ಜಾರಿ ನಿರ್ದೇಶನಾಲಯದ ದಾಳಿ; ಆರ್‌.ಅಶೋಕ ಸ್ಪಷ್ಟನೆ

ಬೆಂಗಳೂರು: ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ. 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾದ ಮೇಲೆ ಜಾರಿ ನಿರ್ದೇಶನಾಲಯ ದಾಳಿ ಮಾಡಿದೆ. ಸಿಎಂ ಸಿದ್ದರಾಮಯ್ಯ ಅವರದ್ದೂ ಸೇರಿದಂತೆ ಸುಮಾರು 1,200 ಕ್ಕೂ ಅಧಿಕ ನಿವೇಶನಗಳ ಹಗರಣ ನಡೆದಿದೆ ಎಂಬ ದೂರು ಬಂದಿದ್ದು, ಅದಕ್ಕಾಗಿ ದಾಳಿ ಮಾಡಲಾಗಿದೆ.

3-4 ಸಾವಿರ ಕೋಟಿ ರೂ. ಹಗರಣ ನಡೆದಿದೆ ಎಂದು ಮುಡಾ ಅಧ್ಯಕ್ಷರಾಗಿದ್ದ, ಕಾಂಗ್ರೆಸ್‌ನವರೇ ಆದ ಮರಿಗೌಡ ಪತ್ರದಲ್ಲಿ ತಿಳಿಸಿದ್ದರು. ಅದಾದ ಬಳಿಕ ಸ್ನೇಹಮಯಿ ಕೃಷ್ಣ ಇಡಿಗೆ ದೂರು ನೀಡಿದ್ದಾರೆ. ಇದರಲ್ಲಿ ರಾಜಕೀಯದ ಪ್ರಶ್ನೆ ಉದ್ಭವವೇ ಆಗುವುದಿಲ್ಲ. ಇದರಲ್ಲಿ ಬಿಜೆಪಿ ಅಥವಾ ಕೇಂದ್ರ ಸರ್ಕಾರದ ಪಾತ್ರವೇ ಇಲ್ಲ ಎಂದರು.

ಇದನ್ನು ರಾಜಕೀಯವಾಗಿ ನೋಡಬಾರದು. ನಿವೇಶನಗಳು ವಾಪಸ್‌ ಸಿಕ್ಕರೆ ಹಾಗೂ ಹಣ ಸಿಕ್ಕರೆ ರಾಜ್ಯ ಸರ್ಕಾರಕ್ಕೆ ಲಾಭವಾಗುತ್ತದೆ. ಸರ್ಕಾರದಲ್ಲಿ ಖಜಾನೆ ಖಾಲಿಯಾಗಿ ಸಂಬಳ ಕೊಡಲಾಗದ ಪರಿಸ್ಥಿತಿ ಇದೆ. ಇಂತಹ ಸ್ಥಿತಿಯಲ್ಲಿ ಖಜಾನೆಗೆ ಹಣ ಬಂದರೆ ಒಳ್ಳೆಯದು. ಇದನ್ನು ಕಾಂಗ್ರೆಸ್‌ನವರು ಸ್ವಾಗತಿಸಬೇಕು. ಇದನ್ನು ರಾಜಕಾರಣ ಎನ್ನಲು ಬಿಜೆಪಿ ನಾಯಕರೇನೂ ದೂರು ನೀಡಿಲ್ಲ ಎಂದರು.

ಅಕ್ರಮ ಹಣ ವರ್ಗಾವಣೆಯಾಗಿಲ್ಲ ಎಂದಾದರೆ 3-4 ಸಾವಿರ ಕೋಟಿ ರೂ. ಹಣದ ಅಕ್ರಮ ನಡೆದಿರುವುದು ಹೇಗೆ? ನಿವೇಶನ ಮಂಜೂರಾಗಿದೆ ಎಂದಮೇಲೆ ಅದರ ಹಣ ಯಾರಿಗಾದರೂ ಸಿಕ್ಕೇ ಸಿಕ್ಕಿರುತ್ತದೆ. ಅದಕ್ಕೆ ನಗದಿನಲ್ಲಿ ಹಣ ನೀಡಲಾಗಿರುತ್ತದೆ. ಅಂತಹ ನಗದು ಕಪ್ಪು ಹಣವೇ ಆಗಿರುತ್ತದೆ.

