ಬೆಂಗಳೂರಿಗೆ 2ನೇ ವಿಮಾನ ನಿಲ್ದಾಣ ವಾರದಲ್ಲಿ ಆಖೈರು; ಅಂತಿಮ ಸುತ್ತಿನಲ್ಲಿ 5 ಸ್ಥಳ ಯಾವುವು ನೋಡಿ

ಬೆಂಗಳೂರು: ಜಾಗತಿಕ ಮಟ್ಟದಲ್ಲಿ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಬೆಂಗಳೂರು ಮಹಾನಗರದ ಸಾರ್ವಜನಿಕರು ಮತ್ತು ಉದ್ಯಮಗಳಿಗೆ ಇನ್ನೊಂದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಅತ್ಯಗತ್ಯವಾಗಿದೆ. ಇದಕ್ಕಾಗಿ ಸರಕಾರವು ಐದು ಸ್ಥಳಗಳನ್ನು ಗುರುತಿಸಿದೆ. ಆದರೆ ಇವುಗಳ ಪೈಕಿ ಯಾವುದನ್ನೂ ಆಖೈರು ಮಾಡಿಲ್ಲ. ಈ ಸಂಬಂಧ ಇನ್ನೊಂದು ವಾರದಲ್ಲಿ ಸಭೆ ಸೇರಿ, ಅಂತಿಮ ತೀರ್ಮಾನಕ್ಕೆ ಬರಲಾಗುವುದು ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ತಿಳಿಸಿದ್ದಾರೆ.

ಶುಕ್ರವಾರ ಅವರು ತಮ್ಮ ಕಚೇರಿಯಲ್ಲಿ ಕರೆದಿದ್ದ ಮಹತ್ತ್ವದ ಸಭೆಯ ನಂತರ ಈ ವಿಚಾರ ಹೇಳಿದ್ದಾರೆ. ಸಭೆಯಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಭಾಗವಹಿಸಿದ್ದರು.

ಸಭೆಯ ಬಳಿಕ ಮಾತನಾಡಿದ ಪಾಟೀಲ ಅವರು, `ಎರಡನೆಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸ್ಥಳವನ್ನು ಈಗಾಗಲೇ ತೀರ್ಮಾನಿಸಲಾಗಿದೆ ಎನ್ನುವ ವರದಿಗಳಿಗೆ ಆಧಾರವಿಲ್ಲ. ದಾಬಸಪೇಟೆ, ನೆಲಮಂಗಲ, ಬಿಡದಿ, ಹಾರೋಹಳ್ಳಿ ಸೇರಿದಂತೆ ಒಟ್ಟು ಐದು ಸ್ಥಳಗಳನ್ನು ನಾವು ಮುಕ್ತವಾಗಿ ಇಟ್ಟುಕೊಂಡಿದ್ದೇವೆ.

ಇವತ್ತು ಇನ್ನೂ ಒಂದು ಸ್ಥಳದ ಬಗ್ಗೆ ಯೂ ಚರ್ಚೆ ಆಗಿದೆ. ಇವುಗಳ ಬಗ್ಗೆ ವಸ್ತುಸ್ಥಿತಿ ಆಧರಿಸಿ ಮತ್ತು ಸಾಧಕ-ಬಾಧಕಗಳನ್ನು ಗಮನಿಸಿ, ವರದಿ ಕೊಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಇನ್ನೊಂದು ವಾರದಲ್ಲಿ ಮತ್ತೊಂದು ಸುತ್ತು ಸಭೆ ಸೇರಿ, ಸ್ಥಳವನ್ನು ಆಖೈರುಗೊಳಿಸಲಾಗುವುದು’ ಎಂದು ವಿವರಿಸಿದ್ದಾರೆ.

