ಕೇಂದ್ರ ಮಾಜಿ ಸಚಿವ ದಿ.ಆರ್.ಎಲ್.ಜಾಲಪ್ಪ 99ನೇ ಜನ್ಮದಿನ: ವಿವಿಧ ಕಾರ್ಯಕ್ರಮ

ದೊಡ್ಡಬಳ್ಳಾಪುರ; ಆರ್.ಎಲ್.ಜಾಲಪ್ಪನವರು ನೇರನಡೆ ಮತ್ತು ನಿಷ್ಠುರ ವ್ಯಕ್ತಿತ್ವದಿಂದಲೇ ಹೆಸರಾದ ಅಪರೂಪದ ರಾಜಕಾರಣಿಯಾಗಿದ್ದರು ಎಂದು ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಕೆ.ಎಂ.ಕೃಷ್ಣಮೂರ್ತಿ ಹೇಳಿದರು.

ಇಲ್ಲಿನ ಆರ್.ಎಲ್.ಜಾಲಪ್ಪ ಸಮೂಹ ಶಿಕ್ಷಣ ಸಂಸ್ಥೆಗಳ ನೇತೃತ್ವದಲ್ಲಿ ಶನಿವಾರ ಶ್ರೀ ದೇವರಾಜ ಅರಸ್‌ ಅಂತಾರಾಷ್ಟ್ರೀಯ ವಸತಿ ಶಾಲೆ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮುಖ್ಯಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು.

ಜಾಲಪ್ಪ ಅವರು ಪರಿಸರ, ಶಿಕ್ಷಣ, ಗ್ರಾಮೀಣಾಭಿವೃದ್ದಿ, ಸಹಕಾರ ಸೇರಿದಂತೆ ವಿವಿಧ ವಲಯಗಳಲ್ಲಿ ಅನೇಕ ಸೇವಾ ಕಾರ್‍ಯಗಳನ್ನು ಜಾರಿಗೆ ತಂದ ಹೆಗ್ಗಳಿಕೆ ಹೊಂದಿದ್ದಾರೆ. ಅವರು ಸ್ಥಾಪಿಸಿರುವ ದೇವರಾಜ ಅರಸ್ ಶಿಕ್ಷಣ ಸಂಸ್ಥೆ ಹಿಂದುಳಿದ ವರ್ಗದ, ಗ್ರಾಮೀಣ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣವನ್ನು ಮಹತ್ವದ ನೀಡುವ ಕೆಲಸ ಮಾಡುತ್ತಿದೆ ಎಂದರು.

ಶ್ರೀ ದೇವರಾಜ ಅರಸ್‌ ಶಿಕ್ಷಣ ಸಂಸ್ಥೆ ಉಪಾಧ್ಯಕ್ಷ ಜೆ.ರಾಜೇಂದ್ರ ಮಾತನಾಡಿ, ಜಾಲಪ್ಪ ಅವರ ಒತ್ತಾಸೆಯಿಂದ ರಾಜ್ಯದಲ್ಲಿ ಜಾರಿಗೆ ಬಂದ ಹಲವು ಯೋಜನೆಗಳು ಇಂದಿಗೂ ಜನಸ್ನೇಹಿಯಾಗಿವೆ. ದೊಡ್ಡಬಳ್ಳಾಪುರದ ಅಪರೆಲ್ ಪಾರ್ಕ್ ಸಾವಿರಾರು ಜನರಿಗೆ ಉದ್ಯೋಗಾವಕಾಶಗಳನ್ನು ನೀಡಿದೆ. ಮುಖ್ಯವಾಗಿ ಮಹಿಳಾ ಉದ್ಯೋಗಿಗಳಿಗೆ ಆಸರೆಯಾಗಿದೆ.

ಶೈಕ್ಷಣಿಕವಾಗಿಯೂ ಸಮಾಜವನ್ನು ಸದೃಢವಾಗಿ ಕಟ್ಟುವ ಉದ್ದೇಶದಿಂದ ಅನೇಕ ವಿದ್ಯಾ ಸಂಸ್ಥೆಗಳನ್ನು ದೇವರಾಜ ಅರಸ್ ಶಿಕ್ಷಣ ಸಂಸ್ಥೆಯ ಅಡಿಯಲ್ಲಿ ಸ್ಥಾಪಿಸಿ ಗ್ರಾಮೀಣ ವಿದ್ಯಾರ್ಥಿಗಳ ಅಧ್ಯಯನಕ್ಕೆ ಪೂರಕ ವಾತಾವರಣ ನಿರ್ಮಿಸಿದ್ದಾರೆ ಎಂದರು.

