ಕಿತ್ತೂರು ಉತ್ಸವದ ಮುನ್ನುಡಿ ಕಾರ್ಯಕ್ರಮ

ಬೆಳಗಾವಿ: ಕಿತ್ತೂರ ರಾಣಿ ಚನ್ನಮ್ಮನ 200ನೇ ವರ್ಷದ ವಿಜಯೋತ್ಸವ, ಕಿತ್ತೂರಿನ ಇತಿಹಾಸವನ್ನು ಬೆಳಗಾವಿ ಸೇರಿದಂತೆ ನಾಡಿನಾದ್ಯಂತ ಪಸರಿಸುವ ನಿಟ್ಟಿನಲ್ಲಿ ಕಿತ್ತೂರು ಉತ್ಸವದ ಮುನ್ನುಡಿ ಕಾರ್ಯಕ್ರಮವಾಗಿದೆ ಎಂದು ಜಿಲ್ಲಾ‌ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಅವರು ನುಡಿದರು.

ನಗರದ ಜಿಲ್ಲಾ‌ ಕ್ರೀಡಾಂಗಣದಲ್ಲಿ ಮಂಗಳವಾರ (ಅ.21) ಜರುಗಿದ ಕಿತ್ತೂರು ಉತ್ಸವ-2024 ಮುನ್ನುಡಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕಿತ್ತೂರು ಉತ್ಸವದ ಪ್ರಯುಕ್ತ ಬೆಳಗಾವಿಯಲ್ಲಿ‌‌ ಇದೇ ಮೊದಲ ಬಾರಿಗೆ ಸಾಂಸ್ಕೃತಿಕ ಕಾರ್ಯಕ್ರಮ‌ ಆಯೋಜನೆ ಮಾಡಲಾಗಿದೆ.

ಕಿತ್ತೂರಿನ ಹೊರಾಟದಲ್ಲಿ ಭಾಗವಹಿಸಿದ ಮಹನಿಯರ‌ ಇತಿಹಾಸ ಬೆಳಗಾವಿ ಸೇರಿದಂತೆ ನಾಡಿನೆಲ್ಲಡೆ ಪಸರಿಸುವದು ಈ ಕಾರ್ಯಕ್ರಮದ‌‌ ಮುಖ್ಯ ಉದ್ದೇಶವಾಗಿದೆ.

ಕಿತ್ತೂರಿನ ವೈಭವವನ್ನು ಪ್ರಪಂಚದಾದ್ಯಂತ ಹರಡಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು ಈ ಕಾರ್ಯಕ್ರಮದಲ್ಲಿ ಅಪಾರ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸುವ ಮೂಲಕ‌ ಕಿತ್ತೂರಿನ‌ ಗತವೈಭವ ನಾಡಿನಾದ್ಯಂತ‌ ಪಸರಿಸಲಿ ಎಂದು ಆಶಯ ವ್ಯಕ್ತ ಪಡಿಸಿದರು.

ಮಹಿಳಾ‌ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ‌ ಸಚಿವೆ ಲಕ್ಷ್ಮೀ‌ ಹೆಬ್ಬಾಳಕರ ಅವರು ಮಾತನಾಡಿ ನಮ್ಮ ದೇಶದ‌‌ ಮಿನುಗು ತಾರೆ, ಮಹಿಳೆಯರ ಶಕ್ತಿಯಾದಂತಹ ಚನ್ನಮ್ಮನ ವಿಜಯೋತ್ಸವ ನಮ್ಮೆಲ್ಲರ‌ ಹೆಮ್ಮೆಯ ಕಾರ್ಯಕ್ರಮ ಇದಾಗಿದೆ ಎಂದರು.

ಭಾರತ ದೇಶದಲ್ಲಿ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಕಿಚ್ಚು ಹಚ್ಚಿದ ಮೊದಲ‌ ಮಹಿಳೆ ರಾಣಿ‌ ಚನ್ನಮ್ಮ ಆಗಿದ್ದು. ಉತ್ತರ ಕರ್ನಾಟಕ ಭಾಗದ‌ ಜನರಿಗೆ ಕಿತ್ತೂರು ರಾಣಿ ಚನ್ನಮ್ಮನ‌ ಉತ್ಸವ ಅತ್ಯಂತ‌ ಮಹತ್ವದಾಗಿದೆ.

ರಾಣಿ ಚನ್ನಮ್ಮನ ಉತ್ಸವ ನಮ್ಮೆಲ್ಲರ‌ ಉತ್ಸವವಾಗಿದ್ದು, ಕಿತ್ತೂರಿನಲ್ಲಿ ಮೂರು‌ ದಿನಗಳ ಕಾಲ ಜರುಗುವ ರಾಣಿ ಚನ್ನಮ್ಮಳ 200ನೇ ವರ್ಷದ ವಿಜಯೋತ್ಸವದ ಕಾರ್ಯಕ್ರಮದಲ್ಲಿ ಅಪಾರ‌ ಸಂಖ್ಯೆಯಲ್ಲಿ ರಾಣಿ‌ಚನ್ನಮ್ಮ‌ಹಾಗೂ ಸಂಗೊಳ್ಳಿ ರಾಯಣ್ಣ ಅಭಿಮಾನಿಗಳು‌ ಭಾಗವಹಿಸಿ‌ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಕರೆ ನೀಡಿದರು.

