ಬೆಂಗಳೂರು: ರಾಜ್ಯದಲ್ಲಿ ಮುಂದಿನ ವರ್ಷದಿಂದ ಮಕ್ಕಳಿಗೆ ಮೌಲ್ಯ ಶಿಕ್ಷಣ ತರಗತಿ ನಡೆಸಲಾಗುವುದು ಎಂದು ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ತಿಳಿಸಿದ್ದಾರೆ.
ಈ ಕುರುತಂತೆ ರಾಜ್ಯ ಸರ್ಕಾರದ ಟ್ವಿಟರ್ ಖಾತೆಯಲ್ಲಿ ಪೋಸ್ಟ್ ಮಾಡಲಾಗಿದ್ದು, ಮಕ್ಕಳಲ್ಲಿ ಸಾಮಾಜಿಕ ಜಾಗೃತಿ ಮೂಡಿಸಲು ಸರ್ಕಾರ ಮುಂದಾಗಿದೆ. ಹೀಗಾಗಿ ಮಕ್ಕಳಿಗೆ ಮೌಲ್ಯ ಶಿಕ್ಷಣ ತರಗತಿ ನಡೆಸಲು ನಿರ್ಧಾರ ಮಾಡಿರುವುದಾಗಿ ತಿಳಿಸಿದ್ದಾರೆ.
ಟ್ವಿಟರ್ ಪೋಸ್ಟ್; ಮನುಷ್ಯರಾಗಿ ನಮ್ಮ ಸಾಮಾಜಿಕ ಕರ್ತವ್ಯಗಳೇನು ಎನ್ನುವುದನ್ನು ತಿಳಿಸಿಕೊಡುವ ಮೂಲಕ ಮಕ್ಕಳಲ್ಲಿ ಸಾಮಾಜಿಕ ಜಾಗೃತಿ ಮೂಡಿಸಲು ಮುಂಬರುವ ಶೈಕ್ಷಣಿಕ ವರ್ಷದಿಂದ ಶಾಲೆಗಳಲ್ಲಿ ವಾರಕ್ಕೊಮ್ಮೆ ಪ್ರತ್ಯೇಕ ಮೌಲ್ಯ ಶಿಕ್ಷಣ ತರಗತಿ ನಡೆಸಲಾಗುವುದು ಎಂದು ಶಾಲಾ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ತಿಳಿಸಿದ್ದಾರೆ.