ಪ್ರಲ್ಹಾದ್ ಜೋಷಿಯವರ ರಾಜೀನಾಮೆ ಕೇಳುವುದು ಸೇಡಿನ ರಾಜಕಾರಣ; ಬಸವರಾಜ ಬೊಮ್ಮಾಯಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರ ಕಳೆದುಕೊಳ್ಳುವ ಭಯದಿಂದ ಜಾತಿ ಗಣತಿ ಬಿಡುಗಡೆ ಮಾಡುವುದಾಗಿ ಹೇಳುತ್ತಿದ್ದಾರೆ. ಮೊದಲು ಅದನ್ನು ಬಹಿರಂಗ ಪಡೆಸಲಿ, ಸಾರ್ವಜನಿಕ ಚರ್ಚೆಯಾಗಲಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ.

ಭಾನುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜಾತಿ ಜನಗಣತಿ ಕುರಿತು ಅಖಿಲ ಭಾರತ ವೀರಶೈವ ಮಹಾಸಭೆ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ತಮ್ಮನ್ನು ಭೇಟಿ ಮಾಡಿರುವ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಜಾತಿ ಗಣತಿ ವಿಚಾರದಲ್ಲಿ ನಮ್ಮ ನಿಲುವು ಸ್ಪಷ್ಟವಾಗಿದೆ.

ಇದು ಜಾತಿ ಗಣತಿಯಲ್ಲ. ಸಾಮಾಜಿಕ ಆರ್ಥಿಕ ಸಮೀಕ್ಷೆ, ರಾಜ್ಯ ಸರ್ಕಾರಕ್ಕೆ ಜಾತಿ ಗಣತಿ ಮಾಡುವ ಅಧಿಕಾರ ಇಲ್ಲ. ಕೇಂದ್ರ ಸರ್ಕಾರಕ್ಕೆ ಮಾತ್ರ ಜಾತಿ ಗಣತಿ ಮಾಡುವ ಅಧಿಕಾರವಿದೆ. ಬಿಹಾರ ಸರ್ಕಾರದ ಜಾತಿ ಗಣತಿಗೂ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಇವರು ಯಾವುದೋ ಸಮೀಕ್ಷೆ ಮಾಡಿ ಅದಕ್ಕೆ ಜಾತಿ ಗಣತಿಯ ಲೇಪನ ಮಾಡುತ್ತಿದ್ದಾರೆ ಎಂದು ಹೇಳಿದರು.

ಇನ್ನು ಈ ವರದಿ ವೈಜ್ಞಾನಿಕವಾಗಿಯೂ ಇಲ್ಲ, ಅಂಕಿ‌ ಅಂಶ ಸಮರ್ಪಕವಾಗಿಲ್ಲ. ಹಲವು ಸಮುದಾಯಗಳಿಂದ ಆಕ್ಷೇಪಣೆ ಬಂದಿದೆ. ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದ ಕಾಂತರಾಜ್ ಅವರು ಸಿದ್ದಪಡಿಸಿದ್ದ ವರದಿ ಸಮರ್ಪಕವಾಗಿಲ್ಲ ಎಂದು ಅಂದಿನ ಆಯೋಗದ ಕಾರ್ಯದರ್ಶಿ ಹಾಗೂ ಸದಸ್ಯರು ಸಹಿ ಹಾಕಿರಲಿಲ್ಲ. ನಂತರ ಬಂದ ಆಯೋಗದ ಅಧ್ಯಕ್ಷರಾದ ಜಯಪ್ರಕಾಶ್ ಹೆಗಡೆ ಅವರು, ಯಾವುದೇ ಸಮೀಕ್ಷೆ ನಡೆಸದೇ ಹಿಂದಿನ ಆಯೋಗದ ಅಧ್ಯಕ್ಷರು ಸಿದ್ದಪಡಿಸಿದ್ದ ವರದಿಯನ್ನೇ ಪರಿಷ್ಕರಿಸಿ ಸರ್ಕಾರಕ್ಕೆ ಸಲ್ಲಿಕೆ ಮಾಡಿದ್ದಾರೆ.

ಈ ವರದಿಯನ್ನು ಒಕ್ಕಲಿಗ ಸಮುದಾಯದವರು ವಿರೋಧಿಸಿದ್ದಾರೆ. ಸ್ವತ ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಅನೇಕ ಕಾಂಗ್ರೆಸ್ ಮುಖಂಡರು ಇದನ್ನು ವಿರೋಧಿಸಿದ್ದಾರೆ. ಅಖಿಲ ಭಾರತ ವೀರಶೈವ ಮಹಾಸಭೆ ಕೂಡ ವಿರೋಧಿಸಿದೆ.