ಇಡಿ ಬಗ್ಗೆ ಪ್ರಶ್ನೆ ಮಾಡುವವರು ಕೋರ್ಟ್‌ನಲ್ಲಿ ಪ್ರಶ್ನೆ ಮಾಡಬಹುದಿತ್ತು. ಆದರೆ ಸಿಎಂ ಸಿದ್ದರಾಮಯ್ಯನವರು ಕೋರ್ಟ್‌ಗೆ ಹೋಗಲೇ ಇಲ್ಲ. ಇಡಿಗೆ ಅಧಿಕಾರ ಇಲ್ಲವೆಂದಾದರೆ ಎಸ್‌ಐಟಿ ಮಾಡಲು ಸರ್ಕಾರಕ್ಕೆ ಅಧಿಕಾರವಿದೆಯೇ ಎಂದು ಪ್ರಶ್ನಿಸಬೇಕಾಗುತ್ತದೆ ಎಂದರು.

ಮುಂದಿನ ಹೋರಾಟದ ಕುರಿತು ಪಕ್ಷದ ಮಟ್ಟದಲ್ಲಿ ಚರ್ಚಿಸಲಾಗುವುದು. ಇಡಿ ದಾಳಿಯ ನಂತರ ದಾಖಲೆಗಳು ಸಿಕ್ಕ ಬಳಿ ಪರಿಶೀಲಿಸಿ ಹೋರಾಟ ಮಾಡಲಾಗುವುದು ಎಂದರು.

ರಾಜಕೀಯ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕವೂ ಒಳಗೊಂಡಂತೆ ಹಲವು ರಾಜ್ಯಾಧ್ಯಕ್ಷರ ಹೆಸರು ಘೋಷಣೆ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y.Vijayendra) ತಿಳಿಸಿದ್ದಾರೆ

[ccc_my_favorite_select_button post_id="109998"]
ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ ಹೆಚ್.ಕೆ.ಪಾಟೀಲ್ ತಿರುಗೇಟು

ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ

ಈಗ ಅಕ್ರಮ ಗಣಿಗಾರಿಕೆ ಪತ್ರದ ಮಾತಾಡುವ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದಾಗ ಅಭಿಷೇಕ ಮಾಡಿಕೊಂಡು ಕುಳಿತಿದ್ರಾ; ಸಚಿವ ಹೆಚ್.ಕೆ.ಪಾಟೀಲ್ (H.K.Patil)

[ccc_my_favorite_select_button post_id="109884"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

HD ಕ್ಯಾಮೆರಾಗಳೊಂದಿಗೆ ದಂಪತಿಗಳು ಲೈವ್ ಬೆತ್ತಲೆ ವಿಡಿಯೋ (Live nude video) ವ್ಯವಹಾರ ನಡೆಸಿ ಪೊಲೀಸರ ಅತಿಥಿಯಾಗಿದ್ದಾರೆ.

[ccc_my_favorite_select_button post_id="109995"]
ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆ: ಜಿಲ್ಲೆಯಲ್ಲಿ ದಿನೇ ದಿನೇ ರಸ್ತೆ ಅಪಘಾತಗಳು ಹೆಚ್ಚುತ್ತಲೇ ಇವೆ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೆಚ್ಚು ಅಪಘಾತಗಳು ಸಂಭವಿಸುತ್ತಿದ್ದೆ; ಜಿಲ್ಲಾಧಿಕಾರಿ ಎ.ಬಿ ಬಸವರಾಜು (Deputy Commissioner A.B. Basavaraju)

[ccc_my_favorite_select_button post_id="109939"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]