Doddaballapura: ಸುದ್ದಿಗೋಷ್ಠಿ ಕರೆದ ಕಾಂಗ್ರೆಸ್..!| ತಿರುಗೇಟು ಸಾಧ್ಯತೆ

ದೊಡ್ಡಬಳ್ಳಾಪುರ: ನಗರದ ಪ್ರವಾಸಿ ಮಂದಿರದಲ್ಲಿ ಇಂದು ಕಾಂಗ್ರೆಸ್ ಪಕ್ಷದ ಮುಖಂಡರು ಸುದ್ದಿಗೋಷ್ಠಿ ಕರೆದಿದ್ದು, ತೀವ್ರ ಕುತೂಹಲ ಕೆರಳಿಸಿದೆ.

ಈ ಕುರಿತು ಕೆಪಿಸಿಸಿ ಸದಸ್ಯ ಜಿ.ಲಕ್ಷ್ಮೀಪತಿ ಮಾಹಿತಿ ನೀಡಿದ್ದು, ಇಂದು ಮಧ್ಯಾಹ್ನ ಸುದ್ದಿಗೋಷ್ಠಿ ಆಯೋಜಿಸಲಾಗಿದೆ. ಕೆಪಿಸಿಸಿ ಉಪಾಧ್ಯಕ್ಷ ಟಿ.ವೆಂಕಟರಮಣಯ್ಯ, ನಗರ, ಗ್ರಾಮಾಂತರ ಸೇರಿದಂತೆ ವಿವಿಧ ಬ್ಲಾಕ್‌ನ ಕಾಂಗ್ರೆಸ್ ಅಧ್ಯಕ್ಷರು, ಸದಸ್ಯರು, ನಗರಸಭೆ ಸದಸ್ಯರು ಸುದ್ದಿಗೋಷ್ಠಿಯಲ್ಲಿ ಭಾಗವಹಿಸಲಿದ್ದಾರೆ ಎನ್ನಲಾಗುತ್ತಿದೆ.

ಇತ್ತೀಚೆಗೆ ವಿಧಾನಸಭೆ ಚುನಾವಣೆ ಮುಗಿದ ಒಂದೂವರೆ ವರ್ಷಗಳ ನಂತರ ಶಾಸಕ ಧೀರಜ್ ಮುನಿರಾಜು ವಿಜಯದಶಮಿ ಹಬ್ಬದ ದಿನ ಸುದ್ದಿಗೋಷ್ಠಿ ಕರೆದಿದ್ದು, ಸತತ ಎರಡೂವರೆ ಗಂಟೆಗಳಿಗೂ ಹೆಚ್ಚು ಕಾಲ ಹಲವು ಮಾಹಿತಿ ಹಂಚಿಕೊಂಡಿದ್ದರು‌

ಗೃಹಕಚೇರಿಯಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಕಿಕ್ಕಿರಿದು ಸೇರಿದ್ದ ಮಾಧ್ಯಮಗಳ ಪ್ರತಿನಿಧಿಗಳ ಬಳಿ ಒಂದೂವರೆ ವರ್ಷದ ಅಭಿವೃದ್ಧಿ ಶೂನ್ಯ ಎಂಬ ವಿರೋಧ ಪಕ್ಷಗಳ ಆಕ್ರೋಶಕ್ಕೆ ತಿರುಗೇಟು ನೀಡಿದ್ದಾರೆನ್ನಲಾಗಿದೆ.

ವರದಿಯನ್ವಯ ಚಿಗರೇನಹಳ್ಳಿ ಸಮೀಪದ ಇರುವ ಎಂ.ಎಸ್.ಜಿ.ಪಿ ಕಸ ವಿಲೇವಾರಿ ಘಟಕ ತೆರವು, ರಸ್ತೆ ಅಭಿವೃದ್ಧಿ, ಹೆಚ್ಚಿನ ಅನುದಾನಕ್ಕೆ ಮನವಿ ಮುಂತಾದ ವಿಚಾರಗಳನ್ನು ಪ್ರಸ್ತಾಪಿಸಿದ್ದಾರೆಂದು ವರದಿಯಾಗಿದೆ.