ಎಲ್ಲ ಸಮುದಾಯಗಳ ಅನುಮಾನ ದೂರ‌ ಮಾಡುವ ಕೆಲಸ ಸಿಎಂ ಸಿದ್ದರಾಮಯ್ಯ ಮಾಡುತ್ತಿಲ್ಲ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಚರ್ಚಿಸಲಿ. ಇಷ್ಟೆಲ್ಲ ವಿರೋಧ ಇದ್ದರೂ ಜಾರಿ ಮಾಡುತ್ತೇವೆ ಅಂತಿದ್ದಾರೆ.

ಮೊದಲು ವರದಿ ಬಹಿರಂಗಪಡಿಸಲಿ, ಸಾರ್ವಜನಿಕವಾಗಿ ಚರ್ಚೆ ಆಗಲಿ. ಸಿದ್ದರಾಮಯ್ಯನವರು ವರದಿಯಲ್ಲಿ ಏನಿದೆ ಅಂತ ನೋಡಿಲ್ಲ ಅಂತಿದ್ದಾರೆ, ಆದರೆ ವರದಿ ರೆಡಿ ಮಾಡಿಸಿದವರೇ ಸಿದ್ದರಾಮಯ್ಯ. ದಿವಂಗತ ವಿ.ಪಿ.ಸಿಂಗ್ ಅವರು ಪ್ರಧಾನಿಯಾಗಿದ್ದಾಗ ಅಧಿಕಾರ ಹೋಗುವ ಸಂದರ್ಭದಲ್ಲಿ ಮಂಡಲ್ ವರದಿ ಜಾರಿ ಮಾಡಿದ್ದರು. ಅದೇ ರೀತಿ ಇವರು ಈಗ ಜಾತಿ ಗಣತಿ ಜಾರಿ ಮಾಡುವುದಾಗಿ ಹೇಳುತ್ತಿದ್ದಾರೆ ಎಂದು ಹೇಳಿದರು.

ಸಂವಿಧಾನಬದ್ಧ ತೀರ್ಮಾನ

ಪರಿಶಿಷ್ಟ ಜಾತಿ, ಪಂಗಡಗಳ ಮೀಸಲು ಪ್ರಮಾಣ ಹೆಚ್ಚಳ, ಎಸ್ ಸಿ ಮೀಸಲು ವರ್ಗೀಕರಣ, ಪಂಚಮಸಾಲಿ ಸಮುದಾಯದವರಿಗೆ ಪ್ರವರ್ಗ 2ಡಿಗೆ ಸೇರ್ಪಡೆ, ಮುಸ್ಲಿಮರಿಗೆ ಪ್ರತ್ಯೇಕ ಮೀಸಲು ರದ್ದು ಸೇರಿ ಎಲ್ಲವನ್ನು ನನ್ನ ಅವಧಿಯಲ್ಲಿ ಸಂವಿಧಾನಬದ್ಧವಾಗಿ ತೀರ್ಮಾನ ಮಾಡಲಾಗಿತ್ತು. ಬಿಜೆಪಿ ಸರ್ಕಾರ ಕೈಗೊಂಡ ಈ ನಿರ್ಧಾರಗಳನ್ನು ಪ್ರಶ್ನಿಸಿ ಕಾಂಗ್ರೆಸ್ ನ ಕೆಲವರು ಸುಪ್ರೀಂ ಕೋರ್ಟ್ ಗೆ ಮೊರೆ ಹೋದರು.

ವಿಧಾನಸಭೆ ಚುನಾವಣೆ ಹತ್ತಿರವಾಗಿದ್ದರಿಂದ ಮುಂದಿನ ವಿಚಾರಣೆವರೆಗೆ ಜಾರಿಗೊಳಿಸುವುದಿಲ್ಲ ಎಂದು ರಾಜ್ಯ ಸರ್ಕಾರ ತಿಳಿಸಿದ್ದನ್ನು ಸುಪ್ರೀಂ ಕೋರ್ಟ್ ಒಪ್ಪಿದೆಯೇ ಹೊರತು ತಡೆಯಾಜ್ಞೆ ನೀಡಿಲ್ಲವೆಂದು ಬೊಮ್ಮಾಯಿ ಹೇಳಿದರು.

