ಜಕ್ಕಲಮಡಗು ಜಲಾಶಯಕ್ಕೆ ಶಾಸಕ ಪ್ರದೀಪ್ ಈಶ್ವರ್ ಬಾಗಿನ ಅರ್ಪಣೆ

ಚಿಕ್ಕಬಳ್ಳಾಪುರ: ದೊಡ್ಡಬಳ್ಳಾಪುರ ಮತ್ತು ಚಿಕ್ಕಬಳ್ಳಾಪುರ ನಗರಗಳಿಗೆ ಶುದ್ಧ ಕುಡಿಯುವ ನೀರು ಒದಗಿಸುವ ಏಕೈಕ ಜಲಮೂಲವಾದ ಜಕ್ಕಲಮಡಗು ಜಲಾಶಯ 4 ವರ್ಷಗಳ ಬಳಿಕ ಭರ್ತಿಯಾಗಿದ್ದು ಜನ, ಜಾನುವಾರುಗಳಿಗೆ ಒಳಿತಾಗಲಿ ಎಂದು ಶಾಸಕ ಪ್ರದೀಪ್ ಈಶ್ವರ್ ಬುಧವಾರ ಬಾಗಿನ ಅರ್ಪಿಸಿದರು.

ಈ ವೇಳೆ ಮಾತನಾಡಿದ ಅವರು, 1955ರಲ್ಲಿ ಸರ್ ಎಂ ವಿಶ್ವೇಶ್ವರಯ್ಯ ಇಲ್ಲಿ ಈ ಜಲಾಶಯ ನಿರ್ಮಿಸಲು ಶಂಕುಸ್ಥಾಪನೆ ಮಾಡುತ್ತಾರೆ. ನಂತರದ ದಿನಗಳಲ್ಲಿ ಈ ಜಲಾಶಯ ನಿರ್ಮಾಣವಾಗಿ ಅವಳಿ ನಗರಗಳಿಗೆ ಕುಡಿಯುವ ನೀರು ಉಣಿಸುವ ಕೆಲಸ ಮಾಡುತ್ತಿದೆ.

ಜನತೆಯ ಒಳ್ಳೆಯತನ ಕಾರಣವಾಗಿ ಜಲಾಶಯ ತುಂಬಿ ಕೋಡಿಯಾಗಿ ಹರಿಯುತ್ತಿದೆ.

ಇಲ್ಲಿಂದ ಚಿಕ್ಕಬಳ್ಳಾಪುರ ನಗರಕ್ಕೆ ಶೇ .67ರಷ್ಟು, ಬಳಸಿದರೆ ದೊಡ್ಡಬಳ್ಳಾಪುರಕ್ಕೆ ಶೇ.33ರಷ್ಟು ಬಳಸಲಾಗುತ್ತಿದೆ. ಹೀಗೆ ನಗರಕ್ಕೆ ಪ್ರತಿದಿನ 10 ಎಂಎಲ್‌ಡಿನಂತೆ ನೀರು ಹರಿಸಿದರೂ 210 ದಿನಗಳಿಗೆ ಆಗಲಿದೆ. ಆದರೆ ಪ್ರಸ್ತುತ ಬೋರ್ ವೆಲ್‌ಗಳ ನೀರನ್ನು ಬಳಸುತ್ತಿರುವುದರಿಂದ ಪ್ರತಿದಿನ 5.5 ಎಂಎಲ್ಲಿ ಬಳಸಿದರೆ ಒಂದುವರೆ ವರ್ಷಕ್ಕೆ ಆಗಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇದು ತುಂಬಾ ಸಂತೋಷದ ವಿಚಾರ ಎಂದರು.

ವರುಣದೇವ ಕರುಣೆ ತೋರಿ ನೀರುಸುರಿಸಿದ ಪರಿಣಾಮ ಜಲಾಶಯ ತುಂಬಿದೆ. ಇದೇ ಸಂತೋಷದಲ್ಲಿ ಶಾಸಕನಾಗಿ ಬಂದು ಬಾಗಿನ ಅರ್ಪಿಸಿ ಗಂಗಾಮಾತೆಗೆ ನಮಿಸಿದ್ದೇನೆ ಎಂದರು.

ಪೋಶೆಟ್ಟಹಳ್ಳಿ ಭಾಗದ ಹಿರಿಯ ಕಾಂಗ್ರೆಸ್ ಮುಖಂಡ ಭರಣಿ ವೆಂಕಟೇಶ್, ನಾರಾಯ ಣಸ್ವಾಮಿ, ಸುಧಾಕ‌ರ್ ಸೇರಿ ಎಲ್ಲಾ ಮುಖಂಡ ರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದರು. ತಹಸೀಲ್ದಾರ್ ಅನಿಲ್, ಇಒ ಮಂಜುನಾಥ್‌ ಮತ್ತಿತರರು ಇದ್ದರು.

