರೇಷನ್ ಏಜೆನ್ಸಿ (JICA) ನಿಂದ ಹಣಕಾಸು ಬೆಂಬಲ ದೊರೆಯಿತು.

• ಜೈಕಾ ಶೇಕಡಾ 84ರಷ್ಟು ಹಣವನ್ನು ಓದಗಿಸಿದರೆ, ಉಳಿದ ಶೇಕಡಾ 16ರಷ್ಟು ಮೊತ್ತವನ್ನು ಕರ್ನಾಟಕ ಸರ್ಕಾರ ಮತ್ತು ಬೆಂಗಳೂರು ಜಲಮಂಡಳಿಯ ವತಿಯಿಂದ ಭರಿಸಲು ನಿರ್ಧರಿಸಲಾಯಿತು. ಇದಕ್ಕೆ ಪೂರಕವಾಗಿ 2018 ರಲ್ಲಿ JICA ಜತೆ ಔಪಚಾರಿಕ ಸಾಲ ಒಪ್ಪಂದಕ್ಕೆ ಸಹಿ ಮಾಡಲಾಯಿತು.

• ದೇಶದ ಅತಿದೊಡ್ಡ ನೀರು ಸರಬರಾಜು ಯೋಜನೆಯ ಹಿಂದೆ ಒಂದು ಭಗೀರಥ ಪ್ರಯತ್ನವಿದೆ.

• ಈ ಮಹತ್ವಾಕಾಂಕ್ಷಿ ಯೋಜನೆ ಬೃಹತ್‌ ಬೆಂಗಳೂರು ನಗರದ ನೀರಿನ ಬೇಡಿಕೆಯನ್ನ ಗಣನೀಯವಾಗಿ ನಿಭಾಯಿಸುವ ಸಾಮರ್ಥ್ಯ ಪಡೆದುಕೊಳ್ಳಲಿದೆ. ಅಲ್ಲದೇ, ಬೆಂಗಳೂರಿನ ಪ್ರತಿ ಮೂಲೆ ಮೂಲೆಗೂ, ಮನೆ ಮನೆಯ ಬಾಗಿಲಿಗೂ ಜೀವ ಜಲ ಕಾವೇರಿಯನ್ನು ತಲುಪಿಸಲಿದೆ.

• ಕಾವೇರಿ 5ನೇ ಹಂತದ ಯೋಜನೆಯಿಂದ ಯಶವಂತಪುರ, ಬೆಂಗಳೂರು ದಕ್ಷಿಣ, ಬ್ಯಾಟರಾಯನಪುರ, ಟಿ.ದಾಸರಹಳ್ಳಿ, ಮಹದೇವಪುರ, ಯಲಹಂಕ, ರಾಜರಾಜೇಶ್ವರಿನಗರ ಹಾಗೂ ಬೊಮ್ಮನಹಳ್ಳಿ ವಲಯದ ವಿವಿಧ ಹಳ್ಳಿಗಳ ಮನೆ ಮನೆಗೂ ಸೇರಿದಂತೆ ಬೆಂಗಳೂರಿನ ಮೂಲೆ ಮೂಲೆಗೂ ಕಾವೇರಿ ನೀರು ಸರಬರಾಜು ಆಗಲಿದೆ.

• ⁠⁠⁠⁠ಕಾವೇರಿ 5ನೇ ಹಂತದ ಯೋಜನೆ ಅನುಷ್ಠಾನದಿಂದ ಬೆಂಗಳೂರಿಗೆ ಹೆಚ್ಚುವರಿಯಾಗಿ 775 ಎಂಎಲ್‌ಡಿ ನೀರು ದೊರೆಯಲಿದೆ. ಇದು ಬೆಂಗಳೂರಿನ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ನೀಡಲಿದೆ.

• ⁠⁠ಜಲ ಮಂಡಳಿಯಿಂದ ಬೆಂಗಳೂರು ನಗರದಲ್ಲಿ 10.64 ಲಕ್ಷ ಕಾವೇರಿ ನೀರಿನ ಸಂಪರ್ಕ ನೀಡಲಾಗಿದೆ. ಕಾವೇರಿ 5ನೇ ಹಂತದ ಯೋಜನೆ ಜಾರಿ ಬಳಿಕ 4 ಲಕ್ಷ ಹೊಸ ಸಂಪರ್ಕ ನೀಡಲಾಗುತ್ತಿದೆ. ಇದರಿಂದ ಜಲಮಂಡಳಿಯ ಆದಾಯ ಹೆಚ್ಚಲಿದೆ.

• ಇದುವರೆಗೆ ಪ್ರತಿ ತಿಂಗಳು ಬೆಂಗಳೂರಿನಲ್ಲಿ 1.58 ಟಿಎಂಸಿ ಕುಡಿಯುವ ನೀರು ಪೂರೈಕೆಯಾಗುತ್ತಿತ್ತು. ಕಾವೇರಿ 5ನೇ ಹಂತದ ಯೋಜನೆ ಅನುಷ್ಠಾನ ಬಳಿಕ ಮಾಸಿಕವಾಗಿ 2.4 ಟಿಎಂಸಿ ನೀರು ಸರಬರಾಜು ಆಗಲಿದೆ.

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110970"]
ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆ ಲೂಟಿ ಮಾಡುವ ಉದ್ದೇಶವನ್ನು ಹೊಂದಿದೆ. ಇದು ಹಣ ಕೊಳ್ಳೆ ಹೊಡೆಯುವ ಸ್ಕೀಮ್‌: ಆರ್‌.ಅಶೋಕ (R. Ashoka)

[ccc_my_favorite_select_button post_id="111019"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ನಿಯಂತ್ರಣ ತಪ್ಪಿದ ಕಾರು ಪಲ್ಟಿ..!

ದೊಡ್ಡಬಳ್ಳಾಪುರ: ನಿಯಂತ್ರಣ ತಪ್ಪಿದ ಕಾರು ಪಲ್ಟಿ..!

ಚಾಲಕನ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿರುವ ಘಟನೆ (Accident) ತಾಲೂಕಿನ ತಪಸೀಹಳ್ಳಿ ಬಳಿ ಸಂಭವಿಸಿದೆ.

[ccc_my_favorite_select_button post_id="111050"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!