ಚನ್ನಪಟ್ಟಣ ಉಪಸಮರ; ಬಿಜೆಪಿ ಔದಾರ್ಯ ತೋರಲಿ – ಹೆಚ್.ಡಿ.ಕುಮಾರಸ್ವಾಮಿ

ಮಂಡ್ಯ: ಜೆಡಿಎಸ್ ಮತ್ತು ಬಿಜೆಪಿ ನಡುವೆ ಒಡಕು ಉಂಟು ಮಾಡಿ ಕಾಂಗ್ರೆಸ್ ಅಭ್ಯರ್ಥಿಗೆ ಕೆಲವರು ಚನ್ನಪಟ್ಟಣದಲ್ಲಿ ಷಡ್ಯಂತ್ರ ರೂಪಿಸಿದ್ದಾರೆ. ಆದರೆ, ಅವರ ಆಸೆ ಈಡೇರುವುದಿಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ದೂರಿದರು.

ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ಅನ್ನು ಕಟ್ಟಿ ಹಾಕಿದ್ದಾರೆ. ಅವರ ಆಶಯದಂತೆ ನಾವು ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರಿನಲ್ಲಿ ಕೆಲಸ ಮಾಡುತ್ತೇವೆ. ಕಾಂಗ್ರೆಸ್ ತಂತ್ರಗಾರಿಕೆ ಫಲಿಸುವುದಿಲ್ಲ ಎಂದರು.

ಮಂಡ್ಯ ಜಿಲ್ಲೆಯ ಸೀತಾಪುರ ಗ್ರಾಮದಲ್ಲಿ ಆಗಸ್ಟ್ 11ರಂದು ಭತ್ತ ನಾಟಿ ಮಾಡಿದ್ದ ಜಾಗಕ್ಕೆ ಭೇಟಿ ನೀಡಿ ಫಸಲು ವೀಕ್ಷಿಸಿದ ಬಳಿಕ ಸಚಿವರು ಮಾಧ್ಯಮಗಳ ಜತೆ ಮಾತನಾಡಿದರು.

ಚನ್ನಪಟ್ಟಣದಲ್ಲಿ ಸಿ.ಪಿ.ಯೋಗೇಶ್ವರ್ ನಾಮಪತ್ರ ಸಲ್ಲಿಸುತ್ತಾರೆ ಎನ್ನುವ ಬಗ್ಗೆ ವರದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿ, ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದಲ್ಲಿ ನಮ್ಮ ಕುಟುಂಬದವರನ್ನೆ ಬಿಜೆಪಿ ಅಭ್ಯರ್ಥಿಯಾಗಿ ನಿಲ್ಲಿಸಿದ್ದೇವೆ.

ಹೀಗಾಗಿ ನಮ್ಮ ಮಿತ್ರ ಪಕ್ಷವೂ ಔದಾರ್ಯ ತೋರಲಿ ಎನ್ನುವ ಆಶಯ ನನ್ನದು. ಅವರು ಔದಾರ್ಯ ತೋರುತ್ತಾರೆ ಎನ್ನುವ ನಂಬಿಕೆ ನನಗಿದೆ ಎಂದರು.

ಯೋಗೇಶ್ವರ್ ಅವರು ನಾಮಪತ್ರ ಸಲ್ಲಿಸುವ ವಿಚಾರ ನನ್ನೊಂದಿಗೆ ಚರ್ಚೆಯಾಗಿಲ್ಲ. ಆ ಬಗ್ಗೆ ನನಗೆ ಏನೂ ಗೊತ್ತಿಲ್ಲ. ನನ್ನ ಮುಂದೆ ಆ ಕುರಿತು ಪ್ರಸ್ತಾಪವೂ ಬಂದಿಲ್ಲ. ಮಾಧ್ಯಮಗಳಲ್ಲಿ ಆ ಕುರಿತು ವರದಿ ಬಂದಿರುವುದನ್ನು ನೋಡಿದ್ದೇನೆ ಎಂದು ಅವರು ತಿಳಿಸಿದರು.

ಕಾಂಗ್ರೆಸ್ ನಾಯಕರು ಯೋಗೇಶ್ವರ್ ಅವರನ್ನು ಭೇಟಿ ಮಾಡಿದ್ದಾರೆನ್ನುವ ಪ್ರಶ್ನೆಗೆ ಉತ್ತರಿಸಿ, ಅವರು ಪಕ್ಷೇತರ ಅಭ್ಯರ್ಥಿಯಾಗುತ್ತಾರೆ ಎಂಬ ವಿಚಾರ ಕಳೆದ ಹದಿನೈದು ದಿನದಿಂದ ಹರಿದಾಡುತ್ತಿದೆ. ಕಾಂಗ್ರೆಸ್ ನವರು ತಮ್ಮ ಪಕ್ಷಕ್ಕೆ ಕರೆದುಕೊಂಡು ಹೋಗಿ ನಿಲ್ಲಿಸಲು ಕಾಯುತ್ತಿದ್ದಾರೆ‌. ನಮ್ಮ ನಡುವೆ ಒಡಕು ತರುವುದು ಅವರ ಉದ್ದೇಶ ಎಂದು ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು.