ಇದರ ಬೆನ್ನಲ್ಲೇ ಅಲ್ಪಸಂಖ್ಯಾತರಿಗೆ ನೀಡಲಾದ ಅನುದಾನ ಬೇರೆ ವರ್ಗಾವಣೆ ಕುರಿತು ನಗರಸಭೆಯ ಕಾಂಗ್ರೆಸ್ ಸದಸ್ಯರ ಪ್ರತಿಭಟನೆಗೆ ಶಾಸಕ ಧೀರಜ್ ಮುನಿರಾಜು ತಿರುಗೇಟು ನೀಡಿದ್ದಾರೆ.

ಅಲ್ಲದೆ ಎರಡನೇ ಅವಧಿಗೆ ದೊಡ್ಡಬಳ್ಳಾಪುರ ನಗರಸಭೆ ಅಧ್ಯಕ್ಷ ಸ್ಥಾನ ಒಪ್ಪಂದದಂತೆ ಜೆಡಿಎಸ್‌ಗೆ ಬಿಟ್ಟುಕೊಡಲಿಲ್ಲ ಹಾಗೂ ದೊಡ್ಡಬಳ್ಳಾಪುರ ಅಭಿವೃದ್ಧಿ ವಿಚಾರಗಳ ಕುರಿತು ಪ್ರಸ್ತಾಪಿಸಿದ ಮಿತ್ರಪಕ್ಷ ಜೆಡಿಎಸ್‌ನ ಹರೀಶ್ ಗೌಡ ಅವರ ಹೆಸರೇಳದೆ ಟಾಂಗ್ ನೀಡಿದ್ದಾರೆಂದು ವರದಿಯಾಗಿದೆ.

ಇದೇ ವೇಳೆ ಕಾಂಗ್ರೆಸ್ ನ ಕೆಪಿಸಿಸಿ ಉಪಾಧ್ಯಕ್ಷ ಟಿ.ವೆಂಕಟರಮಣಯ್ಯ ಅವರ ವಿರುದ್ಧ ಆರೋಪಗಳನ್ನು ಮಾಡಿದ್ದರೆನ್ನಲಾಗಿದು, ಈ ಹಿನ್ನೆಲೆಯಲ್ಲಿ ಇಂದು ಶಾಸಕ ಧೀರಜ್ ಮುನಿರಾಜುಗೆ ತಿರುಗೇಟು ನೀಡಲು ಸುದ್ದಿಗೋಷ್ಠಿ ಕರೆದಿರಬಹುದು ಎನ್ನಲಾಗುತ್ತಿದೆ.

ಇದರ ಬೆನ್ನಲ್ಲೇ ಜೆಡಿಎಸ್ ನ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಅವರು ಕೂಡ ಸುದ್ದಿಗೋಷ್ಠಿ ನಡೆಸಲು ಸಿದ್ದತೆ ನಡೆಸಿದ್ದಾರೆ ಎನ್ನಲಾಗುತಿದ್ದು, ವಿಧಾನಸಭೆ ಚುನಾವಣೆ, ಲೋಕಸಭೆ ಚುನಾವಣೆ ಮುಗಿದ ಅನೇಕ ದಿನಗಳ ನಂತರ ದೊಡ್ಡಬಳ್ಳಾಪುರದಲ್ಲಿ ರಾಜಕೀಯ ಆರೋಪ ಪ್ರತ್ಯಾರೋಪ ತೀವ್ರಗೊಂಡಿದೆ ಎನ್ನಲಾಗುತ್ತಿದೆ.

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110970"]
ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆ ಲೂಟಿ ಮಾಡುವ ಉದ್ದೇಶವನ್ನು ಹೊಂದಿದೆ. ಇದು ಹಣ ಕೊಳ್ಳೆ ಹೊಡೆಯುವ ಸ್ಕೀಮ್‌: ಆರ್‌.ಅಶೋಕ (R. Ashoka)

[ccc_my_favorite_select_button post_id="111019"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ನಿಯಂತ್ರಣ ತಪ್ಪಿದ ಕಾರು ಪಲ್ಟಿ..!

ದೊಡ್ಡಬಳ್ಳಾಪುರ: ನಿಯಂತ್ರಣ ತಪ್ಪಿದ ಕಾರು ಪಲ್ಟಿ..!

ಚಾಲಕನ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿರುವ ಘಟನೆ (Accident) ತಾಲೂಕಿನ ತಪಸೀಹಳ್ಳಿ ಬಳಿ ಸಂಭವಿಸಿದೆ.

[ccc_my_favorite_select_button post_id="111050"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!