ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡಬೆಳವಂಗಲ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಡಾ.ಎಂ.ಬಿ.ನವೀನ್ ಕುಮಾರ್ ಅವರನ್ನು ವರ್ಗಾವಣೆ ಮಾಡಲಾಗಿದೆ.
ಈ ಕುರಿತಂತೆ ಡೈರೆಕ್ಟರ್ ಜನರಲ್ ಮತ್ತು ಇನ್ಸ್ಪೆಕ್ಟರ್ ಜನರಲ್ ಆಫ್ ಪೊಲೀಸ್ ಇವರ ಪರವಾಗಿ ಸೌಮೇಂದು ಮುಖರ್ಜಿ ಅವರು ಆದೇಶಿಸಿದ್ದಾರೆ.
ಈ ಆದೇಶದ ರಾಜ್ಯದ ವಿವಿಧ ಪೊಲೀಸ್ ಠಾಣೆಗಳ 55 ಮಂದಿ ಇನ್ಸ್ಪೆಕ್ಟರ್ ಸ್ಥಾನಗಳಿಗೆ ವರ್ಗಾವಣೆ ಮಾಡಲಾಗಿದೆ.
ಇದರನ್ವಯ ದೊಡ್ಡಬೆಳವಂಗಲ ಇನ್ಸ್ಪೆಕ್ಟರ್ ಆಗಿದ್ದ, ಸರಳ ಹಾಗೂ ಸ್ನೇಹಮಯಿ ಇನ್ಸ್ಪೆಕ್ಟರ್ ಡಾ.ಎಂ.ಬಿ.ನವೀನ್ ಕುಮಾರ್ ಅವರನ್ನು ಮುಂದಿನ ಸ್ಥಳ ನಿಯುಕ್ತಿಗಾಗಿ ಪೊಲೀಸ್ ಪ್ರಧಾನ ಕಚೇರಿಗೆ ವರ್ಗಾವಣೆ ಮಾಡಲಾಗಿದೆ.
ಇವರ ಸ್ಥಾನಕ್ಕೆ ನವೀನ್ ಕುಮಾರ್ ಅವರಂತೆಯೇ ಸರಳ ಹಾಗೂ ಸ್ನೇಹಮಯಿ ಇನ್ಸ್ಪೆಕ್ಟರ್ ಮುನಿಕೃಷ್ಣ ಡಿ.ಹೆಚ್. ಅವರನ್ನು ವರ್ಗಾವಣೆ ಮಾಡಲಾಗಿದೆ.
ಮುನಿಕೃಷ್ಣ ಅವರು ಈ ಹಿಂದೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಆಗಿ ಕಾರ್ಯನಿರ್ವಹಿಸಿದ್ದರು.