ರಾಜ್ಯ ಕಾಂಗ್ರೆಸ್ ಸರಕಾರ ಹಸಿ ಸುಳ್ಳುಗಳನ್ನು ಹಬ್ಬಿಸುತ್ತಿದೆ: ಹೆಚ್.ಡಿ.ಕುಮಾರಸ್ವಾಮಿ ಕಿಡಿ

ಬೆಂಗಳೂರು: ಹಿಂದೂಸ್ತಾನ್ ಮಶೀನ್ ಅಂಡ್ ಟೂಲ್ಸ್ (ಹೆಚ್ ಎಂಟಿ) ಹಾಗೂ ಕುದುರೆಮುಖ ಕಬ್ಬಿಣ ಮತ್ತು ಅದಿರು ಸಂಸ್ಥೆ (KIOCL) ವಿಷಯದಲ್ಲಿ ರಾಜ್ಯ ಕಾಂಗ್ರೆಸ್ ಸರಕಾರ ಹಸಿ ಸುಳ್ಳುಗಳನ್ನು ಹಬ್ಬಿಸುತ್ತಿದ್ದು, ಈ ಬಗ್ಗೆ ನಾನು ದಾಖಲೆಗಳ ಸಮೇತ ರಾಜ್ಯ ಸರಕಾರದ ಜತೆ ಚರ್ಚೆಗೆ ತಯಾರಿದ್ದೇನೆ ಎಂದು ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಸವಾಲು ಹಾಕಿದ್ದಾರೆ.

ಬೆಂಗಳೂರಿನಲ್ಲಿ ಗುರುವಾರ ಜೆಡಿಎಸ್ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಕರೆಯಲಾಗಿದ್ದ ಮಾಧ್ಯಮಗೋಷ್ಠಿಯಲ್ಲಿ ಸಚಿವರು ಮಾತನಾಡಿದರು.

ತಪ್ಪಾಗಿದ್ದರೆ ನಾನು ಜವಾಬ್ದಾರಿ ತೆಗೆದುಕೊಳ್ಳುತ್ತೇನೆ

ಕೆಐಒಸಿಎಲ್ ಬಗ್ಗೆ ರಾಜ್ಯ ಸರಕಾರ ರಾಜಕಾರಣ ಮಾಡಬಾರದು. ಸಮಸ್ಯೆ ಇದ್ದರೆ ಕೂತು ಸರಿಪಡಿಸಿಕೊಳ್ಳಬೇಕು. ರಾಜ್ಯದಲ್ಲಿರುವ ಸಾರ್ವಜನಿಕ ಸ್ವಾಮ್ಯದ ಕೈಗಾರಿಕೆಗಳನ್ನು ಉಳಿಸುವ ಬಗ್ಗೆ ನಾನು ಕೆಲಸ ಮಾಡುತ್ತಿದ್ದೇನೆ. ಈ ಬಗ್ಗೆ ನಾನು ಮುಖ್ಯಮಂತ್ರಿಗಳು ಹಾಗೂ ಅರಣ್ಯ ಸಚಿವರಿಗೆ ಪತ್ರ ಬರೆಯುತ್ತೇನೆ. ಒಂದು ಸಭೆ ಮಾಡಲಿ. ಅಲ್ಲಿ ದಾಖಲೆಗಳ ಸಮೇತ ನಾನು ಮಾತನಾಡುತ್ತೇನೆ. ಒಂದು ವೇಳೆ ಕೆಐಒಸಿಎಲ್ ತಪ್ಪುಗಳಿದ್ದರೆ ಅದಕ್ಕೆ ಆ ಇಲಾಖೆಯ ಸಚಿವನಾಗಿ ಜವಾಬ್ದಾರಿ ತೆಗೆದುಕೊಳ್ಳುತ್ತೇನೆ. ಅದರ ಹೊರತಾಗಿ ರಾಜ್ಯದ ಹಿತಾಸಕ್ತಿಯ ಬಗ್ಗೆ ರಾಜಕಾರಣ ಮಾಡುವುದು ಸರಿಯಲ್ಲ ಎಂದು ಅವರು ಹೇಳಿದರು.

