ದೀಪಾವಳಿ; ಹಲವು ನಿಯಮ ವಿಧಿಸಿದ ಜಿಲ್ಲಾಡಳಿತ

ಬೆಂ.ಗ್ರಾ.ಜಿಲ್ಲೆ: ದೀಪಾವಳಿ ಹಬ್ಬ ಸಮೀಪಿಸುತ್ತಿದ್ದು ಸಾರ್ವಜನಿಕ ಆಸ್ತಿ ಮತ್ತು ಆರೋಗ್ಯದ ಸಂರಕ್ಷಣೆ, ಪರಿಸರ ಹಾಗೂ ಶಬ್ದ ಮಾಲಿನ್ಯ ನಿಯಂತ್ರಣದಲ್ಲಿಡುವ ಉದ್ದೇಶದಿಂದ ಹೆಚ್ಚು ಶಬ್ದ ಮಾಡುವ, ಮಾಲಿನ್ಯ ಉಂಟುಮಾಡುವ ಪಟಾಕಿಗಳ ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಅವರು ಹೇಳಿದರು.

ಜಿಲ್ಲಾಡಳಿತ ಭವನದಲ್ಲಿಂದು ದೀಪಾವಳಿ ಹಬ್ಬದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಾರ್ವಜನಿಕರು ಮಾಲಿನ್ಯಕಾರಕ , ಹೆಚ್ಚು ಶಬ್ದ ಮಾಡುವ ಪಟಾಕಿ ಹಾಗೂ ಸಿಡಿಮದ್ದುಗಳನ್ನು ಉಪಯೋಗಿಸಬಾರದೆಂಬ ಸರ್ವೋಚ್ಛ ನ್ಯಾಯಾಲಯದ ‌ನಿರ್ದೇಶನದಂತೆ ದೀಪಾವಳಿ ಹಬ್ಬದ ದಿನದಂದು ರಾತ್ರಿ 8.00 ಗಂಟೆಯಿಂದ ರಾತ್ರಿ 10.00 ಗಂಟೆಯವರೆಗೆ ಮಾತ್ರ ಪಟಾಕಿಗಳನ್ನು ಹಚ್ಚಲು ಅವಕಾಶವಿದೆ.

ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ಪಟಾಕಿ ಸಿಡಿಸುವುದನ್ನು ನಿಷೇಧಿಸಲಾಗಿದೆ. ದಿನದ ಯಾವುದೇ ಸಮಯದಲ್ಲಿ ನಿಶ್ಯಬ್ಧ ವಲಯಗಳೆಂದು ಘೋಷಿಸಲ್ಪಟ್ಟಿರುವ ಸ್ಥಳಗಳು (ಆಸ್ಪತ್ರೆ, ಶಾಲೆ, ಪ್ರಾರ್ಥನಾ ಮಂದಿರ ಇತ್ಯಾದಿಗಳು) ಸುತ್ತಮುತ್ತಲ್ಲಿನ ಪ್ರದೇಶದಲ್ಲಿ ಯಾವುದೇ ರೀತಿಯ ಶಬ್ಧ ಉಂಟು ಮಾಡುವ ನಿಷೇಧಿತ ಪಟಾಕಿಗಳನ್ನು ಬಳಸಬಾರದು. ಹಸಿರು ಪಟಾಕಿಗಳನ್ನು ಮಾತ್ರ ಉಪಯೋಗಿಸಬೇಕು ಎಂದರು.

ನಗರ ಮತ್ತು ಪಟ್ಟಣದ ಚಿಕ್ಕ ಚಿಕ್ಕ ಬೀದಿಗಳಲ್ಲಿ ಪಟಾಕಿಗಳನ್ನು, ಬಾಣ ಬಿರುಸುಗಳನ್ನು ಉಪಯೋಗಿಸುವುದರಿಂದ ಅಲ್ಲಿನ ನಿವಾಸಿಗಳಿಗೆ ಹಾನಿಯುಂಟಾಗುವ ಅಥವಾ ಬೆಂಕಿ ಹಾಗೂ ಸ್ಪೋಟದಿಂದ ಅಪಾಯಗಳು ಆಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಪಟಾಕಿಗಳನ್ನು ವಸತಿ ಪ್ರದೇಶಗಳಲ್ಲಿ ಉಪಯೋಗಿಸುವ ಬದಲು ಮೈದಾನಗಳಲ್ಲಿ ಒಟ್ಟಾಗಿ ಸೇರಿ ಆಚರಿಸಿ ಎಂದರು.