ರಾಜಕೀಯ

ರಸ್ತೆಬದಿ ಕಸ ಎಸೆಯುವವರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಖಡಕ್ ವಾರ್ನಿಂಗ್

ರಸ್ತೆಬದಿ ಕಸ ಎಸೆಯುವವರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಖಡಕ್ ವಾರ್ನಿಂಗ್

"ರಸ್ತೆಬದಿ ಕಸ ಎಸೆದರೆ ಮತ್ತೆ ಅದು ಮರಳಿ ನಿಮ್ಮ ಮನೆಗೇ ಬರುತ್ತದೆ ಎನ್ನುವ ಎಚ್ಚರಿಕೆ ನೀಡುವುದರ ಜೊತೆಗೆ, ಇನ್ನೂ ಹೆಚ್ಚಿನ ಸಿಸಿಟಿವಿ ಕ್ಯಾಮೆರಾಗಳನ್ನು ಪೊಲೀಸ್ ಇಲಾಖೆ‌ ಹಾಗೂ ಪಾಲಿಕೆ ನೆರವಿನಿಂದ ಅಳವಡಿಸಲಾಗುವುದು" ಎಂದು ಡಿಸಿಎಂ

[ccc_my_favorite_select_button post_id="115575"]
ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಆಯೋಜಿಸಿದ್ದ ಪೊಲೀಸ್ ಸಿಬ್ಬಂದಿಯ ನೂತನ ಪೀಕ್ ಕ್ಯಾಚ್ ವಿತರಣೆ: Cmsiddaramaiah, D.K.Shivakumar

[ccc_my_favorite_select_button post_id="115427"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಗುಡ್ಮಾರ್ನಿಂಗ್ ನ್ಯೂಸ್: ಆಸ್ಟ್ರೇಲಿಯಾಗೆ ಮುಖಭಂಗ.. ಫೈನಲ್‌ಗೆ ಇಂಡಿಯಾ

ಗುಡ್ಮಾರ್ನಿಂಗ್ ನ್ಯೂಸ್: ಆಸ್ಟ್ರೇಲಿಯಾಗೆ ಮುಖಭಂಗ.. ಫೈನಲ್‌ಗೆ ಇಂಡಿಯಾ

ಭಾರತ (India) ತಂಡವು ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯ (Women's ODI World Cup tournament) ಸೆಮಿಫೈನಲ್ ಪಂದ್ಯದಲ್ಲಿ ಬಲಿಷ್ಠ ಆಸ್ಟ್ರೇಲಿಯಾ (Australia) ವಿರುದ್ಧ 5 ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿದೆ.

[ccc_my_favorite_select_button post_id="115495"]
ಬುದ್ದಿವಾದ ಹೇಳಿದಕ್ಕೆ ಹೆತ್ತಮ್ಮನ ಕೊಂದ ಮಗಳು..!

ಬುದ್ದಿವಾದ ಹೇಳಿದಕ್ಕೆ ಹೆತ್ತಮ್ಮನ ಕೊಂದ ಮಗಳು..!

ಚಿಕ್ಕವಯಸ್ಸಿನಲ್ಲೇ ಪ್ರೀತಿ ಏಕೆ ಎಂಬ ಕುರಿತು ಬುದ್ದಿ ಹೇಳಿದ ಕಾರಣಕ್ಕೆ ಅಪ್ರಾಪ್ತ ಮಗಳೇ ತನ್ನ ಹೆತ್ತ ತಾಯಿಯನ್ನೇ ಹತ್ಯೆಗೈದಿರುವ (Murder) ಅಮಾನುಷ ಘಟನೆ ನಗರದ ಉತ್ತರಹಳ್ಳಿಯಲ್ಲಿ ನಡೆದಿದೆ.

[ccc_my_favorite_select_button post_id="115563"]
ದೊಡ್ಡಬಳ್ಳಾಪುರ: ಅಪಘಾತ ನ್ಯೂಸ್ ಅಪ್ಡೇಟ್.. ಬಾಲಕ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ ನ್ಯೂಸ್ ಅಪ್ಡೇಟ್.. ಬಾಲಕ ದುರ್ಮರಣ

ದೊಡ್ಡಬಳ್ಳಾಪುರ ನಗರದ ಎಪಿಎಂಸಿ ಸಮೀಪದ ಹಾಲು ಶಿಥಲೀಕರಣ ಘಟಕದ ಬಳಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ (Accident), ಸುಮಾರು 11 ವರ್ಷದ ಬಾಲಕ ಸಾವನಪ್ಪಿರುವ ದಾರುಣ ಘಟನೆ ನಡೆದಿದೆ.

[ccc_my_favorite_select_button post_id="115509"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!