ಕಾಂಗ್ರೆಸ್ ಭಕಪಕ್ಷಿಯಂತೆ ಕಾಯುತ್ತಿದೆ

NDA ಮೈತ್ರಿಕೂಟದಲ್ಲಿ ಒಡಕು ಮೂಡಲಿ ಎಂದು ಕಾಂಗ್ರೆಸ್ ಭಕಪಕ್ಷಿಯಂತೆ ಕಾಯುತ್ತಿದೆ. ಚನ್ನಪಟ್ಟಣದಲ್ಲಿ ಸ್ವತಂತ್ರವಾಗಿ ಗೆಲ್ಲಲು ಕಾಂಗ್ರೆಸ್ ಪಕ್ಷಕ್ಕೆ ಸಾಧ್ಯವಿಲ್ಲ. ಅದಕ್ಕಾಗಿ ಒಡಕು ತರಲು ಶ್ರಮ ಹಾಕುತ್ತಿದ್ದಾರೆ. ಅಂತಹ ಅವಕಾಶ ಬರಬಾರದೆಂದು ನಾನು ತಾಳ್ಮೆ ವಹಿಸಿದ್ದೇನೆ. ಇನ್ನೂ ನಾಲ್ಕು ದಿನ ಇದೆ, ಕೂತು ಚರ್ಚೆ ಮಾಡ್ತೇವೆ. ಮಂಗಳವಾರ ಅಥವಾ ಬುಧವಾರ ಫೈನಲ್ ಆಗಲಿದೆ ಎಂದರು ಕುಮಾರಸ್ವಾಮಿ ಅವರು.

ದೆಹಲಿ ಮಟ್ಟದಲ್ಲಿ ಚನ್ನಪಟ್ಟಣ ಟಿಕೆಟ್ ಸಮಸ್ಯೆ ಇಲ್ಲ, ಕಳೆದ ಎರಡು ಬಾರಿ ಚನ್ನಪಟ್ಟಣ ಕ್ಷೇತ್ರವನ್ನು ನಾನು ಪ್ರತಿನಿಧಿಸಿದ್ದೇನೆ ಎಂದರು ಅವರು.

ಬೆಂ.ಗ್ರಾಮಾಂತರದಲ್ಲಿ ನಮ್ಮ ಕುಟುಂಬದವರೇ ಬಿಜೆಪಿ ಅಭ್ಯರ್ಥಿ ಆಗಿದ್ದರು

ಚನ್ನಪಟ್ಟಣ ಜೆಡಿಎಸ್ ಕ್ಷೇತ್ರ ಅನ್ನೋದು ದೆಹಲಿ ಮಟ್ಟದಲ್ಲಿ ಇದೆ. ಮೂರು ಉಪ ಚುನಾವಣೆ ಕ್ಷೇತ್ರಗಳ ಪೈಕಿ ಚನ್ನಪಟ್ಟಣದಲ್ಲಿ ಜೆಡಿಎಸ್ ಕಾರ್ಯಕರ್ತರ ಪಡೆ ಇದೆ. ಗೆಲ್ಲುವ ದೃಷ್ಟಿಯಿಂದ ಬಿಜೆಪಿಗೆ ಬೆಂ.ಗ್ರಾಮಾಂತರ ಕ್ಷೇತ್ರ ಬಿಟ್ಟು ಕೊಟ್ಟೆವು. ನಮ್ಮ ಕುಟುಂಬದವರನ್ನೇ ಬಿಜೆಪಿ ಅಭ್ಯರ್ಥಿಯಾಗಿ ನಿಲ್ಲಿಸಿದ್ದೇವೆ. ಆ ರೀತಿ ಬಿಜೆಪಿ ನಾಯಕರು ಔದಾರ್ಯ ತೋರಲಿ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಮಾಜಿ ಸಚಿವರಾದ ಸಿ.ಎಸ್.ಪುಟ್ಟರಾಜು, ಶಾಸಕ ಮಂಜುನಾಥ್, ಜಿಲ್ಲಾ ಜೆಡಿಎಸ್ ಅಧ್ಯಕ್ಷ ರಮೇಶ್ ಇನ್ನಿತರರು ಸಚಿವರ ಜತೆಯಲ್ಲಿ ಇದ್ದರು.

ರಾಜಕೀಯ

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ

"ನಾವು ಅವರ (ಧರ್ಮಸ್ಥಳ) ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ ಪರ. ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡಬೇಡಿ ಎಂದಷ್ಟೇ ನಾವು ಹೇಳುತ್ತಿದ್ದೇವೆ": ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="113000"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!