ಕಟ್ಟಡ ಕುಸಿತ; ಮೃತಪಟ್ಟವರಿಗೆ 5 ಲಕ್ಷ ರೂ. ಪರಿಹಾರ – ಸಿಎಂ

ಬೆಂಗಳೂರು: ಕಟ್ಟಡ ಕುಸಿತ ಪ್ರಕರಣದಲ್ಲಿ ಮೃತಪಟ್ಟವರಿಗೆ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಲಾಗಿದ್ದು, ಘಟನೆಯಲ್ಲಿ ಗಾಯಗೊಂಡವರ ಚಿಕಿತ್ಸೆಯನ್ನು ಸಂಪೂರ್ಣವಾಗಿ ಸರ್ಕಾರವೇ ಭರಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಬೆಂಗಳೂರಿನ ಬಾಬುಸಾಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಗಾಯಗೊಂಡವರಿಗೆ ಚಿಕಿತ್ಸೆ ಜೊತೆಗೆ ಪರಿಹಾರ ನೀಡಲು ಸರ್ಕಾರದ ಚಿಂತನೆ

ಬಾಬುಸಾಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣದಲ್ಲಿ 8 ಜನರು ಸಾವು ಸಂಭವಿಸಿದ್ದು, ಅವರ ಶವಗಳನ್ನು ಹೊರತೆಗೆಯಲಾಗಿದ್ದು, ಉಳಿದಂತೆ 8 ಜನರನ್ನು ರಕ್ಷಣೆ ಮಾಡಲಾಗಿದೆ. ಅವರಲ್ಲಿ ಆರು ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಉಳಿದವರಿಗೆ ಗಂಭೀರ ಗಾಯಗಳಾಗಿವೆ. ರಕ್ಷಣೆ ಮಾಡಿರುವವರು ಪ್ರಾಣಾಪಾಯದಿಂದ ಪಾರಾಗಿದ್ದು, ಅವರ ಚಿಕಿತ್ಸಾ ವೆಚ್ಚವನ್ನು ಸಂಪೂರ್ಣವಾಗಿ ಸರ್ಕಾರವೇ ಭರಿಸುತ್ತಿದೆ. ಸಾವನ್ನಪ್ಪಿರುವ 8 ಜನರಿಗೆ ತಲಾ 2 ಲಕ್ಷ ಕಾರ್ಮಿಕ ಇಲಾಖೆಯಿಂದ , 3 ಲಕ್ಷ ಬಿಬಿಎಂಪಿಯಿಂದ , ಒಟ್ಟು 5 ಲಕ್ಷ ರೂ.ಗಳ ಪರಿಹಾರವನ್ನು ಘೋಷಣೆ ಮಾಡಲಾಗಿದೆ.

ಇದು ರೆವಿನ್ಯೂ ಬಡಾವಣೆಯಾಗಿದ್ದು, ಈ ಕಟ್ಟಡವನ್ನು ಅನಧಿಕೃತವಾಗಿ ಪರವಾನಗಿ ಪಡೆಯದೇ ನಿರ್ಮಿಸಲಾಗಿದೆ. ಅನಧಿಕೃತ ಕಾಮಗಾರಿ ಎಂದು ನೋಟೀಸು ನೀಡಲಾಗಿದ್ದರೂ, ನಿರ್ಮಾಣ ಮಾಡಿರುವುದರಿಂದ, ಸಂಬಂಧಪಟ್ಟ ಎಇಇ ಯನ್ನು ಅಮಾನತುಗೊಳಿಸಲಾಗಿದೆ.

ಈ ಪ್ರದೇಶದ ವ್ಯಾಪ್ತಿಗೆ ಬರುವ ವಿಭಾಗೀಯ ಅಧಿಕಾರಿಗೂ ಹಾಗೂ ಎಕ್ಸಿಕ್ಯೂಟಿವ್ ಇಂಜಿನಿಯರ್ ಅವರಿಗೂ ನೋಟೀಸು ಜಾರಿ ಮಾಡುವಂತೆ ಸೂಚನೆ ನೀಡಲಾಗಿದೆ. ಪ್ರಕರಣದಲ್ಲಿ ಗಾಯಗೊಂಡವರಿಗೆ ಚಿಕಿತ್ಸಾ ವೆಚ್ಚ ಭರಿಸುವ ಜೊತೆಗೆ ಪರಿಹಾರವನ್ನೂ ನೀಡುವ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದರು.

