Doddaballapura: ಕಸಾಪದಿಂದ ಮಹರ್ಷಿ ವಾಲ್ಮೀಕಿ ಜಯಂತಿ

ದೊಡ್ಡಬಳ್ಳಾಪುರ: ರಾಮಾಯಣ ಮಹಾಕಾವ್ಯ  ಜೀವನಮೌಲ್ಯಗಳನ್ನು ಪ್ರತಿಬಿಂಬಿಸುವ  ಕಾವ್ಯವಾಗಿದೆ. ವಾಲ್ಮೀಕಿ ಅವರು  ರಾಮಾಯಣ ಕಾವ್ಯದಲ್ಲಿ ಭಾರತ ದೇಶದ ಚರಿತ್ರೆ, ಸಂಸ್ಕೃತಿ ಮತ್ತು ಪರಿಸರವನ್ನು ಸಮಗ್ರವಾಗಿ ಕಾಣಬಹುದಾಗಿದೆ ಎಂದು ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷ ಡಿ.ಶ್ರೀಕಾಂತ್ ತಿಳಿಸಿದರು.

ಅವರು ದೊಡ್ಡಬಳ್ಳಾಪುರ ತಾಲ್ಲೂಕು  ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಡಾ.ರಾಜ್ ಕುಮಾರ್ ಕಲಾಮಂದಿರದಲ್ಲಿ ನಡೆದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಮಹರ್ಷಿ ವಾಲ್ಮೀಕಿ ರಚಿಸಿರುವ ರಾಮಾಯಣ ಕಾವ್ಯ ಓದುವ ಮೂಲಕ ಸಹೃದಯರು ಬದುಕಿನ ಸತ್ಯಗಳನ್ನು ಅರಿಯಬೇಕಾಗಿದೆ. ರಾಮಾಯಣ ಕಾವ್ಯದ ಮೂಲಕ ಸುಖ ದುಃಖಗಳು ಮನುಷ್ಯನ ಬದುಕಿನ ಭಾಗ ಎನ್ನುವ ಸಂದೇಶ ನೀಡಲಾಗಿದೆ ಎಂದರು.

ನವೋದಯ ವಿದ್ಯಾಲಯ ನಿವೃತ್ತ ಅಧ್ಯಾಪಕ ವಿ.ಎಸ್.ಹೆಗಡೆ ಮಾತನಾಡಿ,  ಮಹರ್ಷಿ ವಾಲ್ಮೀಕಿ ಗುರುವಾಗಿ, ಕವಿಯಾಗಿ ಭಾರತೀಯರಿಗೆ ಸ್ಫೂರ್ತಿಯಾಗಿದೆ.ವಾಲ್ಮೀಕಿ ರಾಮಾಯಣ ರಾಮನ ಪಯಣದ ಕಥೆಯಾಗಿದೆ. ಸದ್ಗುಣ ಮತ್ತು ದುರ್ಗುಣ ನಡುವಿನ ಸಂಘರ್ಷದಲ್ಲಿ ಸದ್ಗುಣಕ್ಕೆ ಜನಮನ್ನಣೆ ಮತ್ತು ಜಯವಿದೆ ಎಂಬ ಸಂದೇಶ ಕಾವ್ಯದಲ್ಲಿದೆ. ರಾಮಾಯಣ ಕಾವ್ಯದಲ್ಲಿ ಸಾರ್ವಕಾಲಿಕ ಸತ್ಯಗಳ ಅಂಶವಿದೆ. ಸತ್ವಯುತವಾದ ಮತ್ತು ಮೌಲ್ಯಯುತವಾದ ಸಾಹಿತ್ಯ ಸೃಷ್ಟಿಗೆ ಪ್ರೇರಣೆಯಾಗಿದೆ ಎಂದರು.

ದೊಡ್ಡಬಳ್ಳಾಪುರ ತಾಲ್ಲೂಕು ಕಸಬಾ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಕೋಶಾಧ್ಯಕ್ಷ ಜಿ.ಸುರೇಶ್ ಮಾತನಾಡಿ,  ಕನ್ನಡ ಸಾಹಿತ್ಯ ಮತ್ತು ಸಂಸ್ಕೃತಿಯ ಮೇಲೆ  ವಾಲ್ಮೀಕಿ ಮತ್ತು ರಾಯಾಯಣ ಕಾವ್ಯದ ಪ್ರಭಾವ ಇದೆ. ರಾಮಾಯಣ ‌ಬರೀ ರಾಜರ ಕಥೆಗಷ್ಟೇ ಸೀಮಿತವಾಗಿಲ್ಲ. ಧಾರ್ಮಿಕ ಮತ್ತು ಸಾಮಾಜಿಕ‌‌ ವಿಚಾರಗಳನ್ನು ಒಳಗೊಂಡ ಕಾವ್ಯವಾಗಿದೆ. ರಾಮಾಯಣ ಕಾವ್ಯ ಹಲವು ವೈಶಿಷ್ಟ್ಯಗಳಿಂದ ಶತಶತಮಾನಗಳಿಂದ ಜನಪ್ರಿಯ ಕಾವ್ಯವಾಗಿದೆ. ವಾಲ್ಮೀಕಿ ಅವರು ಕವಿಗಳಿಗೆ ಸಾರ್ವಭೌಮ ಆಗಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ  ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಕೋಶಾಧ್ಯಕ್ಷ ನಂ.ಮಹಾದೇವ್, ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು  ಅಧ್ಯಕ್ಷ ಪಿ.ಗೋವಿಂದರಾಜು,  ನಿಕಟಪೂರ್ವ ಅಧ್ಯಕ್ಷೆ ಪ್ರಮೀಳಾ ಮಹಾದೇವ, ಗೌರವ ಕಾರ್ಯದರ್ಶಿ ಎ.ಜಯರಾಮ್, ಕೋಶಾಧ್ಯಕ್ಷ ಸಾ.ಲ.ಕಮಲನಾಥ್, ಪ್ರತಿನಿಧಿ ಸಫೀರ್,  ಭಾರತ ಸ್ಕೌಟ್ಸ್ ಮತ್ತು ಗೈಡ್ ಸಹಾಯಕ ವೆಂಕಟರಾಜು, ಕಲಾವಿದರಾದ ದರ್ಗಾಜೋಗಿಹಳ್ಳಿ ಮಲ್ಲೇಶ್, ಎಂ.ರಾಮಕೃಷ್ಣ, ಮುನಿರತ್ನಮ್ಮ ಮುಂತಾದವರು ಭಾಗವಹಿಸಿದ್ದರು.

