
ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿರುವ ಕ್ಷೇತ್ರವಾದ ಚನ್ನಪಟ್ಟಣ ಉಪಚುನಾವಣೆಗೆ (channapatna by election) ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಅವರನ್ನು ಅಧಿಕೃತವಾಗಿ ಘೋಷಿಸಲಾಗಿದೆ.
ಮಾಜಿ ಸಿಎಂ ಹಾಗೂ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಬಿಎಸ್‌ವೈ ಅವರ ಡಾಲರ್ಸ್ ಕಾಲೋನಿಯ ನಿವಾಸದಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿದ ಬಳಿಕ channapatna by election ಅಭ್ಯರ್ಥಿಯನ್ನು ಬಿಎಸ್ ಯಡಿಯೂರಪ್ಪ ಅವರು ಅವರು ಘೋಷಣೆ ಮಾಡಿದರು.
ನಿಖಿಲ್ ಅವರಿಗೆ ಬಿಎಸ್‌ವೈ ಹೂಗುಚ್ಚ ನೀಡಿ, ಬಿಜೆಪಿ ಶಾಲು ಹಾಕಿ ಆರ್ಶೀವದಿಸಿದರು. ಅಲ್ಲದೆ ನೂರಕ್ಕೆ ನೂರರಷ್ಟು ನಿಖಿಲ್ ಗೆಲ್ಲುತ್ತಾರೆ. ಅದಕ್ಕೆ ಅಗತ್ಯ ಶ್ರಮವನ್ನು ನಾವೆಲ್ಲ ಹಾಕಲಿದ್ದೇವೆ ಎಂದು ಬಿಎಸ್‌ವೈ ವಿಶ್ವಾಸ ವ್ಯಕ್ತಪಡಿಸಿದರು.
ಟಿಕೆಟ್ ಕೈತಪ್ಪಿದ್ದಕ್ಕೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿರುವ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಅವರು ಇಂದು ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು.
ನಿರೀಕ್ಷೆಯಂತೆ ಹಾಗೂ ಜೆಡಿಎಸ್ ಕಾರ್ಯಕರ್ತರ ಒತ್ತಡ ಮೇರೆಗೆ ನಿಖಿಲ್ ಕುಮಾರಸ್ವಾಮಿಯವನ್ನು ಜೆಡಿಎಸ್ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಿದೆ.
 
				 
															 
						 
						 
						 
						 
						 
						 
						 
						 
						 
						 
						 
						 
						 
						 
						 
						 
						 
					 
						 
						 
						 
						 
					 
						 
						 
						 
						 
						 
						 
					 
						 
						 
						 
						 
						 
						 
						 
						 
						 
						 
					 
						 
						 
						 
						 
						 
						 
						 
						 
						 
						 
						 
						 
					 
					 
					 
					 
					 
					 
					 
						 
						 
						 
						