
ಚನ್ನಪಟ್ಟಣ: ಚನ್ನಪಟ್ಟಣ ಉಪ ಚುನಾವಣೆ ಫಲಿತಾಂಶ ನಾನೂ ನೋಡ್ತೀನಿ. ಕನಿಷ್ಠ 50 ಸಾವಿರ ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಯೋಗೀಶ್ವರ್ ಅವರು ಜಯಗಳಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು.
ಯೋಗೀಶ್ವರ್ ಪರ ರೋಡ್ ಶೋ ನಲ್ಲಿ ಭಾಗವಹಿಸಿ ಚನ್ನಪಟ್ಟಣ ಜನತೆಗೆ ಕರೆ ನೀಡಿದರು.
ಕೆರೆಗಳಿಗೆ ಜೀವದಾನ ಮಾಡಿದ ಯೋಗೀಶ್ವರ್ ಅಭಿವೃದ್ಧಿ ಪರವಾಗಿ ಇರುವುದರಿಂದಲೇ ಐದು ಬಾರಿ ಶಾಸಕರಾಗಿದ್ದು ಕಾಂಗ್ರೆಸ್ಸಿಗೆ ಮರಳಿದ್ದಾರೆ. ಇವರನ್ನು ನಾವೆಲ್ಲಾ ಸ್ವಾಗತಿಸಿದ್ದೇವೆ. ಯೋಗೀಶ್ವರ್ ಗೆಲ್ಲುವ ಮೂಲಕ ಚನ್ನಪಟ್ಟಣದಲ್ಲಿ ನಿಂತು ಹೋಗಿರುವ ಅಭಿವೃದ್ಧಿಗೆ ಮರು ಚಾಲನೆ ನೀಡಿ ಎಂದು ಕರೆ ನೀಡಿದರು.
ಕುಮಾರಸ್ವಾಮಿಗೆ ಚನ್ನಪಟ್ಟಣ ಮರೆತುಹೋಗಿ ಮಂಡ್ಯಕ್ಕೆ ಸೀಮಿತರಾಗಿದ್ದಾರೆ. ಬಿಜೆಪಿ ಒಕ್ಕೂಟದಿಂದ ಕುಮಾರಸ್ವಾಮಿಯೇ ನಿಲ್ಲಲಿ, ನಿಖಿಲ್ ಕುಮಾರಸ್ವಾಮಿಯೇ ನಿಲ್ಲಲಿ, ಶ್ರೀಮತಿ ಅನಿತಾ ಕುಮಾರಸ್ವಾಮಿಯವರೇ ನಿಲ್ಲಲಿ ಇಲ್ಲಿ ಕಾಂಗ್ರೆಸ್ ಪಕ್ಷದ ಯೋಗೀಶ್ವರ್ ಅವರೇ ಭರ್ಜರಿ ಜಯಗಳಿಸೋದು ಖಚಿತ ಎಂದು ಭರವಸೆ ವ್ಯಕ್ತಪಡಿಸಿದರು.
ಜನಕಲ್ಯಾಣದ ಸರ್ಕಾರದಲ್ಲಿ ಯೋಗೀಶ್ವರ್ ಇರ್ತಾರೆ
ನಮ್ಮದು ಜನಕಲ್ಯಾಣದ ಸರ್ಕಾರ. ಈ ಸರ್ಕಾರದಲ್ಲಿ ಯೋಗೀಶ್ವರ್ ಅವರು ಇರಬೇಕು. ಹೆಚ್.ಡಿ.ಕುಮಾರಸ್ವಾಮಿಯವರು ಶಾಸಕರಾಗಿ, ಮುಖ್ಯಮಂತ್ರಿ ಆಗಿದ್ದಾಗಲೂ ಮಾಡದ ಚನ್ನಪಟ್ಟಣದ ಅಭಿವೃದ್ಧಿ ಕೆಲಸಗಳು ಮುಂದಿನ ತಿಂಗಳಿನಿಂದ ಶಾಸಕರಾಗಿ ಯೋಗೀಶ್ವರ್ ಅವರು ಮುಂದುವರೆಸುತ್ತಾರೆ. ಇವತ್ತು ನಾಮಪತ್ರ ಸಲ್ಲಿಕೆ ಬಳಿಕ ನಾನು ಮತ್ತೆ ಚನ್ನಪಟ್ಟಣಕ್ಕೆ ಪ್ರಚಾರಕ್ಕೆ ಬರುತ್ತೇನೆ ಎಂದರು.
ಡಿಸಿಎಂ ಡಿಕೆ ಶಿವಕುಮಾರ್, ಸಚಿವರುಗಳಾದ ಬೈರತಿ ಸುರೇಶ್, ಎಂ.ಸಿ.ಸುಧಾಕರ್, ಮಾಜಿ ಸಚಿವ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಹೆಚ್.ಎಂ.ರೇವಣ್ಣ, ಮಾಜಿ ಸಂಸದರಾದ ಡಿ.ಕೆ.ಸುರೇಶ್ ಸೇರಿ ಹತ್ತಕ್ಕೂ ಹೆಚ್ಚು ಮಂದಿ ಶಾಸಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
 
				 
															 
						 
						 
						 
						 
						 
						 
						 
						 
						 
						 
						 
						 
						 
						 
						 
						 
						 
					 
						 
						 
						 
						 
					 
						 
						 
						 
						 
						 
						 
					 
						 
						 
						 
						 
						 
						 
						 
						 
						 
						 
					 
						 
						 
						 
						 
						 
						 
						 
						 
						 
						 
						 
						 
					 
					 
					 
					 
					 
					 
					 
						 
						 
						 
						