ಅರಣ್ಯ ಸಚಿವರಿಂದ ಕ್ಷುಲ್ಲಕ ರಾಜಕಾರಣ

ಅರಣ್ಯ ಸಚಿವರು ಈ ಎರಡೂ ಸಂಸ್ಥೆಗಳ ಬಗ್ಗೆ ಸತ್ಯಕ್ಕೆ ದೂರವಾದ ವಿಷಯಗಳನ್ನು ದಿನನಿತ್ಯವೂ ಮಾಧ್ಯಮಗಳಿಗೆ ಹೇಳುತ್ತಾ ಜನರ ದಿಕ್ಕು ತಪ್ಪಿಸುತ್ತಿದ್ದಾರೆ. ಮೊದಲು ಸಚಿವರು ದಾಖಲೆಗಳನ್ನು ಓದಿ ಅರಿತುಕೊಳ್ಳಬೇಕು. ಆ ನಂತರ ಅವರು ಮಾತನಾಡಿದರೆ ಚೆನ್ನಾಗಿರುತ್ತದೆ. ಅದರ ಹೊರತಾಗಿ ರಾಜ್ಯ ಅಭಿವೃದ್ಧಿ ವಿಷಯದಲ್ಲಿ ಕ್ಷುಲ್ಲಕ ರಾಜಕಾರಣ ಮಾಡಿದರೆ ಅವರನ್ನು ಸಚಿವರು ಎಂದು ಕರೆಯಲಾಗುತ್ತದೆಯೇ ಎಂದು ಅವರು ಕಿಡಿಕಾರಿದರು.

ರಾಜ್ಯ ಸರಕಾರದ ತಪ್ಪಿನಿಂದ 300-400 KIOCL ಕಾರ್ಮಿಕರು ಬೀದಿಗೆ ಬಿದ್ದಿದ್ದಾರೆ

ರಾಜ್ಯ ಸರ್ಕಾರದ ಹಠಮಾರಿತನದಿಂದ ಕುದುರೆಮುಖ ಸಂಸ್ಥೆಯ ಸುಮಾರು 300-400 ಕಾರ್ಮಿಕರು ಬೀದಿಯಲ್ಲಿ ನಿಂತಿದ್ದಾರೆ. ಒಂದು ಕಡೆ ಸ್ಥಳೀಯರಿಗೆ ಉದ್ಯೋಗ ಕಲ್ಪಿಸಬೇಕು ಎನ್ನುವ ರಾಜ್ಯ ಸರಕಾರ ಮತ್ತೊಂದೆಡೆ ಅಸಹಕಾರ ನೀಡುತ್ತಿದೆ. ಪ್ರತಿಯೊಂದಕ್ಕೂ ಕೇಂದ್ರ ಸರಕಾರವನ್ನು ನಿಂದಿಸಿದರೆ ಉಪಯೋಗವಿಲ್ಲ. ಸಮಸ್ಯೆ ಬಗ್ಗೆ ಸಿಎಂ ಸಭೆ ಕರೆಯಲಿ. ಏನು ಸಮಸ್ಯೆ ಇದೆ ಅಂತಾ ಚರ್ಚೆ ಮಾಡೋಣ. ಸಮಸ್ಯೆ ಇದ್ದರೆ ನಾನು ಜವಾಬ್ದಾರಿ ತೆಗೆದುಕೊಳ್ಳುತ್ತೇನೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯಗೆ ಈ ಬಗ್ಗೆ ಪತ್ರ ಬರೆಯುತ್ತೇನೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

RNIL ಉದಾಹರಣೆ

ವಿಶಾಖಪಟ್ಟಣದ ರಾಷ್ಟ್ರೀಯ ಉಕ್ಕು ಕಾರ್ಖಾನೆ (RNIL) ಸಂಕಷ್ಟದಲ್ಲಿ ಇತ್ತು. ನಿರ್ವಹಣಾ ಬಂಡವಾಳ ಇಲ್ಲದೆ ಸೊರಗಿತ್ತು. ಏಕಾಏಕಿ 4500 ಕಾರ್ಮಿಕರನ್ನು ಕೆಲಸದಿಂದ ತೆಗೆದು ಹಾಕಲಾಗಿತ್ತು. ಆದರೆ, ಕೇಂದ್ರ ವಿತ್ತ ಸಚಿವರಾದ ನಿರ್ಮಲಾ ಸೀತಾರಾಮನ್ ಹಾಗೂ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ಒತ್ತಾಸೆಯ ಮೇರೆಗೆ ಕೇವಲ ನಲವತ್ತೆಂಟು ಗಂಟೆಗಳ ಒಳಗಾಗಿ ಅಷ್ಟೂ ಕಾರ್ಮಿಕರನ್ನು ಮರು ನೇಮಕ ಮಾಡಿಕೊಳ್ಳಲಾಯಿತು.

ನೆರೆ ರಾಜ್ಯದಲ್ಲಿ ನಮಗೆ ಇಂತಹ ಉತ್ತಮ ಸಹಕಾರ ಸಿಗುತ್ತಿದೆ. ಆದರೆ, ನಮ್ಮದೇ ರಾಜ್ಯ ಕರ್ನಾಟಕದಲ್ಲಿ ಸಹಕಾರ ಸಿಗುತ್ತಿಲ್ಲ. ಒಬ್ಬ ಕೇಂದ್ರ ಮಂತ್ರಿಯನ್ನು ನಡೆಸಿಕೊಳ್ಳುವ ರೀತಿಯೇ ಇದು ಎಂದು ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು.