ಶಾಸಕರಾದ ರಾಜು(ಆಸೀಫ್) ಸೇಠ ಅವರು‌ ಮಾತನಾಡಿ, ರಾಣಿ‌ ಚನ್ನಮ್ಮನ ವಿಜಯೋತ್ಸವ ದ 200 ವರ್ಷದ ಕಾರ್ಯಕ್ರಮ ಬೆಳಗಾವಿ ನಗರದಲ್ಲಿ ಆಯೋಜಿಸಿರುವುದು ಸಂತಸದಾಯಕ‌ ಸಂಗತಿಯಾಗಿದ್ದು. ಈ ಮೂಲಕ ರಾಣಿ ಚನ್ನಮ್ಮನ ಇತಿಹಾಸ ಸಾರುವ ಕಾರ್ಯವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಶಾಸಕರಾದ ಬಾಬಸಾಹೇಬ ಪಾಟೀಲ, ವಿಧಾನ ಪರಿಷತ ಸದಸ್ಯ ಚನ್ನರಾಜ ಹಟ್ಟಿಹೊಳಿ, ಮಹಾಪೌರರಾದ ಸವಿತಾ ಕಾಂಬಳೆ ಉಪ ಮಹಾಪೌರ ಆನಂದ ಚವ್ಹಾಣ,‌ ಜಿಲ್ಲಾಧಿಕಾರಿ‌‌ ಮೊಹಮ್ಮದ್ ರೋಷನ್, ಜಿಲ್ಲಾ‌ಪೋಲಿಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ, ಜಿ.ಪಂ. ಸಿ.ಇ.ಓ ರಾಹುಲ್ ಶಿಂಧೆ, ಬೆಳಗಾವಿ ಉಪವಿಭಾಗಾಧಿಕಾರಿ ಶ್ರವಣ ನಾಯಕ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪನಿರ್ದೆಶಕಿ ವಿದ್ಯಾವತಿ ಭಜಂತ್ರಿ‌ ಉಪಸ್ಥಿತರಿದ್ದರು.

ರಾಜಕೀಯ

ಭವಿಷ್ಯ ನುಡಿಯೋಕೆ ಅವರ‍್ಯಾರು, ಜ್ಯೋತಿಷಿನಾ? – ಡಿ.ಕೆ. ಶಿವಕುಮಾರ್ ವಿರುದ್ಧ ನಿಖಿಲ್‌ ಕುಮಾರಸ್ವಾಮಿ ಕಿಡಿ

ಭವಿಷ್ಯ ನುಡಿಯೋಕೆ ಅವರ‍್ಯಾರು, ಜ್ಯೋತಿಷಿನಾ? – ಡಿ.ಕೆ. ಶಿವಕುಮಾರ್ ವಿರುದ್ಧ ನಿಖಿಲ್‌ ಕುಮಾರಸ್ವಾಮಿ

ಖಾತಾ ಪರಿವರ್ತನೆ ಹೆಸರಿನಲ್ಲಿ ರಾಜ್ಯ ಸರ್ಕಾರ ಬಡವರ ಹೊಟ್ಟೆ ಮೇಲೆ ಹೊಡೆಯುತ್ತಿದೆ. ಸರ್ಕಾರದ ಬಳಿ ಗುಂಡಿ ಮುಚ್ಚಲು ಹಣವಿಲ್ಲ, ಹಗಲು ದರೋಡೆ ದಂಧೆ ಮಾಡ್ತಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ (Nikhil

[ccc_my_favorite_select_button post_id="115363"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ಕಾರು ಮತ್ತು ಬೊಲೆರೋ ನಡುವೆ ಭೀಕರ ಅಪಘಾತ.. ತಪ್ಪಿದ ಭಾರಿ ಅನಾಹುತ.!

ಕಾರು ಮತ್ತು ಬೊಲೆರೋ ನಡುವೆ ಭೀಕರ ಅಪಘಾತ.. ತಪ್ಪಿದ ಭಾರಿ ಅನಾಹುತ.!

ಕಾರು ಮತ್ತು ಬೊಲೆರೋ ವಾಹನದ ನಡುವೆ ಭೀಕರ ಅಪಘಾತ (Accident) ಉಂಟಾಗಿದ್ದು, ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ಭಾರಿ ಅನಾಹುತ ತಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 44 ರ

[ccc_my_favorite_select_button post_id="115379"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!