ಜಿಲ್ಲಾ ವ್ಯಾಪ್ತಿಯಲ್ಲಿ ಎಲ್ಲಾ ಪಟಾಕಿ ಮಾರಾಟಗಾರರ ಗೋದಾಮುಗಳನ್ನು ಪರಿಶೀಲಿಸಬೇಕು ಹಾಗೂ ಅಲ್ಲಿ ಹಸಿರು ಪಟಾಕಿಯಲ್ಲದೆ ಯಾವುದಾದರೂ ನಿಷೇಧಿತ ಪಟಾಕಿಗಳನ್ನು ದಾಸ್ತಾನು ಮಾಡಿದ್ದಲ್ಲಿ, ಇಡೀ ಗೋದಾಮನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು ಹಾಗೂ ಸಂಬಂಧಿತ ವ್ಯಕ್ತಿಗಳ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು.

ಹೊರ ರಾಜ್ಯಗಳಿಂದ ಅನಧಿಕೃತವಾಗಿ ಯಾವುದೇ ರೀತಿಯ ನಿಷೇಧಿತ ಪಟಾಕಿಗಳು ಸಾಗಾಟ ಮಾಡುತ್ತಿದ್ದಲ್ಲಿ ಕೂಡಲೇ ವಾಣಿಜ್ಯ ತೆರಿಗೆ ಇಲಾಖೆಯಿಂದ ರಾಜ್ಯದ ಗಡಿಗಳಲ್ಲಿರುವ ತನಿಖಾ ಠಾಣೆಗಳ ಮುಖಾಂತರ ನಿಷೇಧಿತ ಪಟಾಕಿಗಳು ಹಾಗೂ ಸಂಬಂಧಿತ ವಸ್ತುಗಳನ್ನು ಮುಟ್ಟುಗೊಲು ಹಾಕಿಕೊಳ್ಳಬೇಕು, ಸಾಗಾಟ ಮಾಡುವ ವಾಹನವನ್ನು ವಶಪಡಿಸಿಕೊಳ್ಳಬೇಕು ಎಂದು ಪೋಲಿಸ್ ಅಧಿಕಾರಿಗಳಿಗೆ ಹಾಗೂ ಸಂಬಂಧಿತ ಅಧಿಕಾರಿಗಳಿಗೆ ಸೂಚಿಸಿದರು.

ಪಟಾಕಿ ಅಂಗಡಿಗಳನ್ನು ತೆರೆದ ಪ್ರದೇಶದಲ್ಲಿ ಮತ್ತು ಅಂಗಡಿಗಳ ನಡುವೆ ಸಾಕಷ್ಟು ಅಂತರ ಇರುವಂತೆ ಮತ್ತು ಅಂಗಡಿಗಳ ಮುಂದೆ ಸಾರ್ವಜನಿಕರು ಹೆಚ್ಚು ಜನಸಂದಣಿ ಆಗದಂತೆ ನೋಡಿಕೊಳ್ಳಬೇಕು. ಅಗ್ನಿಶಾಮಕ ದಳದವರೂ ಜಾಗೃತರಾಗಿರಿ ಎಂದರು.

ಪಟಾಕಿಗಳನ್ನು ಹಗಲು ಸಮಯದಲ್ಲಿ ಮಾತ್ರ ಮಾರಾಟ ಮಾಡಬೇಕು. ಪಟಾಕಿ ಅಂಗಡಿಗಳ ಮಾಲೀಕರು ಯಾವುದೇ ಕಾರಣಕ್ಕೂ ಪಾಲಕರ ಸಮಕ್ಷಮ ಇಲ್ಲದೆ 18 ವರ್ಷದೊಳಗಿನ ಮಕ್ಕಳಿಗೆ ಪಟಾಕಿ ನೀಡುವಂತಿಲ್ಲ ಈ ಬಗ್ಗೆ ಮಾರಾಟಗಾರರ ತಿಳುವಳಿಕೆ ನೀಡಿ ಎಂದು ಪೊಲೀಸ್, ತಹಶೀಲ್ದಾರರಿಗೆ ಜಿಲ್ಲಾಧಿಕಾರಿ ಸೂಚಿಸಿದರು.

