ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯವನ್ನು ರಾಜ್ಯದ ಜನತೆ ಪ್ರಶ್ನಿಸಬೇಕು: ಸಿಎಂ ಕರೆ

ವರುಣಾ: ರಾಜ್ಯದ ಜನತೆ ನನ್ನ ಜೊತೆಗೆ ಇರುವವರೆಗೂ ನಾನು BJP-JDS ಷಡ್ಯಂತ್ರಕ್ಕೆ ಹರದರಲ್ಲ. ಎಲ್ಲಾ ಷಡ್ಯಂತ್ರ ಸೋಲಿಸುತ್ತೇನೆ. ಅವರ ಆಟಗಳಿಗೆ ಜಗ್ಗಲ್ಲ, ಬಗ್ಗಲ್ಲ. ಸಾಮಾಜಿಕ ನ್ಯಾಯದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು.

ವರುಣಾ ವಿಧಾನಸಭಾ ಕ್ಷೇತ್ರದಲ್ಲಿ 501.81 ಕೋಟಿ ರೂ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸಿ ಹಲವಾರು ಯೋಜನೆಗಳ ಫಲಾನುಭವಿಗಳಿಗೆ ಸವಲತ್ತು ವಿತರಣೆ ಮಾಡಿ ಮಾತನಾಡಿದರು.

ವರುಣಾ ಜನರ ಆಶೀರ್ವಾದದಿಂದ ಎರಡು ಬಾರಿ ಸಿಎಂ‌ ಆಗಿದ್ದೇನೆ. ವರುಣಾ ಕಾಂಗ್ರೆಸ್ಸಿನ ಭದ್ರ ಕೋಟೆ. ಲೋಕಸಭಾ ಚುನಾವಣೆಯಲ್ಲೂ ಬಿಜೆಪಿಗಿಂತ ಹೆಚ್ಚು ಮತ ಕೊಟ್ಟಿದ್ದೀರಿ. ನನಗೆ ವಿಶೇಷವಾಗಿ ಆಶೀರ್ವಾದ ಮಾಡಿದ್ದಕ್ಕಾಗಿ ನಾನು ಕ್ಷೇತ್ರದ ಮತದಾರರಿಗೆ ಅನಂತ ಅನಂತ ಧನ್ಯವಾದ ಅರ್ಪಿಸಿದರು.

ವರುಣಾ ಕ್ಷೇತ್ರದ ಅಭಿವೃದ್ಧಿಗೆ ನಿರಂತರವಾಗಿ ಅನುದಾನ ಕೊಡಲಾಗುತ್ತಿದೆ. ನಾನು ಉಪಕಾರ ಮಾಡುತ್ತಿಲ್ಲ. ಕ್ಷೇತ್ರದ ಪ್ರತಿನಿಧಿಯಾಗಿ ಅಭಿವೃದ್ಧಿ ಮಾಡುವ ನನ್ನ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತಿದ್ದೇನೆ ಎಂದರು.

ನಮ್ಮ ಸರ್ಕಾರ ಅಧಿಕಾರದಲ್ಲಿ ಇದ್ದಾಗಲೆಲ್ಲಾ ವರುಣ ಕ್ಷೇತ್ರ ಮಾತ್ರವಲ್ಲದೆ ರಾಜ್ಯದ ಎಲ್ಲ ಬಡವರಿಗೆ ಆರ್ಥಿಕ ಶಕ್ತಿ ತುಂಬುವ ಕಾರ್ಯಕ್ರಮಗಳನ್ನು ಜಾರಿ ಮಾಡಿದ್ದೇನೆ. ಹತ್ತು ಹಲವು ಭಾಗ್ಯಗಳನ್ನು ಕೊಡುವ ಜೊತೆಗೆ ಹಲವು ನಿಗಮಗಳ ಸಾಲ ಮನ್ನಾ ಮಾಡಿದ್ದೇನೆ. ಅಂಬೇಡ್ಕರ್ ಅವರ ಆಶಯದಂತೆ ಬಡವರಿಗೆ ಆರ್ಥಿಕ‌ ಶಕ್ತಿ ಕೊಡುವ ಕಾರ್ಯಕ್ರಮ ರೂಪಿಸಿ ಜಾರಿ ಮಾಡಿದ್ದೇನೆ.