ಯಾರೂ ಬಂದು ರಾಜ್ಯದ ಅಭಿವೃದ್ಧಿ ಬಗ್ಗೆ ಚರ್ಚಿಸಿಲ್ಲ

ಹಾದಿಬೀದಿಯಲ್ಲಿ ಹೇಳಿಕೆ ನೀಡುತ್ತಾ ಹೋದರೆ ರಾಜ್ಯದ ಅಭಿವೃದ್ಧಿ ಆಗುತ್ತದೆಯೇ? ರಾಜ್ಯ ಸರ್ಕಾರ ಚಿಲ್ಲರೆ ರಾಜಕಾರಣ ಮಾಡುವುದನ್ನು ಬಿಡಬೇಕು. ಇಲ್ಲಿ ರಾಜಕಾರಣ ಮುಖ್ಯವಲ್ಲ. ಅದೇನಿದ್ದರೂ ಚುನಾವಣೆಗೆ ಸೀಮಿತ. ಅಭಿವೃದ್ಧಿ ವಿಷಯದಲ್ಲಿ ರಾಜಕಾರಣ ಯಾಕೆ ಬೇಕು? ಇಲ್ಲಿಯವರೆಗೂ ಒಬ್ಬರೂ ನನ್ನ ಬಳಿ ಬಂದು ರಾಜ್ಯದ ಅಭಿವೃದ್ಧಿ ಬಗ್ಗೆ ಚರ್ಚೆ ಮಾಡಿಲ್ಲ.

ಎಂ.ಬಿ.ಪಾಟೀಲ್ ಒಬ್ಬರು ದೆಹಲಿಯ ನನ್ನ ಸಚಿವಾಲಯಕ್ಕೆ ಬಂದು ಕೈಗಾರಿಕೆ ಅಭಿವೃದ್ಧಿಯ ಬಗ್ಗೆ ಚರ್ಚೆ ನಡೆಸಿದ್ದು ಬಿಟ್ಟರೆ ಯಾರೊಬ್ಬರೂ ನನ್ನೊಂದಿಗೆ ರಾಜ್ಯದ ಬಗ್ಗೆ ಚರ್ಚೆ ಮಾಡಿಲ್ಲ. ಕುಮಾರಸ್ವಾಮಿ ಅವರು ಮೇಕೆದಾಟು ಯೋಜನೆಗೆ ಅನುಮತಿ ಕೊಡಿಸಲಿ ಎಂದು ಬೀದಿಯಲ್ಲಿ ಜಾಗಟೆ ಹೊಡೆಯುತ್ತಿದ್ದಾರೆ. ಹೀಗೆ ಮಾಡಿದರೆ ಮೇಕೆದಾಟುಗೆ ಅನುಮತಿ ದೊರೆಯುತ್ತದೆಯೇ? ಎಂದು ಸಚಿವರು ಖಾರವಾಗಿ ಪ್ರಶ್ನಿಸಿದರು.

ದಯಮಾಡಿ ಇವರು ಚಿಲ್ಲರೆ ರಾಜಕಾರಣ ಬಿಡಬೇಕು. ಟೊಯೊಟಾ ಸೇರಿದಂತೆ ಅನೇಕ ಕೈಗಾರಿಕೆಗಳು ರಾಜ್ಯ ಬಿಟ್ಟು ಬೇರೆ ರಾಜ್ಯಗಳಿಗೆ ವಲಸೆ ಹೋಗುತ್ತಿವೆ. ಶಾಸಕ ರಾಜುಕಾಗೆ ಅಭಿವೃದ್ಧಿ ಅನುದಾನ ಬಗ್ಗೆ ಏನು ಹೇಳಿದ್ದಾರೆ. ಅರಣ್ಯ ಸಚಿವರು ಅವರ ಬಳಿ ಇರುವ ದಾಖಲೆಗಳನ್ನು ತೆಗೆದುಕೊಂಡು ಬರಲಿ. ನಾನು ಕುಳಿತುಕೊಳ್ಳುತ್ತೇನೆ. ಅವರೂ ಬರಲಿ, ಸಭೆಯಲ್ಲಿ ಎಲ್ಲಾ ಚರ್ಚೆಯಾಗಲಿ. ಸಭೆ ಯಾಕೆ ಕರೆಯಲಾಗುತ್ತಿಲ್ಲ. ಎಲ್ಲಾ ದಾಖಲೆ ಸಮೇತ ಚರ್ಚೆ ಮಾಡೋಣ. ಈಶ್ವರ್ ಖಂಡ್ರೆ ಬೋಗಸ್ ಹೇಳಿಕೆ ನೀಡುತ್ತಿದ್ದಾರೆ ಎಂದು ಕುಮಾರಸ್ವಾಮಿ ಅವರು ಕಿಡಿಕಾರಿದರು.