ಪ್ರತಿಭಾ ಪುರಸ್ಕಾರ: ಇದೇ ವೇಳೆ ಸಾಂಸ್ಕೃತಿಕ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ ಆರ್.ಎಲ್.ಜಾಲಪ್ಪ ಸಮೂಹ ಶಿಕ್ಷಣ ಸಂಸ್ಥೆಯ ವಿವಿಧ ಶೈಕ್ಷಣಿಕ ಘಟಕಗಳ ವಿದ್ಯಾರ್ಥಿಗಳಿಗೆ ಅಭಿನಂದಿಸಿ ಪ್ರತಿಭಾ ಪುರಸ್ಕಾರ ನೀಡಲಾಯಿತು.

ಶ್ರೀದೇವರಾಜ ಅರಸ್‌ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಕೆ.ಜಿ.ಹನುಮಂತರಾಜು, ವಿಜಯಲಕ್ಷ್ಮಿ-ಆರ್.ಎಲ್.ಜಾಲಪ್ಪ ಶೈಕ್ಷಣಿಕ ದತ್ತಿ ಟ್ರಸ್ಟಿ ಎಂ.ಆರ್.ಶ್ರೀನಿವಾಸ್, ಲಯನ್ಸ್‌ ಕ್ಲಬ್‌ ಆಫ್ ಆರ್.ಎಲ್.ಜಾಲಪ್ಪ ಇನ್ಸ್‌ಟಿಟ್ಯೂಷನ್ಸ್‌ ಅಧ್ಯಕ್ಷ ಜೆ.ಆರ್.ರಾಕೇಶ್, ಆರ್‌ಎಲ್‌ಜೆಐಟಿ ಪ್ರಾಂಶುಪಾಲ ಡಾ.ವಿಜಯ್‌ಕಾರ್ತಿಕ್, ಅಕಾಡೆಮಿಕ್ ನಿರ್ದೇಶಕ ಡಾ.ಶ್ರೀನಿವಾಸರೆಡ್ಡಿ, ಎಒ ರಮೇಶ್‌ಕುಮಾರ್, ಕೃಷ್ಣಪ್ಪ, ವಿವಿಧ ಶೈಕ್ಷಣಿಕ ಘಟಕಗಳ ಪ್ರಾಂಶುಪಾಲರು, ಉಪಪ್ರಾಂಶುಪಾಲರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ರೋಗಿಗಳಿಗೆ ಹಾಲು-ಹಣ್ಣು ವಿತರಣೆ:

ಜಾಲಪ್ಪ ಹುಟ್ಟುಹಬ್ಬದ ಅಂಗವಾಗಿ ಲಯನ್ಸ್ ಕ್ಲಬ್ ಆಫ್ ದೊಡ್ಡಬಳ್ಳಾಪುರ ಆರ್.ಎಲ್.ಜಾಲಪ್ಪ ಇನ್ಸ್‌ಸ್ಟಿಟ್ಯೂಷನ್ ಸಹಯೋಗದಲ್ಲಿ ಇಲ್ಲಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿನ ರೋಗಿಗಳಿಗೆ ಹಾಲು, ಬ್ರೆಡ್, ಹಣ್ಣುಗಳನ್ನು ವಿತರಿಸಲಾಯಿತು. ತೂಬಗೆರೆಯ ಆರ್.ಎಲ್.ಜಾಲಪ್ಪ ವೃದ್ದಾಶ್ರಮದಲ್ಲಿನ ಆಶ್ರಿತರಿಗೆ ಸವಲತ್ತುಗಳ ವಿತರಣೆ ನಡೆಯಿತು. ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜಾ ಕಾರ್‍ಯಕ್ರಮಗಳು ನಡೆದವು.

ಜಾಲಪ್ಪ ಸ್ಮೃತಿವನ ಆವರಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ವಿವಿಧ ಶೈಕ್ಷಣಿಕ ಘಟಕಗಳ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಸಿಹಿ ಹಂಚಿಕೆ ನಡೆಯಿತು.

ರಾಜಕೀಯ

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ

"ನಾವು ಅವರ (ಧರ್ಮಸ್ಥಳ) ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ ಪರ. ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡಬೇಡಿ ಎಂದಷ್ಟೇ ನಾವು ಹೇಳುತ್ತಿದ್ದೇವೆ": ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="113000"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!