ಅನಧಿಕೃತ ಕಾಮಗಾರಿ ಕೈಗೊಳ್ಳದಂತೆ ಜನರಲ್ಲಿ ಸಿಎಂ ಮನವಿ

ಜನರು ಕಾನೂನಿನ ಪ್ರಕಾರ ಮನೆಗಳನ್ನು ನಿರ್ಮಿಸಬೇಕೇ ಹೊರತು ಕಾನೂನು ಬಾಹಿರವಾಗಿ ಮನೆಗಳನ್ನು ಕಟ್ಟಬಾರದೆಂದು ಜನರಲ್ಲಿ ಸಿಎಂ ಮನವಿ ಮಾಡಿದರು. ಕಾಮಗಾರಿ ನಿಲ್ಲಿಸುವಂತೆ ನೋಟೀಸು ನೀಡಿದ ನಂತರವೂ ಕಟ್ಟಡ ಮಾಲೀಕರು ಹಾಗೂ ಗುತ್ತಿಗೆದಾರರು ಕಾಮಗಾರಿಯನ್ನು ನಿಲ್ಲಿಸದ ಕಾರಣ, ಈ ದುರಾದೃಷ್ಟರ ಘಟನೆ ನಡೆದಿದೆ.

ಇಂತಹ ಘಟನೆಗಳು ಮರುಕಳಿಸದಿರಲು , ಸಾರ್ವಜನಿಕರು ಕಟ್ಟಡ ನಿರ್ಮಾಣಕ್ಕೆ ಮುಂಚಿತವಾಗಿ ಅನುಮತಿ ಪಡೆಯಬೇಕು ಮತ್ತು ಎಇಇ ನಿಂದ ಸೂಕ್ತ ಪರಿಶೀಲನೆಯಾಗಬೇಕು. ಇದರ ಜೊತೆಗೆ ಕಳಪೆ ಕಾಮಗಾರಿ ಮಾಡದೇ ಕಟ್ಟಡದ ಗುಣಮಟ್ಟವನ್ನು ಕಾಯ್ದುಕೊಳ್ಳಬೇಕು.

ಈ ಕಟ್ಟಡ ಕುಸಿತ ಕಳಪೆ ಕಾಮಗಾರಿಯಿಂದಾಗಿದೆಯೇ ಹೊರತು ಮಳೆಯ ಕಾರಣದಿಂದಲ್ಲ. ಇನ್ನು ಮುಂದೆ ಯಾವುದೇ ಕಾರಣಕ್ಕೂ ಅನಧಿಕೃತ ಕಟ್ಟಡಗಳಿಗೆ ಅನುಮತಿ ನೀಡಬಾರದು. ಒಂದು ವೇಳೆ ನಿರ್ಮಿಸಿದರೆ, ಅದಕ್ಕೆ ಸಂಬಂಧಪಟ್ಟ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಲಾಗುವುದು. ಇನ್ನುಮುಂದೆ ಇಂತಹ ಘಟನೆಗಳು ನಡೆಯದಂತೆ ಕಟ್ಟುನಿಟ್ಟಿನ ಕ್ರಮವನ್ನು ಕೈಗೊಳ್ಳುವಂತೆ ಬಿಬಿಎಂಪಿ ಆಯುಕ್ತರಿಗೆ ಸ್ಪಷ್ಟ ಸೂಚನೆ ನೀಡಲಾಗಿದೆ ಎಂದರು.

ರಕ್ಷಣಾ ಕಾರ್ಯ ಕೈಗೊಳ್ಳಲಾಗಿದೆ

ಸರ್ಕಾರ ಮಳೆ ನಿರ್ವಹಣೆಯನ್ನು ಸಮರ್ಪಕವಾಗಿ ಮಾಡುತ್ತಿಲ್ಲ ಎಂದು ಪ್ರತಿಪಕ್ಷದವರ ಮಾತು ಕೇಳಿಬರುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಟೀಕೆಗಳನ್ನು ಮಾಡುವುದು ಸುಲಭ. ಹಿಂದಿನ ಸರ್ಕಾರದ ಅವಧಿಯಲ್ಲೂ ಮಳೆ ಸಂಭವಿಸಿದ್ದು , ಪ್ರತಿಪಕ್ಷದ ನಾಯಕನಾಗಿ ನಾನು ದೋಣಿಯಲ್ಲಿ ಕುಳಿತು ಸ್ಥಳ ವೀಕ್ಷಣೆ ಮಾಡಿದ್ದೆ. ನೂರಾರು ವರ್ಷಗಳಲ್ಲಿ ಯಲಹಂಕದಲ್ಲಿ ಒಂದೇ ದಿನ 170 ಮಿ.ಮೀ. ಮಳೆ ಬಿದ್ದಿದೆ.