ಎರಡನೇ ಬಾರಿ ಮುಖ್ಯಮಂತ್ರಿ ಆದಾಗಲೂ ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡವರ, ಮಧ್ಯಮ ವರ್ಗದವರ ಬದುಕಿಗೆ ಆಸರೆ ಆಗುವ ಐದೂ ಗ್ಯಾರಂಟಿ ಯೋಜನೆಗಳನ್ನು ಜನಪರವಾಗಿ ರೂಪಿದಿ ಜಾರಿ ಮಾಡಿದ್ದೇವೆ. ಪ್ರತೀ ವರ್ಷ ಈ ಗ್ಯಾರಂಟಿಗಳ ಮೂಲಕ 56 ಸಾವಿರ ಕೋಟಿ ರೂಪಾಯಿಗಳನ್ನು ಜನರ ಖಾತೆಗೆ ನೇರವಾಗಿ ಹಾಕುತ್ತಿದ್ದೇವೆ. ಹೀಗೆ ದೇಶದಲ್ಲಿ ನುಡಿದಂತೆ ನಡೆದುಕೊಂಡಿರುವ ಪಕ್ಷ ನಿಮ್ಮ ಪಕ್ಷ. ನಿಮ್ಮದೇ ಕಾಂಗ್ರೆಸ್ ಪಕ್ಷ ಎಂದರು.

ಕೇಂದ್ರದಲ್ಲಿರುವ ಮೋದಿ ಸರ್ಕಾರವಾಗಲಿ, ರಾಜ್ಯದಲ್ಲಿದ್ದ ಯಡಿಯೂರಪ್ಪ, ಬೊಮ್ಮಾಯಿ, ಕುಮಾರಸ್ವಾಮಿ ಜನರ ಕಲ್ಯಾಣ ಮಾಡದೆ ಲೂಟಿ ಮಾಡಿ ಹೋದರು ಎಂದರು.

ಬಿಜೆಪಿ ಸಾಮಾಜಿಕ ನ್ಯಾಯದ, ಬಡವರ ವಿರೋಧಿ

ಬಿಜೆಪಿ ಸಾಮಾಜಿಕ ನ್ಯಾಯದ ವಿರೋಧಿ. ಬಡವರ ವಿರೋಧಿ. ಮೂರು ಬಾರಿ ಪ್ರಧಾನಿ ಆಗಿರುವ ಮೋದಿ ಕೊಟ್ಟ ಮಾತಿನಂತೆ ನಡೆದ ಉದಾಹರಣೆ ಇದೆಯಾ ಹೇಳಿ.‌ ಇಷ್ಟು ವರ್ಷ ಪ್ರಧಾನಿಯಾಗಿ ಮೋದಿ ಬಡಪರ ಪರವಾಗಿ ಒಂದೇ ಒಂದು ಯೋಜನೆ ಜಾರಿ ಮಾಡಿದ್ದಾರಾ ಹೇಳಿ ಅಂದರು.

ಕೇಂದ್ರದಿಂದ ರಾಜ್ಯಕ್ಕೆ ನಿರಂತರ ದ್ರೋಹ

ಕೇಂದ್ರಕ್ಕೆ ಅತಿ ಹೆಚ್ಚು ತೆರಿಗೆ ಕಟ್ಟುವವರು ನಾವು. ನಾವು ನಮ್ಮ ಪಾಲಿನ ತೆರಿಗೆ ಪಡೆಯಲು ಭಿಕ್ಷೆ ಬೇಡಬೇಕಾ? ಮೊನ್ನೆ ಉತ್ತರ ಪ್ರದೇಶ, ಬಿಹಾರ ರಾಜ್ಯಗಳಿಗೆ ಅತಿ ಹೆಚ್ಚು ತೆರಿಗೆ ಪಾಲು ಕೊಟ್ಟಿರುವ ಕೇಂದ್ರಕ್ಕೆ ರಾಜ್ಯಕ್ಕೆ ಮಾತ್ರ ಕೇವಲ ಆರು ಸಾವಿರ ಕೋಟಿ ಕೊಟ್ಟು ಭಯಾನಕ ಅನ್ಯಾಯ ಮಾಡಿದ್ದಾರೆ. ಇದನ್ನು ಸಹಿಸಲು ಸಾಧ್ಯವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಅನ್ಯಾಯದ ವಿರುದ್ದ ದೆಹಲಿಗೇ ಹೋಗಿ ನಾವು ಪ್ರತಿಭಟನೆ ಮಾಡಿದೆವು. ಬಿಜೆಪಿ-ಜೆಡಿಎಸ್ ಒಬ್ಬೇ ಒಬ್ಬ ಲೋಕಸಭಾ ಸದಸ್ಯ ರಾಜ್ಯದ ಪಾಲನ್ನು ಕೇಳುವ ಧೈರ್ಯ ಮಾಡಿಲ್ಲ. ಮಾಡುವುದೂ ಇಲ್ಲ. ಆದ್ದರಿಂದ ಕೇಂದ್ರದ ದ್ರೋಹದ ವಿರುದ್ಧ ರಾಜ್ಯದ ಜನತೆ ಮಾತನಾಡಬೇಕು ಎಂದು ಕರೆ ನೀಡಿದರು.

