ಬೆಂಗಳೂರು: ನಗರದಲ್ಲಿ ಸತತ ನಾಲ್ಕು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ (bangalorerains) ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದಿದ್ದು, 20 ಕಾರ್ಮಿಕರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ಹೆಣ್ಣೂರು ಸಮೀಪದ ಬಾಬುಸಾಬ್ ಪಾಳ್ಯದಲ್ಲಿ ಕಟ್ಟಡ ಕುಸಿದಿದೆ. ಅಗ್ನಿಶಾಮಕ ಸಿಬ್ಬಂದಿ ಮತ್ತು ಸ್ಥಳೀಯ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.
🔴 ಬೆಂಗಳೂರಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ; ಕಾರ್ಮಿಕರು ಸಿಲುಕಿರುವ ಶಂಕೆ| Video https://t.co/tSvi9flSiW#LatestUpdates #latestnewstoday #bangalorerains pic.twitter.com/AVd7fXjmdN
— Harithalekhani (@harithalekhani) October 22, 2024
ಅವಶೇಷಗಳಡಿ ಸಿಲುಕಿರುವವರ ಪೈಕಿ ಓರ್ವನನ್ನು ರಕ್ಷಣೆ ಮಾಡಲಾಗಿದೆ. ನಾಲ್ಕು ಮಂದಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಮಳೆಯ ನಡುವೆಯೂ ಕಾರ್ಮಿಕರು ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.
ಸ್ಥಳಕ್ಕೆ ಸ್ಥಳೀಯ ಶಾಸಕ ಬೈರತಿ ಸುರೇಶ್ ಹಾಗೂ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.