ಈ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸುವ ಶಕ್ತಿ ಸರ್ಕಾರಕ್ಕೆ ಇರಬೇಕಾಗುತ್ತದೆ. ಆ ಭಾಗದಲ್ಲಿ ಸುಮಾರು ಸಾವಿರಕ್ಕೂ ಹೆಚ್ಚು ಕುಟುಂಬಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ರಕ್ಷಣಾ ಕಾರ್ಯಗಳನ್ನು ಮಾಡಲಾಗುತ್ತಿದೆ.

ಈ ವರ್ಷ ಮಳೆ ಜಾಸ್ತಿ ಆಗಿದ್ದು, ಇನ್ನೂ ಹೆಚ್ಚು ಮೂಲಸೌಕರ್ಯಗಳ ಅಭಿವೃದ್ಧಿ ಆಗಬೇಕಿದೆ. ರಾಜಕಾಲುವೆಗಳಲ್ಲಿ ಒತ್ತುವರಿ ಕ್ಲಿಯರ್ ಮಾಡಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ವಿಪತ್ತುನಿರ್ವಹಣೆಗಾಗಿ 3 ಸಾವಿರ ಕೋಟಿರೂ.ಗಳ ಸಾಲವನ್ನು ಪಡೆದು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ಬಿಜೆಪಿ ಸರ್ಕಾರದ ಅವಧಿಯಲ್ಲಿ ಅನಧಿಕೃತ ಕಟ್ಟಡಗಳ ಸಮೀಕ್ಷೆ ನಡೆಸಲಾಗಿದ್ದರ ವಸ್ತುಸ್ಥಿತಿ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ಯಾವುದೇ ಸರ್ಕಾರವಿದ್ದರೂ , ಇಂತಹ ವಿಷಯಗಳು ಪ್ರಸ್ತುತವಾಗಿರುತ್ತವೆ. ಕೆಲವರು ಈ ಬಗ್ಗೆ ಕಾನೂನು ಮೊರೆ ಹೋಗಿದ್ದಾರೆ. ಈ ವಿಷಯದ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದರು.

ರಾಜ್ಯದಲ್ಲಿ ನಡೆಯಲಿರುವ ಉಪಚುನಾವಣೆಗೆ ಸಂಬಂಧಿಸಿದಂತೆ , ಚನ್ನಪಟ್ಟಣ ಕ್ಷೇತ್ರಕ್ಕೆ ನಾಮಿನೇಷನ್ ಮಾಡಲು ಸಿಪಿ ಯೋಗೇಶ್ವರ್, ಡಿಸಿಎಂನೊಂದಿಗೆ ಚನ್ನಪಟ್ಟಣಕ್ಕೆ ತೆರಳುತ್ತಿರುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು ಎಂದರು.

ರಾಜಕೀಯ

ಇಂದು ಆದಿಚುಂಚನಗಿರಿಗೆ ಪ್ರಧಾನಿ ಮೋದಿ ಭೇಟಿ

ಇಂದು ಆದಿಚುಂಚನಗಿರಿಗೆ ಪ್ರಧಾನಿ ಮೋದಿ ಭೇಟಿ

ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಅವರು ಇಂದು (ಏ.15) ರಾಜ್ಯಕ್ಕೆ ಆಗಮಿಸಲಿದ್ದು, ಮಂಡ್ಯ ಜಿಲ್ಲೆಯ ಆದಿಚುಂಚನಗಿರಿಯಲ್ಲಿ ನಿರ್ಮಾಣ ವಾಗಿರುವ ಮಂದಿರದ ಭೈರವೈಕ್ಯ ಉದ್ಘಾಟನೆ ಮಾಡಲಿದ್ದಾರೆ.

[ccc_my_favorite_select_button post_id="120962"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ರಸ್ತೆಯಲ್ಲಿ ಟ್ಯಾಂಕರ್ ಬ್ರೇಕ್ ವಿಫಲವಾಗಿದ್ದರಿಂದ ಚಾಲಕನ ನಿಯಂತ್ರಣ ಕಳೆದುಕೊಂಡು ಪಕ್ಕದಲ್ಲೇ ಸಾಗುತ್ತಿದ್ದ ಬಿಎಂಡಬ್ಲ್ಯು ಕಾರಿನ (BMW Car) ಮೇಲೆ ಮಗುಚಿ ಬಿದ್ದಿದೆ.

[ccc_my_favorite_select_button post_id="120918"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]