ಮಾಧ್ಯಮಗೋಷ್ಠಿಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಕೆ.ಎನ್.ತಿಪ್ಪೇಸ್ವಾಮಿ, ಟಿ.ಎ.ಶರವಣ, ಟಿ.ಎ.ಜವರಾಯ ಗೌಡ, ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ ಮುಂತಾದವರು ಉಪಸ್ಥಿತರಿದ್ದರು.

ರಾಜಕೀಯ

ಸಣ್ಣ ವ್ಯಾಪಾರಿಗಳಿಗೆ GST ಬಿಸಿ; ಸಿಎಂ ಸಿದ್ದರಾಮಯ್ಯ ವಿರುದ್ಧ ಬಿ.ವೈ. ವಿಜಯೇಂದ್ರ ವಾಗ್ದಾಳಿ

ಸಣ್ಣ ವ್ಯಾಪಾರಿಗಳಿಗೆ GST ಬಿಸಿ; ಸಿಎಂ ಸಿದ್ದರಾಮಯ್ಯ ವಿರುದ್ಧ ಬಿ.ವೈ. ವಿಜಯೇಂದ್ರ ವಾಗ್ದಾಳಿ

ಜಿಎಸ್‍ಟಿ, ಕೇಂದ್ರಕ್ಕೆ ಹೋಗುತ್ತದೆ ಎಂಬುದು ಎಷ್ಟು ಸತ್ಯವೋ, ದೇಶದ ಯಾವುದೇ ರಾಜ್ಯದಲ್ಲಿ ಇಂಥ ಬೆಳವಣಿಗೆ ಆಗಿಲ್ಲ. B.Y. Vijayendra

[ccc_my_favorite_select_button post_id="111365"]
ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿ: ಬಿ.ವೈ.ವಿಜಯೇಂದ್ರ

ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿ: ಬಿ.ವೈ.ವಿಜಯೇಂದ್ರ

ಸಿದ್ದರಾಮಯ್ಯನವರು ಮತ್ತು ಕಾಂಗ್ರೆಸ್ ಪಕ್ಷದ ವರಿಷ್ಠರನ್ನು ಪ್ರಶ್ನಿಸಲು ಬಯಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ (B.Y. Vijayendra) ಅವರು ತಿಳಿಸಿದ್ದಾರೆ.

[ccc_my_favorite_select_button post_id="111198"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಮಲಗಿದ್ದ ವೇಳೆ ಮನೆಯಲ್ಲಿ ಬೆಂಕಿ.. ವ್ಯಕ್ತಿ ಸಾವು.!

ದೊಡ್ಡಬಳ್ಳಾಪುರ: ಮಲಗಿದ್ದ ವೇಳೆ ಮನೆಯಲ್ಲಿ ಬೆಂಕಿ.. ವ್ಯಕ್ತಿ ಸಾವು.!

ಆಕಸ್ಮಿಕವಾಗಿ ತಗುಲಿದ ಬೆಂಕಿಯ (Fire) ಕೆನ್ನಾಲಿಗೆಗೆ ಮನೆಯಲ್ಲಿ ಮಲಗಿದ್ದ ವೇಳೆ ವ್ಯಕ್ತಿಯೋರ್ವ ಸುಟ್ಟು ಸಾವನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ

[ccc_my_favorite_select_button post_id="111353"]
Accident; ರಾಷ್ಟ್ರೀಯ ಹೆದ್ದಾರಿಯಲ್ಲಿ ಮಗುಚಿ ಬಿದ್ದ ಲಾರಿ.. ಮಾವಿನ ಕಾಯಿಗಾಗಿ ಮುಗಿಬಿದ್ದ ಜನ

Accident; ರಾಷ್ಟ್ರೀಯ ಹೆದ್ದಾರಿಯಲ್ಲಿ ಮಗುಚಿ ಬಿದ್ದ ಲಾರಿ.. ಮಾವಿನ ಕಾಯಿಗಾಗಿ ಮುಗಿಬಿದ್ದ ಜನ

ಮಾವಿನ ಕಾಯಿ ತುಂಬಿಕೊಂಡು ಸಾಗುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪೊ ಮಗುಚಿ ಬಿದ್ದಿರುವ ಘಟನೆ (Accident)

[ccc_my_favorite_select_button post_id="111232"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!