ರಾಜ್ಯಕ್ಕೆ ವಿಶೇಷ ಅನುದಾನದ ಜೊತೆಗೆ ನೀರಾವರಿ ಯೋಜನೆಗೆ 5495 ಕೋಟಿ ನೀಡಲು ಶಿಫಾರಸ್ಸು ಮಾಡಿದ್ದ ನಿರ್ಮಲಾ ಸೀತಾರಾಮನ್ ಈ ಹಣವನ್ನೂ ಕೊಡಲಿಲ್ಲ. ರಾಜ್ಯದ ಫೆರಿಫೆರಲ್ ರಸ್ತೆಗೆ, ಕೆರೆಗಳ ಅಭಿವೃದ್ಧಿಗೆ 3 ಸಾವಿರ ಕೋಟಿ ಕೊಡ್ತೀವಿ ಅಂದು ಘೋಷಿಸಿದರು. ಆದರೆ ನಯಾಪೈಸೆ ಕೊಡಲಿಲ್ಲ. ಈ ಅನ್ಯಾಯಗಳ ವಿರುದ್ಧ ರಾಜ್ಯದ ಜನತೆ ಮಾತನಾಡಿದರೆ ತಪ್ಪಾ, ನಾವು ಪ್ರತಿಭಟಿಸಿದರೆ ತಪ್ಪಾ ಎಂದು ಗುಡುಗಿದರು.

ಲೋಕಸಭಾ ಯೋಜನೆ ಬಳಿಕ ನಮ್ಮ ಗ್ಯಾರಂಟಿ ಯೋಜನೆಗಳು ಬಂದ್ ಆಗುತ್ತವೆ ಎಂದು ದೆಹಲಿಯ ಮೋದಿಯಿಂದ, ಇಲ್ಲಿನ ಆರ್.ಅಶೋಕ್ ವರೆಗೂ ಸುಳ್ಳುಗಳ ಮೇಲೆ ಸುಳ್ಳು ಹೇಳಿದರು. ಇದುವರೆಗೂ ಗ್ಯಾರಂಟಿಗಳು ನಿಂತಿಲ್ಲ. ನಿಲ್ಲುವುದೂ ಇಲ್ಲ. ನಮ್ಮ ಸರ್ಕಾರ ಇರುವವರೆಗೂ ಗ್ಯಾರಂಟಿ ನಿಲ್ಲಲ್ಲ ಎಂದು ಘೋಷಿಸಿದರು.‌

ಸಿದ್ದರಾಮಯ್ಯ ಒಂದೇ ಒಂದು ರೂಪಾಯಿ ಲಂಚ ಪಡೆದ ಉದಾಹರಣೆ ಇದೆಯಾ: ನನ್ನ ಮೇಲಿನ ಸುಳ್ಳು ಆರೋಪ ಸಹಿಸ್ತೀರಾ ಎಂದು ಪ್ರಶ್ನಿಸಿದರು.

ನಾನು ಮಂತ್ರಿಯಾಗಿ 45 ವರ್ಷ ಆಯ್ತು. ನನ್ನ ಮೇಲೆ ಸಣ್ಣ ಕಪ್ಪುಚುಕ್ಕೆ ಇಲ್ಲ. ಹಿಂದುಳಿದ ವರ್ಗದ ನಾನು ಎರಡು ಬಾರಿ ಸಿಎಂ ಆದೆ ಅಂತ ಬಿಜೆಪಿಗೆ ಹೊಟ್ಟೆಕಿಚ್ಚು. ಇದನ್ನು ನೀವು ಸಹಿಸ್ತೀರಾ ಎಂದು ಮರು ಪ್ರಶ್ನಿಸಿದರು.