ಎಸ್ ಸಿ, ಎಸ್ ಟಿ ಮೀಸಲು ಹೆಚ್ಚಳ, ಎಸ್ ಸಿ ಒಳಮೀಸಲು, ಪಂಚಮಸಾಲಿ ಸಮುದಾಯಕ್ಕೆ ಪ್ರತ್ಯೇಕ ಮೀಸಲು ಕೊಡುವ ಬಗ್ಗೆ ಕಾಂಗ್ರೆಸ್‌ ಸರ್ಕಾರಕ್ಕೆ ನೈಜ ಕಾಳಜಿಯಿದ್ದರೆ ಈ ನಿಟ್ಟಿನಲ್ಲಿ ಮುಂದುವರಿಯಬೇಕು. ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ ಎಂಬ ತಪ್ಪು ಮಾಹಿತಿ ನೀಡಿ ವಿವಿಧ ಸಮುದಾಯಗಳಿಗೆ ದಾರಿ ತಪ್ಪಿಸುವ ಕೆಲಸ ಮಾಡಬಾರದು ಎಂದು ವಾಗ್ದಾಳಿ ಮಾಡಿದರು.

ಇನ್ನು ಕೇಂದ್ರ ಸಚಿವ ಪ್ರಲ್ಹಾದ್ ಜೋಷಿ ಅವರ ಸಹೋದರ ಗೋಪಾಲ್ ಜೋಷಿ ಬಂಧನವಾಗಿರುವ ಹಿನ್ನೆಲೆಯಲ್ಲಿ ಪ್ರತಿಪಕ್ಷದವರು ಪ್ರಲ್ಹಾದ್ ಜೋಷಿಯವರ ರಾಜೀನಾಮೆ ಕೇಳುತ್ತಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಪ್ರಹ್ಲಾದ್ ಜೋಷಿಯವರು ಅವರ ಸೋದರ‌ನ ಜತೆ ಯಾವುದೇ ವ್ಯವಹಾರಿಕ ಹಾಗೂ ಕೌಟುಂಬಿಕ ಸಂಬಂಧ ಇಟ್ಟುಕೊಂಡಿಲ್ಲ ನನಗೆ ಅವರ ಕುಟುಂಬದ ಬಗ್ಗೆ ಚೆನ್ನಾಗಿ ಗೊತ್ತಿದೆ.

ಕಾಂಗ್ರೆಸ್ ನವರು ಸೇಡಿನ‌ ರಾಜಕೀಯ ಮಾಡುತ್ತಿದ್ದಾರೆ. ಅವರ ವಿರುದ್ದ ಯಾರು ಮಾತನಾಡುತ್ತಾರೆ ಅವರ ವಿರುದ್ದ ಸೇಡಿಗಾಗಿ ಕಾಂಗ್ರೆಸ್ ನವರು ಎಫ್ಐಆರ್ ಹಾಕಿಸುತ್ತಿದ್ದಾರೆ ಎಂದು ಹೇಳಿದರು.

ರಾಜಕೀಯ

ತಮಿಳುನಾಡು/ಪಶ್ಚಿಮ ಬಂಗಾಳ ರಾಜ್ಯಪಾಲರ ನಡೆ: ವ್ಯಾಪಕ ಚರ್ಚೆ

ತಮಿಳುನಾಡು/ಪಶ್ಚಿಮ ಬಂಗಾಳ ರಾಜ್ಯಪಾಲರ ನಡೆ: ವ್ಯಾಪಕ ಚರ್ಚೆ

ತಮಿಳುನಾಡು (Tamil Nadu) ಮತ್ತು ಪಶ್ಚಿಮ ಬಂಗಾಳ (West Bengal) ಚುನಾವಣೆ ದೇಶಾದ್ಯಂತ ಸುದ್ದಿಯಾಗಿದೆ. ತಮಿಳುನಾಡಿನಲ್ಲಿ ಟಿವಿಕೆ (TVK) ವಿಜಯ್ (Vijay) ಸದ್ದು ಮಾಡಿದರೆ, ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿಯವರದ್ದೇ (Mamata banerjee) ಸುದ್ದಿ.

[ccc_my_favorite_select_button post_id="121883"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ಬಕ್ರೀದ್; ಅಕ್ರಮ ಗೋವು ಸಾಗಣೆ / ಹತ್ಯೆ ಮಾಡಿದರೆ ಜೈಲು.. ಜಿಲ್ಲಾಧಿಕಾರಿ ವಾರ್ನಿಂಗ್

ಬಕ್ರೀದ್; ಅಕ್ರಮ ಗೋವು ಸಾಗಣೆ / ಹತ್ಯೆ ಮಾಡಿದರೆ ಜೈಲು.. ಜಿಲ್ಲಾಧಿಕಾರಿ ವಾರ್ನಿಂಗ್

ಗೋವುಗಳ ಅಕ್ರಮ ಸಾಗಣೆ ಅಥವಾ ಹತ್ಯೆ (illegal cow transport/slaughter) ಮಾಡಿದಲ್ಲಿ ಏಳು ವರ್ಷ ಜೈಲು, ಹಾಗೂ ರೂ 10 ಲಕ್ಷ ಗಳ ವರೆಗೆ ದಂಡ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.

[ccc_my_favorite_select_button post_id="121833"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]