ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆ ಬೆನ್ನಲ್ಲೇ (channapatna by election) ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಜೊತೆ ಬಿಜೆಪಿ ಮುಖಂಡ ಸಿ.ಪಿ.ಯೋಗೇಶ್ವರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬುಧವಾರ ಬೆಳಿಗ್ಗೆ ಭೇಟಿ ಮಾಡಿ ಮಾತುಕತೆ ನಡೆಸುವ ಮೂಲಕ ಕಮಲ-ದಳ ಮೈತ್ರಿ ಮುಖಂಡರಿಗೆ ಶಾಕ್ ನೀಡಿದ್ದಾರೆ.
ಮೂಲಗಳ ಮಾಹಿತಿಯಂತೆ ವಾಟ್ಸಪ್ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ರಾಜೀನಾಮೆ ಸಲ್ಲಿಸಿರುವ ಯೋಗೇಶ್ವರ್, ಕೆಪಿಸಿಸಿ ಕಚೇರಿಯಲ್ಲಿ ಯೋಗೇಶ್ವರ್ ಅವರು ಕಾಂಗ್ರೆಸ್ ಸೇರಲಿದ್ದಾರೆ.
ಬುಧವಾರ ಬೆಳಿಗ್ಗೆ ಯೋಗೇಶ್ವರ್ ಅವರು ಸದಾಶಿವನಗರದಲ್ಲಿರುವ ಡಿ.ಕೆ.ಶಿವಕುಮಾರ್ ಮನೆಗೆ ಬಂದರು. ಅಲ್ಲಿಂದ ತಮ್ಮ ಕಾರಿನಲ್ಲಿ ಯೋಗೇಶ್ವರ್ ಅವರನ್ನು ಸಿದ್ದರಾಮಯ್ಯ ಅವರ ‘ಕಾವೇರಿ’ ನಿವಾಸಕ್ಕೆ ಶಿವಕುಮಾರ್ ಕರೆದುಕೊಂಡು ಹೋದರು.
ಈ ವೇಳೆ ಮುಖ್ಯಮಂತ್ರಿ ನಿವಾಸದಲ್ಲಿ ಸಚಿವ ಜಮೀರ್ ಅಹಮದ್ ಖಾನ್, ಮಾಜಿ ಸಂಸದ ಡಿಕೆ ಸುರೇಶ್, ಶಾಸಕ ರವಿಕುಮಾರ್ ಗಣಿಗ ಕೂಡಾ ಇದ್ದರು.
ಇದರ ಬೆನ್ನಲ್ಲೇ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ ಅವರು ಜಾಲಹಳ್ಳಿ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸುತ್ತಿದ್ದಾರೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.