ಬೆಂಗಳೂರು ಗ್ರಾಮಾಂತರ ಜಿಲ್ಲೆ: ಧಾರಾಕಾರ ಮಳೆ (heavy rain in bangalore) ಆರೆಂಜ್ ಅಲರ್ಟ್ ಘೋಷಣೆ ಇರುವ ಹಿನ್ನೆಲೆಯಲ್ಲಿ ಅಕ್ಟೋಬರ್ 16ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ರಜೆಯನ್ನು ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್ ಅವರು ಘೋಷಿಸಿದ್ದಾರೆ.
ಅಕ್ಟೋಬರ್ 16 ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆ ವ್ಯಾಪ್ತಿಯಲ್ಲಿ ವ್ಯಾಪಕ ಮಳೆಯಾಗುವ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ, ಆರೆಂಜ್ ಅಲರ್ಟ್ ಘೋಷಿಸಿದೆ.
ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಆದರೆ ಅನೇಕ ಖಾಸಗಿ ಶಾಲೆಗಳು ದಸರಾ ರಜೆ ಆರಂಭಕ್ಕೆ ಮುನ್ನವೇ ಶಾಲೆಗಳನ್ನು ಆರಂಭಿಸಿದ್ದು, ಶಾಲಾ ಮಕ್ಕಳು ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಲ್ಲಿಯೇ ಶಾಲೆಗೆ ತೆರಬೇಕಾದ ಅನಿವಾರ್ಯತೆ ಎದುರಾಗಿದೆ.