ವಿಮಾನ ನಿಲ್ದಾಣಕ್ಕೆ ಸ್ಥಳ ಆಯ್ಕೆ ಮಾಡುವಲ್ಲಿ ಯಾರಿಗೂ ರಾಜಕೀಯ ಹಿತಾಸಕ್ತಿಗಳೇನಿಲ್ಲ. ಬೆಂಗಳೂರಿನ ಜನತೆಗೆ ಮತ್ತು ಉದ್ಯಮಿಗಳ ಅನುಕೂಲವಷ್ಟೇ ಇಲ್ಲಿ ಮುಖ್ಯ. ಇದರಿಂದ ನಮ್ಮ ಆರ್ಥಿಕ ಬೆಳವಣಿಗೆಗೆ ಒಳ್ಳೆಯ ಕೊಡುಗೆ ಬರಬೇಕು. ಇದರ ಜೊತೆ ನಾವು ರಾಜಿ ಮಾಡಿಕೊಳ್ಳುವುದಿಲ್ಲ.

ಅಂತಿಮವಾಗಿ ಬೆಂಗಳೂರು ನಗರವು ಇನ್ನೊಂದು ಸ್ತರಕ್ಕೆ ಏರಬೇಕು ಎನ್ನುವುದಷ್ಟೇ ಸರಕಾರದ ಗುರಿಯಾಗಿದೆ. ಎರಡನೆಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನಮಗೆ ಸ್ಥಳಾವಕಾಶಕ್ಕೇನೂ ಕೊರತೆ ಇಲ್ಲ. ಬೆಂಗಳೂರಿನ ಸುತ್ತಮುತ್ತಲೂ ಜಾಗವಿದ್ದು, ಇದರಲ್ಲಿ ಸೂಕ್ತವಾದುದನ್ನು ಆಯ್ಕೆ ಮಾಡಲಾಗುವುದು ಎಂದು ಅವರು ವಿವರಿಸಿದ್ದಾರೆ.

ಮೆಟ್ರೋ ಕೇಳಿರುವ ಜಾಗ ನಮ್ಮದಲ್ಲ

ಮೆಟ್ರೋ ರೈಲು ಸಂಸ್ಥೆಯವರು (ಬಿಎಂಆರ್ಸಿಎಲ್) ಹೆಬ್ಬಾಳದ ಬಳಿ ಬಹುಮಾದರಿ ಸಾರಿಗೆ ಜಂಕ್ಷನ್ ರೂಪಿಸಲು 45 ಎಕರೆ ಜಾಗ ಕೇಳಿದ್ದಾರೆ. ಆದರೆ, ಆ ಜಾಗ ಕೆಐಎಡಿಬಿ ವಶದಲ್ಲಿಲ್ಲ. ಅದನ್ನು 2001ರಲ್ಲಿಯೇ `ಸಿಂಗಲ್ ಯೂನಿಟ್ ಕಾಂಪ್ಲೆಕ್ಸ್’ ಪರಿಕಲ್ಪನೆಯಡಿ ಖಾಸಗಿ ಸಂಸ್ಥೆಗೆ ಸ್ವಾಧೀನ ಪಡಿಸಿ ಕೊಡಲಾಗಿದೆ. ಆದ್ದರಿಂದ ಮೆಟ್ರೋ ನಿಗಮಕ್ಕೆ ಆ ಸಂಸ್ಥೆಯೊಂದಿಗೆ ಮಾತುಕತೆ ನಡೆಸಲು ತಿಳಿಸಲಾಗಿದೆ ಎಂದು ಸಚಿವರು ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುಗಮ ಸಂಚಾರ ವ್ಯವಸ್ಥೆ ಬರಬೇಕು ಎನ್ನುವುದು ಸರಕಾರದ ಆಶಯವಾಗಿದೆ. ಆದರೆ, ಮೆಟ್ರೋದವರು ಕೇಳಿರುವ ಜಾಗ ಖಾಸಗಿಯವರ ಸ್ವತ್ತಾಗಿದೆ. ಇದರಲ್ಲಿ ಕೆಐಎಡಿಬಿ ಪಾತ್ರವೇನೂ ಇಲ್ಲ. ಬಹುಮಾದರಿ ಸಾರಿಗೆ ಸಂಕೀರ್ಣವು ಒಂದೇ ಕಡೆ ಬಂದರೆ ಜನರಿಗೂ ಅನುಕೂಲವಾಗಲಿದೆ. ಇದರಿಂದ ವಾಹನ ದಟ್ಟಣೆಯೂ ಕಡಿಮೆಯಾಗುವ ಸಂಭವವಿದೆ ಎಂದು ಅವರು ನುಡಿದಿದ್ದಾರೆ.