ಸಾರ್ವಜನಿಕರು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಿ ದೀಪಾವಳಿ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸಿ ಎಂದು ಜಿಲ್ಲಾಧಿಕಾರಿ ಕೋರಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ಎನ್ ಅನುರಾಧ, ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ದುರ್ಗ ಶ್ರೀ, ಅಪರ ಪೋಲಿಸ್ ವರಿಷ್ಠಾಧಿಕಾರಿ ನಾಗೇಶ್, ದೇವನಹಳ್ಳಿ ತಹಶೀಲ್ದಾರ್ ಬಾಲಕೃಷ್ಣ, ದೊಡ್ಡಬಳ್ಳಾಪುರ ತಹಶೀಲ್ದಾರ್ ವಿದ್ಯಾ ವಿಭಾ ರಾಥೋಡ್, ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾಮಟ್ಟದ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಜಕೀಯ

ಭವಿಷ್ಯ ನುಡಿಯೋಕೆ ಅವರ‍್ಯಾರು, ಜ್ಯೋತಿಷಿನಾ? – ಡಿ.ಕೆ. ಶಿವಕುಮಾರ್ ವಿರುದ್ಧ ನಿಖಿಲ್‌ ಕುಮಾರಸ್ವಾಮಿ ಕಿಡಿ

ಭವಿಷ್ಯ ನುಡಿಯೋಕೆ ಅವರ‍್ಯಾರು, ಜ್ಯೋತಿಷಿನಾ? – ಡಿ.ಕೆ. ಶಿವಕುಮಾರ್ ವಿರುದ್ಧ ನಿಖಿಲ್‌ ಕುಮಾರಸ್ವಾಮಿ

ಖಾತಾ ಪರಿವರ್ತನೆ ಹೆಸರಿನಲ್ಲಿ ರಾಜ್ಯ ಸರ್ಕಾರ ಬಡವರ ಹೊಟ್ಟೆ ಮೇಲೆ ಹೊಡೆಯುತ್ತಿದೆ. ಸರ್ಕಾರದ ಬಳಿ ಗುಂಡಿ ಮುಚ್ಚಲು ಹಣವಿಲ್ಲ, ಹಗಲು ದರೋಡೆ ದಂಧೆ ಮಾಡ್ತಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ (Nikhil

[ccc_my_favorite_select_button post_id="115363"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿಗೆ ಬೆಂಕಿ..!: 20 ಪ್ರಯಾಣಿಕರ ದುರ್ಮರಣ| Video

ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿಗೆ ಬೆಂಕಿ..!: 20 ಪ್ರಯಾಣಿಕರ ದುರ್ಮರಣ| Video

ಹೈದರಾಬಾದ್‌ನಿಂದ (Hyderabad) ಬೆಂಗಳೂರಿಗೆ (Bangalore) ಬರುತ್ತಿದ್ದ ಖಾಸಗಿ ಬಸ್ಸೊಂದು ಆಂಧ್ರಪ್ರದೇಶದ (Andhra Pradesh) ಕರ್ನೂಲು (Kurnool) ಜಿಲ್ಲೆಯ ಚಿನ್ನ ಟೆಕೂರು ಬಳಿ ನಡೆದ ಭೀಕರ ಅಗ್ನಿ (fire) ದುರಂತದಲ್ಲಿ ಬೆಂಕಿಗಾಹುತಿಯಾಗಿ 20 ಮಂದಿ ಸಾವನ್ನಪ್ಪಿದ್ದಾರೆ.

[ccc_my_favorite_select_button post_id="115273"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!