ಕೋಡಿ ಹರಿದ ಜಕ್ಕಲಮಡಗು; ಡಾ.ಕೆ.ಸುಧಾಕರ್‌ ಸಂತಸ

ಬೆಂಗಳೂರು: ದೊಡ್ಡಬಳ್ಳಾಪುರ ಮತ್ತು ಚಿಕ್ಕಬಳ್ಳಾಪುರ ಅವಳಿ ನಗರಗಳಿಗೆ ನೀರುಣಿಸುವ ಜಕ್ಕಲಮಡಗು ಜಲಾಶಯ ತುಂಬಿ ಕೋಡಿ ಹರಿದಿದ್ದು, ಎರಡು ನಗರಗಳ ಜನರಿಗೆ ನೆಮ್ಮದಿ ತರಿಸಿರುವ ಕುರಿತು ಸಂಸದ ಡಾ.ಕೆ.ಸುಧಾಕರ್‌ ಸಂತಸ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವಿಟ್ ಮಾಡಿರುವ ಅವರು, ಚಿಕ್ಕಬಳ್ಳಾಪುರ ಮತ್ತು ದೊಡ್ಡಬಳ್ಳಾಪುರ ತಾಲೂಕಿನ ಗಡಿಭಾಗದಲ್ಲಿರುವ ಜಕ್ಕಲಮಡಗು ಜಲಾಶಯ ಅವಳಿ ನಗರಗಳಿಗೆ ಕುಡಿಯುವ ನೀರು ಪೂರೈಸುವ ನೀರಿನ ಸೆಲೆಯಾಗಿದ್ದು, ಕಳೆದ ವರ್ಷ ಮಳೆಯ ಕೊರತೆಯಿಂದ ಜಲಾಶಯ ಕೋಡಿ ಬಿದ್ದಿರಲಿಲ್ಲ.

ಎರಡು ವರ್ಷಗಳ ಹಿಂದೆ, ಅಂದರೆ, 2022ರ ಜೂನ್ ತಿಂಗಳಲ್ಲೇ ಕೋಡಿಬಿದ್ದು ಎರಡು ನಗರಗಳಲ್ಲಿ ಕಳೆದ ಎರಡು ವರ್ಷದಿಂದ ಯಾವುದೇ ನೀರಿನ ಸಮಸ್ಯೆಯಾಗದಂತ ಪರಿಸ್ಥಿತಿ ಇತ್ತು. ಇದೀಗ ಮತ್ತೊಮ್ಮೆ ಜಲಾಶಯ ತುಂಬಿರುವುದು ಇನ್ನೆರಡು ವರ್ಷಗಳ ನೀರಿನ ಸಮಸ್ಯೆಯನ್ನ ದೂರ ಮಾಡಿದೆ.

ಜಕ್ಕಲಮಡುಗು ಜಲಾಶಯ 4390 ದಶಲಕ್ಷ ಲೀಟರ್ ಸಂಗ್ರಹಣಾ ಸಾಮರ್ಥ್ಯ, 51.25 ಚ.ಮೀ. ಶೇಖರಣಾ ವಿಸ್ತಿರ್ಣ ಹೊಂದಿದೆ. ಈ ಜಲಾಶಯದಿಂದ ಚಿಕ್ಕಬಳ್ಳಾಪುರ ನಗರ ಶೇ.68 ಪಾಲು ಪಡೆದರೆ, ದೊಡ್ಡಬಳ್ಳಾಪುರ ನಗರಕ್ಕೆ ಶೇ.32 ಪಾಲಿದೆ.

ಈ ಬಾರಿ ಜಲಾಶಯ ತುಂಬಿ ಹರಿಯಲಿದೆ ಎಂಬ ಜನರ ಆಶಾಭಾವನೆಗೆ ತಕ್ಕಂತೆ ಉತ್ತಮ ಮಳೆಯಾಗಿ ಜಲಾಶಯ ತುಂಬಿರುವುದು ಎರಡು ನಗರಗಳ ಜನತೆಗೆ ಅತ್ಯಂತ ಸಂತಸದ ವಿಷಯವಾಗಿದೆ ಎಂದಿದ್ದಾರೆ.

ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯಲ್ಲಿ ಸೋಮವಾರ ರಾತ್ರಿ 72.05 ಮಿ.ಮೀ ದಾಖಲೆ ಮಳೆ ಸುರಿದಿದ್ದು, ತೋಟಗಾರಿಕೆ ಬೆಳೆಗಳನ್ನು ಬೆಳೆದಿದ್ದ ರೈತರನ್ನು ಸಂಕಷ್ಟಕ್ಕೆ ಒಳಾಗಗುವಂತೆ ಮಾಡಿದ್ದು, ಹೂವಿನ ತೋಟಗಳಿಂದ ನೀರನ್ನು ಹೊರಹಾಕಬೇಕಾದ ಅನಿವಾರ್ಯತೆ ಸೃಷ್ಟಿಯಾಗಿತ್ತು.

ಇನ್ನೂ ಗುಡುಗು, ಸಿಡಿಲಿನ ಜೊತೆ ದೊಡ್ಡಬಳ್ಳಾಪುರ ತಾಲೂಕಿನ ಧಾರಾಕಾರವಾಗಿ ಮಳೆ ಕಸಬಾ ಹೋಬಳಿಯಲ್ಲಿ 53.07 ಮಿ.ಮೀ, ದೊಡ್ಡಬೆಳವಂಗಲ ಹೋಬಳಿಯಲ್ಲಿ 33.05 ಮಿ.ಮೀ, ಮಧುರೆ ಹೋಬಳಿಯಲ್ಲಿ 32.05 ಮಿ.ಮೀ ಹಾಗೂ ಸಾಸಲು ಹೋಬಳಿಯಲ್ಲಿ 34.08 ಮಿ.ಮೀ ಒಟ್ಟು 46.14 ಮಿ.ಮೀ ದಾಖಲಾಗಿದೆ.

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110970"]
ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆ ಲೂಟಿ ಮಾಡುವ ಉದ್ದೇಶವನ್ನು ಹೊಂದಿದೆ. ಇದು ಹಣ ಕೊಳ್ಳೆ ಹೊಡೆಯುವ ಸ್ಕೀಮ್‌: ಆರ್‌.ಅಶೋಕ (R. Ashoka)

[ccc_my_favorite_select_button post_id="111019"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ನಿಯಂತ್ರಣ ತಪ್ಪಿದ ಕಾರು ಪಲ್ಟಿ..!

ದೊಡ್ಡಬಳ್ಳಾಪುರ: ನಿಯಂತ್ರಣ ತಪ್ಪಿದ ಕಾರು ಪಲ್ಟಿ..!

ಚಾಲಕನ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿರುವ ಘಟನೆ (Accident) ತಾಲೂಕಿನ ತಪಸೀಹಳ್ಳಿ ಬಳಿ ಸಂಭವಿಸಿದೆ.

[ccc_my_favorite_select_button post_id="111050"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!