ಸಭೆಯಲ್ಲಿ ಸರಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಮುಖ್ಯಮಂತ್ರಿಗಳ ಹೆಚ್ಚುವರಿ ಕಾರ್ಯದರ್ಶಿ ಎಲ್ ಕೆ ಅತೀಕ್, ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್ ಸೆಲ್ವಕುಮಾರ್, ನಮ್ಮ ಮೆಟ್ರೊ ವ್ಯವಸ್ಥಾಪಕ ನಿರ್ದೇಶಕ ಮಹೇಶ್ವರ ರಾವ್, ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಡಾ.ಎನ್ ಮಂಜುಳಾ, ಕೆಐಎಡಿಬಿ ಸಿಇಒ ಡಾ.ಮಹೇಶ, ಸೇರಿದಂತೆ ಮತ್ತಿತರರು ಇದ್ದರು.

ರಾಜಕೀಯ

ದೊಡ್ಡಬಳ್ಳಾಪುರ TAPMCS ಚುನಾವಣೆ: ತಾಲ್ಲೂಕಿನಾಧ್ಯಂತ ಬಿರುಸಿನ ಪ್ರಚಾರ

ದೊಡ್ಡಬಳ್ಳಾಪುರ TAPMCS ಚುನಾವಣೆ: ತಾಲ್ಲೂಕಿನಾಧ್ಯಂತ ಬಿರುಸಿನ ಪ್ರಚಾರ

ನವೆಂಬರ್ 2 ರಂದು ನಡೆಯಲಿರುವ ದೊಡ್ಡಬಳ್ಳಾಪುರ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ (TAPMCS) ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ.

[ccc_my_favorite_select_button post_id="115546"]
ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಆಯೋಜಿಸಿದ್ದ ಪೊಲೀಸ್ ಸಿಬ್ಬಂದಿಯ ನೂತನ ಪೀಕ್ ಕ್ಯಾಚ್ ವಿತರಣೆ: Cmsiddaramaiah, D.K.Shivakumar

[ccc_my_favorite_select_button post_id="115427"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಗುಡ್ಮಾರ್ನಿಂಗ್ ನ್ಯೂಸ್: ಆಸ್ಟ್ರೇಲಿಯಾಗೆ ಮುಖಭಂಗ.. ಫೈನಲ್‌ಗೆ ಇಂಡಿಯಾ

ಗುಡ್ಮಾರ್ನಿಂಗ್ ನ್ಯೂಸ್: ಆಸ್ಟ್ರೇಲಿಯಾಗೆ ಮುಖಭಂಗ.. ಫೈನಲ್‌ಗೆ ಇಂಡಿಯಾ

ಭಾರತ (India) ತಂಡವು ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯ (Women's ODI World Cup tournament) ಸೆಮಿಫೈನಲ್ ಪಂದ್ಯದಲ್ಲಿ ಬಲಿಷ್ಠ ಆಸ್ಟ್ರೇಲಿಯಾ (Australia) ವಿರುದ್ಧ 5 ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿದೆ.

[ccc_my_favorite_select_button post_id="115495"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ದೊಡ್ಡಬಳ್ಳಾಪುರ: ಅಪಘಾತ ನ್ಯೂಸ್ ಅಪ್ಡೇಟ್.. ಬಾಲಕ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ ನ್ಯೂಸ್ ಅಪ್ಡೇಟ್.. ಬಾಲಕ ದುರ್ಮರಣ

ದೊಡ್ಡಬಳ್ಳಾಪುರ ನಗರದ ಎಪಿಎಂಸಿ ಸಮೀಪದ ಹಾಲು ಶಿಥಲೀಕರಣ ಘಟಕದ ಬಳಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ (Accident), ಸುಮಾರು 11 ವರ್ಷದ ಬಾಲಕ ಸಾವನಪ್ಪಿರುವ ದಾರುಣ ಘಟನೆ ನಡೆದಿದೆ.

[ccc_my_favorite_select_button post_id="115509"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!