
ಹಾವೇರಿ: ಜಿಲ್ಲೆಯಲ್ಲಿ ಸುರಿದ ಮಳೆ ನೀರಿನಲ್ಲಿ 12 ವರ್ಷದ ಬಾಲಕನೋರ್ವ ಕೊಚ್ಚಿಹೋಗಿ ಸಾವನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರಸಭೆ ಪೌರಾಯುಕ್ತ ಮತ್ತು ಕಿರಿಯ ಆರೋಗ್ಯ ನಿರೀಕ್ಷಕನನ್ನು ಅಮಾನತ್ತುಗೊಳಿಸಲಾಗಿದೆ.
ನಗರಸಭೆ ಪೌರಾಯುಕ್ತ ಪರಶುರಾಮ್ ಎಂ. ಛಲವಾದಿ ಮತ್ತು ಕಿರಿಯ ಆರೋಗ್ಯ ನಿರೀಕ್ಷಕ ರಮೇಶ್ ಆರ್. ಮುಂಜೋಜಿ ಅಮಾನತ್ತಾದ ಅಧಿಕಾರಿಗಳಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್ ಮೌಖಿಕ ಆದೇಶದ ಹಿನ್ನೆಲೆ ಜಿಲ್ಲಾಧಿಕಾರಿ ವಿಜಯ್ ಮಹಾಂತೇಶ್ ಅಮಾನತ್ತು ಮಾಡಿದ್ದಾರೆಂದು ವರದಿಯಾಗಿದೆ.
ಇದನ್ನೂ ಓದಿ; ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದ ಬಾಲಕ ಸಾವು
ಚರಂಡಿ ಕಾಲುವೆ ಮೇಲಿನ ಕಲ್ಲು ಮುಚ್ಚದೇ ನಿರ್ಲಕ್ಷ್ಯ ವಹಿಸಿದ ಕಾರಣ ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಿ ಜಿಲ್ಲಾಧಿಕಾರಿ ಗುರುವಾರ ಆದೇಶಿಸಿದ್ದಾರೆ.
ಚಂಡಮಾರುತದ ಕಾರಣ ಧಾರಾಕಾರವಾಗಿ ಸುರಿದ ಮಳೆಗೆ ಚರಂಡಿಯಲ್ಲಿ ಕೊಚ್ಚಿ ಹೋಗಿದ್ದ 10 ವರ್ಷದ ಬಾಲಕ ನಿವೇದನ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.