ನಾನು ಎರಡು ಬಾರಿ ಸಿಎಂ ಆಗಿ ಮೈಸೂರಲ್ಲಿ ಒಂದೂ ಮನೆ ಇಲ್ಲ. ಮರಿಸ್ವಾಮಿ ಮನೇಲಿ ಇದೀನಿ. ಕುವೆಂಪು ರಸ್ತೇಲಿ 3 ವರ್ಷದಿಂದ ಮನೆ ಕಟ್ಟುತ್ತಲೇ ಇದ್ದೀನಿ. ಇದುವರೆಗೂ ಪೂರ್ತಿ ಆಗಿಲ್ಲ. ನನಗೆ ವರ್ಚಸ್ಸು ಕೊಡುವವರು ನೀವು. ನಿಮ್ಮ ಎದುರಿಗೆ ಪ್ರಾಮಾಣಿಕವಾಗಿ ಇದ್ದೇನೆ ಎಂದರು.

ಇದನ್ನೂ ಓದಿ; ಜಕ್ಕಲಮೊಡಗು ಜಲಾಶಯ ಭರ್ತಿ..!: ದೊಡ್ಡಬಳ್ಳಾಪುರ – ಚಿಕ್ಕಬಳ್ಳಾಪುರ ನಗರಗಳಿಗೆ ನೆಮ್ಮದಿ| Video

ನೀವೇ ನನ್ನ ಮಾಲೀಕರು. ನೀವೇ ನನ್ನ ಯಜಮಾನರು. ನಿಮ್ಮ ಆಶೀರ್ವಾದವೇ ನನಗೆ ಶ್ರೀರಕ್ಷೆ ಎಂದರು.

ಬಿಜೆಪಿ-ಜೆಡಿಎಸ್ ನಾಯಕರ ಹೊಟ್ಟೆಕಿಚ್ಚಿನಿಂದ ನನ್ನ ವರ್ಚಸ್ಸು ಕಡಿಮೆ ಆಗಲ್ಲ. ನನ್ನ ವರ್ಚಸ್ಸು ವರುಣಾ ಜನತೆ, ನನ್ನ ವರ್ಚಸ್ಸು ರಾಜ್ಯದ ಜನತೆ ಎಂದರು.

ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಸಿ.ಮಹದೇವಪ್ಪ, ಸಚಿವರುಗಳಾದ ಕೆ.ವೆಂಕಟೇಶ್, ರಹೀಂಖಾನ್, ಬೋಸ್ ರಾಜ್, ಗ್ಯಾರಂಟಿ ಸಮಿತಿಯ ಉಪಾಧ್ಯಕ್ಷರಾದ ಪುಷ್ಪ ಅಮರನಾಥ್,
ವಿಧಾನಸಭೆ ಮತ್ತು ವಿಧಾನ‌ ಪರಿಷತ್ ಶಾಸಕರುಗಳಾದ ಯತೀಂದ್ರ ಸಿದ್ದರಾಮಯ್ಯ, ರವಿಶಂಕರ್, ದರ್ಶನ್ ದ್ರುವನಾರಾಯಣ್, ತಿಮ್ಮಯ್ಯ, ವರುಣಾ ವಿಧಾನಸಭಾ ಕ್ಷೇತ್ರದ ಗ್ರಾಮ ಪಂಚಾಯ್ತಿಗಳ ಅಧ್ಯಕ್ಷರು, ಉಪಾಧ್ಯಕ್ಷರುಗಳು, ನಗರಸಭೆ ಅಧ್ಯಕ್ಷರು ಮತ್ತು ಉಪಾಧ್ಯಕ್ಷರುಗಳು ಸೇರಿ ಎಲ್ಲಾ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಜಕೀಯ

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ

"ನಾವು ಅವರ (ಧರ್ಮಸ್ಥಳ) ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ ಪರ. ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡಬೇಡಿ ಎಂದಷ್ಟೇ ನಾವು ಹೇಳುತ್ತಿದ್ದೇವೆ": ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="113000"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!