ಬೆಂಗಳೂರು: ಮುಡಾ ಹಗರಣ ವಿಚಾರವಾಗಿ ತನಿಖೆ ಕೈಗೊಂಡಿರುವ ಇ.ಡಿ. ದಾಳಿ ಮುಂದುವರಿಸಿದರೂ ಮುಖ್ಯಮಂತ್ರಿ ಸಿದ್ದರಾ ಮಯ್ಯ ನಿರಪರಾಧಿ ಎಂಬಂತೆ ಬಿಂಬಿಸಿಕೊಳ್ಳುವ ಪ್ರಯತ್ನ ನಡೆಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕಿಡಿಕಾರಿದ್ದಾರೆ.
ಶನಿವಾರ ಬಿಜೆಪಿ ಕಚೇರಿಯಲ್ಲಿ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಎಎಪಿ ಮುಖ್ಯಸ್ಥ ಅರವಿಂದ ಕೇಜ್ರವಾಲ್ ಅವರ ಪರಿಸ್ಥಿತಿಯನ್ನು ದೇಶದ ಜನತೆ ಗಮನಿಸಿದ್ದಾರೆ. ಹೀಗಾಗಿ ಮುಖ್ಯಮಂ ತ್ರಿಗಳು ಭಂಡತನ, ಹುಡುಗಾಟಿಕೆ ಬಿಟ್ಟು ರಾಜೀನಾಮೆ ಕೊಡಬೇಕು.
ಇ.ಡಿ. ಸಂಸ್ಥೆಯು ಕೇಂದ್ರ ಸರ್ಕಾರದ ಕೈಗೊಂಬೆ ಎನ್ನುವ ರೀತಿಯಲ್ಲಿ ಸಿದ್ದರಾಮಯ್ಯ ಟೀಕಿಸುತ್ತಿದ್ದಾರೆ. ಕೆಳಗೆ ಬಿದ್ದರೂ ಮೀಸೆ ಮಣ್ಣಾಗಿಲ್ಲ ಎಂಬ ಭಾವನೆಯಲ್ಲಿ ಮುಖ್ಯಮಂತ್ರಿಗಳು ಇದ್ದಂತಿದೆ ಇದೆ ವ್ಯಂಗ್ಯವಾಡಿದರು.