ರಾಜಕೀಯ

ಸಣ್ಣ ವ್ಯಾಪಾರಿಗಳಿಗೆ GST ಬಿಸಿ; ಸಿಎಂ ಸಿದ್ದರಾಮಯ್ಯ ವಿರುದ್ಧ ಬಿ.ವೈ. ವಿಜಯೇಂದ್ರ ವಾಗ್ದಾಳಿ

ಸಣ್ಣ ವ್ಯಾಪಾರಿಗಳಿಗೆ GST ಬಿಸಿ; ಸಿಎಂ ಸಿದ್ದರಾಮಯ್ಯ ವಿರುದ್ಧ ಬಿ.ವೈ. ವಿಜಯೇಂದ್ರ ವಾಗ್ದಾಳಿ

ಜಿಎಸ್‍ಟಿ, ಕೇಂದ್ರಕ್ಕೆ ಹೋಗುತ್ತದೆ ಎಂಬುದು ಎಷ್ಟು ಸತ್ಯವೋ, ದೇಶದ ಯಾವುದೇ ರಾಜ್ಯದಲ್ಲಿ ಇಂಥ ಬೆಳವಣಿಗೆ ಆಗಿಲ್ಲ. B.Y. Vijayendra

[ccc_my_favorite_select_button post_id="111365"]
ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿ: ಬಿ.ವೈ.ವಿಜಯೇಂದ್ರ

ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿ: ಬಿ.ವೈ.ವಿಜಯೇಂದ್ರ

ಸಿದ್ದರಾಮಯ್ಯನವರು ಮತ್ತು ಕಾಂಗ್ರೆಸ್ ಪಕ್ಷದ ವರಿಷ್ಠರನ್ನು ಪ್ರಶ್ನಿಸಲು ಬಯಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ (B.Y. Vijayendra) ಅವರು ತಿಳಿಸಿದ್ದಾರೆ.

[ccc_my_favorite_select_button post_id="111198"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಮಲಗಿದ್ದ ವೇಳೆ ಮನೆಯಲ್ಲಿ ಬೆಂಕಿ.. ವ್ಯಕ್ತಿ ಸಾವು.!

ದೊಡ್ಡಬಳ್ಳಾಪುರ: ಮಲಗಿದ್ದ ವೇಳೆ ಮನೆಯಲ್ಲಿ ಬೆಂಕಿ.. ವ್ಯಕ್ತಿ ಸಾವು.!

ಆಕಸ್ಮಿಕವಾಗಿ ತಗುಲಿದ ಬೆಂಕಿಯ (Fire) ಕೆನ್ನಾಲಿಗೆಗೆ ಮನೆಯಲ್ಲಿ ಮಲಗಿದ್ದ ವೇಳೆ ವ್ಯಕ್ತಿಯೋರ್ವ ಸುಟ್ಟು ಸಾವನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ

[ccc_my_favorite_select_button post_id="111353"]
Accident; ರಾಷ್ಟ್ರೀಯ ಹೆದ್ದಾರಿಯಲ್ಲಿ ಮಗುಚಿ ಬಿದ್ದ ಲಾರಿ.. ಮಾವಿನ ಕಾಯಿಗಾಗಿ ಮುಗಿಬಿದ್ದ ಜನ

Accident; ರಾಷ್ಟ್ರೀಯ ಹೆದ್ದಾರಿಯಲ್ಲಿ ಮಗುಚಿ ಬಿದ್ದ ಲಾರಿ.. ಮಾವಿನ ಕಾಯಿಗಾಗಿ ಮುಗಿಬಿದ್ದ ಜನ

ಮಾವಿನ ಕಾಯಿ ತುಂಬಿಕೊಂಡು ಸಾಗುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪೊ ಮಗುಚಿ ಬಿದ್ದಿರುವ ಘಟನೆ (Accident)

[ccc_my_favorite_select_button post_id="111232"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!